ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೆ.29ರಂದು ಗರ್ಭಕಂಠದ ಕ್ಯಾನ್ಸರ್ ಕುರಿತು ಅರಿವು, ಮಹಿಳಾ ಆರೋಗ್ಯ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರದ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ರಾಯಚೂರು: ನಗರದ ಶ್ರೀ ರಾಘವೇಂದ್ರ ಸ್ವಾಮಿ ಶ್ರೀಮಠದ ಆವರಣದಲ್ಲಿ ಅ.3 ಮತ್ತು 4ರಂದು ನಡೆಯಲಿರುವ ‘ಗೋವಿಂದ ಗಾನ’ ಕಾರ್ಯಕ್ರಮದ ಪೂರ್ವಭಾವಿಯಾಗಿ ಸುಮಾರು 500 ಮಹಿಳೆಯರಿಗೆ ಸಾಮೂಹಿಕ ಗಾಯನದ ತರಬೇತಿ ಹಾಗೂ ಅಭ್ಯಾಸ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಮಟ್ಟದ ದಾಸವಾಣಿ ಗಾಯಕ ರಾಯಚೂರು ಶೇಷಗಿರಿ ದಾಸ ಅವರ ನೇತೃತ್ವದಲ್ಲಿ…
ರಾಯಚೂರು ಸೆ. 29 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಅಕ್ಟೋಬರ್ 01 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1 ಗಂಟೆವರೆಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಕೋರಲಾಗಿದೆ.
ರಾಯಚೂರು ಸೆ. 29 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗವು ದಿನಾಂಕ:22.09.2026 ರಂದು ಕರ್ನಾಟಕ ವಿಧಾನ ಪರಿಷತ್ತ ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆಯನ್ನು ಘೋಷಿಸಿ ವೇಳಾಪಟ್ಟಿಯನ್ನು ಹೊರಡಿಸಿರುತ್ತದೆ.
ರಾಯಚೂರು ಸೆ. 29 (ಕರ್ನಾಟಕ ವಾರ್ತೆ): ರಾಯಚೂರು ನಗರದಲ್ಲಿ ಅಕ್ಟೋಬರ್ 20ರ ಬೆಳಿಗ್ಗೆ 12.30ಕ್ಕೆ ನಾಡ ಹಬ್ಬ ದಸರಾ ಆಚರಣೆ ಹಿನ್ನೆಲೆಯಲ್ಲಿ ಇಂದು ಮಹಾನಗರ ಪಾಲಿಕೆಯ ಜೋನಲ್ 01ರ ಕಚೇರಿಯ ಸಭಾಂಗಣದಲ್ಲಿ ಪಾಲಿಕೆಯ ಆಯುಕ್ತರ ಅಧ್ಯಕ್ಷತೆ ಪೂರ್ವಭಾವಿ ಸಭೆ ಯಶಸ್ವಿಯಾಗಿ ಜರುಗಿತು.
ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಯಚೂರು ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಗಾಣದಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ನಡುಗಡ್ಡೆ ಮಲಕಾಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ‘ನಿಮ್ಮ ಆರೋಗ್ಯ ಊಟದ ತಟ್ಟೆಯಲ್ಲಿ’ ಎಂಬ ಸಂದೇಶದೊಂದಿಗೆ ಗ್ರಾಮ ಆರೋಗ್ಯ…
ರಾಯಚೂರು: ಮಾನ್ವಿ ಉಪವಿಭಾಗದಲ್ಲಿ ಜೇಸ್ಕಾಂನ ನಗದು ರಸೀದಿ ಪುಸ್ತಕವನ್ನು ದುರ್ಬಳಕೆ ಮಾಡಿಕೊಂಡು ನಿಗಮಕ್ಕೆ ₹2 ಲಕ್ಷಕ್ಕೂ ಅಧಿಕ ಆರ್ಥಿಕ ನಷ್ಟ ಉಂಟುಮಾಡಲಾಗಿದೆ ಎಂಬ ಆರೋಪದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರೆಂದು ಕಂಡುಬರುವ ನೌಕರರು ಮತ್ತು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು…
ರಾಯಚೂರು: ತಾರಾನಾಥ ಶಿಕ್ಷಣ ಸಂಸ್ಥೆಯ ಲಕ್ಷ್ಮೀ ವೆಂಕಟೇಶ ದೇಸಾಯಿ ಕಾಲೇಜಿನ ಗಣಕಯಂತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ವಿದ್ಯಾರ್ಥಿಗಳ ಜ್ಞಾನ ಮತ್ತು ಕೌಶಲ್ಯ ವೃದ್ಧಿಸುವ ಉದ್ದೇಶದಿಂದ ಐಬಿಎಂ ಸ್ಕಿಲ್ಸ್ಬಿಲ್ಡ್ ನೇತೃತ್ವದಲ್ಲಿ ಮೂರು ದಿನಗಳ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಸೆ.29ರಿಂದ ಅ.1ರವರೆಗೆ ಆಯೋಜಿಸಲಾಗಿದೆ.
ರಾಯಚೂರು, ಸೆ.29: ಜಿಲ್ಲೆಯ ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ಮಹತ್ವದ ಪ್ರವಾಸಿ ತಾಣಗಳನ್ನು ಸಂರಕ್ಷಿಸಿ, ಅವುಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.
ರಾಯಚೂರು, ಸೆ.29: ಕಲಬುರಗಿಯಲ್ಲಿ ತೆರವು ಮಾಡಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಅದೇ ಸ್ಥಳದಲ್ಲಿ ಮರುಸ್ಥಾಪಿಸಲು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕುರುಬ ಸಮಾಜದ ಮುಖಂಡ ಕುರಿ ಅಂಜನಪ್ಪ ಒತ್ತಾಯಿಸಿದರು.
ರಾಯಚೂರು: ಸರ್ಕಾರಿ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಶಾಲೆಗಳು, ಪ್ರೌಢಶಾಲೆಗಳು, ವಸತಿ ಶಾಲೆಗಳು, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಗ್ರಂಥಪಾಲಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ವತಿಯಿಂದ ಅಕ್ಟೋಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಒಂದು…
ರಾಯಚೂರು, ಸೆ.28: ತೆರಿಗೆ ವಸೂಲಾತಿಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದೆ ಕರ್ತವ್ಯ ಲೋಪ ಎಸಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ದೇವದುರ್ಗ ತಾಲೂಕಿನ ಶಾವಂತಗೇರಾ ಹಾಗೂ ಮಾನ್ವಿ ತಾಲೂಕಿನ ಸಾದಾಪುರ ಗ್ರಾಮ ಪಂಚಾಯಿತಿಗಳ ಇಬ್ಬರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಸೇವೆಯಿಂದ ಅಮಾನತುಗೊಳಿಸಲಾಗಿದೆ.
ರಾಯಚೂರು ಸೆಪ್ಟಂಬರ್ 28 (ಕರ್ನಾಟಕ ವಾರ್ತೆ): ಅಕ್ಟೋಬರ್ ಮೊದಲ ವಾರದಲ್ಲಿ ಬರ ಅಧ್ಯಯನಕ್ಕಾಗಿ ಕೇಂದ್ರ ತಂಡ ರಾಜ್ಯಕ್ಕೆ ಆಗಮಿಸಲಿದ್ದು, ಮೊದಲನೇಯ ಹಂತದಲ್ಲಿ ಬರ ಪೀಡಿತ ಎಂದು ಘೋಷಣೆಯಾದ ರಾಯಚೂರು ಜಿಲ್ಲೆಯ ತಾಲೂಕುಗಳಿಗೆ ಅಕ್ಟೋಬರ್ 4ರಂದು ಭೇಟಿ ನೀಡುವ ಸಾಧ್ಯತೆ ಎಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್.
ರಾಯಚೂರು ಸೆಪ್ಟಂಬರ್ 28 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2026-27ನೇ ಸಾಲಿನ ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟಂಬರ್ 30ರಂದು ವಿವಿಧ ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಕ್ರೀಡಾಪಟ್ಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ರಾಯಚೂರು: ಭಾರತ ವಿಕಾಸ ಪರಿಷತ್ತು ರಾಯಚೂರು ಶಾಖೆ ವತಿಯಿಂದ ನಗರದ ಬಿಆರ್ಬಿ ಕಾಲೇಜಿನಲ್ಲಿ ಸೆ.27ರಂದು ಆಯೋಜಿಸಿದ್ದ ಜಿಲ್ಲಾ ಮಟ್ಟದ ‘ಭಾರತ್ ಕೋ ಜಾನೋ–2026’ ರಸಪ್ರಶ್ನೆ ಸ್ಪರ್ಧೆಯ ಜೂನಿಯರ್ ವಿಭಾಗದಲ್ಲಿ ಬಸವಶ್ರೀ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ರಾಯಚೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಹಾಗೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂಧಿಸಬೇಕು ಎಂದು ಆಗ್ರಹಿಸಿ ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು.
ರಾಯಚೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ತಡೆ ನೀಡಬೇಕು ಹಾಗೂ ಮತದಾರರ ಪಟ್ಟಿಯಿಂದ ತಪ್ಪಾಗಿ ಕೈಬಿಡಲಾದ ಅರ್ಹರ ಹೆಸರುಗಳನ್ನು ಮರುಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿ ಎಡಪಕ್ಷಗಳ ನೇತೃತ್ವದಲ್ಲಿ ಸೋಮವಾರ…
ರಾಯಚೂರು, ಸೆ.28: ಕರ್ನಾಟಕ ರಾಜ್ಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)-2026ಕ್ಕೆ ಸಜ್ಜಾಗುತ್ತಿರುವ ಅಭ್ಯರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಅಶ್ವಮೇಧ ಫೌಂಡೇಶನ್ ವತಿಯಿಂದ ಅ.4ರಂದು ಕೆ-ಸೆಟ್ ಪತ್ರಿಕೆ-1ರ ಸಾಮಾನ್ಯ ಅಧ್ಯಯನ ಕುರಿತು ಒಂದು ದಿನದ ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಶನ್ ಅಧ್ಯಕ್ಷ ರಮೇಶ್…
ರಾಯಚೂರು, ಸೆ.28: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆ, ತಾತ್ಕಾಲಿಕ ಸಿಬ್ಬಂದಿ ನೇಮಕ, ಹೆಚ್ಚುವರಿ ಹುದ್ದೆಗಳ ಜವಾಬ್ದಾರಿ ಹಂಚಿಕೆ ಹಾಗೂ ಹಣಕಾಸು ನಿರ್ವಹಣೆಯಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪಗಳಿಗೆ ಸಂಬಂಧಿಸಿ ಆ.7ರಂದು ಸಲ್ಲಿಸಿದ ಮನವಿಗೆ ಇದುವರೆಗೂ ಯಾವುದೇ ಉತ್ತರ…
ರಾಯಚೂರು: ಬರ ಪರಿಸ್ಥಿತಿಯಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಬೆಳೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ.30ರಂದು ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಯಚೂರು ಗ್ರಾಮೀಣ ಜೆಡಿಎಸ್ ಮುಖಂಡ ಸಣ್ಣ ನರಸಿಂಹ…
ರಾಯಚೂರು, ಸೆ.28: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಅವರ 119ನೇ ಜನ್ಮದಿನವನ್ನು ನಗರದ ಸ್ಟೇಷನ್ ರಸ್ತೆಯ ಸಾರ್ವಜನಿಕ ಉದ್ಯಾನವನದಲ್ಲಿ ರಾಯಚೂರು ವಾಕಿಂಗ್ ಕ್ಲಬ್ ಹಾಗೂ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ವತಿಯಿಂದ ಆಚರಿಸಲಾಯಿತು.
ರಾಯಚೂರು, ಸೆ.27: ತೆಲಂಗಾಣದ ಮಕ್ತಲ್ನ ರಾಯಲ್ ಪ್ಯಾಲೇಸ್ನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಡು ಮತ್ತು ಕುಂಗ್ ಫು ಚಾಂಪಿಯನ್ಶಿಪ್–2026ರಲ್ಲಿ ರಾಯಚೂರಿನ ಶ್ರೀ ಸೂಗುರೇಶ್ವರ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.
ರಾಯಚೂರು: ನಗರದ ವಿವಿಧ ಗಣೇಶ ಮೂರ್ತಿಗಳನ್ನು ಸಾಮಾನ್ಯವಾಗಿ ಖಾಸಭಾವಿಯಲ್ಲಿ ನೀರು ತುಂಬಿಸಿ ವಿಸರ್ಜಿಸಲಾಗುತ್ತದೆ. ಆದರೆ ಪಟೇಲ್ ರಸ್ತೆಯ ಬಾಲರಾಮ ಶಾಲೆಯ ಶುದ್ಧ ಮಣ್ಣಿನ ಗಣೇಶ ಮೂರ್ತಿಯನ್ನು ಸಂಪ್ರದಾಯದಂತೆ ಬಸನಭಾವಿ ವೃತ್ತದಲ್ಲಿರುವ ಶ್ರೀ ಮಾರುತಿ ದೇವಸ್ಥಾನದ ಹಿಂಭಾಗದ ಪುರಾತನ ಬಾವಿಯಲ್ಲಿ ವಿಸರ್ಜಿಸಲಾಯಿತು.