ರಾಯಚೂರು, ಅ.29: ಶಕ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬೇವಿನಬೆಂಚಿ ರಸ್ತೆಯ ಕೈಗಾರಿಕಾ ಪ್ರದೇಶದ ನಿವಾಸಿ ದೇವರಾಜ್ ಡಿ. (31), ತಂದೆ ಶಿವರಾಜಪ್ಪ ದೇವರಮನಿ ಎಂಬ ಯುವಕ ಅಕ್ಟೋಬರ್ 15ರಿಂದ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ದೇವರಾಜ್ ಅಕ್ಟೋಬರ್ 15ರಂದು ಬೆಳಿಗ್ಗೆ ಸುಮಾರು 7 ಗಂಟೆಗೆ ಕೆಲಸಕ್ಕೆ ಹೋಗುವುದಾಗಿ ಮನೆಯಿಂದ ತೆರಳಿದ್ದು, ಇದುವರೆಗೂ ಮನೆಗೆ ಮರಳಿಲ್ಲ. ಈ ಸಂಬಂಧ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 59/2026ರಡಿ ಮನುಷ್ಯ ಕಾಣೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಪತ್ತೆಯಾಗಿರುವ ದೇವರಾಜ್ ಚಿಕ್ಕಸೂಗೂರಿನ ಶಿಲ್ಪಾ ಕಂಪನಿಯಲ್ಲಿ ಫಿಟ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.
ದೇವರಾಜ್ 31 ವರ್ಷ ವಯಸ್ಸಿನವರಾಗಿದ್ದು, ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಗೋಧಿ ಮೈಬಣ್ಣ, ಸದೃಢ ಮೈಕಟ್ಟು ಹಾಗೂ ಉದ್ದನೆಯ ಮುಖ ಹೊಂದಿದ್ದಾರೆ. ಮನೆಯಿಂದ ತೆರಳುವ ಸಂದರ್ಭದಲ್ಲಿ ಬಿಳಿ ಬಣ್ಣದ ಪೂರ್ಣ ತೋಳಿನ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ, ಹಿಂದಿ ಹಾಗೂ ತೆಲುಗು ಭಾಷೆಗಳನ್ನು ಮಾತನಾಡುತ್ತಾರೆ ಎಂದು ಪೊಲೀಸರು ಚಹರೆ ವಿವರ ನೀಡಿದ್ದಾರೆ.
ಈ ಚಹರೆಯುಳ್ಳ ವ್ಯಕ್ತಿ ಎಲ್ಲಿಯಾದರೂ ಕಂಡುಬಂದಲ್ಲಿ ಅಥವಾ ಅವರ ಕುರಿತು ಯಾವುದೇ ಮಾಹಿತಿ ಲಭ್ಯವಾದಲ್ಲಿ ಶಕ್ತಿನಗರ ಪೊಲೀಸ್ ಠಾಣೆಯ ಪಿಎಸ್ಐ (9480803868), ರಾಯಚೂರು ಗ್ರಾಮೀಣ ವೃತ್ತದ ಸಿಪಿಐ (9480803832), ರಾಯಚೂರು ಡಿವೈಎಸ್ಪಿ (9480803820) ಅಥವಾ ರಾಯಚೂರು ಪೊಲೀಸ್ ನಿಯಂತ್ರಣ ಕೊಠಡಿ (08532-235635) ಸಂಪರ್ಕಿಸುವಂತೆ ಶಕ್ತಿನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.



