ದೇವದುರ್ಗ: ಪ್ರೊ. ಬಿ. ಕೃಷ್ಣಪ್ಪ ಅವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಮೂಲ ಸಂಘಟನೆಯ ದೇವದುರ್ಗ ತಾಲೂಕು ಘಟಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನೂತನ ತಾಲೂಕು ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಸಿಂಧನೂರು, ಸೆ.30: ಜೀವನದಲ್ಲಿ ಎದುರಾಗುವ ಒತ್ತಡ, ನಿರಾಶೆ ಹಾಗೂ ಸಂಕಷ್ಟಗಳನ್ನು ಧೈರ್ಯದಿಂದ ಎದುರಿಸುವ ಮನೋಸ್ಥೈರ್ಯವನ್ನು ಯುವಜನರು ಬೆಳೆಸಿಕೊಳ್ಳಬೇಕು. ಆತ್ಮಹತ್ಯೆ ತಡೆಗಟ್ಟುವಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋಶಾಸ್ತ್ರಜ್ಞ ಅರುಣ್ ಕುಮಾರ್ ಕುಲಕರ್ಣಿ ಹೇಳಿದರು.
ಲಿಂಗಸುಗೂರುಸೆ. 30: ರಾಯಚೂರು ಜಿಲ್ಲೆಯ ಲಿಂಗಸುಗೂರು ಜೆಸ್ಕಾಂ ಕರ‍್ಯ ಮತ್ತು ಪಾಲನೆ ವಿಭಾಗದ ವ್ಯಾಪ್ತಿಯ ಲಿಂಗಸುಗೂರು ನಗರದ ಹೊಸ ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಂಡ ಪ್ರಯುಕ್ತ ಅಕ್ಟೋಬರ್ 01 ಹಾಗೂ 02ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸರ‍್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
ರಾಯಚೂರು ಸೆ.: ರಾಯಚೂರು ಜಿಲ್ಲೆಯ ದೇವದರ‍್ಗ ಆರಕ್ಷಕ ವೃತ್ತ ನಿರೀಕ್ಷಕರ ಕಚೇರಿ ವ್ಯಾಪ್ತಿಯ ಮದರಕಲ್ ಗ್ರಾಮದ ತಿಪ್ಪಮ್ಮ ಗಂಡ ಗೋಪಾಲ (35) ಎಂಬ ಮಹಿಳೆಯು 2024ರ ಸೆಪ್ಟಂಬರ್ 13ರ ಮಧ್ಯಾಹ್ನ 12ಗಂಟೆಯ ಸುಮಾರಿಗೆ ಹೊಲಕ್ಕೆ ನಂತರ ಬರುವುದಾಗಿ ಹೇಳಿ ಕಾಣೆಯಾಗಿದ್ದು, ಈ ಕುರಿತು ಗಬ್ಬೂರು ಠಾಣಾ ಗುನ್ನೆ ನಂ-126/2024 ಕಲಂ…
ರಾಯಚೂರು ಸೆಪ್ಟಂಬರ್ 30 (ರ‍್ನಾಟಕ ವರ‍್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿನಲ್ಲಿ ವಿದ್ಯರ‍್ಥಿ ವೇತನ, ಪ್ರೋತ್ಸಾಹ ಧನ ಮತ್ತು ವಿದ್ಯರ‍್ಥಿ ನಿಲಯಗಳ ಪ್ರವೇಶಾತಿ ಕರ‍್ಯಕ್ರಮದಡಿ ವಿದ್ಯರ‍್ಥಿ ವೇತನ ಮತ್ತು ಪ್ರೋತ್ಸಾಹ ಧನ ಅಭಿಯಾನ ಕರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ರಾಯಚೂರು ಸೆಪ್ಟಂಬರ್ 30: ರ‍್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರಗಳ ದ್ವೆöÊವರ‍್ಷಿಕ ಚುನಾವಣೆಗೆ ನಿಯೋಜಿತ ವಿವಿಧ ತಂಡಗಳಾದ ಪ್ಲೈಯಿಂಗ್ ಸ್ಕಾö್ಯಡ, ಸ್ಥಿರ ಕಣ್ಗಾವಲು ತಂಡ, ವಿಡಿಯೋ ವೀಕ್ಷಣ ತಂಡ ಮತ್ತು ಸೆಕ್ಟರ್ ವಲಯ ಅಧಿಕಾರಿಗಳ ತಂಡ ಸೇರಿದಂತೆ ಇತರೆ ವಿವಿಧ ತಂಡಗಳು ಜವಾಬ್ದಾರಿಯಿಂದ ರ‍್ತವ್ಯ ನರ‍್ವಹಿಸುವ…
ರಾಯಚೂರು: “ರಕ್ತದಾನ — ಜೀವದಾನ, ಮಾನವೀಯತೆಯ ಮಹಾದಾನ” ಎಂಬ ಸಂದೇಶದೊಂದಿಗೆ ಸಂಸ್ಕೃತಿ ಸೇವಾ ಟ್ರಸ್ಟ್ (ರಿ), ರಾಯಚೂರು ಹಾಗೂ ಭಾರತೀಯ ವೈದ್ಯಕೀಯ ಸಂಘ (ಐಎಂಎ) ರಾಯಚೂರು ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ರಾಯಚೂರು, ಸೆ.30: ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದರೂ ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಜಾತ್ಯಾತೀತ ಜನತಾದಳ (ಜೆಡಿಎಸ್) ಕಾರ್ಯಕರ್ತರು ಬುಧವಾರ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಸಿಂಧನೂರು, ಸೆ.30: ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಮೇಲಾಧಿಕಾರಿಗಳ ಆದೇಶ ಪಾಲಿಸದಿರುವುದು, ಕೇಂದ್ರಸ್ಥಾನದಲ್ಲಿ ಹಾಜರಿರದೆ ಸಾರ್ವಜನಿಕ ಕುಡಿಯುವ ನೀರಿನ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸದಿರುವುದು ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಸಿಂಧನೂರು ಕಚೇರಿಯ ಕಿರಿಯ…
ರಾಯಚೂರು: ಜಿಲ್ಲಾ ಮಡಿವಾಳ ಮಾಚಿದೇವ ಸಮಾಜದ ಹಾಲಿ ಕಾರ್ಯಕಾರಿ ಸಮಿತಿಯ ಅಧಿಕಾರಾವಧಿ ಇನ್ನೂ ಮುಕ್ತಾಯವಾಗದಿದ್ದರೂ ಹೊಸ ಅಧ್ಯಕ್ಷರು ಹಾಗೂ ಗೌರವಾಧ್ಯಕ್ಷರನ್ನು ನೇಮಕ ಮಾಡಿರುವ ಕ್ರಮ ನಿಯಮಬಾಹಿರವಾಗಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಜಂಬಣ್ಣ ಯಕ್ಲಾಸಪೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಿರವಾರ, ಸೆ.29: ಸಾರ್ವಜನಿಕ ಗಣೇಶೋತ್ಸವಗಳು ಧಾರ್ಮಿಕ ಆಚರಣೆಗೆ ಮಾತ್ರ ಸೀಮಿತವಾಗದೆ, ಹಿಂದೂ ಸಮಾಜವನ್ನು ಸಂಘಟಿಸುವ ಹಾಗೂ ಪರಸ್ಪರ ಒಗ್ಗಟ್ಟು ಬೆಳೆಸುವ ವೇದಿಕೆಗಳಾಗಿವೆ. ಹಿಂದೂಗಳು ಸಂಘಟಿತರಾಗಿದ್ದರೆ ಅವರ ಏಕತೆಯನ್ನು ಯಾರಿಂದಲೂ ಮುರಿಯಲು ಸಾಧ್ಯವಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೆ.29ರಂದು ಗರ್ಭಕಂಠದ ಕ್ಯಾನ್ಸರ್ ಕುರಿತು ಅರಿವು, ಮಹಿಳಾ ಆರೋಗ್ಯ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರದ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ರಾಯಚೂರು: ನಗರದ ಶ್ರೀ ರಾಘವೇಂದ್ರ ಸ್ವಾಮಿ ಶ್ರೀಮಠದ ಆವರಣದಲ್ಲಿ ಅ.3 ಮತ್ತು 4ರಂದು ನಡೆಯಲಿರುವ ‘ಗೋವಿಂದ ಗಾನ’ ಕಾರ್ಯಕ್ರಮದ ಪೂರ್ವಭಾವಿಯಾಗಿ ಸುಮಾರು 500 ಮಹಿಳೆಯರಿಗೆ ಸಾಮೂಹಿಕ ಗಾಯನದ ತರಬೇತಿ ಹಾಗೂ ಅಭ್ಯಾಸ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಮಟ್ಟದ ದಾಸವಾಣಿ ಗಾಯಕ ರಾಯಚೂರು ಶೇಷಗಿರಿ ದಾಸ ಅವರ ನೇತೃತ್ವದಲ್ಲಿ…
ಲಿಂಗಸಗೂರು: ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಸಾನ್ವಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ನಾಲ್ವರು…
ದೇವದುರ್ಗ, ಸೆ.29: ಸಚಿವ ಸತೀಶ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ತೇಜೋವಧೆ ಮಾಡುವ ಉದ್ದೇಶದಿಂದ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ. ಇದು ರಾಜಕೀಯ ಪ್ರೇರಿತ ಕ್ರಮವಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಶ್ರೀದೇವಿ ಆರ್.
ಸಿಂಧನೂರು: ಸಿಂಧನೂರು ತಾಲ್ಲೂಕಿನ ಸಿ.ಎಸ್.ಎಫ್ ನಂ.1 ಕ್ಯಾಂಪ್ ಹಾಗೂ ತುರಕಟ್ಟಿ ಕ್ಯಾಂಪ್ (ಸೂರ್ಯರೆಡ್ಡಿ ಕ್ಯಾಂಪ್) ಮಧ್ಯಭಾಗದಲ್ಲಿ ನಿರ್ಮಾಣವಾಗುತ್ತಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಕಟ್ಟಡ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪ ಕೇಳಿಬಂದಿದೆ.
ರಾಯಚೂರು ಸೆ. 29 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಅಕ್ಟೋಬರ್ 01 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1 ಗಂಟೆವರೆಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಕೋರಲಾಗಿದೆ.