ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 101,736 ಇಂದಿನ ಓದುಗರು: 950 🟢 ಈಗ ಆನ್‌ಲೈನ್: 17
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 922 ಸುದ್ದಿಗಳಲ್ಲಿ 351–375 ಸುದ್ದಿಗಳು

ರಾಯಚೂರು ರಾಯಚೂರು

ವೆಂಕಟೇಶ್ ಗಲಗ ವರ್ಗಾವಣೆ ಹಿಂಪಡೆಯದಿದ್ದರೆ ಜಿಲ್ಲೆ ಬಂದ್: ಶಿವಗಣಿ ನಾಯಕ ಜಿಂಕಲ್

ರಾಯಚೂರು: ಲೋಕೋಪಯೋಗಿ ಇಲಾಖೆಯ ರಾಯಚೂರು ವಿಭಾಗದ ಕಾರ್ಯಪಾಲಕ ಅಭಿಯಂತರ ವೆಂಕಟೇಶ್ ಗಲಗ ಅವರನ್ನು ಆಡಳಿತಾತ್ಮಕ ಕಾರಣದ ನೆಪದಲ್ಲಿ ಅನಗತ್ಯವಾಗಿ ವರ್ಗಾವಣೆ ಮಾಡಲಾಗಿದ್ದು, ಸರ್ಕಾರ ಕೂಡಲೇ ವರ್ಗಾವಣೆ ಆದೇಶವನ್ನು ಹಿಂಪಡೆದು ಅವರನ್ನು ಪ್ರಸ್ತುತ ಹುದ್ದೆಯಲ್ಲಿಯೇ ಮುಂದುವರಿಸಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಶರನ್ನವರಾತ್ರಿ ಅಂಗವಾಗಿ ಬೃಹಸ್ಪತಿವಾರಪೇಟೆಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಾಯಚೂರು: ನಗರದ ಹೃದಯ ಭಾಗದಲ್ಲಿರುವ ಬೃಹಸ್ಪತಿವಾರಪೇಟೆಯ ಶ್ರೀ ವೀರಭದ್ರೇಶ್ವರ ಸಹಿತ ಭದ್ರಕಾಳಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳಿಗೆ ಭಕ್ತಿಭಾವದಿಂದ ಚಾಲನೆ ನೀಡಲಾಯಿತು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ತ್ರಿಂಬಕೇಶ್ವರ ದೇವಸ್ಥಾನದ ಜಾಗದಲ್ಲಿ ಹಕ್ಕುಪತ್ರ ವಿತರಣೆ: ಗ್ರಾಮಸ್ಥರ ಆಕ್ರೋಶ

ಕವಿತಾಳ: ಪಟ್ಟಣದ ತ್ರಿಂಬಕೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಮೀಸಲಿಟ್ಟಿರುವ ಗ್ರಾಮಠಾಣಾ ಜಾಗದಲ್ಲಿ ಆಕ್ಷೇಪಣೆಗಳ ನಡುವೆಯೂ 40ಕ್ಕೂ ಹೆಚ್ಚು ಮಂದಿಗೆ ಹಕ್ಕುಪತ್ರ ವಿತರಿಸಲಾಗಿದೆ ಎಂದು ಆರೋಪಿಸಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ರಾಯಚೂರಿನಲ್ಲಿ ಪಂಜಿನ ಮೆರವಣಿಗೆ

ರಾಯಚೂರು, ಅ.10: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಹಾಗೂ ನವದೆಹಲಿಯಲ್ಲಿ ಶನಿವಾರ ನಡೆದ ಪ್ರತಿಭಟನೆ ವೇಳೆ ಬಂಧಿಸಲಾದ ಹೋರಾಟಗಾರರನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ಆಗ್ರಹಿಸಿ ಎಡ ಪ್ರಜಾಸತ್ತಾತ್ಮಕ ಪಕ್ಷಗಳು ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಮತದಾನದ ಹಕ್ಕು ರಕ್ಷಣೆಗೆ ಆಗ್ರಹಿಸಿ ಜಾಲಹಳ್ಳಿಯಲ್ಲಿ ಡಿವೈಎಫ್‌ಐ–ಎಸ್‌ಎಫ್‌ಐ ಪಂಜಿನ ಮೆರವಣಿಗೆ

ಜಾಲಹಳ್ಳಿ, ಅ.10: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಕಾನೂನು ಕ್ರಮ ಜರುಗಿಸಬೇಕು ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ಮತ್ತು…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಬಡತನದ ನಡುವೆಯೂ ಸಾಧನೆ ಮಾಡಿದ ಚನ್ನಬಸವ: ರಾಜ್ಯಮಟ್ಟದ ಓಟದಲ್ಲಿ ದ್ವಿತೀಯ ಸ್ಥಾನ, ರಾಷ್ಟ್ರಮಟ್ಟಕ್ಕೆ ಆಯ್ಕೆ

ಅರಕೇರಾ: ಮಳೆ ಬಂದರೆ ಮನೆಯೊಳಗೆ ನೀರು ನುಗ್ಗುವ ಪರಿಸ್ಥಿತಿ, ದಿನವಿಡೀ ದುಡಿದರೂ ಕುಟುಂಬ ನಿರ್ವಹಣೆಗೆ ಸಾಲದ ಕೂಲಿ ಹಣ, ಓದಲು ಬೇಕಾದ ಬಟ್ಟೆ ಮತ್ತು ಶೂ ಖರೀದಿಸಲೂ ಪರದಾಟ. ಇಂತಹ ಕಡುಬಡತನದ ನಡುವೆ ಬೆಳೆದ ಯುವಕನೊಬ್ಬ ಇಂದು ರಾಜ್ಯಮಟ್ಟದ ಓಟದ ಸ್ಪರ್ಧೆಯಲ್ಲಿ ಸಾಧನೆ ಮಾಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಅಂತರ ಮಹಾವಿದ್ಯಾಲಯ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಇಳಕಲ್ ಮಹಿಳಾ ಕಾಲೇಜಿಗೆ ಪ್ರಥಮ ಸ್ಥಾನ

ರಾಯಚೂರು, ಅ.9: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ಅಂತರ ಮಹಾವಿದ್ಯಾಲಯಗಳ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಇಳಕಲ್‌ನ ಶ್ರೀ ವಿಜಯ ಮಹಾಂತೇಶ ಕಲಾ ಮತ್ತು ವಾಣಿಜ್ಯ ಮಹಿಳಾ…

ಮುಂದೆ ಓದಿ →
ರಾಯಚೂರು ರಾಯಚೂರು

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಸಂಘಟನಾ ಕಾರ್ಯದರ್ಶಿಯಾಗಿ ವೆಂಕಟೇಶ ಅರೋಲಿಕರ್ ನೇಮಕ

ರಾಯಚೂರು: ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಸಂಘಟನಾ ಕಾರ್ಯದರ್ಶಿ ಹುದ್ದೆಗೆ ವೆಂಕಟೇಶ ಅರೋಲಿಕರ್ ಅವರನ್ನು ನೇಮಕ ಮಾಡಲಾಗಿದ್ದು, ಪಕ್ಷದ ಮುಖಂಡರ ಸಮ್ಮುಖದಲ್ಲಿ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಲಿಂಗಸುಗೂರು ಕ್ಷೇತ್ರದ 6 ಜಿ.ಪಂ., 22 ತಾ.ಪಂ. ಕ್ಷೇತ್ರಗಳ ಕರಡು ಮೀಸಲಾತಿ ಪಟ್ಟಿ ಪ್ರಕಟ

ಲಿಂಗಸುಗೂರು: ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 6 ಜಿಲ್ಲಾ ಪಂಚಾಯಿತಿ ಹಾಗೂ 22 ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಸಂಬಂಧಿಸಿದ ಕರಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿವಿಧ ವರ್ಗಗಳಿಗೆ ಕ್ಷೇತ್ರವಾರು ಮೀಸಲಾತಿ ನಿಗದಿಪಡಿಸಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ರೈತನ ಮೇಲೆ ಅರಣ್ಯಾಧಿಕಾರಿಗಳಿಂದ ಹಲ್ಲೆ ಆರೋಪ: ಕಾನೂನು ಕ್ರಮಕ್ಕೆ ಆಗ್ರಹ

ಲಿಂಗಸುಗೂರು: ಮಸ್ಕಿ ತಾಲೂಕಿನ ಯರದೊಡ್ಡಿ ಗ್ರಾಮದ ರೈತನ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರೈತ ಸಂಘ ಹಾಗೂ ಸಿಪಿಐ (ಎಂಎಲ್) ರೆಡ್ ಸ್ಟಾರ್ ತಾಲೂಕು ಸಮಿತಿ ವತಿಯಿಂದ ಸಹಾಯಕ ಆಯುಕ್ತರಿಗೆ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ರೈತರ ಹಿತ ಕಾಪಾಡಿ ರಾಷ್ಟ್ರೀಯ ಹೆದ್ದಾರಿ 748ಎ ಕಾಮಗಾರಿ ಪೂರ್ಣಗೊಳಿಸಿ: ಅಮರೇಗೌಡ ಪಾಟೀಲ್ ಬಯ್ಯಾಪುರ

ಲಿಂಗಸುಗೂರು: ಭಾರತಮಾಲಾ ಯೋಜನೆಯಡಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ 748ಎ ಕಾಮಗಾರಿಯಿಂದ ರೈತರಿಗೆ ತೊಂದರೆಯಾಗದಂತೆ ವೈಜ್ಞಾನಿಕ ಸರ್ವಿಸ್ ರಸ್ತೆ, ಅಂಡರ್‌ಪಾಸ್, ಬೈಪಾಸ್ ಹಾಗೂ ಅಗತ್ಯ ಸೇತುವೆಗಳನ್ನು ನಿರ್ಮಿಸಬೇಕು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಅಮರೇಗೌಡ ಪಾಟೀಲ್ ಬಯ್ಯಾಪುರ ಒತ್ತಾಯಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಅಂಬೇಡ್ಕರ್ ಅವರ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಿಂತನೆಗಳ ಕುರಿತು ಅಧ್ಯಯನ ಶಿಬಿರ

ಮಾನ್ವಿ: ತಾಲೂಕಿನ ಪೋತ್ನಾಳ ಪಟ್ಟಣದ ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ಆವರಣದಲ್ಲಿ ಬಹುಜನ ಸಂಘರ್ಷ ಸಮಿತಿ ಕರ್ನಾಟಕ ಹಾಗೂ ಜನತಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಬಲ್ಲಟಗಿ ಇವರ ಸಹಯೋಗದಲ್ಲಿ ಡಾ. ಬಿ.ಆರ್.

ಮುಂದೆ ಓದಿ →
ರಾಯಚೂರು ರಾಯಚೂರು

ಸಾಮಾನ್ಯ ಶಸ್ತ್ರಚಿಕಿತ್ಸೆ ಕುರಿತು ಅ.11ರಂದು ನವೋದಯ ಎಫ್‌ಎಂನಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ

ರಾಯಚೂರು, ಅ.10: ನಗರದ ನವೋದಯ ಶಿಕ್ಷಣ ಸಂಸ್ಥೆಯ ನವೋದಯ ಎಫ್‌ಎಂ 88.4 ಕೇಂದ್ರದ ವತಿಯಿಂದ ಸಾಮಾನ್ಯ ಶಸ್ತ್ರಚಿಕಿತ್ಸೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಅಕ್ಟೋಬರ್ 11ರಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಕಾಲುವೆ ನೀರಿಗಾಗಿ ರೈತರ ರಸ್ತೆ ತಡೆ ಪ್ರತಿಭಟನೆ: ಅಧಿಕಾರಿಗಳ ಭರವಸೆ ಬಳಿಕ ಹೋರಾಟ ವಾಪಸ್

ದೇವದುರ್ಗ: ನಾರಾಯಣಪುರ ಬಲದಂಡೆ ಕಾಲುವೆಯ 16, 17 ಹಾಗೂ 18ನೇ ವಿತರಣಾ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸುವಂತೆ ಆಗ್ರಹಿಸಿ ಕಳೆದ 15 ದಿನಗಳಿಂದ ಹೋರಾಟ ನಡೆಸುತ್ತಿದ್ದ ರೈತರು, ಸೋಮವಾರ ಗಬ್ಬೂರು–ದೇವದುರ್ಗ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಹಿರೇಕೋಟ್ನೆಕಲ್‌ನಲ್ಲಿ ನೂತನ ಶ್ರೀದೇವಿ ಪುರಾಣ ಮಂಟಪ ಉದ್ಘಾಟನೆ

ಮಾನ್ವಿ, ಅ.10: ತಾಲೂಕಿನ ಹಿರೇಕೋಟ್ನೆಕಲ್ ಗ್ರಾಮದ ಶ್ರೀ ತಾಯಮ್ಮದೇವಿ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 11ರಿಂದ 21ರವರೆಗೆ 45ನೇ ವರ್ಷದ ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದೇ ಸಂದರ್ಭದಲ್ಲಿ ಸುಮಾರು 10 ಲಕ್ಷ ರೂ.

ಮುಂದೆ ಓದಿ →
ರಾಯಚೂರು ರಾಯಚೂರು

ಅ.11ರಿಂದ ಶ್ರೀ ತಾಯಮ್ಮ ದೇವಿಯ ಶರನ್ನವರಾತ್ರಿ ದಸರಾ ಮಹೋತ್ಸವ

ರಾಯಚೂರು, ಅ.10: ನಗರದ ಸರಾಫ್ ಮರ್ಚೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಸ್ವರ್ಣ ಮಹಲ್‌ನಲ್ಲಿ ಶ್ರೀಮಾತಾ ತಾಯಮ್ಮ ದೇವಿಯ ಶರನ್ನವರಾತ್ರಿ ಹಾಗೂ ದಸರಾ ಮಹೋತ್ಸವವನ್ನು ಅಕ್ಟೋಬರ್ 11ರಿಂದ 21ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ಆಚರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಗದ್ವಾಲ ನರಸಣ್ಣ ಹಾಗೂ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಗದ್ದೆಗಳಿಗೆ ನೀರು ಕೊಡಿ, ಇಲ್ಲವೇ ವಿಷ ಕೊಡಿ: ಕಾಲುವೆ ನೀರಿಗಾಗಿ ರೈತರ ಆಕ್ರೋಶ

ಹಟ್ಟಿ ಚಿನ್ನದ ಗಣಿ: ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಸಮೀಪದ ಗುರುಗುಂಟಾ ಹೋಬಳಿ ವ್ಯಾಪ್ತಿಯ 7ಬಿ, 7ಎ ಹಾಗೂ ಡಿಐ–8 ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸದ ಪರಿಣಾಮ ಭತ್ತದ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಅರಕೇರಾ ತಾಲೂಕಿಗೆ ಗ್ರಾಮಗಳ ಸೇರ್ಪಡೆ ವಿರೋಧಿಸಿ ಅ.12ರಂದು ಬೃಹತ್ ಪಾದಯಾತ್ರೆ

ದೇವದುರ್ಗ, ಅ.10: ನೂತನ ಅರಕೇರಾ ತಾಲೂಕಿಗೆ ಸೇರ್ಪಡೆಗೊಳಿದ ಗಾಣಧಾಳ ಹಾಗೂ ಸೋಮನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏಳು ಗ್ರಾಮಗಳನ್ನು ದೇವದುರ್ಗ ತಾಲೂಕಿನ ಜಾಲಹಳ್ಳಿ ಹೋಬಳಿಯಲ್ಲಿಯೇ ಮುಂದುವರಿಸಬೇಕು ಎಂದು ಒತ್ತಾಯಿಸಿ ವಿವಿಧ ಗ್ರಾಮಗಳ ಮುಖಂಡರು ಹಾಗೂ ಗ್ರಾಮಸ್ಥರು ಶಾಸಕಿ ಕರೆಮ್ಮ ಜಿ.

ಮುಂದೆ ಓದಿ →
ರಾಯಚೂರು ರಾಯಚೂರು

ಗಾಣೇಕಲ್ ಜಲಾಶಯದಿಂದ ನೀರು ಬಿಡುಗಡೆ: ಕುಡಿಯುವ ನೀರು, ಕೃಷಿಗೆ ಮೊದಲ ಆದ್ಯತೆ: ಶಾಸಕ ಬಸನಗೌಡ ದದ್ದಲ್

ರಾಯಚೂರು: ಸಾರ್ವಜನಿಕರ ಕುಡಿಯುವ ನೀರಿನ ಅಗತ್ಯತೆ ಪೂರೈಸುವುದರ ಜೊತೆಗೆ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಗಾಣೇಕಲ್ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ತಿಳಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ರಾಮತ್ನಾಳ ಶಾಲೆಯ ಖೋ ಖೋ ತಂಡಕ್ಕೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ

ರಾಯಚೂರು, ಅ.10: ಮಸ್ಕಿಯಲ್ಲಿ ಅಕ್ಟೋಬರ್ 6ರಂದು ಆಯೋಜಿಸಲಾಗಿದ್ದ 14 ವರ್ಷದೊಳಗಿನವರ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ರಾಮತ್ನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸುವ ಮೂಲಕ ವಿಭಾಗ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಪಿಡಬ್ಲ್ಯೂಡಿ ಕಚೇರಿಯಲ್ಲಿ ನಿಗೂಢ ಗೊಂಬೆ ಪತ್ತೆ: ಸಿಬ್ಬಂದಿಯಲ್ಲಿ ಆತಂಕ

ರಾಯಚೂರು, ಅ.10: ನಗರದ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಕಚೇರಿಯ ಮೇಲ್ಭಾಗದಲ್ಲಿರುವ ಹುಣಸೆ ಮರಕ್ಕೆ ವಾಮಾಚಾರ ನಡೆಸಿರುವ ಶಂಕೆ ಮೂಡಿಸುವ ರೀತಿಯಲ್ಲಿ ಗೊಂಬೆಯೊಂದನ್ನು ಕಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಕಚೇರಿ ಸಿಬ್ಬಂದಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಅಕ್ರಮ ಎಸ್‌ಐಆರ್ ರದ್ದತಿಗೆ ಆಗ್ರಹಿಸಿದ ಪ್ರತಿಭಟನೆಗೆ ನಿರ್ಬಂಧ: ಕೇಂದ್ರ ಸರ್ಕಾರದ ವಿರುದ್ಧ ಸಿಪಿಐ(ಎಂ) ಆಕ್ರೋಶ

ರಾಯಚೂರು, ಅ.10: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ತಡೆಯಲು ಕೇಂದ್ರ ಸರ್ಕಾರ ಗೃಹ ಇಲಾಖೆಯನ್ನು ದುರ್ಬಳಕೆ…

ಮುಂದೆ ಓದಿ →
ರಾಯಚೂರು ರಾಯಚೂರು

ವಿಶೇಷಚೇತನರ ಬಾಕಿ ಮಾಸಾಶನ ಬಿಡುಗಡೆಗೆ ಆಗ್ರಹಿಸಿ ಅ.15ರಂದು ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ

ರಾಯಚೂರು, ಅ.10: ಕಳೆದ ಏಳು ತಿಂಗಳಿಂದ ಬಾಕಿ ಉಳಿದಿರುವ ವಿಶೇಷಚೇತನರ ಮಾಸಾಶನವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಎಂಆರ್‌ಡಬ್ಲ್ಯೂ, ವಿಆರ್‌ಡಬ್ಲ್ಯೂ ಮತ್ತು ಯುಆರ್‌ಡಬ್ಲ್ಯೂ ಕಾರ್ಯಕರ್ತರ ಸೇವೆಯನ್ನು ಕಾಯಂಗೊಳಿಸಿ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಅಕ್ಟೋಬರ್ 15ರಂದು ರಾಮನಗರದಿಂದ ಬೆಂಗಳೂರು ವಿಧಾನಸೌಧದವರೆಗೆ ಬೃಹತ್…

ಮುಂದೆ ಓದಿ →
ರಾಯಚೂರು ರಾಯಚೂರು

ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಅ.11ರಿಂದ 55ನೇ ನವರಾತ್ರಿ ಉತ್ಸವ

ರಾಯಚೂರು, ಅ.10: ನಗರದ ಉಪ್ಪಾರವಾಡಿ ಬ್ರೇಸ್ತವಾರಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 20ರವರೆಗೆ 55ನೇ ವರ್ಷದ ನವರಾತ್ರಿ ಉತ್ಸವವನ್ನು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ವಿಶೇಷ ವಾಹನೋತ್ಸವಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ದೇವಸ್ಥಾನದ ಪೂಜಾರಿ ಕಂಠಾಚಾರಿ ತಿಳಿಸಿದರು.

ಮುಂದೆ ಓದಿ →