ದೇವದುರ್ಗ, ನ. 1: ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಮೇಲಿನ ಅಭಿಮಾನವನ್ನು ಸಾರುವ ಉದ್ದೇಶದಿಂದ ಜಯ ಕರ್ನಾಟಕ ಸಂಘಟನೆಯ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ಧ್ವಜಾರೋಹಣ ಹಾಗೂ ಕನ್ನಡಾಂಬೆಯ ಭಾವಚಿತ್ರದ ಭವ್ಯ ಮೆರವಣಿಗೆಯೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.

ರಾಜ್ಯೋತ್ಸವದ ಅಂಗವಾಗಿ ಕನ್ನಡ ಧ್ವಜಾರೋಹಣ ನೆರವೇರಿಸಿ, ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಗೌರವ ಸಲ್ಲಿಸಲಾಯಿತು. ಬಳಿಕ ಕಾರು, ಆಟೋ ಹಾಗೂ ಬೈಕ್‌ಗಳ ಮೂಲಕ ಕನ್ನಡಾಂಬೆಯ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ಸಂಘಟನೆಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಕನ್ನಡಾಭಿಮಾನಿಗಳು ಉತ್ಸಾಹದಿಂದ ಪಾಲ್ಗೊಂಡು ಕನ್ನಡ ನಾಡಿನ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ ಅವರು ಅತಿಥಿಯಾಗಿ ಭಾಗವಹಿಸಿ ರಾಜ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾದರು. ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಾಬು ಹನುಮಂತ ಅವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಕೃಷ್ಣಕುಮಾರ್ ಮಡಿವಾಳ, ನಗರ ಘಟಕದ ಅಧ್ಯಕ್ಷ ಅಮರೇಶ್ ಚೌಹಾಣ್, ತಾಲೂಕು ಖಜಾಂಚಿ ಮನೋಹರ್ ಕಾಂಬ್ಳೇಕರ್, ಸಹ ಕಾರ್ಯದರ್ಶಿ ಮುಸ್ತಫಾ, ತಾಲೂಕು ಗೌರವಾಧ್ಯಕ್ಷ ಸೋಫಿಸಾಬ್, ಕಾನೂನು ಸಲಹೆಗಾರ ಕೇಶವಮೂರ್ತಿ ಉಭಾಳೆ, ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷ ಸುನಿಲ್ ಕುಮಾರ್ ಕೆ., ಆರೋಗ್ಯ ಘಟಕದ ಅಧ್ಯಕ್ಷ ವಿನೋದ್ ಕುಮಾರ್, ಹೋರಾಟ ಸಮಿತಿ ಅಧ್ಯಕ್ಷ ಬಸವರಾಜ ಗೋಸಲ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಗಂಗಮ್ಮ ಭೀಮೋಜಿ ರಾವ್, ಯುವ ಘಟಕದ ಅಧ್ಯಕ್ಷ ರಂಗಯ್ಯ ಸುಂಕೇಶ್ವರಾಲ್, ನಗರ ಘಟಕದ ಸಂಘಟನಾ ಕಾರ್ಯದರ್ಶಿ ಮಲ್ಲಪ್ಪ ಬೆಣಕಲ್, ಯುವ ಘಟಕದ ಕಾರ್ಯದರ್ಶಿ ಮರಿಗೆಯ ನಾಯಕ, ಪ್ರಧಾನ ಕಾರ್ಯದರ್ಶಿ ರಂಗನಾಯಕ ಚಿಕ್ಕಗುಡ್ಡ ಸೇರಿದಂತೆ ಸಂಘಟನೆಯ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಬಗ್ಗೆ ಜನರಲ್ಲಿ ಅಭಿಮಾನ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮವು ಕನ್ನಡಾಭಿಮಾನಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯೊಂದಿಗೆ ಯಶಸ್ವಿಯಾಗಿ ನೆರವೇರಿತು.