ಸಿರವಾರ, ಅ.27: ಪಟ್ಟಣದ ಮಹಾತ್ಮ ಗಾಂಧಿ ಕಾಲೋನಿಯಲ್ಲಿರುವ ಶ್ರೀ ಅಂಬಾ ಭವಾನಿ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಪೂಜಾ ಕಾರ್ಯಕ್ರಮಗಳು ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಸೋಮವಾರ ಹುಣ್ಣಿಮೆಯ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಹಾಗೂ ಮಹಾಪ್ರಸಾದ ವಿತರಣೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿತ್ತು.

ಸಿರವಾರ ತಾಲೂಕು ಭಾವಸಾರ ಕ್ಷತ್ರಿಯ ಸಮಾಜ ಹಾಗೂ ಶ್ರೀ ಅಂಬಾ ಭವಾನಿ ದೇವಸ್ಥಾನ ಸಮಿತಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇವಸ್ಥಾನದ ಅರ್ಚಕ ಪವನ್ ಜೋಶಿ ಅವರ ನೇತೃತ್ವದಲ್ಲಿ ದೇವಿಗೆ ವಿಶೇಷ ಅಭಿಷೇಕ, ಪುಷ್ಪಾಲಂಕಾರ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ದೇವಿಯನ್ನು ವಿಶೇಷವಾಗಿ ಅಲಂಕರಿಸಿ ಮಹಾಮಂಗಳಾರತಿ ಸಲ್ಲಿಸಲಾಯಿತು.

ದಸರಾ ಮಹೋತ್ಸವದ ಸಮಾರೋಪದ ಅಂಗವಾಗಿ ನಡೆದ ಈ ಧಾರ್ಮಿಕ ಕಾರ್ಯಕ್ರಮಕ್ಕೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು, ಮಾನ್ವಿ ಶಾಸಕ ಜಿ. ಹಂಪಯ್ಯ ನಾಯಕ, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಜ್ಯೋತಿ ಅಕ್ಕನವರು ಭೇಟಿ ನೀಡಿ ಶ್ರೀ ಅಂಬಾ ಭವಾನಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಗಣ್ಯರನ್ನು ದೇವಸ್ಥಾನ ಸಮಿತಿ ಹಾಗೂ ಸಮಾಜದ ಮುಖಂಡರು ಸ್ವಾಗತಿಸಿದರು. ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಆಶೀರ್ವಾದ ಪಡೆದರು. ಬಳಿಕ ಭಕ್ತಾದಿಗಳಿಗೆ ಮಹಾಪ್ರಸಾದ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಚುಕ್ಕಿ ಸೂಗಪ್ಪ ಸಾಹುಕಾರ್, ರಾಜಾ ರಾಮಚಂದ್ರ ನಾಯಕ, ಜಿ. ಲೋಕರೆಡ್ಡಿ, ಎಸ್. ದಾನನಗೌಡ, ಎಂ. ಶ್ರೀನಿವಾಸ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಜಿ ಚೌದ್ರಿ, ಮಾಜಿ ಅಧ್ಯಕ್ಷ ವೈ. ಭೂಪನಗೌಡ, ಮಾಜಿ ಉಪಾಧ್ಯಕ್ಷ ಚನ್ನಬಸವ ಗಡ್ಲ, ಪಟ್ಟಣ ಪಂಚಾಯಿತಿ ಸದಸ್ಯರಾದ ಮೌಲಾಸಾಬ್ ವರ್ಚಸ್, ಎಂ. ನಿಂಬೆಯ್ಯ ಸ್ವಾಮಿ, ಶಿವರಾಜಗೌಡ ಬೆಳವಿನೂರು, ಸಿಪಿಐ ಶಶಿಕಾಂತ್ ಎಂ., ಪಿಎಸ್‌ಐ ಚಂದ್ರಶೇಖರ್ ಹಿರೇಮಠ, ಅಕ್ಕಮಹಾದೇವಿ ನಿಂಬೆಯ್ಯ ಸ್ವಾಮಿ, ಶಿವರಾಜಗೌಡ, ಮಲ್ಲಿಕಾರ್ಜುನ ಪಾಟೀಲ್, ಭೀಮಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸಿರವಾರ ತಾಲೂಕು ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷ ಲಕ್ಷ್ಮೀಕಾಂತ ಮಹೇಂದ್ರಕರ್, ಗೌರವಾಧ್ಯಕ್ಷ ಕಾಶಿನಾಥ ಸರೋದೆ, ಸಮಾಜದ ಮುಖಂಡರಾದ ಮಲ್ಲಿಕಾರ್ಜುನ ಮಹೇಂದ್ರಕರ್, ಬಾಬುರಾವ್ ಹಂಚಾಟೆ, ದೇವಣ್ಣ ಮಹೇಂದ್ರಕರ್, ತುಳಜಾರಾಮ್ ನೀಮ್ಕರ್, ರಾಘವೇಂದ್ರ ಹಂಚಾಟೆ, ಅಂಬಾಜಿರಾವ್ ಸರೋದೆ, ಪರಶುರಾಮ್ ಸರೋದೆ, ವಿಠೋಬರಾವ್, ಚಿದಾನಂದ ಹಂಚಾಟೆ, ಡಾ. ಸುನೀಲ್ ಸರೋದೆ, ವಿಜಯ್ ಸರೋದೆ, ಸಂತೋಷ್ ಸಿಂತ್ರೆ ಸೇರಿದಂತೆ ಸಮಾಜದ ಪದಾಧಿಕಾರಿಗಳು, ಯುವಕರು, ಮಹಿಳೆಯರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ದಸರಾ ಮಹೋತ್ಸವದ ಅಂಗವಾಗಿ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಯಶಸ್ವಿ ಸಮಾಪ್ತಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ವಿಶೇಷ ಪೂಜೆ ಹಾಗೂ ಮಹಾಪ್ರಸಾದ ಕಾರ್ಯಕ್ರಮವು ಭಕ್ತರ ಪಾಲ್ಗೊಳ್ಳುವಿಕೆಯೊಂದಿಗೆ ಸಂಪನ್ನಗೊಂಡಿತು.