ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ 41ನೇ ಪತ್ರಕರ್ತರ ಸಮ್ಮೇಳನದ ಪೂರ್ವಸಿದ್ಧತೆಗಳ ಕುರಿತು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜ್ ಅವರೊಂದಿಗೆ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ಪತ್ರಕರ್ತರು ಚರ್ಚೆ ನಡೆಸಿದರು.
ರಾಯಚೂರು, ಸೆ.19: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಅವರ ದತ್ತಿಯಡಿ ನೀಡಲಾಗುವ ದಿ. ಶ್ರೀಮತಿ ರಾಜಲಕ್ಷ್ಮಿ ರಾಮಚಂದ್ರಪ್ಪ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ.20ರಂದು ಬೆಳಿಗ್ಗೆ 10.30ಕ್ಕೆ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಯಚೂರು: ಜಿಲ್ಲೆಯಲ್ಲಿ ತೀವ್ರ ಬರಗಾಲ ಪರಿಸ್ಥಿತಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ಸಮೀಕ್ಷೆಯನ್ನು ಸಮರ್ಪಕವಾಗಿ ದಾಖಲಿಸುವ ಮೂಲಕ ಅರ್ಹ ರೈತರಿಗೆ ಪರಿಹಾರ ದೊರೆಯುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಸೂಚಿಸಿದರು.
ರಾಯಚೂರು: ನಗರದ ಅಲ್ಲಮಪ್ರಭು ಕಾಲೋನಿಯ ಹೊರವಲಯದಲ್ಲಿ ಅಕ್ರಮವಾಗಿ ಒಣ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಾರ್ಕೆಟ್ ಯಾರ್ಡ್ ಠಾಣೆ ಪೊಲೀಸರು ಬಂಧಿಸಿ, ಅವರಿಂದ 1,810 ಗ್ರಾಂ ಒಣ ಗಾಂಜಾ ಜಪ್ತಿ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
ರಾಯಚೂರು: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಪಿಎಫ್ಒ ಅಡಿಯಲ್ಲಿ ಕಡ್ಡಾಯ ವ್ಯಾಪ್ತಿಗೆ ಒಳಪಡುವ ವೇತನ ಮಿತಿಯನ್ನು ತಿಂಗಳಿಗೆ 15,000 ರಿಂದ 25,000ಕ್ಕೆ ಹೆಚ್ಚಿಸಲು ಅನುಮೋದನೆ ನೀಡಿದೆ.
ರಾಯಚೂರು: ಕರ್ನಾಟಕ ರಾಜ್ಯದಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರೇತರ ವಸತಿ ನಿಲಯಗಳ ವಸತಿಯುತ ಶಾಲೆ ಅಥವಾ ಕಾಲೇಜುಗಳ ನೋಂದಣಿ ಕುರಿತು ಅರ್ಜಿ ಆಹ್ವಾನಿಸಲಾಗಿದೆ.
ರಾಯಚೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಹಾ ಜಿಲ್ಲಾ ಮಟ್ಟದಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆ-2026ರ ಜಿಲ್ಲಾ ವ್ಯಾಪ್ತಿಯ ಹಿರಿಯ ನಾಗರಿಕರಿಗೆ ಸೆಪ್ಟಂಬರ್ 28ರ ಬೆಳಿಗ್ಗೆ 10.30ಗಂಟೆಗೆ ರಾಯಚೂರು ನಗರದ ಜಿಲ್ಲಾ ಮಹತ್ಮಾಗಾಂಧಿ ಕ್ರೀಡಾಂಗಣದಲ್ಲಿ ಹಿರಿಯ ನಾಗರೀಕರ…
ರಾಯಚೂರು: ಜೆಸ್ಕಾಂ ಇಲಾಖೆಯಿಂದ ರಾಯಚೂರು ಜಿಲ್ಲೆಯಲ್ಲಿ ಆಗಸ್ಟ್-2026ರ ಮಾಹೆಯಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ ಅನಧಿಕೃತ ವಿದ್ಯುತ್ ಬಳಕೆ ಮಾಡುತ್ತಿದಂತಹ 195 ಪ್ರಕರಣಗಳು ಪತ್ತೆ ಹಚ್ಚಿ ಸುಮಾರು 18.95 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದ್ದು, ಅನಧಿಕೃತವಾಗಿ ವಿದ್ಯುತ್ ಬಳಕೆ ಮಾಡುತ್ತಿರುವ ಗ್ರಾಹಕರು…
ರಾಯಚೂರು: ಯುವ ಸಮುದಾಯವನ್ನು ದುರ್ವ್ಯಸನಗಳಿಂದ ದೂರವಿಟ್ಟು ಆರೋಗ್ಯಕರ ಹಾಗೂ ಉತ್ತಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕ ಸದಾ ಬದ್ಧವಾಗಿದ್ದು, ನೂರು ವಾರಗಳ ಸಂಕಲ್ಪ ಅಭಿಯಾನದಡಿ ವಿವಿಧ ಜಾಗೃತಿ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲಾಗುವುದು ಎಂದು ಸರಕಾರಿ…
ರಾಯಚೂರು: ಯಾವುದೇ ಅರ್ಹರ ಮತದಾರ ಮತದಾರರ ಪಟ್ಟಿಯಿಂದ ಹೊರಗೆ ಉಳಿಯಬಾರದು ಬೇರೆ ಬೇರೆ ತಾಲೂಕುಗಳಿಂದ ತಾವು ದುಡಿಯಲು ಬಂದಿರುತ್ತೀರಿ ತಮ್ಮ ಹೆಸರು ಸಹ ಮತದಾರರ ಪಟ್ಟಿಯಲ್ಲಿ ಸೇರಿಸಬೇಕು ಶುದ್ಧ ಸ್ಪಷ್ಟ ಪಾರದರ್ಶಕ ಮಾದರಿಯ ಮತದಾರರಪಟ್ಟಿಯನ್ನು ತಯಾರಿಸುವುದೇ ಇದರ ಮೂಲ ಉದ್ದೇಶವಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ…
ರಾಯಚೂರು. ಸೆ.18: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮಮತಾ ದರ್ಬಾರಿ ಗಂಡ ಪ್ರಭು ಅವರನ್ನ ನೇಮಕ ಮಾಡಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯಾಧ್ಯಕ್ಷರಾದ ಎಮ್.ವಿಜಯ್ ನಾಯಕ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ತುಂಗ ಬಿಂಬ/ರಾಯಚೂರು, ಸೆ.18: ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ಬದುಕನ್ನು ಬಂಗಾರವಾಗಿಸುವುದರ ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ಶಿಲ್ಪಿಗಳಾಗಿದ್ದಾರೆ ಎಂದು ರಾಯಚೂರಿನ ವೀರಶೈವ ಕಾಲೇಜಿನ ಕನ್ನಡ ಉಪನ್ಯಾಸಕ ಹೇಮರೆಡ್ಡಿ ಅಭಿಪ್ರಾಯಪಟ್ಟರು.
ತುಂಗ ಬಿಂಬ/ರಾಯಚೂರು: ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ರಾಯಚೂರು ಸಹಯೋಗದಲ್ಲಿ, ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರ ಅಧ್ಯಕ್ಷತೆಯಲ್ಲಿ ಗಿಲ್ಲೇಸೂಗುರ ಹೋಬಳಿ ವ್ಯಾಪ್ತಿಯ ಸಾರ್ವಜನಿಕರಿಗಾಗಿ ಸೆ.19ರಂದು ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತುಂಗ ಬಿಂಬ/ರಾಯಚೂರು: ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ. ಶಾಂತಪ್ಪ ಅವರು ಸೆ.20ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ಗಂಜ್ ಕಲ್ಯಾಣ ಮಂಟಪದಲ್ಲಿ ಅಧಿಕೃತವಾಗಿ ಪದಗ್ರಹಣ ಮಾಡಲಿದ್ದಾರೆ.
ತುಂಗ ಬಿಂಬ/ರಾಯಚೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನವನ್ನು ನಗರದ ಶ್ರೀ ಸಾಯಿಬಾಬಾ ಜನ ಮಂದಿರದಲ್ಲಿ ಮೋದಿ ಅಭಿಮಾನಿಗಳು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಿಸಿದರು. ಮೋದಿ ಅಭಿಮಾನಿ ಬಂಗಿ ಮುನಿರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಸಾಯಿಬಾಬಾಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ತುಂಗಾ ಬಿಂಬ/ರಾಯಚೂರು: ಪ್ರಸಕ್ತ ಮುಂಗಾರು ಹಂಗಾಮಿನ ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಯಚೂರು ಜಿಲ್ಲೆಯ ಮಾನ್ವಿ, ಸಿಂಧನೂರು ಹಾಗೂ ಸಿರವಾರ ತಾಲೂಕುಗಳನ್ನು ‘ತೀವ್ರ ಬರಪೀಡಿತ’ ಪ್ರದೇಶಗಳೆಂದು ಘೋಷಿಸಿದೆ.
ತುಂಗಾ ಬಿಂಬ/ರಾಯಚೂರು: ಡಾ. ನರಸಿಂಹಲು ನಂದಿನಿ ಸ್ಮಾರಕ ಶಿಕ್ಷಣ ಸಂಸ್ಥೆಯಿಂದ ಸಂಚಾಲಿತ ನಂದಿನಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಶಿಕ್ಷಣ ಮಹಾವಿದ್ಯಾಲಯಗಳ ಸಹಯೋಗದಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವವನ್ನು ನಂದಿನಿ ಶಿಕ್ಷಣ ಮಹಾವಿದ್ಯಾಲಯದ ಮೈದಾನದಲ್ಲಿ ಆಚರಿಸಲಾಯಿತು.
ರಾಯಚೂರು, ಸೆ.17: ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹17 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ರಾಯಚೂರು, ಸೆ.17: ಲಿಂಗಸುಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹1.05 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ತುಂಗಾ ಬಿಂಬ/ರಾಯಚೂರು: ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಮ್ಮ ಭೂಮಿ-ನಮ್ಮ ನೀರು-ನಮ್ಮ ಶಕ್ತಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಅವರು ನಗದು ಬಹುಮಾನದ ಜೊತೆಗೆ…
ತುಂಗಾ ಬಿಂಬ/ರಾಯಚೂರು: ವಿಶ್ವಕರ್ಮರ ಆದರ್ಶವನ್ನು ಅಳವಡಿಸಿಕೊಂಡು, ಮಾನವೀಯ ಮೌಲ್ಯಗಳೊಂದಿಗೆ ಬದುಕಿದರೆ ಮಾತ್ರ ಜಯಂತಿಗಳ ಆಚರಣೆಗೆ ಅರ್ಥ ಬರುತ್ತದೆ ಎಂದು ಉಪನ್ಯಾಸಕರಾದ ಡಾ. ವಿಶ್ವನಾಥ ಎಸ್.