ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 96,476 ಇಂದಿನ ಓದುಗರು: 1,879 🟢 ಈಗ ಆನ್‌ಲೈನ್: 66
LATEST NEWS

ಸಿಂಧನೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 37 ಸುದ್ದಿಗಳಲ್ಲಿ 1–25 ಸುದ್ದಿಗಳು

ಸಿಂಧನೂರು ರಾಯಚೂರು ಸಿಂಧನೂರು

ಡಿಸೆಂಬರ್ ಅಂತ್ಯದವರೆಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಸಿಂಧನೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ

ತುಂಗಭದ್ರಾ ಜಲಾಶಯದ ಎಡದಂಡೆ ಕಾಲುವೆಗೆ ಡಿಸೆಂಬರ್ 31ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಒತ್ತಾಯಿಸಿ ಸಿಂಧನೂರು ಹಾಗೂ ಮಸ್ಕಿ ತಾಲೂಕಿನ ರೈತರು ಮತ್ತು ವಿವಿಧ ಸಂಘಟನೆಗಳ ಮುಖಂಡರು 'ನಮ್ಮ ನೀರು ನಮ್ಮ ಹಕ್ಕು' ಘೋಷಣೆಯಡಿ ಬೃಹತ್ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಪರಿಸರ ಪ್ರೇಮಿ ಅಮರೇಗೌಡ ಮಲ್ಲಾಪುರ ಅವರಿಗೆ ‘ಪರಮ ಶ್ರೀ’ ಪ್ರಶಸ್ತಿ ಪ್ರದಾನ

ಪರಿಸರ ಸಂರಕ್ಷಣೆ ಹಾಗೂ ಹಸಿರೀಕರಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ವನಸಿರಿ ಫೌಂಡೇಶನ್ ಅಧ್ಯಕ್ಷ, ಪರಿಸರ ಪ್ರೇಮಿ ಅಮರೇಗೌಡ ಮಲ್ಲಾಪುರ ಅವರಿಗೆ ತುರ್ವಿಹಾಳ ಪಟ್ಟಣದ ಶ್ರೀ ಸದ್ಗುರು ಸರ್ವೇಶ್ವರ ಮಠದ ವತಿಯಿಂದ 2026ನೇ ಸಾಲಿನ ಪ್ರತಿಷ್ಠಿತ ‘ಪರಮ ಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡಾಮನೋಭಾವ ಅಗತ್ಯ: ರಾಜಶೇಖರ್

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಲಾರಿ ಚಕ್ರಕ್ಕೆ ಸಿಲುಕಿ ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

ನಗರದ ಗಂಗಾವತಿ ರಸ್ತೆಯಲ್ಲಿ ಕಾಂಟೇನರ್ ಲಾರಿಯ ಹಿಂಬದಿ ಚಕ್ರಕ್ಕೆ ಸ್ಕೂಟಿ ಸವಾರ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಬಾದರ್ಲಿ ಜಿ.ಪಂ. ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗೆ ಅರುಣಕುಮಾರ ನಾಯಕ ಪರ ಬೆಂಬಲಿಗರ ಒತ್ತಾಯ

ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಬಾದರ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯುವ ಮುಖಂಡ ಅರುಣಕುಮಾರ ನಾಯಕ ಯಾಪಲಪರ್ವಿ ಅವರಿಗೆ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಜಿ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಪೋಲಿಯೊ ದಿನಾಚರಣೆ

ತಾಲೂಕಿನ ತುರ್ವಿಹಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ರಾಯಚೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರು, ತುರ್ವಿಹಾಳ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸಿಂಧನೂರಿನ ಸನ್‌ರೈಸ್ ಪ್ಯಾರಾಮೆಡಿಕಲ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪೋಲಿಯೊ ದಿನಾಚರಣೆ…

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಅನಾಥ ವೃದ್ಧೆಯ ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದ ಭೂತಲದಿನ್ನಿ ಗ್ರಾಮಸ್ಥರು

ಹಲವು ವರ್ಷಗಳಿಂದ ಭೂತಲದಿನ್ನಿ ಗ್ರಾಮದಲ್ಲಿ ಆಶ್ರಯ ಪಡೆದಿದ್ದ ಅನಾಥ ವೃದ್ಧೆ ಸುಶೀಲಮ್ಮ (ಜೋಗಮ್ಮ) (73) ಅವರ ನಿಧನದ ಹಿನ್ನೆಲೆಯಲ್ಲಿ ಗ್ರಾಮಸ್ಥರೆಲ್ಲರೂ ಒಗ್ಗೂಡಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಎರಡು ತಿಂಗಳ ಹಸುಗೂಸಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆ! ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸಿದ ಅಪರೂಪದ ಪ್ರಕರಣ

ಕೇವಲ ಎರಡು ತಿಂಗಳ ಗಂಡು ಮಗುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆಯಾಗಿರುವ ಅಪರೂಪದ ವೈದ್ಯಕೀಯ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ಸಿಗೆ ಎಲ್ಲರೂ ಸಕ್ರಿಯವಾಗಿ ಕೈಜೋಡಿಸಿ: ಆರ್. ಗುರುನಾಥ್

ರಾಯಚೂರಿನಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 41ನೇ ರಾಜ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲ ಪತ್ರಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಆರ್.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಅಯೋಡಿನ್ ಕೊರತೆ ತಡೆಗಟ್ಟಲು ಅಯೋಡಿನ್‌ಯುಕ್ತ ಉಪ್ಪು ಬಳಸಿ: ಬಾಲಪ್ಪ ನಾಯಕ

ಅಯೋಡಿನ್ ಕೊರತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಪ್ರತಿಯೊಂದು ಕುಟುಂಬವೂ ಅಯೋಡಿನ್‌ಯುಕ್ತ ಉಪ್ಪಿನ ಬಳಕೆಗೆ ಆದ್ಯತೆ ನೀಡಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ತಿಳಿಸಿದರು.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ರೈತರು, ಕೃಷಿ ಕೂಲಿಕಾರರ ಹಕ್ಕುಗಳಿಗಾಗಿ ಅ.24ರಿಂದ ಪಾದಯಾತ್ರೆ, 27ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

ಭೂಮಿ, ಮನೆ, ನಿವೇಶನ, ಉದ್ಯೋಗ ಖಾತ್ರಿ, ಕುಡಿಯುವ ನೀರು, ಬರ ಪರಿಹಾರ ಹಾಗೂ ವಿದ್ಯುತ್ ಸಮಸ್ಯೆ ಸೇರಿದಂತೆ ರೈತರು ಮತ್ತು ಕೃಷಿ ಕೂಲಿಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 24ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಮೂಲಕ ಪಾದಯಾತ್ರೆ ನಡೆಸಿ, ಅಕ್ಟೋಬರ್ 27ರಂದು ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ…

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಅಧ್ಯಕ್ಷರಾಗಿ ಪದ್ಮಾ ಸಜ್ಜನ್, ಪ್ರಧಾನ ಕಾರ್ಯದರ್ಶಿಯಾಗಿ ಸರಸ್ವತಿ ಆಯ್ಕೆ

ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಪದವೀಧರ ಶಿಕ್ಷಣ ಇಲಾಖೆಯ ಪದ್ಮಾ ಸಜ್ಜನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸರಸ್ವತಿ ಬಾಯಪ್ಪ ಕಡ್ಡೋಣಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಜಯಶ್ರೀ ತಿಳಿಸಿದ್ದಾರೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

2026ನೇ ಸಾಲಿನ ಪರಮಶ್ರೀ ಪ್ರಶಸ್ತಿಗೆ ಪರಿಸರ ಪ್ರೇಮಿ ಅಮರೇಗೌಡ ಮಲ್ಲಾಪುರ ಆಯ್ಕೆ

ಪಟ್ಟಣದ ಶ್ರೀ ಸದ್ಗುರು ಸರ್ವೇಶ್ವರ ಮಠದ ವತಿಯಿಂದ ನೀಡಲಾಗುವ 2026ನೇ ಸಾಲಿನ ಪ್ರತಿಷ್ಠಿತ ಪರಮಶ್ರೀ ಪ್ರಶಸ್ತಿಗೆ ಪರಿಸರ ಪ್ರೇಮಿ, ಕರ್ನಾಟಕ ಪರಿಸರ ರಾಜ್ಯ ಪ್ರಶಸ್ತಿ ಹಾಗೂ ಕರ್ನಾಟಕ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ಪುರಸ್ಕೃತ, ವನಸಿರಿ ಫೌಂಡೇಶನ್…

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಸರ್ಕಾರಿ ನೌಕರರ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಶೀಘ್ರ ಶಂಕುಸ್ಥಾಪನೆ: ಚಂದ್ರಶೇಖರ ಹಿರೇಮಠ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಮಾರ್ಗದರ್ಶನದಲ್ಲಿ ಸ್ಥಳೀಯ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರ ಸಹಕಾರದೊಂದಿಗೆ ಅಗತ್ಯ ಅನುದಾನ ಸಂಗ್ರಹಿಸಿ, ನಗರದಲ್ಲಿ ಸರ್ಕಾರಿ ನೌಕರರ ಸಂಘದ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ…

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಫಲಿತಾಂಶ ವಿಳಂಬ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಸಿಂಧನೂರು: ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಹಾಗೂ ಸರ್ಕಾರಿ ಮಾದರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಎದುರಾಗುತ್ತಿರುವ ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ…

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ದೊಡ್ಡ ಹಳ್ಳದ ಬಫರ್ ಝೋನ್‌ನಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣ ಆರೋಪ; ನಗರಸಭೆ ವಿರುದ್ಧ ಪ್ರಶ್ನೆ

ಸಿಂಧನೂರು: ನಗರದ ದೊಡ್ಡ ಹಳ್ಳದ ದಂಡೆಯ ಬಫರ್ ಝೋನ್ ವ್ಯಾಪ್ತಿಯಲ್ಲಿ ನಗರಸಭೆಯಿಂದ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆಯದೆ ಎರಡು ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ನಗರಸಭೆ ಅಧಿಕಾರಿಗಳ ಕಾರ್ಯವೈಖರಿ ಕುರಿತು ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳು ಎದ್ದಿವೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ರಾಜಧನ ಪಾವತಿಸದೆ ಅಕ್ರಮ ಮರಳು ಸಂಗ್ರಹ-ಮಾರಾಟ ಆರೋಪ: ಹನುಮೇಶ್ ಕೆ.

ಸಿಂಧನೂರು: ನಗರದಲ್ಲಿ ರಾಜಧನ ಪಾವತಿಸದೆ ಅಕ್ರಮವಾಗಿ ಮರಳು ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹನುಮೇಶ್ ಕೆ. ಒತ್ತಾಯಿಸಿದ್ದಾರೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ನೆಲಕ್ಕುರುಳಿದ ಬಸರಿ ಮರಕ್ಕೆ ಮರುಜೀವ ನೀಡಿದ ಪರಿಸರ ಪ್ರೇಮಿಗಳು

ಸಿಂಧನೂರು: ಗಾಳಿ-ಮಳೆಗೆ ನೆಲಕ್ಕುರುಳಿದ್ದ ಬೃಹತ್ ಬಸರಿ ಮರವನ್ನು ಸ್ಥಳಾಂತರಿಸಿ ಮರುನಾಟಿ ಮಾಡುವ ಮೂಲಕ ಗೊರೇಬಾಳದ ಸಂಡೆ ಫಾರ್ ಸೋಷಿಯಲ್ ಸೇವಾ ಬಳಗ ಹಾಗೂ ವನಸಿರಿ ಫೌಂಡೇಷನ್ ರಾಯಚೂರು ಸದಸ್ಯರು ಪರಿಸರ ಕಾಳಜಿ ಮೆರೆದಿದ್ದಾರೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಉತ್ತಮ ಶಿಕ್ಷಕ ಪ್ರಶಸ್ತಿಗೆ ಛತ್ರಪ್ಪ ಆಯ್ಕೆ: ಶಾಲಾ ಶಿಕ್ಷಕರಿಂದ ಸನ್ಮಾನ

ಸಿಂಧನೂರು: ತಾಲೂಕಿನ ಇ.ಜೆ. ಹೊಸಳ್ಳಿ ಕ್ಯಾಂಪ್ ಶಾಲೆಯ ಶಿಕ್ಷಕ ಛತ್ರಪ್ಪ ಅವರು ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದಿಂದ ನೀಡಲಾಗುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲೆಯ ಶಿಕ್ಷಕ ವೃಂದ ಅವರನ್ನು ಸನ್ಮಾನಿಸಿ ಗೌರವಿಸಿತು.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ದಸರಾ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಪರಶುರಾಮ ಆಯ್ಕೆ

ಸಿಂಧನೂರು: ತಾಲೂಕಿನ ಗೊರೆಬಾಳ ಗ್ರಾಮದ ನಿವಾಸಿ ಪರಶುರಾಮ ಅವರು 2026ನೇ ಸಾಲಿನ ದಸರಾ ಕ್ರೀಡಾಕೂಟದಲ್ಲಿ ಜಿಲ್ಲಾ ಹಾಗೂ ವಿಭಾಗ ಮಟ್ಟದ 95 ಕೆ.ಜಿ. ಭಾರ ಎತ್ತುವಿಕೆ (ವೇಟ್‌ಲಿಫ್ಟಿಂಗ್) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಗೋನವಾರ ಸರ್ಕಾರಿ ಪ್ರೌಢಶಾಲೆಯ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಿಂಧನೂರು: 2026-27ನೇ ಸಾಲಿನ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ತಾಲೂಕಿನ ಗೋನವಾರ ಗ್ರಾಮದ ಶ್ರೀ ತಿರುಮಲರಾವ್ ಸರ್ಕಾರಿ ಪ್ರೌಢಶಾಲೆಯ ಬಾಲಕರ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಮೆದುಳು ಜ್ವರ ತಡೆಗೆ ಮಕ್ಕಳಿಗೆ ಜೆ.ಇ. ಲಸಿಕೆ ಕಡ್ಡಾಯವಾಗಿ ಹಾಕಿಸಿ: ಡಾ. ಲಕ್ಷ್ಮಿ ಕನಕಿ

ಸಿಂಧನೂರು: ಮೆದುಳು ಜ್ವರದಂತಹ ಮಾರಕ ಕಾಯಿಲೆಯಿಂದ ಮಕ್ಕಳನ್ನು ರಕ್ಷಿಸಲು ಎರಡು ವರ್ಷದೊಳಗಿನ ಮಕ್ಕಳಿಗೆ ಸರ್ಕಾರದಿಂದ ಉಚಿತವಾಗಿ ನೀಡಲಾಗುವ ಜೆ.ಇ. ಲಸಿಕೆಯನ್ನು ತಪ್ಪದೇ ಹಾಕಿಸಬೇಕು ಎಂದು ಸಾಲಗುಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಯುಷ್ ವೈದ್ಯಾಧಿಕಾರಿ ಡಾ. ಲಕ್ಷ್ಮಿ ಕನಕಿ ತಿಳಿಸಿದರು.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಗಾಂಧೀಜಿ–ಶಾಸ್ತ್ರಿ ಆದರ್ಶಗಳು ವಿದ್ಯಾರ್ಥಿಗಳಿಗೆ ದಾರಿದೀಪ: ಬಸವರಾಜ ಬಾದರ್ಲಿ

ಸಿಂಧನೂರು, ಅ.2: ಸತ್ಯ ಮತ್ತು ಅಹಿಂಸೆಯನ್ನು ಬದುಕಿನ ಮೂಲಮಂತ್ರವನ್ನಾಗಿಸಿಕೊಂಡು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧೀಜಿಯವರ ಜೀವನ, ಚಿಂತನೆ ಮತ್ತು ಹೋರಾಟ ಪ್ರತಿಯೊಬ್ಬರಿಗೂ ಆದರ್ಶವಾಗಿದೆ ಎಂದು ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಬಸವರಾಜ ಬಾದರ್ಲಿ ಹೇಳಿದರು.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಹಸಿದವರಿಗೆ ಅನ್ನದಾಸೋಹ: 139ನೇ ದಿನಕ್ಕೆ ಕಾಲಿಟ್ಟ ಅಕ್ಷರ ಆಹಾರ ಜೋಳಿಗೆ ಸೇವೆ

ಸಿಂಧನೂರು, ಸೆ.30: ಹಸಿದವರಿಗೆ ಅನ್ನ ನೀಡುವ ಮಾನವೀಯ ಧ್ಯೇಯದೊಂದಿಗೆ ಅಕ್ಷರ ಆಹಾರ ಜೋಳಿಗೆ ಟ್ರಸ್ಟ್ ವತಿಯಿಂದ ನಗರದಲ್ಲಿ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಅನ್ನದಾಸೋಹ ಸೇವೆ ಬುಧವಾರ 139ನೇ ದಿನಕ್ಕೆ ಕಾಲಿಟ್ಟಿತು.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಆತ್ಮಹತ್ಯೆ ತಡೆಗೆ ಮಾನಸಿಕ ಸ್ಥೈರ್ಯ ಅಗತ್ಯ: ಅರುಣ್ ಕುಮಾರ್ ಕುಲಕರ್ಣಿ

ಸಿಂಧನೂರು, ಸೆ.30: ಜೀವನದಲ್ಲಿ ಎದುರಾಗುವ ಒತ್ತಡ, ನಿರಾಶೆ ಹಾಗೂ ಸಂಕಷ್ಟಗಳನ್ನು ಧೈರ್ಯದಿಂದ ಎದುರಿಸುವ ಮನೋಸ್ಥೈರ್ಯವನ್ನು ಯುವಜನರು ಬೆಳೆಸಿಕೊಳ್ಳಬೇಕು. ಆತ್ಮಹತ್ಯೆ ತಡೆಗಟ್ಟುವಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋಶಾಸ್ತ್ರಜ್ಞ ಅರುಣ್ ಕುಮಾರ್ ಕುಲಕರ್ಣಿ ಹೇಳಿದರು.

ಮುಂದೆ ಓದಿ →