ರಾಯಚೂರು ನಗರದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಆರ್ಯ ವೈಶ್ಯ ಸಮುದಾಯದ ಸಣ್ಣ ವ್ಯಾಪಾರಿ ಬಾಪೂರು ನರಸಿಂಹ ಶ್ರೇಷ್ಠಿ ಅವರ ಸಾವಿಗೆ ಸಂತಾಪ ಸೂಚಿಸಿ, ಶ್ರೀ ನಗರೇಶ್ವರ ಆರ್ಯ ವೈಶ್ಯ ಸಂಘದ ವತಿಯಿಂದ ಪಟ್ಟಣದ ಬಸವ ವೃತ್ತದಲ್ಲಿ ಮೇಣದಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಬಸವ ವೃತ್ತದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.
ತಾಲೂಕಿನ ನಂದಿಹಾಳ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರಗಾಲದ ಪರಿಣಾಮ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಜನರು ಹಾಗೂ ಜಾನುವಾರುಗಳಿಗೆ ನೀರಿನ ಸೌಲಭ್ಯ ಕಲ್ಪಿಸಲು ಗೋಲದಿನ್ನಿ ಎಸ್ಕೇಪ್ ಮೂಲಕ ನಂದಿಹಾಳ್ ಹಳ್ಳಕ್ಕೆ ತಕ್ಷಣ ನೀರು ಹರಿಸಬೇಕೆಂದು ಗ್ರಾಮಸ್ಥರು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ತಾಲೂಕಿನ ಜಾನೇಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಅಗತ್ಯ ಸ್ಥಳಾವಕಾಶ ಕಲ್ಪಿಸುವುದರ ಜೊತೆಗೆ ಗ್ರಾಮದಲ್ಲಿನ ವಸತಿರಹಿತ ಕುಟುಂಬಗಳಿಗೆ ನಿವೇಶನಗಳನ್ನು ಮಂಜೂರು ಮಾಡಬೇಕೆಂದು ಗ್ರಾಮಸ್ಥರು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ಆದಾಯ ಮಿತಿಗೆ ಸಂಬಂಧಿಸಿದ ಕಾರಣಗಳಿಂದ ಕಳೆದ ನಾಲ್ಕು ತಿಂಗಳಿಂದ ಸ್ಥಗಿತಗೊಂಡಿರುವ ವೃದ್ಧಾಪ್ಯ ವೇತನವನ್ನು ಅರ್ಹ ಫಲಾನುಭವಿಗಳಿಗೆ ಪುನರಾರಂಭಿಸುವ ನಿಟ್ಟಿನಲ್ಲಿ ಪರಿಶೀಲನಾ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಮಾನ್ವಿ ತಾಲೂಕಿನಲ್ಲಿ ಇದುವರೆಗೆ 11,513 ಫಲಾನುಭವಿಗಳ ದಾಖಲೆಗಳ ಪರಿಶೀಲನೆ ಪೂರ್ಣಗೊಂಡಿದೆ ಎಂದು ತಹಶೀಲ್ದಾರ್ ಭೀಮರಾಯ ರಾಮಸಮುದ್ರ…
ತಾಲೂಕಿನ ನಂದಿಹಾಳ ಹಳ್ಳದ ವ್ಯಾಪ್ತಿಯ ಗ್ರಾಮಗಳಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದ್ದು, ಗೋಲದಿನ್ನಿ ಎಸ್ಕೇಪ್ ಕಾಲುವೆ ಮೂಲಕ ಹಳ್ಳಕ್ಕೆ ಕೂಡಲೇ ನೀರು ಹರಿಸುವಂತೆ ಒತ್ತಾಯಿಸಿ ಗೋಲದಿನ್ನಿ ಎಸ್ಕೇಪ್ ರೈತ ಹೋರಾಟ ಸಮಿತಿಯ ಪದಾಧಿಕಾರಿಗಳು ತಹಸೀಲ್ದಾರ್ ಭೀಮರಾಯ ರಾಮಸಮುದ್ರ ಅವರಿಗೆ ಮನವಿ ಸಲ್ಲಿಸಿದರು.
ಕಳೆದ 10 ತಿಂಗಳಿಂದ ಬಾಕಿ ಉಳಿದಿರುವ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಪಟ್ಟಣದ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಯಂಕಪ್ಪ ತಾತನ ಮಠದ ನಮಾಜಗೇರಿಗುಡ್ಡದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ದೊರೆ ಅವರು ಮಹರ್ಷಿ ವಾಲ್ಮೀಕಿ ಯುವಕರ ಸಂಘದ ನಾಮಫಲಕವನ್ನು ಉದ್ಘಾಟಿಸಿದರು.
ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ಮಾನವ ಸಮಾಜಕ್ಕೆ ಸತ್ಯ, ಧರ್ಮ, ನ್ಯಾಯ ಹಾಗೂ ಆದರ್ಶ ಜೀವನದ ಮೌಲ್ಯಗಳನ್ನು ಪರಿಚಯಿಸಿದ್ದು, ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಕವಾಗಿವೆ ಎಂದು ತಹಶೀಲ್ದಾರ್ ಭೀಮರಾಯ ಬಿ.
ತಾಲೂಕಿನ ಪೋತ್ನಾಳ್ ಗ್ರಾಮದ ಸಮೀಪದ ಹೆದ್ದಾರಿಯಲ್ಲಿ ವಾಹನ ಅಪಘಾತಕ್ಕೆ ಸಿಲುಕಿ ಕೃಷ್ಣಮೃಗವೊಂದು ಮೃತಪಟ್ಟಿದ್ದು, ವನ್ಯಜೀವಿಗಳ ಸಂಚಾರ ಹೆಚ್ಚಿರುವ ರಸ್ತೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪರಿಸರ ಪ್ರೇಮಿಗಳು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹಲವು ಆರೋಗ್ಯ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಬಡವರು ಹಾಗೂ ಸಾಮಾನ್ಯ ಜನರಿಗೆ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳು ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎನ್.ಎಸ್.
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗೆ ಆಗ್ರಹಿಸಿ ತಾಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದಲ್ಲಿ ಸಂವಿಧಾನ ನಡಿಗೆ ಜಾಗೃತಿ ಜಾಥಾ ನಡೆಸಲಾಯಿತು.
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ಹಾಸನ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಶ್ರವಣಬೆಳಗೊಳದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕಬ್ ಬುಲ್ಬುಲ್ ಉತ್ಸವದಲ್ಲಿ ಮಾನ್ವಿ ಪಟ್ಟಣದ ಕಾಕತೀಯ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳು ಹಾಗೂ ದೈಹಿಕ ಕಸರತ್ತುಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಶಾಲೆ ಮತ್ತು…
ತಾಲೂಕಿನ ಹರನಹಳ್ಳಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಶ್ರೀದೇವಿ ಪುರಾಣ ಮಹಾಮಂಗಲೋತ್ಸವವು ಧಾರ್ಮಿಕ ಕಾರ್ಯಕ್ರಮಗಳು, ದೇವಿಯ ಭಾವಚಿತ್ರ ಮೆರವಣಿಗೆ ಹಾಗೂ ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ಸಂಭ್ರಮದಿಂದ ನೆರವೇರಿತು.
ಮಾನ್ವಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶ್ರೀಜಗದ್ಗುರು ಮಧ್ವಾಚಾರ್ಯರ ಜಯಂತಿ ಆಚರಿಸಲಾಯಿತು. ಮಹನೀಯರ ಜೀವನ ಚರಿತ್ರೆ, ತತ್ವಾದರ್ಶಗಳು ಹಾಗೂ ಸಂದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸುವುದೇ ಜಯಂತಿಗಳ ಆಚರಣೆಯ ಉದ್ದೇಶವಾಗಿದೆ ಎಂದು ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಹೇಳಿದರು.
ತಾಲೂಕಿನ ಹಿರೇಕೋಟ್ನೇಕಲ್ ಗ್ರಾಮದ ಶ್ರೀ ತಾಯಮ್ಮ ದೇವಿ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಶ್ರೀದೇವಿ ಪುರಾಣ ಕಾರ್ಯಕ್ರಮದಲ್ಲಿ ನೂತನ ಪುರಾಣ ಮಂಟಪ ನಿರ್ಮಾಣಕ್ಕೆ ಕೊಡುಗೆ ನೀಡಿದ ಹಿರಿಯ ವಕೀಲ ಸಿದ್ದಲಿಂಗಪ್ಪ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ಚಾಮರಾಜನಗರದಲ್ಲಿ ಅಕ್ಟೋಬರ್ 24 ಮತ್ತು 25ರಂದು ಅಂತರರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನ ನಡೆಯಲಿದೆ. ಮಾನ್ವಿ ತಾಲೂಕಿನ ಬೌದ್ಧ ಧರ್ಮದ ಅನುಯಾಯಿಗಳು, ಅಂಬೇಡ್ಕರ್ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಕೀಲ ತಿಪ್ಪಣ್ಣ ಬಾಗಲವಾಡ ಮನವಿ ಮಾಡಿದ್ದಾರೆ.