ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿಚ್ಚಾಲಿ ಗ್ರಾಮದಲ್ಲಿ ಆರಾಧ್ಯ ದೈವ ಶ್ರೀ ಶ್ರೀ ಶ್ರೀ ವೀರತಪಸ್ವಿ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಆದಿಶಕ್ತಿ ದೇವಿಯ ಮೆರವಣಿಗೆ ಕಾರ್ಯಕ್ರಮವು ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಜರುಗಿತು.
ನಗರದ ಕಿಲ್ಲೇ ಬೃಹನ್ಮಠದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಕಳೆದ ಒಂಬತ್ತು ದಿನಗಳಿಂದ ನಡೆಯುತ್ತಿದ್ದ 88ನೇ ವರ್ಷದ ಶ್ರೀದೇವಿ ಮಹಾಪುರಾಣ ಪ್ರವಚನವು ಆಯುಧ ಪೂಜೆಯ ದಿನದಂದು ಶ್ರದ್ಧಾಭಕ್ತಿಯಿಂದ ಮಹಾಮಂಗಳಗೊಂಡಿತು.
ನಗರದ 16ನೇ ವಾರ್ಡ್‌ನಲ್ಲಿ ಶ್ರೀ ಮಾತಾ ಬಾಲಮಾರಮ್ಮ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ರಾಯಚೂರು ನಗರ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ದೇವಿ ಆರಾಧನೆ ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ಸಮಾಜದಲ್ಲಿ ಸತ್ಯ, ಧರ್ಮ, ಶಾಂತಿ, ಸಹಬಾಳ್ವೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮಹತ್ವದ ಪರಂಪರೆಯಾಗಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.
ದೇಶದ ಆಂತರಿಕ ಭದ್ರತೆ, ಸಾರ್ವಜನಿಕರ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ತ್ಯಾಗ, ಬಲಿದಾನವನ್ನು ಸ್ಮರಿಸುವ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಬುಧವಾರ ನಗರದ ಜಿಲ್ಲಾ ಪೊಲೀಸ್ ಆವರಣದಲ್ಲಿರುವ ಹುತಾತ್ಮರ ಸ್ಮಾರಕದ ಬಳಿ ಶ್ರದ್ಧಾ ಗೌರವಗಳೊಂದಿಗೆ…
ರಾಯಚೂರು ನಗರದ ಸಿದ್ರಾಂಪುರ ಗ್ರಾಮದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಸನ್ನಿ ಮಹಾರಾಜ್ ಯೂತ್ ಪೋರ್ಸ್ ವತಿಯಿಂದ ಆಯೋಜಿಸಿದ್ದ ಮೂರನೇ ವರ್ಷದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ನಗರ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಚಾಲನೆ ನೀಡಿದರು. ವಿವಿಧ ಭಾಗಗಳ ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದರು.
ನಗರದ ಎನ್‌ಜಿಒ ಕಾಲೋನಿಯ ಶ್ರೀ ಜಮಲಮ್ಮ ದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ದೇವಸ್ಥಾನದ ಸೇವಾ ಸಮಿತಿ ವತಿಯಿಂದ ಜಾತ್ರಾ ಮಹೋತ್ಸವ ಹಾಗೂ ನೂತನ ರಥೋತ್ಸವವನ್ನು ಭಕ್ತಿ, ಶ್ರದ್ಧೆಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು.
ರಾಯಚೂರು ನಗರದ ಶ್ರೀ ಸಿದ್ದರಾಮೇಶ್ವರ ಮಂಟಪದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಭೋವಿ ಸಮಾಜದ ವತಿಯಿಂದ ಆಯುಧ ಪೂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ರಾಯಚೂರು ನಗರ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಭಾಗವಹಿಸಿ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರೊಂದಿಗೆ ಹಬ್ಬದ ಸಂಭ್ರಮ ಹಂಚಿಕೊಂಡರು.
ನವರಾತ್ರಿ ಮಹೋತ್ಸವದ ಅಂಗವಾಗಿ ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ ರಾಯಚೂರು ನಗರ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಅವರು ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದರು.
ನವರಾತ್ರಿ ಮಹೋತ್ಸವದ ಅಂಗವಾಗಿ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸುಲ್ತಾನಪುರ, ಆಸ್ಕಿಹಾಳ ಹಾಗೂ ಮಾರೆಮ್ಮ ಕ್ಯಾಂಪ್‌ಗಳಿಗೆ ಭೇಟಿ ನೀಡಿದ ಶಾಸಕ ಬಸನಗೌಡ ದದ್ದಲ್ ಅವರು, ಜಗನ್ಮಾತೆ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ದುಡಿಮೆಯನ್ನೇ ಬದುಕಿನ ಆಧಾರವಾಗಿಸಿಕೊಂಡಿರುವ ಬೋವಿ ಸಮಾಜವು ತನ್ನ ಸಾಂಪ್ರದಾಯಿಕ ವೃತ್ತಿಗೆ ಬಳಸುವ ಉಪಕರಣಗಳನ್ನು ಪೂಜಿಸುವ ಮೂಲಕ ಶ್ರಮ ಸಂಸ್ಕೃತಿಯನ್ನು ಉಳಿಸಿಕೊಂಡು ಬರುತ್ತಿದೆ ಎಂದು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹೇಳಿದರು.
ಸಂಗೀತವು ಮನುಷ್ಯನ ಮನಸ್ಸಿಗೆ ಸಂತೋಷ ಮತ್ತು ನೆಮ್ಮದಿ ನೀಡುವುದರೊಂದಿಗೆ ದಿನನಿತ್ಯದ ಬದುಕಿನ ಒತ್ತಡಗಳನ್ನು ದೂರ ಮಾಡುವ ಅದ್ಭುತ ಶಕ್ತಿಯನ್ನು ಹೊಂದಿದೆ ಎಂದು ಸಾಹಿತಿ ತಾಯಪ್ಪ ಮರ್ಚಟಹಾಳ ಅಭಿಪ್ರಾಯಪಟ್ಟರು.
ಸಾಹಿತ್ಯವು ಸಮಾಜದ ಪರಿವರ್ತನೆಗೆ ಪ್ರಬಲ ಮಾಧ್ಯಮವಾಗಿದ್ದು, ಕವಿಗಳು ತಮ್ಮ ಕಾವ್ಯ ರಚನೆಗಳ ಮೂಲಕ ಜನರಲ್ಲಿ ಪ್ರಕೃತಿ ಪ್ರೇಮ, ಪರಿಸರ ಕಾಳಜಿ ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಜುಬೀನ್ ಮೊಹಾಪಾತ್ರ ಅಭಿಪ್ರಾಯಪಟ್ಟರು.
ಜಿಲ್ಲೆಯಲ್ಲಿ ಅಧಿಕೃತ ವೈದ್ಯಕೀಯ ವಿದ್ಯಾರ್ಹತೆ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ನಿರಂತರ ದಾಳಿ ನಡೆಸಿ ಎಫ್‌ಐಆರ್ ದಾಖಲಿಸುತ್ತಿದೆ.
ಭಿಕ್ಷಾಟನೆಯಲ್ಲಿ ತೊಡಗಿರುವ ನಿರ್ಗತಿಕರನ್ನು ಸಮಾಜದ ಮುಖ್ಯವಾಹಿನಿಗೆ ಕರೆತಂದು ಸ್ವಾವಲಂಬಿ ಜೀವನ ನಡೆಸಲು ಅವಕಾಶ ಕಲ್ಪಿಸುವುದು ಸರ್ಕಾರದ ಜತೆಗೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಓಂ ಸಾಯಿ ಧ್ಯಾನ ಮಂದಿರದ ಸಂಸ್ಥಾಪಕ ಧರ್ಮಾಧಿಕಾರಿ ಸಾಯಿ ಕಿರಣ್ ಆದೋನಿ ಹೇಳಿದರು.
ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ರಾಯಚೂರಿನಲ್ಲಿ ಸತತ 66 ದಿನಗಳಿಂದ ಸೈಕಲ್ ಅಭಿಯಾನ ನಡೆಸುತ್ತಿರುವ ಐಎಂಎ ರಾಯಚೂರು ಘಟಕದ ನೂತನ ಅಧ್ಯಕ್ಷ ಡಾ. ಬಸವರಾಜ್ ಎಂ. ಪಾಟೀಲ್ ಅವರ ಸಮಾಜಮುಖಿ ಸೇವೆಯನ್ನು ಗುರುತಿಸಿ ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.
ಉತ್ತಮ ಜೀವನೋಪಾಯ, ಉದ್ಯೋಗ, ವ್ಯಾಪಾರ ಹಾಗೂ ಮಕ್ಕಳ ಶಿಕ್ಷಣದ ಉದ್ದೇಶದಿಂದ ಗ್ರಾಮೀಣ ಪ್ರದೇಶಗಳನ್ನು ತೊರೆದು ಪಟ್ಟಣಗಳಿಗೆ ಬಂದು ನೆಲೆಸುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಇದೀಗ ಅಡುಗೆ ಅನಿಲ ಸಂಪರ್ಕ ಪಡೆಯುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ.
ತಾಲೂಕಿನ ಮಮದಾಪುರ ಗ್ರಾಮದ ಶ್ರೀ ಗಧಾರ ಮಾರಿಕಾಂಭಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಒಂಬತ್ತು ದಿನಗಳ ಕಾಲ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು.
ನಗರದ ಗೌಳಿ ಸಮಾಜದ ವತಿಯಿಂದ ಆಯೋಜಿಸಲಾಗಿರುವ 44ನೇ ವರ್ಷದ ನವರಾತ್ರಿ ಉತ್ಸವವು ಭಕ್ತಿ, ಶ್ರದ್ಧೆ ಹಾಗೂ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದ್ದು, ಭಾನುವಾರ ಸಂಜೆ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿವಿತಾ ಎಸ್.