ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 96,972 ಇಂದಿನ ಓದುಗರು: 2,154 🟢 ಈಗ ಆನ್‌ಲೈನ್: 37
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 508 ಸುದ್ದಿಗಳಲ್ಲಿ 51–75 ಸುದ್ದಿಗಳು

ರಾಯಚೂರು ರಾಯಚೂರು

ಉದ್ರಿ ಸಿಗರೇಟ್‌ಗಾಗಿ ಜಗಳ: ಚಾಕು ಇರಿತಕ್ಕೆ ಅಂಗಡಿ ಮಾಲೀಕ ಬಲಿ

ಸಿಗರೇಟ್ ಉದ್ರಿ ನೀಡಲು ನಿರಾಕರಿಸಿದ ಕಾರಣಕ್ಕೆ ಕಿರಾಣಿ ಅಂಗಡಿ ಮಾಲೀಕನೊಂದಿಗೆ ಜಗಳ ತೆಗೆದ ಯುವಕನೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಗರದ ಎಲ್‌ಬಿಎಸ್ ನಗರದ ಕ್ರೌನ್ ಬೇಕರಿ ಸಮೀಪ ಶನಿವಾರ ಮಧ್ಯಾಹ್ನ ನಡೆದಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಚಂದ್ರಮೌಳೇಶ್ವರ ವೃತ್ತದಿಂದ ಗಂಜ್ ವೃತ್ತದವರೆಗೆ 80 ಅಡಿ ರಸ್ತೆ ಅಗಲೀಕರಣಕ್ಕೆ ಸಿದ್ಧತೆ: ಆಯುಕ್ತ ಜುಬೇನ್ ಮೋಹಪಾತ್ರ ಪರಿಶೀಲನೆ

ನಗರದ ಚಂದ್ರಮೌಳೇಶ್ವರ ವೃತ್ತದಿಂದ ಗಂಜ್ ವೃತ್ತದವರೆಗೆ 80 ಅಡಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲು ಮಹಾನಗರ ಪಾಲಿಕೆ ಸಿದ್ಧತೆ ನಡೆಸಿದ್ದು, ಒಂದರಿಂದ ಒಂದೂವರೆ ತಿಂಗಳೊಳಗೆ ಕಾಮಗಾರಿ ಆರಂಭಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಜುಬೇನ್ ಮೋಹಪಾತ್ರ ತಿಳಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಗುರುವೇ ಜ್ಞಾನಕ್ಕೆ ದಾರಿ, ಬದುಕಿಗೆ ಬೆಳಕು: ಶಾಸಕ ಬಸನಗೌಡ ದದ್ದಲ್

ಮಾನವನ ಬದುಕಿನಲ್ಲಿ ಗುರುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅಜ್ಞಾನವನ್ನು ದೂರ ಮಾಡಿ ಜ್ಞಾನದ ಬೆಳಕು ನೀಡುವ ಗುರುಗಳ ಮಾರ್ಗದರ್ಶನ ಪ್ರತಿಯೊಬ್ಬರ ಜೀವನಕ್ಕೂ ಅಗತ್ಯವಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಕಿತ್ತೂರು ರಾಣಿ ಚೆನ್ನಮ್ಮನ ಧೈರ್ಯ, ದೇಶಪ್ರೇಮ ವಿದ್ಯಾರ್ಥಿನಿಯರಿಗೆ ಆದರ್ಶ: ವೆಂಕಟೇಶ ದೊಡ್ಡಮನಿ

ಕಿತ್ತೂರು ರಾಣಿ ಚೆನ್ನಮ್ಮನವರ ಶೌರ್ಯ, ಸ್ವಾಭಿಮಾನ ಹಾಗೂ ದೇಶಪ್ರೇಮ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದ್ದು, ವಿದ್ಯಾರ್ಥಿನಿಯರು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಚನ್ನಬಸಮ್ಮ ಎಂ.

ಮುಂದೆ ಓದಿ →
ರಾಯಚೂರು ರಾಯಚೂರು

ಶಿಥಿಲಗೊಂಡ ಸರ್ಕಾರಿ ನೌಕರರ ವಸತಿಗೃಹಗಳ ತೆರವಿಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

ನಗರದ ಮಂತ್ರಾಲಯ ರಸ್ತೆಯ ಐಬಿ (ಪರಿವೀಕ್ಷಣಾ ಮಂದಿರ) ಸಮೀಪದಲ್ಲಿರುವ ಶಿಥಿಲಾವಸ್ಥೆಯ ಸರ್ಕಾರಿ ನೌಕರರ ವಸತಿಗೃಹಗಳನ್ನು ತೆರವುಗೊಳಿಸಿ, ಅದೇ ಸ್ಥಳದಲ್ಲಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ಬಹುಮಹಡಿ ವಸತಿಗೃಹಗಳನ್ನು ನಿರ್ಮಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ…

ಮುಂದೆ ಓದಿ →
ರಾಯಚೂರು ರಾಯಚೂರು

ವಾಲ್ಮೀಕಿ ಜಯಂತಿಯಂದು ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆಗೆ ನಿರ್ಧಾರ

ವಾಲ್ಮೀಕಿ ಸಮುದಾಯದ ಮೀಸಲಾತಿ ಹಕ್ಕುಗಳಿಗೆ ಕಾನೂನಾತ್ಮಕ ಭದ್ರತೆ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 26ರಂದು ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಅಖಿಲಾಂಡ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಿತಿಯ ಜಿಲ್ಲಾಧ್ಯಕ್ಷ…

ಮುಂದೆ ಓದಿ →
ರಾಯಚೂರು ರಾಯಚೂರು

ಮತಗಟ್ಟೆಗಳಿಗೆ ಎ. ವಸಂತಕುಮಾರ ಭೇಟಿ, ಕಾರ್ಯಕರ್ತರೊಂದಿಗೆ ಸಮಾಲೋಚನೆ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹಾಗೂ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಎ.

ಮುಂದೆ ಓದಿ →
ರಾಯಚೂರು ರಾಯಚೂರು

ಮತಗಟ್ಟೆಗಳಿಗೆ ಶಾಸಕ ಬಸನಗೌಡ ದದ್ದಲ್ ಭೇಟಿ, ಮತದಾನ ಪ್ರಕ್ರಿಯೆ ಪರಿಶೀಲನೆ

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಶುಕ್ರವಾರ ನಗರದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆ ಹಾಗೂ ಚುನಾವಣಾ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಮತಗಟ್ಟೆ ಬಳಿ ಮತದಾರರನ್ನು ಭೇಟಿಯಾದ ಶಾಸಕ ಡಾ. ಶಿವರಾಜ ಪಾಟೀಲ್

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನಗರದ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮತಗಟ್ಟೆ ಸಂಖ್ಯೆ 140ರ ಸಮೀಪ ನಗರ ಶಾಸಕ ಡಾ.

ಮುಂದೆ ಓದಿ →
ರಾಯಚೂರು ರಾಯಚೂರು

ಮುನ್ನೂರು ಕಾಪು ಸಮಾಜದಿಂದ ಬನ್ನಿ ಪೂಜೆ, ರಥೋತ್ಸವದೊಂದಿಗೆ ದಸರಾ ಹಬ್ಬ ಆಚರಣೆ

ವಿಜಯದಶಮಿ ಹಬ್ಬದ ಅಂಗವಾಗಿ ನಗರದ ಗಡ್ವಾಲ್ ರಸ್ತೆಯಲ್ಲಿರುವ ಶ್ರೀ ಮಾತಾ ಲಕ್ಷ್ಮೀ ದೇವಿ ಹಾಗೂ ಕಾಳಿಕಾ ದೇವಿ ದೇವಸ್ಥಾನಗಳಲ್ಲಿ ಮುನ್ನೂರು ಕಾಪು ಸಮಾಜದ ವತಿಯಿಂದ ಬನ್ನಿ ಪೂಜೆ ಹಾಗೂ ರಥೋತ್ಸವವನ್ನು ಭಕ್ತಿ, ಶ್ರದ್ಧೆಯಿಂದ ನೆರವೇರಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ನವಯಾನ ಬೌದ್ಧ ಸಂಘ ಆಗ್ರಹ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದರ ಜೊತೆಗೆ ಮೂಲಸೌಕರ್ಯಗಳ ವಿಸ್ತರಣೆ, ವಿಮಾನ ನಿಲ್ದಾಣ ಸ್ಥಾಪನೆ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಗಳ ಅಭಿವೃದ್ಧಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನವಯಾನ ಬೌದ್ಧ ಸಂಘದ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಮತದಾರರು ನಿಗದಿತ ಸಮಯದಲ್ಲಿ ಮತಗಟ್ಟೆಗೆ ಆಗಮಿಸಿ, ತಮ್ಮ ಹಕ್ಕನ್ನು ಚಲಾಯಿಸಿ: ಸಹಾಯಕ ಚುನಾವಣಾಧಿಕಾರಿ ಪೂವಿತಾ ಎಸ್.

ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಗೆ ಅಕ್ಟೋಬರ್ 23ರಂದು ಬೆಳಿಗ್ಗೆ 8 ಗಂಟೆಯಿAದ ಸಂಜೆ 4ಗಂಟೆವರೆಗೆ ಕ್ಷೇತ್ರದಾದ್ಯಂತ ಮತದಾನ ನಡೆಯಲಿದ್ದು, ಮತದಾರರು ನಿಗದಿತ ಸಮಯದಲ್ಲಿ ಮತಗಟ್ಟೆಗೆ ಆಗಮಿಸಿ, ಚುನಾವಣಾ ಆಯೋಗದ ಸೂಚನೆಗಳನ್ನು ಪಾಲಿಸುವ ಮೂಲಕ ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಬೇಕೆಂದು…

ಮುಂದೆ ಓದಿ →
ರಾಯಚೂರು ರಾಯಚೂರು

ಕುಕನೂರು ಗ್ರಾಮದಲ್ಲಿ ಶ್ರೀ ಮಾರಿಕಾಂಬಾ ದೇವಿಯ ನೂತನ ಪಂಚಲೋಹ ಮೂರ್ತಿ ಪ್ರತಿಷ್ಠಾಪನೆ

ತಾಲೂಕಿನ ಕುಕನೂರು ಗ್ರಾಮದಲ್ಲಿ ವಿಜಯದಶಮಿ ಹಬ್ಬದ ಅಂಗವಾಗಿ ಗ್ರಾಮದೇವತೆ ಶ್ರೀ ಮಾರಿಕಾಂಬಾ ದೇವಿಯ ನೂತನ ಪಂಚಲೋಹದ ಮೂರ್ತಿಯನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಪ್ರತಿಷ್ಠಾಪಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಮತಗಟ್ಟೆಗಳ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ ಪೂವಿತಾ ಎಸ್.

ಕರ್ನಾಟಕ ವಿಧಾನ ಪರಿಷತ್‌ನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ಅಕ್ಟೋಬರ್ 23ರಂದು ನಡೆಯಲಿರುವ ಮತದಾನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಪೂವಿತಾ ಎಸ್.

ಮುಂದೆ ಓದಿ →
ರಾಯಚೂರು ರಾಯಚೂರು

ಬಂಗಾರಪ್ಪ ಕೆರೆ ಅಭಿವೃದ್ಧಿಗೆ ₹100 ಕೋಟಿ ಯೋಜನೆ: ನೀರಿನ ಸಂಗ್ರಹ ಮಟ್ಟ ಪರಿಶೀಲಿಸಿದ ಶಾಸಕ ಬಸನಗೌಡ ದದ್ದಲ್

ತಾಲೂಕಿನ ಕುಡಿಯುವ ನೀರು ಹಾಗೂ ರೈತರ ಕೃಷಿ ಚಟುವಟಿಕೆಗಳಿಗೆ ಪ್ರಮುಖ ಆಧಾರವಾಗಿರುವ ಬಂಗಾರಪ್ಪ ಕೆರೆಗೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಭೇಟಿ ನೀಡಿ, ಕೆರೆಯಲ್ಲಿನ ನೀರಿನ ಸಂಗ್ರಹ ಮಟ್ಟ ಹಾಗೂ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಶೀಲಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಅಯೋಡಿಯುಕ್ತ ಉಪ್ಪಿನ ಬಳಕೆಯಿಂದ ಆರೋಗ್ಯ ರಕ್ಷಣೆ ಸಾಧ್ಯ: ಅರವಿಂದ ಕುಮಾರ

ಅಯೋಡಿನ್ ಕೊರತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಪ್ರತಿಯೊಂದು ಕುಟುಂಬವೂ ದಿನನಿತ್ಯದ ಆಹಾರದಲ್ಲಿ ಅಯೋಡಿಯುಕ್ತ ಉಪ್ಪನ್ನು ಬಳಸಬೇಕು ಎಂದು ಮಟಮಾರಿ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ ಕುಮಾರ ತಿಳಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಶರಣಪ್ಪ ಮಟ್ಟೂರು ಬೆಂಬಲಿಸಿ: ಎ. ವಸಂತಕುಮಾರ ಮನವಿ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಗರದ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಎ.

ಮುಂದೆ ಓದಿ →
ರಾಯಚೂರು ರಾಯಚೂರು

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ: ಬೆಂಗಳೂರಿನ ಕೇಶವ ತಂಡಕ್ಕೆ ಪ್ರಥಮ ಸ್ಥಾನ

ನಾಡಹಬ್ಬ ದಸರಾ ಪ್ರಯುಕ್ತ ತಾಲೂಕಿನ ಸಿದ್ರಾಂಪೂರು ಗ್ರಾಮದಲ್ಲಿ ಸನ್ನಿ ಮಹಾರಾಜ್ ಯೂಥ್ ಫೋರ್ಸ್ ವತಿಯಿಂದ ಆಯೋಜಿಸಿದ್ದ ಮೂರನೇ ವರ್ಷದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಬೆಂಗಳೂರಿನ ಕೇಶವ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಕಿಲ್ಲೇ ಬೃಹನ್ಮಠದಲ್ಲಿ ವಿಜಯದಶಮಿ ಸಂಭ್ರಮ: ಭಕ್ತರಿಂದ ಬನ್ನಿ ವಿನಿಮಯ, ವಿಶೇಷ ಪೂಜೆ

ನಗರದ ಕಿಲ್ಲೇ ಬೃಹನ್ಮಠದಲ್ಲಿ ವಿಜಯದಶಮಿ ಹಬ್ಬವನ್ನು ಶ್ರೀಮಠದ ಪೀಠಾಧಿಪತಿ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ನಳಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮೂರು ದಿನಗಳ ಯೋಗ ತರಬೇತಿ ಶಿಬಿರ ಉದ್ಘಾಟನೆ

ತಾಲೂಕಿನ ಯರಮರಸ್‌ನ ನಳಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಎಡ್ ದ್ವಿತೀಯ ಸೆಮಿಸ್ಟರ್ ಪ್ರಶಿಕ್ಷಣಾರ್ಥಿಗಳಿಗೆ ಆಯೋಜಿಸಿರುವ ಮೂರು ದಿನಗಳ ಯೋಗ ತರಬೇತಿ ಶಿಬಿರಕ್ಕೆ ಇತ್ತೀಚೆಗೆ ಚಾಲನೆ ನೀಡಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ, ಬಿಜೆಪಿಗೆ ಸೋಲು ಖಚಿತ: ಎ. ವಸಂತಕುಮಾರ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರ ಗೆಲುವು ನಿಶ್ಚಿತವಾಗಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿಗೆ ಸೋಲು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರು, ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಎ.

ಮುಂದೆ ಓದಿ →
ರಾಯಚೂರು ರಾಯಚೂರು

ಮದರಕಲ್ ಅಂಬಾ ಮಠದ ವಿರುದ್ಧ ಅಪಪ್ರಚಾರಕ್ಕೆ ಮಹಿಳಾ ಭಕ್ತರ ಆಕ್ರೋಶ

ಅರಕೇರಾ ತಾಲೂಕಿನ ಮದರಕಲ್ ಗ್ರಾಮದ ಶ್ರೀ ಅವಧೂತ ರಾಜಯೋಗಿ ಸಂತ ನಾಮದೇವಗೌಡ ಶರಣರ ಅಂಬಾ ಮಠದ ವಿರುದ್ಧ ಕೆಲವರು ರಾಜಕೀಯ ದುರುದ್ದೇಶದಿಂದ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮಠದ ಮಹಿಳಾ ಭಕ್ತರು ಆರೋಪಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಮಠ-ಮಾನ್ಯಗಳಿಂದ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ವೃದ್ಧಿ: ಎನ್.ಎಸ್. ಬೋಸರಾಜು

ರಾಯಚೂರಿನ ಪೇಟೆ ಹಿರೇಮಠ ಹಾಗೂ ಕಿಲ್ಲೆ ಶ್ರೀ ಬೃಹನ್ಮಠಕ್ಕೆ ಭೇಟಿ ನೀಡಿದ ಮಾಜಿ ಸಚಿವ ಎನ್.ಎಸ್. ಬೋಸರಾಜು ಅವರು ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದ ಪಡೆದರು. ಮಠ-ಮಾನ್ಯಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ವಿಜಯದಶಮಿ ಸಂಭ್ರಮ: ವೈಭವದಿಂದ ಜರುಗಿದ ಸ್ವರ್ಣರಥೋತ್ಸವ

ರಾಯಚೂರಿನ ಆರ್ಯವೈಶ್ಯ ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ವಿಜಯದಶಮಿ ಅಂಗವಾಗಿ ವಿಶೇಷ ಪೂಜೆ, ಶ್ರೀನಿವಾಸ ಕಲ್ಯಾಣೋತ್ಸವ, ಪಲ್ಲಕ್ಕಿ ಮೆರವಣಿಗೆ ಹಾಗೂ ಶ್ರೀ ವೆಂಕಟೇಶ್ವರ ಸ್ವಾಮಿಯ ಸ್ವರ್ಣರಥೋತ್ಸವವು ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಜರುಗಿತು.

ಮುಂದೆ ಓದಿ →