ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 102,035 ಇಂದಿನ ಓದುಗರು: 1,103 🟢 ಈಗ ಆನ್‌ಲೈನ್: 20
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 923 ಸುದ್ದಿಗಳಲ್ಲಿ 476–500 ಸುದ್ದಿಗಳು

ರಾಯಚೂರು ರಾಯಚೂರು

ಆತ್ಮವಿಶ್ವಾಸ ಬೆಳೆಸಿಕೊಳ್ಳಿ, ಆತ್ಮಹತ್ಯೆ ಪರಿಹಾರವಲ್ಲ: ಅರವಿಂದ ಕುಮಾರ

ಮಟಮಾರಿ: ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ಸಂಕಷ್ಟದ ಸಂದರ್ಭಗಳಲ್ಲಿ ಆತ್ಮವಿಶ್ವಾಸ ಕಳೆದುಕೊಳ್ಳದೆ, ನಂಬಿಕಸ್ಥರೊಂದಿಗೆ ಸಮಸ್ಯೆಗಳನ್ನು ಹಂಚಿಕೊಂಡು ಸೂಕ್ತ ಸಮಾಲೋಚನೆ ಮತ್ತು ಮಾನಸಿಕ ನೆರವು ಪಡೆಯಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ ಕುಮಾರ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಜಿ.ಎ.ವಿ.ಎಸ್. ಜಾಗೃತಿಗಾಗಿ ಮಾನ್ವಿಯಲ್ಲಿ ಸಂಕಲ್ಪ ಬೈಕ್ ರ‍್ಯಾಲಿ

ಮಾನ್ವಿ: ಬೆಂಗಳೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ಗ್ಲೋಬಲ್ ಆಕ್ಸಿಲರೇಟರ್ ಮಿಷನ್ ಸಮಿಟ್ (ಜಿ.ಎ.ವಿ.ಎಸ್.) ಕುರಿತು ಜಾಗೃತಿ ಮೂಡಿಸುವ ಹಾಗೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಪಟ್ಟಣದಲ್ಲಿ ಸಂಕಲ್ಪ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಅ.7ರಂದು ಪೋತ್ನಾಳ್ ಹೆದ್ದಾರಿಯಲ್ಲಿ ರಸ್ತೆ ತಡೆ: ಅಮೀನಪಾಶ ದಿದ್ದಿಗಿ

ಮಾನ್ವಿ: ಜೋಳ ಖರೀದಿ ಹಣ ಪಾವತಿ, ಕಾಲುವೆಯ ಕೊನೆಯ ಭಾಗದ ರೈತರಿಗೆ ಸಮರ್ಪಕ ನೀರು, ಬರ ಪರಿಹಾರ, ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ.7ರಂದು ಬೆಳಿಗ್ಗೆ 10 ಗಂಟೆಯಿಂದ ಪೋತ್ನಾಳ್ ಹೆದ್ದಾರಿ ಬಂದ್ ಮಾಡಿ ರಸ್ತೆ ತಡೆ ಹಾಗೂ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು…

ಮುಂದೆ ಓದಿ →
ರಾಯಚೂರು ರಾಯಚೂರು

ಬವನಬಾವಿ ವೃತ್ತಕ್ಕೆ ‘ಶ್ರೀಕೃಷ್ಣದೇವರಾಯ ವೃತ್ತ’ ಎಂದು ನಾಮಕರಣಕ್ಕೆ ಆಗ್ರಹ

ರಾಯಚೂರು, ಅ.5: ನಗರದ ಬವನಬಾವಿ ವೃತ್ತಕ್ಕೆ ವಿಜಯನಗರ ಸಾಮ್ರಾಜ್ಯದ ಪ್ರಸಿದ್ಧ ಚಕ್ರವರ್ತಿ ಶ್ರೀಕೃಷ್ಣದೇವರಾಯ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಮುನ್ನೂರುಕಾಪು ಸಮಾಜದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲೇ ಸುರಕ್ಷಿತ ಗರ್ಭಪಾತ ಸೇವೆ ಪಡೆಯಿರಿ: ಡಾ. ಇಮ್ರಾನ್ ಪರ್ವೇಜ್

ರಾಯಚೂರು, ಅ.5: ಅನಪೇಕ್ಷಿತ ಗರ್ಭಧಾರಣೆಯ ಸಂದರ್ಭದಲ್ಲಿ ಮಹಿಳೆಯರಿಗೆ ಕಾನೂನುಬದ್ಧ, ಸುರಕ್ಷಿತ ಹಾಗೂ ಗುಣಮಟ್ಟದ ಗರ್ಭಪಾತ ಸೇವೆಗಳು ದೊರೆಯುವುದು ಅತ್ಯಂತ ಅಗತ್ಯವಾಗಿದ್ದು, ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿಯೇ ಗರ್ಭಪಾತ ಸೇವೆ ಪಡೆಯಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ವಿಕಲಚೇತನರ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಯಚೂರು ಅ.. 5.(ಕರ್ನಾಟಕ ವಾರ್ತೆ):- ಜಿಲ್ಲೆಯ ವಿಕಲಚೇತನರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕಾಗಿ 2026-27ನೇ ಸಾಲಿನ ವಿವಿಧ ಸರ್ಕಾರಿ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

6 ತಾಸು ವಿದ್ಯುತ್ ಪೂರೈಕೆಗೆ ಆಗ್ರಹಿಸಿ ನಾಗಲಾಪೂರ ವಿದ್ಯುತ್ ಕೇಂದ್ರಕ್ಕೆ ರೈತರ ಬೀಗ

ಲಿಂಗಸಗೂರು: ಬರಗಾಲದ ಪರಿಸ್ಥಿತಿಯಲ್ಲಿ ಬೆಳೆಗಳಿಗೆ ನೀರುಣಿಸಲು ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ತಾಲೂಕಿನ ಪಿಕಳಿಹಾಳ, ಕನ್ನಾಳ, ವ್ಯಾಸನಂದಿಹಾಳ, ನಾಗಲಾಪೂರ, ಉಳಿಮೇಶ್ವರ ಹಾಗೂ ಹಡಗಲಿ ಗ್ರಾಮಗಳ ರೈತರು ನಾಗಲಾಪೂರ ಶಾಖೆಯ ವಿದ್ಯುತ್ ಕೇಂದ್ರದ ಮುಖ್ಯ ದ್ವಾರಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

SIR ಕುರಿತು ಕಾಂಗ್ರೆಸ್ ಅಪಪ್ರಚಾರ; ಅಕ್ರಮ ಮತದಾರರ ವಿರುದ್ಧ ಹೋರಾಟ ಮುಂದುವರಿಯಲಿದೆ: ರಘು ಕೌಟಿಲ್ಯ

ರಾಯಚೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಪಕ್ಷ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ರೀತಿಯಲ್ಲಿ ಅಪಪ್ರಚಾರ ನಡೆಸುತ್ತಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಹತ್ತಿ ಜಿನ್ನಿಂಗ್ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

ದೇವದುರ್ಗ: ನಗರದ ಭಾರತ ಕಾಟನ್ ಜಿನ್ನಿಂಗ್ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಪಾರ ಪ್ರಮಾಣದ ಹತ್ತಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಪರಿಶಿಷ್ಟ ಜಾತಿ ಪಟ್ಟಿಯಿಂದ ನಾಲ್ಕು ಸಮುದಾಯಗಳ ಕೈಬಿಡಲು ಕಾನೂನು ಹೋರಾಟ: ಮಹೇಂದ್ರ ಕುಮಾರ್ ಮಿತ್ರ

ರಾಯಚೂರು: ಕರ್ನಾಟಕದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ ಲಂಬಾಣಿ, ಭೋವಿ, ಕೊರಚ ಮತ್ತು ಕೊರಮ ಸಮುದಾಯಗಳನ್ನು ಪಟ್ಟಿಯಿಂದ ಕೈಬಿಡುವಂತೆ ಕೋರಿ ನಡೆಸುತ್ತಿರುವ ಕಾನೂನು ಹೋರಾಟ ಮುಂದುವರಿದಿದ್ದು, ಈ ಸಂಬಂಧ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗವು ವರದಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ ಎಂದು ಡಾ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಯುವ ಸಂಸತ್‌ನಿಂದ ಶಾಸಕಾಂಗದ ಕಾರ್ಯನಿರ್ವಹಣೆ ಕುರಿತು ಪ್ರಾಯೋಗಿಕ ಜ್ಞಾನ: ಸತ್ಯಮ್ಮ

ಲಿಂಗಸೂಗೂರು: ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡುವುದರ ಜೊತೆಗೆ ಅದರ ಪ್ರಮುಖ ಅಂಗಗಳಲ್ಲಿ ಒಂದಾದ ಶಾಸಕಾಂಗದ ಕಾರ್ಯನಿರ್ವಹಣೆ ಕುರಿತು ಪ್ರಾಯೋಗಿಕ ಜ್ಞಾನ ಮೂಡಿಸುವಲ್ಲಿ ಯುವ ಸಂಸತ್ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಹಸೀಲ್ದಾರ್ ಸತ್ಯಮ್ಮ ಹೇಳಿದರು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ನಾರಾಯಣಪುರ 9ಎ ಕಾಲುವೆ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಬೋಸರಾಜು, ಹಂಪಯ್ಯ ನಾಯಕ ತಾಕೀತು

ಕವಿತಾಳ: ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ತಲುಪಿಸುವ ಉದ್ದೇಶದಿಂದ ನಾರಾಯಣಪುರ ಬಲದಂಡೆ ನಾಲೆಯ 9ಎ ಕಾಲುವೆ ಹಾಗೂ ಉಪಕಾಲುವೆಗಳ ಬಾಕಿ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹಾಗೂ ಮಾನ್ವಿ ಶಾಸಕ ಜಿ.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಅಮೀನಗಡ, ಕೋಟೆಕಲ್‌ನಲ್ಲಿ ಬರ ವೀಕ್ಷಿಸಿದ ಕೇಂದ್ರ ತಂಡ; ರೈತರ ಅಳಲು ಆಲಿಕೆ

ಕವಿತಾಳ: ಮಸ್ಕಿ ತಾಲೂಕಿನಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಅಧ್ಯಯನ ಮಾಡಲು ಆಗಮಿಸಿರುವ ಕೇಂದ್ರ ಸರ್ಕಾರದ ಉನ್ನತ ಮಟ್ಟದ ಅಧ್ಯಯನ ತಂಡವು ಅಮೀನಗಡ ಮತ್ತು ಕೋಟೆಕಲ್ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ವಿಕಲಚೇತನರಿಗೆ ಆಹಾರ ಕಿಟ್ ವಿತರಿಸಿ ಅಶೋಕ ಜೈನ್ ಹುಟ್ಟುಹಬ್ಬ ಆಚರಣೆ

ಲಿಂಗಸುಗೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ರಾಯಚೂರು ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಸಿ.ಕೆ. ಜೈನ್ ಅವರ ಹುಟ್ಟುಹಬ್ಬವನ್ನು ಕರವೇ ಶಿವರಾಮೇಗೌಡ ಬಣದ ತಾಲೂಕು ಘಟಕದ ಪದಾಧಿಕಾರಿಗಳು ವಿಕಲಚೇತನರೊಂದಿಗೆ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಸ್ವಾವಲಂಬಿ ಬದುಕಿಗೆ ನೆರವು: 8 ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

ಮಾನ್ವಿ: ಮಹಿಳೆಯರು ತಮ್ಮ ಕೌಶಲ್ಯ ಮತ್ತು ಸಾಮರ್ಥ್ಯದ ಮೇಲೆ ವಿಶ್ವಾಸವಿಟ್ಟು ಆರ್ಥಿಕವಾಗಿ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು ಎಂದು ಪೋತ್ನಾಳದ ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಸತೀಶ್ ಫೆರ್ನಾಂಡಿಸ್ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಅ.11ರಿಂದ ಕಲ್ಮಠದ 51ನೇ ವರ್ಷದ ದಸರಾ ಮಹೋತ್ಸವ

ಮಾನ್ವಿ: ಪಟ್ಟಣದ ಮುಕ್ತಾಗುಚ್ಚ ಬೃಹನ್ಮಠ ಕಲ್ಮಠದ 51ನೇ ವರ್ಷದ ದಸರಾ ಮಹೋತ್ಸವದ ಅಂಗವಾಗಿ ಅ.11ರಿಂದ 23ರವರೆಗೆ ಶ್ರೀಮಠದ ಆವರಣದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಸಾಹಿತಿ ಲಕ್ಷ್ಮೀದೇವಿ ಶಾಸ್ತ್ರಿ ಅವರ ಸಪ್ತ ಕೃತಿಗಳ ಲೋಕಾರ್ಪಣೆ

ರಾಯಚೂರು, ಅ.4: ಪಂಡಿತ ತಾರಾನಾಥರು ವೈದ್ಯಕೀಯ, ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಸೇವೆ ಮತ್ತು ಸಾಧನೆ ಸದಾ ಸ್ಮರಣೀಯವಾಗಿದೆ ಎಂದು ಹುಬ್ಬಳ್ಳಿಯ ಹಿರಿಯ ಸಾಹಿತ್ಯ ವಿದ್ವಾಂಸ ಶ್ಯಾಮಸುಂದರ ಬಿದರಕುಂದಿ ಹೇಳಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ದೇವದುರ್ಗ, ಅರಕೇರಾ ತಾಲೂಕು ದಸಂಸ ಸಮಿತಿಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

ದೇವದುರ್ಗ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಮಹಾತ್ಮ ಪ್ರೊ. ಬಿ. ಕೃಷ್ಣಪ್ಪ ನೇತೃತ್ವದ ಸಂಘಟನೆ) ರಿ.386/2020-21ರ ರಾಯಚೂರು ಜಿಲ್ಲಾ ಸಮಿತಿ ವತಿಯಿಂದ ದೇವದುರ್ಗ ಹಾಗೂ ಅರಕೇರಾ ತಾಲೂಕು ಸಮಿತಿಗಳನ್ನು ರಚಿಸಿ, ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಕಕ್ಕಲದೊಡ್ಡಿ ಗ್ರಾಮವನ್ನು ಜಾಲಹಳ್ಳಿ ಹೋಬಳಿ, ಗ್ರಾಪಂ ವ್ಯಾಪ್ತಿಗೆ ಸೇರಿಸಲು ಒತ್ತಾಯ

ಜಾಲಹಳ್ಳಿ, ಅ.4: ದೇವದುರ್ಗ ತಾಲೂಕಿನ ಜಾಲಹಳ್ಳಿ ಸಮೀಪದ ಕಕ್ಕಲದೊಡ್ಡಿ ಗ್ರಾಮವನ್ನು ಜಾಲಹಳ್ಳಿ ಹೋಬಳಿ ಹಾಗೂ ಜಾಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಪರಿಸರ ಸಂರಕ್ಷಣೆಯ ರಾಯಭಾರಿಗಳಾಗಿ ಕಾರ್ಯನಿರ್ವಹಿಸಿ: ಡಾ. ಮಂಜುನಾಥ ಪಾಟೀಲ

ರಾಯಚೂರು: ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗದೆ ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಬೇಕು. ಪ್ರಶಿಕ್ಷಣಾರ್ಥಿಗಳು ಪರಿಸರ ಸಂರಕ್ಷಣೆಯ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಹೇರೂರು ಚಂದ್ರಾಯಗೌಡ ಮಲ್ಹಾರ ಸಿದ್ದಪ್ಪಗೌಡ ಕರೆಡ್ಡಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ನೆಲಕ್ಕುರುಳಿದ ಬಸರಿ ಮರಕ್ಕೆ ಮರುಜೀವ ನೀಡಿದ ಪರಿಸರ ಪ್ರೇಮಿಗಳು

ಸಿಂಧನೂರು: ಗಾಳಿ-ಮಳೆಗೆ ನೆಲಕ್ಕುರುಳಿದ್ದ ಬೃಹತ್ ಬಸರಿ ಮರವನ್ನು ಸ್ಥಳಾಂತರಿಸಿ ಮರುನಾಟಿ ಮಾಡುವ ಮೂಲಕ ಗೊರೇಬಾಳದ ಸಂಡೆ ಫಾರ್ ಸೋಷಿಯಲ್ ಸೇವಾ ಬಳಗ ಹಾಗೂ ವನಸಿರಿ ಫೌಂಡೇಷನ್ ರಾಯಚೂರು ಸದಸ್ಯರು ಪರಿಸರ ಕಾಳಜಿ ಮೆರೆದಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಮಾನ್ವಿ ಕುಡಿಯುವ ನೀರಿನ ಕಾಮಗಾರಿ ತ್ವರಿತ ಪೂರ್ಣಗೊಳಿಸಿ: ಎನ್.ಎಸ್. ಬೋಸರಾಜು ಎಚ್ಚರಿಕೆ

ಮಾನ್ವಿ: ಪಟ್ಟಣದ ಜನತೆಗೆ ಸಮರ್ಪಕ ಕುಡಿಯುವ ನೀರು ಪೂರೈಸಲು ಅಗತ್ಯ ಅನುದಾನ ಒದಗಿಸಿದ್ದರೂ ಸಮಸ್ಯೆ ಮುಂದುವರಿದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ವಿದ್ಯುತ್ ಅವಘಡಕ್ಕೆ ರೈತ ಬಲಿ: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ ಸಾಂತ್ವನ

ಮಾನ್ವಿ: ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ವಿದ್ಯುತ್ ಮೋಟಾರ್ ಚಾಲನೆ ಮಾಡಲು ತೆರಳಿದ್ದ ವೇಳೆ ವಿದ್ಯುತ್ ಕಂಬದ ಗೈ ವೈರ್‌ಗೆ ವಿದ್ಯುತ್ ಪ್ರವಹಿಸಿ ಮೃತಪಟ್ಟ ರೈತನ ಕುಟುಂಬಕ್ಕೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹಾಗೂ ಶಾಸಕ ಹಂಪಯ್ಯ ನಾಯಕ ಭೇಟಿ ನೀಡಿ ಸಾಂತ್ವನ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಕೇಂದ್ರ ತಂಡದಿಂದ ರಾಯಚೂರು ಜಿಲ್ಲೆಯಲ್ಲಿ ಬರ ಸಮೀಕ್ಷೆ

ರಾಯಚೂರು. ಅ.. 4.(ಕರ್ನಾಟಕ ವಾರ್ತೆ):- ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಡಾ. ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ ತಂಡದಿAದ ಅಕ್ಟೋಬರ್. 4 ರ ರವಿವಾರ ದಂದು ರಾಯಚೂರು ಜಿಲ್ಲೆಯಲ್ಲಿ ಬರ ಸಮೀಕ್ಷೆ ನಡೆಸಲಾಯಿತು.

ಮುಂದೆ ಓದಿ →