ರಾಯಚೂರು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯ 14 ವರ್ಷದ ಬಾಲಕಿಯರ ವಿಭಾಗದಲ್ಲಿ ನಗರದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯ ತಂಡವು ಸತತ ಎರಡನೇ ಬಾರಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.
ಪಂದ್ಯಾವಳಿಯಲ್ಲಿ ಬಾಲಕಿಯರು ಉತ್ತಮ ಸಮನ್ವಯ, ಚುರುಕುತನ, ಕ್ರೀಡಾ ಕೌಶಲ್ಯ ಹಾಗೂ ತಂಡದ ಒಗ್ಗಟ್ಟನ್ನು ಪ್ರದರ್ಶಿಸಿ ಎದುರಾಳಿ ತಂಡಗಳ ವಿರುದ್ಧ ಮೇಲುಗೈ ಸಾಧಿಸಿದರು. ಕಳೆದ ಬಾರಿಯೂ ತಾಲೂಕು ಮಟ್ಟದಲ್ಲಿ ವಿಜೇತರಾಗಿದ್ದ ತಂಡವು ಈ ಬಾರಿಯೂ ಪ್ರಥಮ ಸ್ಥಾನ ಉಳಿಸಿಕೊಂಡಿರುವುದು ಶಾಲೆಗೆ ಹೆಮ್ಮೆಯ ಸಂಗತಿಯಾಗಿದೆ.
ಬಾಲಕಿಯರ ಈ ಸಾಧನೆಗೆ ಶಾಲೆಯ ಅಧ್ಯಕ್ಷ ಎಂ.ಆರ್. ನರಸಯ್ಯ ಶೆಟ್ಟಿ, ಉಪಾಧ್ಯಕ್ಷ ಸತ್ಯನಾರಾಯಣ, ಕಾರ್ಯದರ್ಶಿ ಕಟ್ಕಂ ಅಂಬರೀಶ್, ಖಜಾಂಚಿ ವೆಂಕಟರಾಜುಗುಪ್ತ, ಮುಖ್ಯೋಪಾಧ್ಯಾಯರಾದ ವನಿತಾ ಮತ್ತು ವೀಣಾ, ಗಾಯತ್ರಿ, ದೈಹಿಕ ಶಿಕ್ಷಣ ಶಿಕ್ಷಕ ನಾಗರಾಜ್ ಹಾಗೂ ಶಾಲೆಯ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ಅಭಿನಂದಿಸಿ ಶುಭ ಹಾರೈಸಿದರು.
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿಯೂ ಇದೇ ರೀತಿಯ ಉತ್ತಮ ಪ್ರದರ್ಶನ ನೀಡಿ ಶಾಲೆ ಹಾಗೂ ರಾಯಚೂರು ತಾಲೂಕಿನ ಕೀರ್ತಿಯನ್ನು ಹೆಚ್ಚಿಸುವಂತೆ ಆಟಗಾರ್ತಿಯರಿಗೆ ಹಾರೈಸಲಾಯಿತು.



