ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಎಲ್ಲ ಗಜಾನನ ಮಂಡಳಿಯವರು ಪಾಲಿಸುವ ಮೂಲಕ ಶಾಂತಿಯುತ ಹಾಗೂ ಯಾವುದೇ ದುರ್ಘಟನೆಗಳ ನಡೆಯದಂತೆ ನೋಡಿಕೊಳ್ಳುವ ಮೂಲಕ ಜಿಲ್ಲಾಡಳಿತಕ್ಕೆ ಸಹಕರಿಸಿಬೇಕೆಂದು ಜಿಲ್ಲಾಧಿಕಾರಿ ಪೂವಿತಾ ಎಸ್.
ರಾಯಚೂರು, ಸೆ.20: ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿರುವ ಮೈ ಭಾರತ್ (MY Bharat), ರಾಯಚೂರು ವತಿಯಿಂದ ನಗರದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ)ಯಲ್ಲಿ “ನಶಾ ಮುಕ್ತ ಯುವ ಫಾರ್ ವಿಕಸಿತ್ ಭಾರತ್” ಸಂಕಲ್ಪ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಯಚೂರಿನಲ್ಲಿ ಆಯೋಜಿಸಲು ಉದ್ದೇಶಿಸಿರುವ 41ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಪೂರ್ವಸಿದ್ಧತೆಗಳ ಕುರಿತು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ದದ್ದಲ್ ಬಸನಗೌಡ ಅವರೊಂದಿಗೆ ಸಂಘದ ಪದಾಧಿಕಾರಿಗಳು ಹಾಗೂ ಪತ್ರಕರ್ತರು ಸಮಾಲೋಚನೆ ನಡೆಸಿದರು.
ರಾಯಚೂರು, ಸೆ.20: ಮಾನ್ವಿ–ರಾಯಚೂರು ಸಂಪರ್ಕಿಸುವ ರಾಜ್ಯ ಹೆದ್ದಾರಿ-23ರ ಕಲೂರು ಸಮೀಪ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಯಚೂರು, ಸೆ.19: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ರಾಯಚೂರು ವತಿಯಿಂದ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ದತ್ತಿಯಡಿ ನೀಡಲಾಗುವ ದಿ. ಶ್ರೀಮತಿ ರಾಜಲಕ್ಷ್ಮಿ ರಾಮಚಂದ್ರಪ್ಪ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವು ಸೆ.20ರಂದು ಭಾನುವಾರ ಬೆಳಗ್ಗೆ 10.30ಕ್ಕೆ ನಗರದ ಕನ್ನಡ ಭವನದಲ್ಲಿ ನಡೆಯಲಿದೆ.
ರಾಯಚೂರು, ಸೆ.19: ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ 2026–27ನೇ ಸಾಲಿನ ರಾಯಚೂರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಯೋಗ ಸ್ಪರ್ಧೆಯಲ್ಲಿ ಬಸವಶ್ರೀ…
ರಾಯಚೂರು, ಸೆ.19: ನಗರದ ಎಂ. ಈರಣ್ಣ ವೃತ್ತದ ಬಳಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದು, ಮತ್ತೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.
ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಭೂಮಾನಂದ ಅವರ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು ಎಂದು ರಾಯಚೂರು ದಲಿತಪರ ಸಂಘಟನೆಗಳ ಒಕ್ಕೂಟದ ಹಿರಿಯ ಮುಖಂಡ ರವೀಂದ್ರನಾಥ್ ಪಟ್ಟಿ ಆಗ್ರಹಿಸಿದರು.
ರಾಯಚೂರು, ಸೆ.18: ಕಳೆದ ನಾಲ್ಕು ವರ್ಷ ಎಂಟು ತಿಂಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸದೆ, ಅಧಿಕಾರಾವಧಿ ಮುಗಿಯುವ ಹಂತದಲ್ಲಿ ಸಮ್ಮೇಳನ ಆಯೋಜಿಸಲು ಮುಂದಾಗಿರುವುದರ ಉದ್ದೇಶವೇನು ಎಂದು ಅಣ್ಣಪ್ಪ ಮೇಟಿಗೌಡ ಪ್ರಶ್ನಿಸಿದರು.
ರಾಯಚೂರು: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ವಿದ್ಯುತ್ ಪೂರೈಕೆಯೂ ಸಮರ್ಪಕವಾಗಿಲ್ಲ. ರಾಯಚೂರು ಗ್ರಾಮೀಣ ಕ್ಷೇತ್ರಕ್ಕೆ ನಿರಂತರ 12 ಗಂಟೆ ಹಾಗೂ ಜಿಲ್ಲೆಯ ಇತರ ತಾಲೂಕುಗಳಿಗೆ ಕನಿಷ್ಠ 8 ಗಂಟೆ ವಿದ್ಯುತ್ ಪೂರೈಸಬೇಕು ಎಂದು ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ಆಗ್ರಹಿಸಿದರು.
ರಾಯಚೂರು: ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಪದೇಪದೇ ಅಲೆದಾಡುವ ಪರಿಸ್ಥಿತಿಯನ್ನು ತಪ್ಪಿಸಿ, ವಿವಿಧ ಇಲಾಖೆಗಳ ಸೇವೆ ಹಾಗೂ ಸಮಸ್ಯೆಗಳಿಗೆ ಒಂದೇ ವೇದಿಕೆಯಲ್ಲಿ ಪರಿಹಾರ ಒದಗಿಸುವ ಉದ್ದೇಶದಿಂದ ಗಿಲ್ಲೆಸುಗೂರು ಗ್ರಾಮದಲ್ಲಿ ತಾಲ್ಲೂಕು ಮಟ್ಟದ ಪ್ರಜಾ ಸೇವೆ ಕಾರ್ಯಕ್ರಮ ಆಯೋಜಿಸಲಾಯಿತು.
ರಾಯಚೂರು: ನೈಸ್ ಯೋಜನೆಗೆ ಸಂಬಂಧಿಸಿದ ಭೂಮಿಯನ್ನು ರೈತರಿಗೆ ವಾಪಸ್ ನೀಡಬೇಕು, ಟೋಲ್ ಸಂಗ್ರಹವನ್ನು ನಿಲ್ಲಿಸಬೇಕು ಹಾಗೂ ಹೋರಾಟಗಾರರ ಬಂಧನವನ್ನು ಖಂಡಿಸಿ ಸಿಪಿಐಎಂ ರಾಯಚೂರು ತಾಲೂಕು ಸಮಿತಿ ವತಿಯಿಂದ ಸೆ.18ರಂದು ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಯಚೂರು: ತಾಲೂಕಿನ ಬಾಯಿದೊಡ್ಡಿ ಗ್ರಾಮದಲ್ಲಿ ಬಿಜೆಪಿಯ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ. ಬಾಯಿದೊಡ್ಡಿ ಗ್ರಾಮವು ರಾಯಚೂರು ತಾಲೂಕಿನ ವ್ಯಾಪ್ತಿಗೆ ಸೇರಿದೆ.
ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಂತರ್ ಮಹಾವಿದ್ಯಾಲಯ ಬ್ಯಾಡ್ಮಿಂಟನ್ ಪಂದ್ಯಾವಳಿಯು ಸೆ.16ರಂದು ರಾಯಚೂರಿನ ಸೇಂಟ್ ಥಾಮಸ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಡೆಯಿತು.
ರಾಯಚೂರು: ಸಮಾಜದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಸೇವೆಗೆ ಸರಿಸಾಟಿಯಾದ ಮತ್ತೊಂದು ಸೇವೆ ಇಲ್ಲ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು.
ರಾಯಚೂರು: ನಗರದ ಎಲ್‌ಬಿಎಸ್ ನಗರದಲ್ಲಿರುವ ಶ್ರೀ ವೀರ ಹನುಮಾನ್ ದೇವಸ್ಥಾನ, ಚಂದ್ರಬಂಡಾ ರಸ್ತೆಯಲ್ಲಿ ಶ್ರೀ ಗೌರಿ ಗಣೇಶ ಹಬ್ಬದ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಓಂ ಗ್ರೂಪ್ ಅಸೋಸಿಯೇಷನ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ 41ನೇ ಪತ್ರಕರ್ತರ ಸಮ್ಮೇಳನದ ಪೂರ್ವಸಿದ್ಧತೆಗಳ ಕುರಿತು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜ್ ಅವರೊಂದಿಗೆ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ಪತ್ರಕರ್ತರು ಚರ್ಚೆ ನಡೆಸಿದರು.
ರಾಯಚೂರು: ಜಿಲ್ಲೆಯಲ್ಲಿ ತೀವ್ರ ಬರಗಾಲ ಪರಿಸ್ಥಿತಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ಸಮೀಕ್ಷೆಯನ್ನು ಸಮರ್ಪಕವಾಗಿ ದಾಖಲಿಸುವ ಮೂಲಕ ಅರ್ಹ ರೈತರಿಗೆ ಪರಿಹಾರ ದೊರೆಯುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಸೂಚಿಸಿದರು.
ರಾಯಚೂರು: ನಗರದ ಅಲ್ಲಮಪ್ರಭು ಕಾಲೋನಿಯ ಹೊರವಲಯದಲ್ಲಿ ಅಕ್ರಮವಾಗಿ ಒಣ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಾರ್ಕೆಟ್ ಯಾರ್ಡ್ ಠಾಣೆ ಪೊಲೀಸರು ಬಂಧಿಸಿ, ಅವರಿಂದ 1,810 ಗ್ರಾಂ ಒಣ ಗಾಂಜಾ ಜಪ್ತಿ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.