ಪಟ್ಟಣದ ವಾರ್ಡ್ ನಂ. 12ರ ಅಬ್ದುಲ್ ಕಾಲೋನಿಯಲ್ಲಿ ಅವೈಜ್ಞಾನಿಕವಾಗಿ ಚರಂಡಿ ನಿರ್ಮಿಸಿರುವ ಪರಿಣಾಮ ತ್ಯಾಜ್ಯ ನೀರು ಮನೆಗಳಿಗೆ ನುಗ್ಗುತ್ತಿದ್ದು, ಕಳೆದ ಆರು ದಿನಗಳಿಂದ ನಿವಾಸಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.
ಪಟ್ಟಣದ ಪುರಸಭೆ ವ್ಯಾಪ್ತಿಯ ಸ್ವಾಮಿ ವಿವೇಕಾನಂದ ನಗರದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಸಂಗ್ರಹವಾಗಿದ್ದ ಕಸದ ರಾಶಿ ಹಾಗೂ ಚರಂಡಿಯ ತ್ಯಾಜ್ಯವನ್ನು ತೆರವುಗೊಳಿಸಿ, ಸ್ವಚ್ಛ ಸಂಕಲ್ಪ ಮಾಸ–2026ರ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
ಲಿಂಗಸುಗೂರು ತಾಲೂಕು ಪೊಲೀಸ್ ಇಲಾಖೆಯ ನೂತನ ಡಿವೈಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿರುವ ಸುಲೇಮಾನ್ ತಹಸೀಲ್ದಾರ್ ಅವರನ್ನು ತಾಲೂಕು ಟಿಪ್ಪು ಸುಲ್ತಾನ್ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಪಟ್ಟಣದ ರಾಯಚೂರು ರಸ್ತೆಯ ಭಗೀರಥ ಕಾಲೋನಿಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ದಸರಾ ನವರಾತ್ರಿ ಮಹೋತ್ಸವದ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ಜರುಗಿದವು.
ಬೆಂಗಳೂರಿನಲ್ಲಿ ನವೆಂಬರ್ 22ರಿಂದ 26ರವರೆಗೆ ನಡೆಯಲಿರುವ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಸಂಘಟನೆಯ 43ನೇ ರಾಷ್ಟ್ರೀಯ ಸಮ್ಮೇಳನದ ಹಿನ್ನೆಲೆಯಲ್ಲಿ ಹಟ್ಟಿ ಘಟಕದ ವತಿಯಿಂದ ಪೂರ್ವಭಾವಿ ಸಭೆ ನಡೆಸಿ, ಸಮ್ಮೇಳನದ ಯಶಸ್ಸಿಗೆ ಸ್ವಯಂಪ್ರೇರಿತ ದೇಣಿಗೆ ಸಂಗ್ರಹಿಸಲಾಯಿತು.
ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರ ಪರವಾಗಿ ಲಿಂಗಸುಗೂರು ಪಟ್ಟಣದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಮತಯಾಚನೆ ನಡೆಸಲಾಯಿತು.
ಪಟ್ಟಣದ 17ನೇ ವಾರ್ಡ್‌ನ ಅಯ್ಯಪ್ಪಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿರುವ ಶ್ರೀ ಬನ್ನಿ ಮಹಾಂಕಾಳಿ ಹಾಗೂ ಗಣೇಶ ದೇವಸ್ಥಾನದಲ್ಲಿ ನವರಾತ್ರೋತ್ಸವದ ಅಂಗವಾಗಿ ಮಹಿಳೆಯರು ಪ್ರತಿದಿನ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದಾರೆ.
ಲಿಂಗಸುಗೂರು: ಪಟ್ಟಣದ ಪುರಸಭೆ ವ್ಯಾಪ್ತಿಯ ಕರಡಕಲ್ ಹೊರವಲಯದಲ್ಲಿ ಸುಮಾರು ₹30 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡಕ್ಕೆ ಸೂಕ್ತ ಭದ್ರತೆ ಇಲ್ಲದ ಕಾರಣ ಕಿಡಿಗೇಡಿಗಳು ನುಗ್ಗಿ ಹಾನಿಗೊಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಲಿಂಗಸುಗೂರು: ನಮ್ಮ ಕರ್ನಾಟಕ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಸವರಾಜ ಪಡಕೋಟೆ ಅವರ 57ನೇ ಜನ್ಮದಿನದ ಅಂಗವಾಗಿ ಸಂಘಟನೆಯ ಲಿಂಗಸುಗೂರು ತಾಲೂಕು ಘಟಕದ ಪದಾಧಿಕಾರಿಗಳು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು ಹಾಗೂ ಹಣ್ಣು ವಿತರಿಸುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಲಿಂಗಸುಗೂರು: ತಾಲೂಕು ಮೀನುಗಾರರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಯಲ್ಲಪ್ಪ ಚಿಮ್ಮಲಗಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ ಇಂಡಿ ಅವರು ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ಮುಖಂಡರು ಇಬ್ಬರಿಗೂ ಸನ್ಮಾನಿಸಿ ಶುಭ ಹಾರೈಸಿದರು.
ಲಿಂಗಸುಗೂರು: ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 6 ಜಿಲ್ಲಾ ಪಂಚಾಯಿತಿ ಹಾಗೂ 22 ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಸಂಬಂಧಿಸಿದ ಕರಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿವಿಧ ವರ್ಗಗಳಿಗೆ ಕ್ಷೇತ್ರವಾರು ಮೀಸಲಾತಿ ನಿಗದಿಪಡಿಸಲಾಗಿದೆ.
ಲಿಂಗಸುಗೂರು: ಮಸ್ಕಿ ತಾಲೂಕಿನ ಯರದೊಡ್ಡಿ ಗ್ರಾಮದ ರೈತನ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರೈತ ಸಂಘ ಹಾಗೂ ಸಿಪಿಐ (ಎಂಎಲ್) ರೆಡ್ ಸ್ಟಾರ್ ತಾಲೂಕು ಸಮಿತಿ ವತಿಯಿಂದ ಸಹಾಯಕ ಆಯುಕ್ತರಿಗೆ…
ಲಿಂಗಸುಗೂರು: ಭಾರತಮಾಲಾ ಯೋಜನೆಯಡಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ 748ಎ ಕಾಮಗಾರಿಯಿಂದ ರೈತರಿಗೆ ತೊಂದರೆಯಾಗದಂತೆ ವೈಜ್ಞಾನಿಕ ಸರ್ವಿಸ್ ರಸ್ತೆ, ಅಂಡರ್‌ಪಾಸ್, ಬೈಪಾಸ್ ಹಾಗೂ ಅಗತ್ಯ ಸೇತುವೆಗಳನ್ನು ನಿರ್ಮಿಸಬೇಕು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಅಮರೇಗೌಡ ಪಾಟೀಲ್ ಬಯ್ಯಾಪುರ ಒತ್ತಾಯಿಸಿದರು.
ಹಟ್ಟಿ ಚಿನ್ನದ ಗಣಿ: ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಸಮೀಪದ ಗುರುಗುಂಟಾ ಹೋಬಳಿ ವ್ಯಾಪ್ತಿಯ 7ಬಿ, 7ಎ ಹಾಗೂ ಡಿಐ–8 ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸದ ಪರಿಣಾಮ ಭತ್ತದ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಲಿಂಗಸುಗೂರು: ಮಸ್ಕಿ ತಾಲೂಕಿನ ಯರದೊಡ್ಡಿ ಗ್ರಾಮದ ರಸ್ತೆ ಬದಿಯಲ್ಲಿ ಸಸಿ ನೆಡುವ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದ ನಾಯಕ ಸಮುದಾಯದ ವ್ಯಕ್ತಿಯೊಬ್ಬರನ್ನು ಲಿಂಗಸುಗೂರು ಅರಣ್ಯಾಧಿಕಾರಿಗಳ ಕಚೇರಿಗೆ ಕರೆತಂದು ಹಲ್ಲೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಲಿಂಗಸುಗೂರು: ಪಟ್ಟಣದ ಎಸ್‌ಬಿಎಚ್ ಕಾಲೋನಿಯ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಅ.11ರಿಂದ 20ರವರೆಗೆ ರಜತ ಮಹೋತ್ಸವ ಹಾಗೂ ನವರಾತ್ರೋತ್ಸವವನ್ನು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.
ಲಿಂಗಸುಗೂರು: ತಂಜಿಮುಲ್ ಮುಸ್ಲಿಮೀನ್ ಕಮಿಟಿಯ ನೋಂದಣಿ ರದ್ದುಪಡಿಸುವಂತೆ ಸಲ್ಲಿಸಿರುವ ದೂರಿನ ವಿಚಾರಣೆಗೆ ಲಿಂಗಸುಗೂರು ಹಿರಿಯ ನಿರೀಕ್ಷಕ ಗಂಗಪ್ಪ ಅವರನ್ನು ವಿಶೇಷ ಅಧಿಕಾರಿಯಾಗಿ ರಾಯಚೂರು ಸಹಕಾರ ಸಂಘಗಳ ಉಪನಿಬಂಧಕರು ನೇಮಕ ಮಾಡಿದ್ದಾರೆ.
ಲಿಂಗಸುಗೂರು: ಪಟ್ಟಣದ 17ನೇ ವಾರ್ಡ್‌ನ ಲಕ್ಷ್ಮೀನಗರದಲ್ಲಿರುವ ಬನ್ನಿ ಮಹಾಂಕಾಳಿ ಹಾಗೂ ಗಣೇಶ ದೇವಸ್ಥಾನದಲ್ಲಿ ನವರಾತ್ರೋತ್ಸವ ಮತ್ತು ವಿಜಯದಶಮಿ ಹಬ್ಬದ ಅಂಗವಾಗಿ ಅ.11ರಿಂದ 19ರವರೆಗೆ ಒಂಬತ್ತು ದಿನಗಳ ಕಾಲ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಹಟ್ಟಿ: ಹಟ್ಟಿ ಚಿನ್ನದ ಗಣಿ ಕಂಪನಿಯ ಗಣಿ ಗುತ್ತಿಗೆ ಪ್ರದೇಶದಲ್ಲಿದ್ದರೂ ಭೂಸ್ವಾಧೀನವಾಗದೆ ಉಳಿದಿರುವ ರೈತರ ಪಟ್ಟಾ ಜಮೀನುಗಳ ಸಮಸ್ಯೆ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಡೈಮಂಡ್ ಡ್ರಿಲಿಂಗ್ ಕಾರ್ಯವನ್ನು ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ ವೀಕ್ಷಿಸಿದರು.
ಹಟ್ಟಿ ಚಿನ್ನದ ಗಣಿ: ಸಮೀಪದ ಗುರುಗುಂಟಾ ಹೋಬಳಿಯ ಕೆಬಿ ಸೆಕ್ಷನ್ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ನೇತೃತ್ವದಲ್ಲಿ ರೈತರು ರಾತ್ರಿ ಸಮಯದಲ್ಲಿ ದೊಡ್ಡಿಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿ ಸುಮಾರು ನಾಲ್ಕು ಗಂಟೆಗಳ ಕಾಲ ಧರಣಿ ನಡೆಸಿದರು.
ಲಿಂಗಸಗೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಸಮೀಪದ ಇಲಕಲ್–ಮುದಗಲ್ ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೋಟಾರ್‌ಸೈಕಲ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕನಸಾವಿ ಕ್ರಾಸ್ ಬಳಿ ನಡೆದಿದೆ.
ಲಿಂಗಸುಗೂರು: ಪುರಸಭೆ ವ್ಯಾಪ್ತಿಯ ಕಸಬಾ ಲಿಂಗಸುಗೂರು ಗ್ರಾಮದ 82 ವರ್ಷದ ರಾಮಣ್ಣ ಚಲವಾದಿ ಅವರು ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಿ ಮಾಹಿತಿ ನೀಡುವವರಿಗೆ ₹21 ಸಾವಿರ ಬಹುಮಾನ ನೀಡಲಾಗುವುದು ಎಂದು ಅವರ ಹಿರಿಯ ಪುತ್ರ ರವೀಂದ್ರ ಚಲವಾದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.