ತಾಲೂಕಿನ ದೇವರಗುಡ್ಡ ಗ್ರಾಮದ ಸುಕ್ಷೇತ್ರ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಹಾಗೂ ಚಿಕ್ಕಮಠದಲ್ಲಿ ವಿಜಯದಶಮಿ ಅಂಗವಾಗಿ ದಸರಾ ಮಹೋತ್ಸವವನ್ನು ಶ್ರೀಮಠದ ಪೀಠಾಧಿಪತಿ ಮಲ್ಲರಾಯ ತಾತನವರ ದಿವ್ಯ ಸಾನ್ನಿಧ್ಯದಲ್ಲಿ ಭಕ್ತಿ, ಶ್ರದ್ಧೆ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ ಆಚರಿಸಲಾಯಿತು.
ಬಡ ಕುಟುಂಬಗಳ ಹಸಿವು ನೀಗಿಸಲು ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿ ಅಕ್ರಮ ಸಾಗಾಟದ ಆರೋಪದಡಿ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 45 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಂಡಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.
ರಾಯಚೂರು–ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ (ಆರ್‌ಡಿಸಿಸಿ) ನಿರ್ದೇಶಕರ ಚುನಾವಣೆಯಲ್ಲಿ ಭಾಗವಹಿಸಲು ದೇವದುರ್ಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರತಿನಿಧಿಯಾಗಿ ಸಂಘದ ಉಪಾಧ್ಯಕ್ಷೆ ಹನುಮಂತಿ ದೊಡ್ಡ ಹನುಮಂತ್ರಾಯ ಸೋಮಕಾರ ಅವರನ್ನು…
ರಾಯಚೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಕಟಿಸಿರುವ ಕರಡು ಅಧಿಸೂಚನೆಯಲ್ಲಿ ಬಿಸಿಎಂ-ಬಿ (ಪ್ರವರ್ಗ-ಬಿ) ವರ್ಗಕ್ಕೆ ಒಂದೂ ಕ್ಷೇತ್ರವನ್ನು ಮೀಸಲಿಡದಿರುವುದು ಅನ್ಯಾಯವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕರಡು…
ತಾಲೂಕಿನ ಗಬ್ಬೂರು ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯ ನಿರ್ವಹಣೆ ಇಲ್ಲದೆ ದುಸ್ಥಿತಿಗೆ ತಲುಪಿದ್ದು, ಮಹಿಳಾ ಮತ್ತು ಪುರುಷರ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಯುವಜನರ ವ್ಯಕ್ತಿತ್ವ ವಿಕಸನದಲ್ಲಿ ಕ್ರೀಡೆ ಮತ್ತು ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತವೆ. ಕ್ರೀಡಾ ಚಟುವಟಿಕೆಗಳು ಯುವಕರಲ್ಲಿ ಶಿಸ್ತು, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಮನೋಭಾವ ಬೆಳೆಸುತ್ತವೆ.
ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಸಿಎಂ ಕಪ್–2026ರ ಬಿಲ್ಲುಗಾರಿಕೆ ಸ್ಪರ್ಧೆಯಲ್ಲಿ ತಾಲೂಕಿನ ಚಿಕ್ಕರಾಯಕುಂಪಿ ಗ್ರಾಮದ ಯುವ ಕ್ರೀಡಾಪಟು ದೇವರಾಜ ಮೂರು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಅಪೂರ್ವ ಸಾಧನೆ ಮಾಡಿದ್ದಾರೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಅರ್ಹ ಸಮುದಾಯಗಳಿಗೆ ಅದರ ಸಂಪೂರ್ಣ ಪ್ರಯೋಜನ ದೊರೆಯುವಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕೋರ್ ಕಮಿಟಿ…
ತಾಲೂಕಿನ ಸರ್ಕಾರಿ ಉರ್ದು ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕಿ ಕರೆಮ್ಮ ಜಿ.
ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು ತಾಲೂಕು ಆಡಳಿತದ ವತಿಯಿಂದ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಅಧಿಕಾರಿಗಳಿಗೆ ಸೂಚಿಸಿದರು.
ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಅವೈಜ್ಞಾನಿಕ ವಾರಬಂದಿ ಪದ್ಧತಿಯಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಬೆಳೆಗಳ ಸ್ಥಿತಿಗತಿ ಹಾಗೂ ನೀರಿನ ಲಭ್ಯತೆಗೆ ಅನುಗುಣವಾಗಿ ಕಾಲುವೆಗಳಿಗೆ ನೀರು ಹರಿಸಬೇಕು.
ನಾಡಿನ ರಕ್ಷಣೆಗಾಗಿ ಶೌರ್ಯ, ಸಾಹಸ ಹಾಗೂ ಧೈರ್ಯದಿಂದ ಹೋರಾಡಿದ ವೀರ ಮದಕರಿ ನಾಯಕರ ಜೀವನ ಮತ್ತು ಆದರ್ಶಗಳು ಇಂದಿನ ಯುವಜನರಿಗೆ ಸ್ಫೂರ್ತಿಯಾಗಿದ್ದು, ಅವರ ಹೋರಾಟದ ಮನೋಭಾವವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭೀಮಣ್ಣ ನಾಯಕ ಹೇಳಿದರು.
ಅರಕೇರಾ ತಾಲೂಕಿಗೆ ಸೇರ್ಪಡೆಗೊಳಿಸಿರುವ ಗಾಣದಾಳ ಹಾಗೂ ಸೋಮನಮರಡಿ ಗ್ರಾಮ ಪಂಚಾಯಿತಿಗಳನ್ನು ಪುನಃ ದೇವದುರ್ಗ ತಾಲೂಕು ವ್ಯಾಪ್ತಿಗೆ ಸೇರಿಸಬೇಕು ಎಂದು ಆಗ್ರಹಿಸಿ ಎರಡೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಸಾವಿರಾರು ಗ್ರಾಮಸ್ಥರು ಸೋಮವಾರ ಜಾಲಹಳ್ಳಿಯ ನಾಡಕಚೇರಿ…
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು, ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ದೇವದುರ್ಗ ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟಕ್ಕೆ ನೂತನ…
ದೇವದುರ್ಗ, ಅ.11: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಆದಾಯ ಮತ್ತು ಅರ್ಹತಾ ವಿದ್ಯಾರ್ಥಿವೇತನ (ಎನ್‌ಎಂಎಂಎಸ್) ಪರೀಕ್ಷೆಗೆ ಸಿದ್ಧತೆ ನಡೆಸಲು ನೆರವಾಗುವ ಉದ್ದೇಶದಿಂದ ಬೆಂಗಳೂರಿನ ಡ್ರೀಮ್ ಸ್ಕೂಲ್ ಫೌಂಡೇಶನ್ ವತಿಯಿಂದ ಆಯ್ಕೆಯಾದ 33 ವಿದ್ಯಾರ್ಥಿಗಳಿಗೆ ಭಾನುವಾರ ಪಟ್ಟಣದ ಎಸ್‌ಕೆಎಂ ಕಾಲೇಜಿನಲ್ಲಿ ಟ್ಯಾಬ್‌ಗಳನ್ನು ವಿತರಿಸಲಾಯಿತು.
ಜಾಲಹಳ್ಳಿ, ಅ.11: ಗಾಣದಾಳ ಹಾಗೂ ಸೋಮನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳನ್ನು ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಿ, ಜಾಲಹಳ್ಳಿ ಹೋಬಳಿಯಲ್ಲಿಯೇ ಮುಂದುವರಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್ 12ರಂದು ಜಾಲಹಳ್ಳಿ ನಾಡಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.
ಜಾಲಹಳ್ಳಿ: ಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾವಳಿಗೆ ಭಾನುವಾರ ಗಣ್ಯರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು. ಯುವಕರಲ್ಲಿ ಕ್ರೀಡಾಸಕ್ತಿ ಬೆಳೆಸುವ ಹಾಗೂ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
ದೇವದುರ್ಗ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ–2026ರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ದೇವದುರ್ಗದ ಶ್ರೀಮದ್ ಆನೇಗುಂದಿ ಮೂಲ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಅಜೇಂದ್ರ ಮಹಾಸ್ವಾಮಿಗಳಿಗೆ ಗೌರವಪೂರ್ವಕ ಆಹ್ವಾನ ನೀಡಲಾಗಿದೆ.
ಜಾಲಹಳ್ಳಿ, ಅ.10: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಕಾನೂನು ಕ್ರಮ ಜರುಗಿಸಬೇಕು ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ಮತ್ತು…
ಅರಕೇರಾ: ಮಳೆ ಬಂದರೆ ಮನೆಯೊಳಗೆ ನೀರು ನುಗ್ಗುವ ಪರಿಸ್ಥಿತಿ, ದಿನವಿಡೀ ದುಡಿದರೂ ಕುಟುಂಬ ನಿರ್ವಹಣೆಗೆ ಸಾಲದ ಕೂಲಿ ಹಣ, ಓದಲು ಬೇಕಾದ ಬಟ್ಟೆ ಮತ್ತು ಶೂ ಖರೀದಿಸಲೂ ಪರದಾಟ. ಇಂತಹ ಕಡುಬಡತನದ ನಡುವೆ ಬೆಳೆದ ಯುವಕನೊಬ್ಬ ಇಂದು ರಾಜ್ಯಮಟ್ಟದ ಓಟದ ಸ್ಪರ್ಧೆಯಲ್ಲಿ ಸಾಧನೆ ಮಾಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದೇವದುರ್ಗ: ನಾರಾಯಣಪುರ ಬಲದಂಡೆ ಕಾಲುವೆಯ 16, 17 ಹಾಗೂ 18ನೇ ವಿತರಣಾ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸುವಂತೆ ಆಗ್ರಹಿಸಿ ಕಳೆದ 15 ದಿನಗಳಿಂದ ಹೋರಾಟ ನಡೆಸುತ್ತಿದ್ದ ರೈತರು, ಸೋಮವಾರ ಗಬ್ಬೂರು–ದೇವದುರ್ಗ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು.