ಮಂತ್ರಾಲಯ: ಕರ್ನಾಟಕದ ತೋಟಗಾರಿಕೆ ಸಚಿವ ಶಾಮನೂರು ಎಸ್. ಮಲ್ಲಿಕಾರ್ಜುನ, ದಾವಣಗೆರೆ ಸಂಸದೆ ಎಸ್. ಪ್ರಭಾ ಮಲ್ಲಿಕಾರ್ಜುನ ಹಾಗೂ ದಾವಣಗೆರೆ ಶಾಸಕ ಸಮರ್ಥ್ ಶಾಮನೂರು ಅವರು ಪ್ರಸಿದ್ಧ ಪುಣ್ಯಕ್ಷೇತ್ರ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನದ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಆಗಮಿಸಿದ ಗಣ್ಯರು, ಶ್ರೀ ಗುರುರಾಯರ ಮೂಲ ಬೃಂದಾವನದ ದರ್ಶನ ಪಡೆದು ಭಕ್ತಿಭಾವದಿಂದ ನಮಸ್ಕರಿಸಿದರು.
ಬಳಿಕ ಶ್ರೀಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಶ್ರೀಗಳು ಗಣ್ಯರಿಗೆ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಗಣ್ಯರ ಮಂತ್ರಾಲಯ ಭೇಟಿಯು ಭಕ್ತಿ ಮತ್ತು ಧಾರ್ಮಿಕ ಶ್ರದ್ಧೆಗೆ ಸಾಕ್ಷಿಯಾಯಿತು.



