ಇಂಗ್ಲಿಷ್ ಭಾಷಾ ತರಬೇತಿಯು ಕೇವಲ ವಿಷಯ ಬೋಧನೆಗೆ ಸೀಮಿತವಾಗಿರದೆ, ವಿದ್ಯಾರ್ಥಿಗಳಲ್ಲಿ ಜೀವನ ಕೌಶಲ್ಯ, ಆತ್ಮವಿಶ್ವಾಸ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.
ಸರ್ಕಾರದ ಯಾವುದೇ ಮಂಜೂರಾತಿ ಆದೇಶ ಅಥವಾ ಅಧಿಕೃತ ದಾಖಲೆಗಳಿಲ್ಲದೆ ಖಾಸಗಿ ವ್ಯಕ್ತಿಯ ಹೆಸರಿಗೆ ನೋಂದಣಿಯಾಗಿರುವ ಸರ್ಕಾರಿ ಭೂಮಿಯನ್ನು ಮರಳಿ ಸರ್ಕಾರದ ಹೆಸರಿಗೆ ದಾಖಲಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಕೈಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)-2026ರ ಬಳಿಕ ರಾಯಚೂರು ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಅಧಿಕೃತವಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪೂವಿತಾ ಎಸ್.
ಜಿಲ್ಲಾ ಮಟ್ಟದ ನಶಾಮುಕ್ತ ಭಾರತ ಅಭಿಯಾನದ ಬೀದಿನಾಟಕ (ನುಕ್ಕಡ್ ನಾಟಕ) ಸ್ಪರ್ಧೆಯಲ್ಲಿ ನಗರದ ಸೀತಾ ಸುಬ್ಬರಾಜು ಸ್ಮಾರಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ನಗರದ ಎಲ್‌ಬಿಎಸ್ ನಗರದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಆರ್ಯವೈಶ್ಯ ಸಮಾಜದ ಯುವ ವ್ಯಾಪಾರಿ ಬಾಪೂರು ನರಸಿಂಹ ಅವರ ಸಾವಿಗೆ ಸಂತಾಪ ಸೂಚಿಸಿ, ಆರ್ಯವೈಶ್ಯ ಸಮಾಜದ ವತಿಯಿಂದ ನಗರದ ನಗರೇಶ್ವರ ದೇವಸ್ಥಾನದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಯಿತು.
ನಗರದ ಎಲ್‌ಬಿಎಸ್ ನಗರದಲ್ಲಿ ಇತ್ತೀಚೆಗೆ ಹಾಡಹಗಲೇ ಹತ್ಯೆಗೀಡಾದ ವ್ಯಾಪಾರಿ ಬಾಪೂರು ನರಸಿಂಹ ಅವರ ಕುಟುಂಬಕ್ಕೆ ಕೊಪ್ಪಳದ ಆರ್ಯವೈಶ್ಯ ಸಮಾಜದ ಮುಖಂಡರು ₹1.50 ಲಕ್ಷ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳಿಗೆ ದೊರೆತ ಗೆಲುವು ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಮತದಾರರು ವ್ಯಕ್ತಪಡಿಸಿರುವ ಅಸಮಾಧಾನದ ಸಂಕೇತವಾಗಿದೆ.
ರೈತರ ಹಿತಾಸಕ್ತಿಗಳ ರಕ್ಷಣೆ, ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹಾಗೂ ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸುವ ಉದ್ದೇಶದಿಂದ ಕೃಷಿ ಸಮಾಜದ ರಾಜ್ಯ ಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳ ಸಭೆ ಬುಧವಾರ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ…
ರಾಯಚೂರು ಗ್ರಾಮೀಣ ಹಾಗೂ ನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಪೂರ್ಣಗೊಂಡಿದ್ದು, ಗೈರುಹಾಜರಿ, ವಲಸೆ, ಸ್ಥಳಾಂತರ ಹಾಗೂ ಮೃತಪಟ್ಟಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಎರಡೂ ಕ್ಷೇತ್ರಗಳಲ್ಲಿ ಒಟ್ಟು 1,06,922 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು…
ತಾಲೂಕಿನ ಚಿಕ್ಕಸೂಗೂರು ಕೈಗಾರಿಕಾ ಪ್ರದೇಶದಲ್ಲಿರುವ ಟೆಕ್ಸ್‌ಕಾನ್ ಸ್ಟೀಲ್ ಕಾರ್ಖಾನೆಯಿಂದ ಹೊರಹೊಮ್ಮುತ್ತಿರುವ ಹಾರುಬೂದಿ ಸುತ್ತಮುತ್ತಲಿನ ಜನರ ನೆಮ್ಮದಿಗೆ ಭಂಗ ತಂದಿದ್ದು, ಮಾಲಿನ್ಯ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಂಡು ಶಾಶ್ವತ ಪರಿಹಾರ ಒದಗಿಸಬೇಕೆಂದು ಕರ್ನಾಟಕ ಯುವ ಜಾಗೃತಿ ವೇದಿಕೆಯ ಜಿಲ್ಲಾ ಘಟಕ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಜಿಲ್ಲೆಯ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ (ಆರ್‌ಟಿಪಿಎಸ್) ಹಾಗೂ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್) ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ನಿವಾರಣೆ ಮತ್ತು ವಿದ್ಯುತ್ ಉತ್ಪಾದನಾ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಕರ್ನಾಟಕ ವಿದ್ಯುತ್ ನಿಗಮ…
ನಗರದ ಮಂತ್ರಾಲಯ ರಸ್ತೆಯಲ್ಲಿರುವ ಶ್ರೀ ಸದ್ಗುರು ಸತ್ಯಾತ್ಮ ಶಿವಲಿಂಗೇಶ್ವರ ಮಠದಲ್ಲಿ ಶ್ರೀ ಬಸವೇಶ್ವರ ಸಾಂಸ್ಕೃತಿಕ ಅಭಿವೃದ್ಧಿ ಕಲಾ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಸುಗಮ ಸಂಗೀತ ಮತ್ತು ತತ್ವಪದ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಲ್ಯಾಣ ಕರ್ನಾಟಕ ಭಾಗದ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ತತ್ವಪದ ಸಾಹಿತ್ಯದ ಸಂರಕ್ಷಣೆ, ಸಂಶೋಧನೆ ಹಾಗೂ ಪ್ರಸಾರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಪ್ರತ್ಯೇಕ ‘ತತ್ವಪದ ಸಾಹಿತ್ಯ ಅಧ್ಯಯನ ಪೀಠ’ವನ್ನು ಸ್ಥಾಪಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ…
ನಗರದ ಆಶಾಪುರ ರಸ್ತೆಯ ಸುತ್ತಮುತ್ತಲಿನ ಬಡಾವಣೆಗಳಲ್ಲಿ ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಹಾಗೂ ಕಳ್ಳತನದ ಯತ್ನಗಳು ಹೆಚ್ಚಾಗುತ್ತಿರುವ ಆರೋಪ ಕೇಳಿಬಂದಿದ್ದು, ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಅಕ್ರಮ ಮದ್ಯ ಮತ್ತು ಗಾಂಜಾ ಮಾರಾಟವನ್ನು ನಿಯಂತ್ರಿಸಿ, ಇಂತಹ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮಸ್ಕಿ ವಿಧಾನಸಭಾ ಕ್ಷೇತ್ರದ ತಿಡಿಗೋಳ ಮತ್ತು ನಿಡಿಗೋಳ ಗ್ರಾಮಗಳಲ್ಲಿ ದಲಿತ ಸಮುದಾಯದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ನವೆಂಬರ್ 8ರಂದು ‘ತಿಡಿಗೋಳ ಚಲೋ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ದಲಿತ ಮುಖಂಡ ಹಾಗೂ ಉಪನ್ಯಾಸಕ ತಾಯಪ್ಪ ತಿಡಿಗೋಳ್ ತಿಳಿಸಿದರು.
ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಜೊತೆಗೆ ಪ್ರತಿಭಾವಂತರನ್ನು ರಾಜ್ಯಮಟ್ಟದ ಸ್ಪರ್ಧೆಗಳಿಗೆ ಸಜ್ಜುಗೊಳಿಸುವ ಉದ್ದೇಶದಿಂದ ಅಕ್ಟೋಬರ್ 29ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಿಡ್ಜಾಮ್-2026 (NIDJAM) ಅಥ್ಲೆಟಿಕ್ಸ್ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಅಥ್ಲೆಟಿಕ್ಸ್…
ನಗರದ ಎಲ್‌ಬಿಎಸ್ ನಗರದಲ್ಲಿ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಅಮಾಯಕ ವ್ಯಾಪಾರಸ್ಥನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ನಗರದಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸಿ ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಯುವಜನತೆ ದುಶ್ಚಟಗಳಿಂದ ದೂರವಿದ್ದು, ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಹಾಗೂ ಆದರ್ಶಗಳಿಂದ ಸ್ಫೂರ್ತಿ ಪಡೆದು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಕರೆ ನೀಡಿದರು.