ದೇವದುರ್ಗ, ಸೆ.25: ಕನಿಷ್ಠ ವೇತನ ಜಾರಿ, ಹೊರಗುತ್ತಿಗೆ ಪದ್ಧತಿ ರದ್ದು, ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ವಿವಿಧ ಇಲಾಖೆಗಳ ನೌಕರರು ಶುಕ್ರವಾರ ದೇವದುರ್ಗ ಶಾಸಕಿ ಕರಿಯಮ್ಮ ಜಿ. ನಾಯಕ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು.
ದೇವದುರ್ಗ: ದಾಸ ಸಾಹಿತ್ಯವು ಹರಿ ಚಿಂತನೆಯ ಸಾಹಿತ್ಯವಾಗಿದ್ದು, ಮಾನವನ ಹುಟ್ಟು-ಸಾವು, ಜೀವಾತ್ಮ-ಪರಮಾತ್ಮ ಹಾಗೂ ಬದುಕಿನ ನಶ್ವರತೆಯ ಕುರಿತು ಸಂದೇಶ ನೀಡುವುದರ ಜೊತೆಗೆ ಧಾರ್ಮಿಕ ಚಿಂತನೆ ಮತ್ತು ಭಗವಂತನ ಸಾಕ್ಷಾತ್ಕಾರದ ಮಾರ್ಗವನ್ನು ತೋರಿಸುತ್ತದೆ ಎಂದು ಉಪನ್ಯಾಸಕ ಸಿದ್ದಪ್ಪ ಕಂಬಳಿ ಹೇಳಿದರು.
ದೇವದುರ್ಗ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ 48ನೇ ವಾರ್ಷಿಕ ಮಹಾಸಭೆ ಬುಧವಾರ ಸಂಘದ ಕಚೇರಿಯಲ್ಲಿ ನಡೆಯಿತು. ಸದಸ್ಯರ ಸೂಚನೆಯಂತೆ ಶಿವಪ್ಪ ಬಲ್ಲಿದ್ದವ ಅವರನ್ನು ಸಭಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ದೇವದುರ್ಗ: ಗಣೇಶನ ವಿಗ್ರಹದ ಪ್ರತಿಯೊಂದು ಅಂಗವೂ ಮನುಷ್ಯನ ಬದುಕಿಗೆ ವಿಶಿಷ್ಟ ಸಂದೇಶ ಹಾಗೂ ನೈತಿಕ ಮೌಲ್ಯವನ್ನು ಸಾರುತ್ತದೆ. ಶರಣರ ವಚನಗಳು, ಪುರಾಣಗಳು ಹಾಗೂ ಸಂತರ ವಿಚಾರಗಳನ್ನು ಅಧ್ಯಯನ ಮಾಡಿ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಅಭಿಷೇಕ್ ಬಳೆ ಮಸರಕಲ್ ಹೇಳಿದರು.
ದೇವದುರ್ಗ: ತಾಲೂಕಿನ ಜಾಲಹಳ್ಳಿ ಪಟ್ಟಣದ ಜೆ.ಜೆ. ಕಲ್ಯಾಣ ಮಂಟಪದ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದೇವದುರ್ಗ: ಬಿಸಿಲು, ಮಳೆ ಲೆಕ್ಕಿಸದೆ ಹಗಲು-ರಾತ್ರಿ ಶ್ರಮಿಸಿ ಬೆಳೆದ ಹತ್ತಿಯನ್ನು ಮಾರುಕಟ್ಟೆಗೆ ತರುವ ರೈತರಿಗೆ ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ನಷ್ಟ ಅಥವಾ ಅನ್ಯಾಯವಾಗದಂತೆ ಖರೀದಿದಾರರು ಸರ್ಕಾರ ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ…
ಜಾಲಹಳ್ಳಿ, ಸೆ.21: ದೇವದುರ್ಗ ತಾಲೂಕಿನ ಜಾಲಹಳ್ಳಿಗೆ ಸೋಮವಾರ ಬೆಳಗ್ಗೆ ‘ಹುಲಿ ಬೀರ’ ಚಿತ್ರದ ಬಿಡುಗಡೆ ಪ್ರಚಾರಕ್ಕಾಗಿ ಉತ್ತರ ಕರ್ನಾಟಕದ ಯುವ ನಟ, ರೂರಲ್ ಸ್ಟಾರ್ ಅಂಜನ್ ಆಗಮಿಸಿದರು.
ಜಾಲಹಳ್ಳಿ: ದೇವದುರ್ಗ ತಾಲೂಕಿನ ಬಸವ ಪ್ರೌಢಶಾಲೆಯಲ್ಲಿ ವಿಜ್ಞಾನ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ದೇವರಾಜ ಭೈರಪ್ಪ ಅವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಜಾಲಹಳ್ಳಿ: ಶಿಕ್ಷಣ ಕ್ಷೇತ್ರದಲ್ಲಿ ಖಾಸಗಿ ಶಾಲಾ ಶಿಕ್ಷಕರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಜಾಲಹಳ್ಳಿಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ–ಶಿಕ್ಷಕಿಯರ ಪ್ರಶಸ್ತಿ ಪ್ರದಾನ ಸಮಾರಂಭ ಶನಿವಾರ ನಡೆಯಿತು.
ರಾಯಚೂರು: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹಿರಿಯ ಅಲೆಮಾರಿ ಮುಖಂಡ ಸಣ್ಣ ಮಾರೇಪ್ಪ ಬುಡ್ಗ ಜಂಗಮ ಅವರನ್ನು ನೇಮಕ ಮಾಡಬೇಕೆಂದು ಕರ್ನಾಟಕ ನೈಜ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಒತ್ತಾಯಿಸಿದೆ.
ದೇವದುರ್ಗ: ಕನ್ನಡ ಚಲನಚಿತ್ರರಂಗದ ಮೇರು ನಟ, ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನವನ್ನು ಪಟ್ಟಣದ ಶಾಂತಿನಗರದ ವಿಷ್ಣುವರ್ಧನ್ ವೃತ್ತದಲ್ಲಿ ವಿಷ್ಣುವರ್ಧನ್ ಅಭಿಮಾನಿಗಳ ಸಂಘ ಹಾಗೂ ಅಭಿಮಾನಿ ಬಳಗದ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.
ತುಂಗ ಬಿಂಬ/ರಾಯಚೂರು: ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ ಅವರು ಮಲದಕಲ್ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲು ಆಗಮಿಸಿದ್ದ ವೇಳೆ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.
ದೇವದುರ್ಗ: ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ತುಂಗಾ ಬಿಂಬ/ಜಾಲಹಳ್ಳಿ: ಸಮೀಪದ ಹೊಸೂರು ಸಿದ್ದಾಪೂರ ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ಕಲ್ಯಾಣ ಕರ್ನಾಟಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಂಗಮ್ಮ ಕಡೆಮನಿ ಅವರು ಧ್ವಜಾರೋಹಣ ನೆರವೇರಿಸಿದರು.
ತುಂಗಾ ಬಿಂಬ/ದೇವದುರ್ಗ, ಸೆ.17: ತಾಲೂಕಿನ ಚಿಕ್ಕಹೊನ್ನಕುಣಿಯಲ್ಲಿರುವ ಕೆಬಿಜೆಎನ್ಎಲ್ ವಿಭಾಗ ಸಂಖ್ಯೆ–6 ಹಾಗೂ ಎರಡು ಉಪವಿಭಾಗಗಳ ಕಚೇರಿಗಳನ್ನು ಬೇರೆಡೆಗೆ ಸ್ಥಳಾಂತರಿಸಬಾರದು ಎಂದು ಒತ್ತಾಯಿಸಿ ಸೆ.28ರಂದು ಚಿಕ್ಕಹೊನ್ನಕುಣಿಯಲ್ಲಿ ಬೃಹತ್ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಶಾಸಕಿ ಕರೆಮ್ಮ ಜಿ.
ತುಂಗ ಬಿಂಬ/ದೇವದುರ್ಗ: ಶಿಕ್ಷಕರ ವೃತ್ತಿ ಪವಿತ್ರವಾದದ್ದು. ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ಶಿಸ್ತು ಮತ್ತು ಉತ್ತಮ ವ್ಯಕ್ತಿತ್ವ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ವೃತ್ತಿಯ ಜೊತೆಗೆ ಸಮಾಜ ಸೇವೆಗೂ ಆದ್ಯತೆ ನೀಡಬೇಕು ಎಂದು ದೇವದುರ್ಗ ತ…
ದೇವದುರ್ಗ: ಪಟ್ಟಣದ ಬಸವ ಕಾಲೇಜಿನ ಉಪನ್ಯಾಸಕ ಮಲ್ಲೇಶ್ವರಯ್ಯ ನುಲಿ ಅವರು ರಾಯಚೂರು ಜಿಲ್ಲಾ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ನೀಡಲಾಗುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಹನುಮಂತರಾಯ ತಿಳಿ…