ರಾಯಚೂರು, ಸೆ.22: ದಲಿತ ಹೋರಾಟಗಾರರು ಧರಿಸುವ ನೀಲಿ ಶಾಲಿನ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಎಂಆರ್ಎಚ್ಎಸ್ ರಾಯಚೂರು ಜಿಲ್ಲಾ ಅಧ್ಯಕ್ಷ ಹನುಮಂತಪ್ಪ ಮನ್ನಾಪುರಿ, ಅವರು ದಲಿತ ಹೋರಾಟಗಾರರ ಭಾವನೆಗಳಿಗೆ ಧಕ್ಕೆ ತಂದಿದ್ದು, ರಾಜ್ಯದ ದಲಿತ ಸಮುದಾಯದ ಬಳಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಯಚೂರು, ಸೆ.21: ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಕ್ಟೋಬರ್ 24 ಮತ್ತು 25ರಂದು ಹಮ್ಮಿಕೊಳ್ಳಲಾಗಿರುವ ರಾಯಚೂರು ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದ ಹಿರಿಯ ಸಾಹಿತಿ ರಾಮಣ್ಣ ಹವಳೆ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು…
ರಾಯಚೂರು, ಸೆ.21: ಯುವಜನರು ಪೌಷ್ಟಿಕ ಆಹಾರ ಸೇವನೆ, ನಿಯಮಿತ ಯೋಗ-ಧ್ಯಾನ ಹಾಗೂ ವೈಯಕ್ತಿಕ ಮತ್ತು ಪರಿಸರ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಸಲಹೆಗಾರ ಬಿ. ರಾಮು ಹೇಳಿದರು.
ರಾಯಚೂರು, ಸೆ.21: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಯಲ್ಲಿ ನಿರಂತರ ಸರ್ವರ್ ಸಮಸ್ಯೆ ಎದುರಾಗುತ್ತಿರುವುದರಿಂದ ಸಾರ್ವಜನಿಕರು ಹಾಗೂ ನ್ಯಾಯಬೆಲೆ ಅಂಗಡಿ ವಿತರಕರು ಸಂಕಷ್ಟ ಅನುಭವಿಸುತ್ತಿದ್ದಾರೆ.
ರಾಯಚೂರು, ಸೆ.21: ದೇವರಾಜು ಅರಸು ವಿಶೇಷ ವರ್ಗ ಯೋಜನೆಯಡಿ ನಿವೇಶನ ಕೋರಿ ಸಲ್ಲಿಸಿರುವ 1,635 ಫಲಾನುಭವಿಗಳ ಅರ್ಜಿಗಳನ್ನು ತಕ್ಷಣ ಪರಿಶೀಲಿಸಿ, ಒಂದು ವಾರದೊಳಗೆ ಜಿಲ್ಲಾಡಳಿತಕ್ಕೆ ರವಾನಿಸಬೇಕು.
ರಾಯಚೂರು, ಸೆ.21: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ, ಕರಡು ಮತದಾರರ ಪಟ್ಟಿಯಲ್ಲಿನ ಬದಲಾವಣೆಗಳು ಹಾಗೂ ಅರ್ಹ ಮತದಾರರ ಹೆಸರು ಕೈಬಿಡುವ ಆತಂಕಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಸೆ.23ರಂದು ಸಂಜೆ 5 ಗಂಟೆಗೆ ನಗರದ ಟಿಪ್ಪು ಸುಲ್ತಾನ್ ಪಾರ್ಕ್ನಲ್ಲಿ ನಟ ಪ್ರಕಾಶ್…
ರಾಯಚೂರು, ಸೆ.21: ಗಡಿಭಾಗಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವುದರ ಜೊತೆಗೆ ಕನ್ನಡದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಉತ್ತೇಜನ ನೀಡಲು ಸರ್ಕಾರ ವಿಶೇಷ ಯೋಜನೆಗಳನ್ನು ರೂಪಿಸಬೇಕು ಎಂದು ಕನ್ನಡ ಮಿತ್ರಕೂಟದ ಅಧ್ಯಕ್ಷ ಅಶೋಕ್ ಕುಮಾರ್ ಸಿ.ಕೆ. ಜೈನ್ ಒತ್ತಾಯಿಸಿದರು.
ರಾಯಚೂರು: ಜಿಲ್ಲೆಯಲ್ಲಿ ನಡೆದ ದಲಿತರ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಗಳು ಹಾಗೂ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಭೀಮಾನಂದ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕು, ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಸಿಂಧನೂರು ತಾಲೂಕಿನ ವೀರಾಪಪುರ ಗ್ರಾಮದ ಭೂ ಒಡೆತನ ಯೋಜನೆಯ ಫಲಾನುಭವಿಗಳ ಹೆಸರಿಗೆ…
ರಾಯಚೂರು: ನಗರದ ಪ್ರಜಾಪಿತಾ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಾಜಯೋಗಿನಿ ಬಿ.ಕೆ. ಸ್ಮೀತಾ ಅಕ್ಕ ಹಾಗೂ ಕಾರ್ಯದರ್ಶಿ ಬಿ.ಕೆ. ಶಾರದಾ ಅಕ್ಕ ಅವರ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರಿಗೆ ಗೌರವ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ರಾಯಚೂರು, ಸೆ.20: ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೆ. ಶಾಂತಪ್ಪ ಅವರು ಭಾನುವಾರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಧಿಕಾರ ಸ್ವೀಕರಿಸಿ ಕಾರ್ಯಾರಂಭ ಮಾಡಿದರು. ಇತ್ತೀಚೆಗೆ ಪ್ರಕಟವಾದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಗೆ ಕೆ. ಶಾಂತಪ್ಪ ಅವರನ್ನು ನೇಮಕ ಮಾಡಲಾಗಿತ್ತು.
ರಾಯಚೂರು: ಮುಂಬರುವ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕರ್ಕಶ ಧ್ವನಿಯ ಡಿಜೆ ಹಾಗೂ ನಿಯಮ ಮೀರಿ ಧ್ವನಿವರ್ಧಕಗಳನ್ನು ಬಳಸಿದರೆ ಸಂಬಂಧಿಸಿದ ಡಿಜೆ ವಾಹನಗಳನ್ನು ನಿರ್ದಾಕ್ಷಿಣ್ಯವಾಗಿ ಸೀಜ್ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಖಡಕ್ ಎಚ್ಚರಿಕೆ ನೀಡಿದರು.
ರಾಯಚೂರು: ನಗರದ ಕನ್ನಡ ಭವನದಲ್ಲಿ ಭಾನುವಾರ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಕ್ಟೋಬರ್ 24 ಮತ್ತು 25ರಂದು ನಡೆಯಲಿರುವ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಿಲ್ಲೆಯ ಹಿರಿಯ ಸಾಹಿತಿ ರಾಮಣ್ಣ ಹವಳೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ರಾಯಚೂರು: ನಗರದ ಕನ್ನಡ ಭವನದಲ್ಲಿ ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊಪ್ಪಳ ಜಿಲ್ಲೆಯ ಕಾರಟಗಿ ಮೂಲದ ಕಾದಂಬರಿಕಾರ್ತಿ ಜಿ.ಎಂ. ರಾಜೇಶ್ವರಿ ಅವರಿಗೆ 2026-27ನೇ ಸಾಲಿನ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ರಾಯಚೂರು: ನಗರದ ಮಹಾಲಕ್ಷ್ಮಿ ಲೇಔಟ್ ಬಡಾವಣೆಯಲ್ಲಿ ಎಂ.ಎಲ್.ಎನ್. ಯೂತ್ ಅಸೋಸಿಯೇಷನ್ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ಏಳನೇ ದಿನದ ವಿಸರ್ಜನೆ ಅಂಗವಾಗಿ ಮುತ್ತೈದೆ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಸಡಗರ-ಸಂಭ್ರಮದಿಂದ ಹಮ್ಮಿಕೊಳ್ಳಲಾಯಿತು.
ರಾಯಚೂರು: ನಗರದ ಐದನೇ ದಿನದ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ ಇಬ್ಬರು ಬಾಲಕರ ಮನೆಗಳಿಗೆ ಭಾನುವಾರ ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ರಾಯಚೂರು: ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೆ. ಶಾಂತಪ್ಪ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿದ್ದು, ಪಕ್ಷದ ಎಲ್ಲ ಹಂತದ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕು ಎಂದು ಮಾಜಿ ಸಚಿವ ಎನ್.ಎಸ್.
ರಾಯಚೂರು: ಆಯುಷ್ ವೈದ್ಯರ ವೃತ್ತಿಪರ ಹಕ್ಕು, ಸೇವಾ ಭದ್ರತೆ ಹಾಗೂ ಆರೋಗ್ಯ ಸೇವೆಯಲ್ಲಿ ಸಮರ್ಪಕ ಅವಕಾಶ ಕಲ್ಪಿಸುವುದು ಸೇರಿದಂತೆ ಬಹುದಿನಗಳ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಯುಷ್ ಫೆಡರೇಷನ್ ಆಫ್ ಇಂಡಿಯಾ ಕರ್ನಾಟಕ ಘಟಕದ ನೇತೃತ್ವದಲ್ಲಿ ಸೆ.22ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಾಗೂ ಧರಣಿ ಸತ್ಯಾಗ್ರಹ ನಡೆಸಲು…
ರಾಯಚೂರು: ರಾಜ್ಯಾದ್ಯಂತ ಶಿವಸೇನಾ ಕರ್ನಾಟಕ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ನಿಗದಿತ ಅವಧಿಯಲ್ಲಿ 20 ಲಕ್ಷ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಗಂಗಾಧರ್ ಪ್ರಧಾನ ಕುಲಕರ್ಣಿ ಹೇಳಿದರು.
ರಾಯಚೂರು: ರೈತರ ಕೃಷಿ ಚಟುವಟಿಕೆಗಳಿಗೆ ನೀರಾವರಿ ಸೌಲಭ್ಯವನ್ನು ಬಲಪಡಿಸುವ ಉದ್ದೇಶದಿಂದ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಬೋರ್ವೆಲ್ ಪಂಪ್ಸೆಟ್ಗಳನ್ನು ವಿತರಿಸಲಾಯಿತು.