ರಾಯಚೂರು, ಅ.10: ಕಳೆದ ಏಳು ತಿಂಗಳಿಂದ ಬಾಕಿ ಉಳಿದಿರುವ ವಿಶೇಷಚೇತನರ ಮಾಸಾಶನವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಎಂಆರ್ಡಬ್ಲ್ಯೂ, ವಿಆರ್ಡಬ್ಲ್ಯೂ ಮತ್ತು ಯುಆರ್ಡಬ್ಲ್ಯೂ ಕಾರ್ಯಕರ್ತರ ಸೇವೆಯನ್ನು ಕಾಯಂಗೊಳಿಸಿ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಅಕ್ಟೋಬರ್ 15ರಂದು ರಾಮನಗರದಿಂದ ಬೆಂಗಳೂರು ವಿಧಾನಸೌಧದವರೆಗೆ ಬೃಹತ್…
ರಾಯಚೂರು, ಅ.10: ನಗರದ ಉಪ್ಪಾರವಾಡಿ ಬ್ರೇಸ್ತವಾರಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 20ರವರೆಗೆ 55ನೇ ವರ್ಷದ ನವರಾತ್ರಿ ಉತ್ಸವವನ್ನು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ವಿಶೇಷ ವಾಹನೋತ್ಸವಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ದೇವಸ್ಥಾನದ ಪೂಜಾರಿ ಕಂಠಾಚಾರಿ ತಿಳಿಸಿದರು.
ರಾಯಚೂರು: ದೇವದುರ್ಗ ತಾಲೂಕಿನ ಶಾವಂತಗೇರಾ ಮತ್ತು ಹೇಮನಾಳ ಗ್ರಾಮ ಪಂಚಾಯತಿಗಳಿಗೆ ಸುಮಾರು 11 ವರ್ಷಗಳಿಂದ ಚುನಾವಣೆ ನಡೆಯದಿರುವುದರಿಂದ ಸ್ಥಳೀಯ ಆಡಳಿತ ವ್ಯವಸ್ಥೆ ದುರ್ಬಲಗೊಂಡಿದ್ದು, ಗ್ರಾಮಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ತೊಂದರೆಯಾಗುತ್ತಿದೆ.
ರಾಯಚೂರು: ಅಬಕಾರಿ ಇಲಾಖೆಯ ಅಧಿಕಾರಿಗಳು ನಗರದ ಯರಮರಸ್ ಪ್ರದೇಶದಲ್ಲಿರುವ ಪೂರ್ಣಿಮಾ ಢಾಬಾ ಮೇಲೆ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯವನ್ನು ವಶಪಡಿಸಿಕೊಂಡು ಒಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ರಾಯಚೂರು ಅ. 09 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಅಕ್ಟೋಬರ್ 12ರ ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1 ಗಂಟೆವರಗ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಕೋರಲಾಗಿದೆ.
ರಾಯಚೂರು ಅ. 09 (ಕರ್ನಾಟಕ ವಾರ್ತೆ): ಸಕಾಲಕ್ಕೆ ಮಾಹಿತಿ ನೀಡಲು ಹಾಗೂ ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ವಹಿಸಿದ ವಿವಿಧ ಸಾರ್ವಜನಿಕ ಪ್ರಾಧಿಕಾರದ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠ ದಂಡ ವಿಧಿಸಿ ಆದೇಶ ಮಾಡಿದೆ.
ರಾಯಚೂರು, ಅ.9: ಕರ್ನಾಟಕ ಮಾದಿಗ (ಮಾದರ) ಮಹಾಸಭಾದ ರಾಯಚೂರು ನಗರ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಸಭೆಯ ಸರ್ವಾನುಮತದ ನಿರ್ಣಯದ ಮೂಲಕ ಆಯ್ಕೆ ಮಾಡಲಾಗಿದ್ದು, ಕೆ.ಪಿ. ಅನಿಲ್ ಕುಮಾರ್ ಅವರನ್ನು ನಗರ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ರಾಯಚೂರು, ಅ.8: ತಾಯಿ ಮತ್ತು ಮಗುವಿನ ಆರೋಗ್ಯ ರಕ್ಷಣೆಗಾಗಿ ಮಕ್ಕಳ ಜನನದ ನಡುವೆ ಸೂಕ್ತ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಅಗತ್ಯವಾಗಿದ್ದು, ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ ಹೊಸದಾಗಿ ಪರಿಚಯಿಸಲಾಗುತ್ತಿರುವ ಚರ್ಮದಡಿಯ ಗರ್ಭನಿರೋಧಕ ಇಂಪ್ಲಾಂಟ್ ವಿಧಾನವು ಮಹಿಳೆಯರಿಗೆ ಸುರಕ್ಷಿತ ಹಾಗೂ ಪರಿಣಾಮಕಾರಿ ಆಯ್ಕೆಯಾಗಿದೆ ಎಂದು ರಾಜ್ಯ…
ರಾಯಚೂರು, ಅ.9: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಪಡಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಬೃಹತ್…
ರಾಯಚೂರು, ಅ.9: ರಾಯಚೂರು ರಿಪೋರ್ಟರ್ಸ್ ಗಿಲ್ಡ್ ತನ್ನ 25 ವರ್ಷಗಳ ಸಾರ್ಥಕ ಪಯಣದ ಬೆಳ್ಳಿ ಮಹೋತ್ಸವವನ್ನು ಕೇವಲ ಸಂಭ್ರಮಾಚರಣೆಗೆ ಸೀಮಿತಗೊಳಿಸದೆ, ಜೀವ ಉಳಿಸುವ ಮಹತ್ವದ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ಸಮಾಜಮುಖಿ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಎ.
ರಾಯಚೂರು, ಅ.9: ತಾಲೂಕಿನ ಮಮದಾಪುರ ಗ್ರಾಮದ ಶ್ರೀ ಗಧಾರ ಮಾರಿಕಾಂಬ ದೇವಿ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 21ರವರೆಗೆ 13ನೇ ವರ್ಷದ ಶರನ್ನವರಾತ್ರಿ ದಸರಾ ಮಹೋತ್ಸವವನ್ನು ವಿವಿಧ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಸರವಪ್ಪ ತಿಳಿಸಿದರು.
ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರ ಇವರ ಸಹಯೋಗದಲ್ಲಿ 2026-27ನೇ ಸಾಲಿನ ಅಂತರ ಮಹಾವಿದ್ಯಾಲಯಗಳ ಟೇಬಲ್ ಟೆನ್ನಿಸ್ ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯದ ತಂಡದ ಆಯ್ಕೆ ಪ್ರಕ್ರಿಯೆ ಅ.8ರಂದು ನಡೆಯಿತು.
ಗಾಣದಾಳ್: ಕುರುಡುತನ ತಡೆಗಟ್ಟಲು ವಿಟಮಿನ್–ಎ ಸಮೃದ್ಧ ಆಹಾರ ಸೇವನೆಗೆ ಆದ್ಯತೆ ನೀಡುವುದರ ಜೊತೆಗೆ ಕಾಲಕಾಲಕ್ಕೆ ನೇತ್ರ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಪಡೆಯಬೇಕು ಎಂದು ಮಟಮಾರಿ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ್ ಕುಮಾರ ಹೇಳಿದರು.
ರಾಯಚೂರು ಅ. 08 (ಕರ್ನಾಟಕ ವಾರ್ತೆ): ನಗರದ ವಾಸವಿನಗರ ರಸ್ತೆಯಲ್ಲಿರುವ ಕನ್ನಡ ಸಂಘದ ಕಚೇರಿ ಎದುರುಗಡೆ ನೂತನ 'ಆಧಾರ್ ಸೇವಾ ಕೇಂದ್ರ' (UIAI) ಪ್ರಾರಂಭವಾಗುತ್ತಿದ್ದು, (ಅ. 09, ಶುಕ್ರವಾರ) ಬೆಳಿಗ್ಗೆ 11-00 ಗಂಟೆಗೆ ಚಾಲನೆ ಸಿಗಲಿದೆ.
ರಾಯಚೂರು, ಅ.8: ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ಬೆಳೆ ಹಾನಿಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರ ನೆರವಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಡಾ. ಜಿ. ಪರಮೇಶ್ವರ ಹೇಳಿದರು.
ರಾಯಚೂರು, ಅ.8: ರಾಜ್ಯ ಸರ್ಕಾರ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸುವುದರ ಜೊತೆಗೆ ಉದ್ಯೋಗ ಭದ್ರತೆ ಹಾಗೂ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಜೆಸ್ಕಾಂ ರಾಯಚೂರು ವಿಭಾಗದ ಗುತ್ತಿಗೆ ಕಾರ್ಮಿಕರು ಗುರುವಾರ ನಗರದಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದರು.
ರಾಯಚೂರು, ಅ.8: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಅವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಹಾಗೂ ‘ಇಂಡಿಯಾ’ ಒಕ್ಕೂಟದ ಮುಖಂಡರು ಗುರುವಾರ ನಗರದ ಗಂಜ್ ವೃತ್ತದಲ್ಲಿ ಕಪ್ಪುಪಟ್ಟಿ ಧರಿಸಿ, ಮಾನವ ಸರಪಳಿ ನಿರ್ಮಿಸುವ ಮೂಲಕ…
ರಾಯಚೂರು: ರಾಜ್ಯದ ಹಿಂದುಳಿದ ಹಾಗೂ ಶೋಷಿತ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಗುರುತಿಸುವ ಉದ್ದೇಶದಿಂದ ನಡೆಸಲಾದ ಜಾತಿಗಣತಿ ಸಮೀಕ್ಷೆಯ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಸಾರ್ವಜನಿಕಗೊಳಿಸಿ, ಅದರಲ್ಲಿರುವ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಬೇಕು.
ರಾಯಚೂರು: ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಸಮರ್ಪಕವಾಗಿ ಲಭ್ಯವಾಗುವಂತೆ ಯೋಜನೆ ರೂಪಿಸಬೇಕು ಎಂದು ರಾಯಚೂರು ನಗರ ಶಾಸಕ ಡಾ. ಎಸ್.
ರಾಯಚೂರು: ನಗರದ ವಾರ್ಡ್ ನಂ.18ರಲ್ಲಿ ಕುಡಿಯುವ ನೀರು, ವಿದ್ಯುತ್, ಸ್ವಚ್ಛತೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕಾಗಿ ಠಾಕೂರ್ ವಿನಯ್ ಸಿಂಗ್ ನಿರಂತರವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾರ್ಯಗಳಿಗೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.