ಮಾನ್ವಿ: ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಯತ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮೂಲಕ ನಿಜವಾದ ಕ್ರೀಡಾಸ್ಫೂರ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಹೇಳಿದರು.
ಮಾನ್ವಿ: ಜೀವನದಲ್ಲಿ ತಪ್ಪು ಮಾಡಿದಾಗ ಅದನ್ನು ತಿದ್ದಿ ಸರಿದಾರಿಗೆ ಕರೆತರುವವರು ತಂದೆ-ತಾಯಿ ಹಾಗೂ ನಿಜವಾದ ಮಾರ್ಗದರ್ಶಕರಾದ ಗುರುಗಳು. ಅವರ ಸಲಹೆ, ಮಾರ್ಗದರ್ಶನವನ್ನು ಗೌರವಿಸಿ ಉತ್ತಮ ಮಾರ್ಗದಲ್ಲಿ ನಡೆಯಬೇಕು ಎಂದು ಶಾರದಾ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಬಿ. ಹೈಂದವಿ ಬಿ. ಮಧುಸೂದನ ಗುಪ್ತಾಜೀ ಹೇಳಿದರು.
ಮಾನ್ವಿ: ತಾಲೂಕಿನ ಸುಂಕೇಶ್ವರ ಗ್ರಾಮದಲ್ಲಿ ಕಾಲುವೆ ಪಕ್ಕದ ರಸ್ತೆಯನ್ನು ಅತಿಕ್ರಮಿಸಿಕೊಂಡಿರುವುದರಿಂದ ನೂರಾರು ರೈತರು ತಮ್ಮ ಜಮೀನುಗಳಿಗೆ ತೆರಳಲು ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಸ್ಥಳ ಪರಿಶೀಲನೆ ನಡೆಸಿ ರೈತರ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಿಕೊಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮಾನ್ವಿ ತಾಲೂಕು ಘಟಕ…
ಮಾನ್ವಿ: ಜಿಲ್ಲೆಯಲ್ಲಿ ಯುವ ಸಮುದಾಯದವರಲ್ಲಿ ಗಾಂಜಾ, ಅಫೀಮ್ ಹಾಗೂ ಮದ್ಯಪಾನದಂತಹ ಮಾದಕ ವಸ್ತುಗಳ ಸೇವನೆ ಹೆಚ್ಚಾಗುತ್ತಿದ್ದು, ಇದರಿಂದ ಅಪರಾಧ ಪ್ರಕರಣಗಳೂ ಹೆಚ್ಚುತ್ತಿರುವುದಾಗಿ ಆರೋಪಿಸಿ ಕರ್ನಾಟಕ ರಾಜ್ಯ ಬೇಡರ ಸಮಿತಿ ತಾಲೂಕು ಘಟಕದ ವತಿಯಿಂದ ಮುಖ್ಯಮಂತ್ರಿಗಳಿಗೆ ತಹಶೀಲ್ದಾರ್ ಭೀಮರಾಯ ಬಿ.
ಮಾನ್ವಿ: ಪಟ್ಟಣದ ಶ್ರೀ ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಶ್ರೀ ಜಗನ್ನಾಥದಾಸರ ಸನ್ನಿಧಾನದಲ್ಲಿ ಶ್ರೀ ಜಗನ್ನಾಥದಾಸರ 217ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ನೆರವೇರಿತು.
ಹಿರೇಕೊಟ್ನೇಕಲ್, ಸೆ.21: ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟದ ಖೋ-ಖೋ ಪಂದ್ಯದಲ್ಲಿ ಹಿರೇಕೊಟ್ನೇಕಲ್ ಹರಿಜನವಾಡ ಪ್ರಾಥಮಿಕ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.
ಮಾನ್ವಿ: ಪಟ್ಟಣದ ಜುಮ್ಮಲದೊಡ್ಡಿಯ ಹಜರತ್ ಸೈಯದ್ ಷಾ ಮುರ್ತುಜಾ ಖಾದ್ರಿ ಅವರ ಬಡೇಸಾಹೇಬ್ ದರ್ಗಾದ ಉರ್ಸ್-ಎ-ಶರೀಫ್ ಕಾರ್ಯಕ್ರಮವು ಸೆ.24ರಿಂದ 26ರವರೆಗೆ ನಡೆಯಲಿದೆ ಎಂದು ಮುಸ್ಲಿಂ ಧರ್ಮಗುರು ಸೈಯದ್ ಸಜ್ಜದ್ ಹುಸೇನಿ ಮುತ್ವಲ್ಲಿ ಸಾಹೇಬ್ ತಿಳಿಸಿದರು.
ಮಾನ್ವಿ: ಪಟ್ಟಣದ ಫ್ರೆಂಡ್ಸ್ ಫಂಕ್ಷನ್ ಹಾಲ್‌ನಲ್ಲಿ ನಡೆದ ಲಕ್ಷ್ಮೀ ಪತ್ತಿನ ಸೌಹಾರ್ದ ಸಹಕಾರಿ ಸಂಘದ 16ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಕರ್ನಾಟಕ ರಾಜ್ಯ ಕುರುಬರ ಸಂಘದ ರಾಜ್ಯಾಧ್ಯಕ್ಷ ಹಾಗೂ ಸಹಕಾರಿಯ ಅಧ್ಯಕ್ಷ ಎಂ. ಈರಣ್ಣ ಉದ್ಘಾಟಿಸಿದರು.
ಮಾನ್ವಿ: ತಾಲೂಕಿನ ಹಿರೇಕೋಟ್ನೆಕಲ್ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಶಂಕುಸ್ಥಾಪನೆ ನೆರವೇರಿಸಿ ಚಾಲನೆ ನೀಡಿದರು.
ಮಾನ್ವಿ: ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಜೀವನದ ಉನ್ನತ ಗುರಿಗಳನ್ನು ರೂಪಿಸಿಕೊಂಡು, ಯುಪಿಎಸ್‌ಸಿ ಹಾಗೂ ಕೆಪಿಎಸ್‌ಸಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಮನಹರಿಸಿ ವಿಶೇಷ ಅಧ್ಯಯನದಲ್ಲಿ ತೊಡಗಬೇಕು ಎಂದು ಡಾ. ವಸಂತ್ ಕುಮಾರ್ ಹೇಳಿದರು.
ಮಾನ್ವಿ: ಜೋಳ ಖರೀದಿ ಕೇಂದ್ರಗಳ ಮೂಲಕ ಮಾರಾಟ ಮಾಡಿದ ಬೆಳೆ ಹಣವನ್ನು ಪಾವತಿಸುವಂತೆ ಒತ್ತಾಯಿಸಿ ಹೋರಾಟ ನಡೆಸಿದ ರೈತರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನ್ ಪಾಷಾ ದಿದ್ದಿಗಿ ಆರೋಪಿಸಿದರು.
ಮಾನ್ವಿ: ಸಾರ್ವಜನಿಕರಿಗೆ ಸರ್ಕಾರದ ವಿವಿಧ ಆಡಳಿತಾತ್ಮಕ ಸೇವೆಗಳನ್ನು ಮನೆ ಬಾಗಿಲಿನಲ್ಲೇ ತಲುಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಜಾಸೇವೆ ಅಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಹೇಳಿದರು.
ಮಾನ್ವಿ: ಪಟ್ಟಣದ ಶ್ರೀ ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಶ್ರೀ ಜಗನ್ನಾಥದಾಸರ ಸನ್ನಿಧಾನದಲ್ಲಿ ಶ್ರೀ ಜಗನ್ನಾಥದಾಸರ 217ನೇ ಆರಾಧನಾ ಮಹೋತ್ಸವದ ಅಂಗವಾಗಿ ಪೂರ್ವಾರಾಧನೆ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು.
ಮಾನ್ವಿ: ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಗ್ರಾಮಗಳ ಅಗತ್ಯಕ್ಕೆ ಅನುಗುಣವಾಗಿ ಮೂಲಸೌಕರ್ಯಗಳನ್ನು ಕಲ್ಪಿಸಲು ಹೆಚ್ಚಿನ ಅನುದಾನ ಒದಗಿಸಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು.
ಮಾನ್ವಿ: ವಿದ್ಯಾರ್ಥಿಗಳ ಬದುಕನ್ನು ಉತ್ತಮವಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಬೇಕು ಎಂದು ಕಲ್ಮಠ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಶಿಕ್ಷಕ ರಾಜಶೇಖರ್ ಎಚ್.
ಮಾನ್ವಿ: ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮುಂದಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದು, ಜಿಲ್ಲೆಯ ವಿವಿಧ ತಾಲೂಕುಗಳ ಕಸಾಪ ಸದಸ್ಯರು, ಹಿರಿಯ ಸಾಹಿತಿಗಳು ಹಾಗೂ ಕನ್ನಡಪರ ಚಿಂತಕರೊಂದಿಗೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಲೋಹಿಯಾ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಸಾಹಿತ್ಯ ಸಂಘಟಕ…
ತುಂಗ ಬಿಂಬ/ಮಾನ್ವಿ: ಗಣೇಶೋತ್ಸವವು ಕೇವಲ ಧಾರ್ಮಿಕ ಆಚರಣೆಯಾಗಿರದೆ, ಜನರಲ್ಲಿ ಒಗ್ಗಟ್ಟು ಮೂಡಿಸುವುದರ ಜೊತೆಗೆ ದೇಶದ ಸ್ವಾತಂತ್ರ್ಯ ಹೋರಾಟಕ್ಕೂ ಪ್ರೇರಣೆ ನೀಡಿದ ಐತಿಹಾಸಿಕ ಹಬ್ಬವಾಗಿದೆ ಎಂದು ಹಿರಿಯ ವಕೀಲ ಎ.ಬಿ. ಉಪ್ಪಳಮಠ ಹೇಳಿದರು.
ತುಂಗಾ ಬಿಂಬ/ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ವಿಜಯ ರಾವ್ ಕುಪನೇಶಿ ರಚಿಸಿರುವ ‘ಮಾನ್ವಿಯ ಸ್ವಾತಂತ್ರ್ಯ ಹೋರಾಟಗಾರರು’ ಕೃತಿಯನ್ನು ಶಾಸಕ ಹಂಪಯ್ಯ ನಾಯಕ ಲೋಕಾರ್ಪಣೆಗೊಳಿಸಿದರು.
ಮಾನ್ವಿ: ರಾಜ್ಯ ಛಲವಾದಿ ಮಹಾಸಭಾದ ನೂತನ ರಾಜ್ಯ ಕಚೇರಿ ಉದ್ಘಾಟನೆ ಹಾಗೂ 2026-27ನೇ ಸಾಲಿನ ಸರ್ವ ಸದಸ್ಯರ ಸಭೆ ಸೆ.20ರಂದು ಬೆಂಗಳೂರಿನ ದೊಡ್ಡಬಸ್ತಿಯಲ್ಲಿ ನಡೆಯಲಿದ್ದು, ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಹಾಸಭಾದ ಮಾನ್ವಿ ತಾಲೂಕು ಘಟಕದ ಅಧ್ಯಕ…
ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ…