ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 101,734 ಇಂದಿನ ಓದುಗರು: 949 🟢 ಈಗ ಆನ್‌ಲೈನ್: 16
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 922 ಸುದ್ದಿಗಳಲ್ಲಿ 601–625 ಸುದ್ದಿಗಳು

ರಾಯಚೂರು ರಾಯಚೂರು

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದಲ್ಲಿ ಲಿಖಿತವಾಗಿ, ದೂರವಾಣಿ ಮುಖಾಂತರ ದೂರುಗಳನ್ನು ನೀಡಲು ದೂರ ಮೇಲ್ವಿಚಾರಣಾ ಕೋಶ ಪ್ರಾರಂಭ: ಜಹೀರಾ ನಸ್ಸೀಂ

ರಾಯಚೂರು ಸೆ. 29 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗವು ದಿನಾಂಕ:22.09.2026 ರಂದು ಕರ್ನಾಟಕ ವಿಧಾನ ಪರಿಷತ್ತ ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆಯನ್ನು ಘೋಷಿಸಿ ವೇಳಾಪಟ್ಟಿಯನ್ನು ಹೊರಡಿಸಿರುತ್ತದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಅರ್ಥಪೂರ್ಣವಾಗಿ ದಸರಾ ಆಚರಣೆಗೆ ಅಗತ್ಯ ಕ್ರಮಕ್ಕೆ ಆಯುಕ್ತ ಜುಬಿನ್ ಸೂಚನೆ

ರಾಯಚೂರು ಸೆ. 29 (ಕರ್ನಾಟಕ ವಾರ್ತೆ): ರಾಯಚೂರು ನಗರದಲ್ಲಿ ಅಕ್ಟೋಬರ್ 20ರ ಬೆಳಿಗ್ಗೆ 12.30ಕ್ಕೆ ನಾಡ ಹಬ್ಬ ದಸರಾ ಆಚರಣೆ ಹಿನ್ನೆಲೆಯಲ್ಲಿ ಇಂದು ಮಹಾನಗರ ಪಾಲಿಕೆಯ ಜೋನಲ್ 01ರ ಕಚೇರಿಯ ಸಭಾಂಗಣದಲ್ಲಿ ಪಾಲಿಕೆಯ ಆಯುಕ್ತರ ಅಧ್ಯಕ್ಷತೆ ಪೂರ್ವಭಾವಿ ಸಭೆ ಯಶಸ್ವಿಯಾಗಿ ಜರುಗಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಚಿಕ್ಕಹೆಸರೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ 8ನೇ ದಿನಕ್ಕೆ

ಲಿಂಗಸುಗೂರು: ತಾಲೂಕಿನ ಚಿಕ್ಕಹೆಸರೂರು ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಎನ್‌ಎಚ್-748ಎ ಭಾರತಮಾಲಾ ಯೋಜನೆಗಾಗಿ ಭೂಮಿ ಕಳೆದುಕೊಂಡ ಬಡ ದಲಿತ ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ದಲಿತ ಸಂರಕ್ಷಣಾ ಸಮಿತಿ ಜಿಲ್ಲಾ ಹಾಗೂ ತಾಲೂಕು ಘಟಕಗಳ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 8ನೇ ದಿನಕ್ಕೆ ಕಾಲಿಟ್ಟಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಹುಟ್ಟುಹಬ್ಬದ ಸಂಭ್ರಮಕ್ಕೆ ಸಮಾಜ ಸೇವೆಯ ಸ್ಪರ್ಶ ನೀಡಿದ ಭಾಗ್ಯಶ್ರೀ

ಮಾನ್ವಿ: ಸಮಾಜ ಸೇವೆಗೆ ವಯಸ್ಸು ಅಡ್ಡಿಯಲ್ಲ ಎಂಬುದನ್ನು ತಮ್ಮ ಕಾರ್ಯಗಳ ಮೂಲಕ ತೋರಿಸುತ್ತಿರುವ ತಾಲೂಕಿನ ಜೀನೂರು ಗ್ರಾಮದ ಯುವ ವಿದ್ಯಾರ್ಥಿನಿ ಭಾಗ್ಯಶ್ರೀ, ಅನಾಥರು, ವೃದ್ಧರು, ದಿವ್ಯಾಂಗರು ಹಾಗೂ ಸಂಕಷ್ಟದಲ್ಲಿರುವ ನಿರ್ಗತಿಕರಿಗೆ ಕೈಲಾದ ನೆರವು ನೀಡುವ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುತ್ತಿದ್ದಾರೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಎಸ್‌ಐಆರ್ ವಿರೋಧಿಸಿ ಜನರನ್ನು ದಾರಿ ತಪ್ಪಿಸುವುದು ಸರಿಯಲ್ಲ: ಕೆ. ವಿರೂಪಾಕ್ಷಪ್ಪ

ಸಿಂಧನೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಕಾಂಗ್ರೆಸ್ ವಿರೋಧಿಸುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ಜನರಲ್ಲಿ ಗೊಂದಲ ಮೂಡಿಸುವ ಬದಲು ಚುನಾವಣಾ ಪ್ರಕ್ರಿಯೆಯ ಬಗ್ಗೆ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದು ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಪೌಷ್ಟಿಕ ಆಹಾರ ಸೇವನೆಯಿಂದ ತಾಯಿ-ಮಗುವಿನ ಆರೋಗ್ಯ ರಕ್ಷಣೆ: ಅರವಿಂದ ಕುಮಾರ

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಯಚೂರು ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಗಾಣದಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ನಡುಗಡ್ಡೆ ಮಲಕಾಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ‘ನಿಮ್ಮ ಆರೋಗ್ಯ ಊಟದ ತಟ್ಟೆಯಲ್ಲಿ’ ಎಂಬ ಸಂದೇಶದೊಂದಿಗೆ ಗ್ರಾಮ ಆರೋಗ್ಯ…

ಮುಂದೆ ಓದಿ →
ರಾಯಚೂರು ರಾಯಚೂರು

ಜೇಸ್ಕಾಂ ನಗದು ರಸೀದಿ ಪುಸ್ತಕ ದುರ್ಬಳಕೆ ಆರೋಪ: ಸಮಗ್ರ ತನಿಖೆಗೆ ಆಗ್ರಹ

ರಾಯಚೂರು: ಮಾನ್ವಿ ಉಪವಿಭಾಗದಲ್ಲಿ ಜೇಸ್ಕಾಂನ ನಗದು ರಸೀದಿ ಪುಸ್ತಕವನ್ನು ದುರ್ಬಳಕೆ ಮಾಡಿಕೊಂಡು ನಿಗಮಕ್ಕೆ ₹2 ಲಕ್ಷಕ್ಕೂ ಅಧಿಕ ಆರ್ಥಿಕ ನಷ್ಟ ಉಂಟುಮಾಡಲಾಗಿದೆ ಎಂಬ ಆರೋಪದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರೆಂದು ಕಂಡುಬರುವ ನೌಕರರು ಮತ್ತು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು…

ಮುಂದೆ ಓದಿ →
ರಾಯಚೂರು ರಾಯಚೂರು

ವಿದ್ಯಾರ್ಥಿಗಳ ಉದ್ಯೋಗ ಕೌಶಲ್ಯ ವೃದ್ಧಿಗೆ ಮೂರು ದಿನಗಳ ತರಬೇತಿ

ರಾಯಚೂರು: ತಾರಾನಾಥ ಶಿಕ್ಷಣ ಸಂಸ್ಥೆಯ ಲಕ್ಷ್ಮೀ ವೆಂಕಟೇಶ ದೇಸಾಯಿ ಕಾಲೇಜಿನ ಗಣಕಯಂತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ವಿದ್ಯಾರ್ಥಿಗಳ ಜ್ಞಾನ ಮತ್ತು ಕೌಶಲ್ಯ ವೃದ್ಧಿಸುವ ಉದ್ದೇಶದಿಂದ ಐಬಿಎಂ ಸ್ಕಿಲ್ಸ್‌ಬಿಲ್ಡ್ ನೇತೃತ್ವದಲ್ಲಿ ಮೂರು ದಿನಗಳ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಸೆ.29ರಿಂದ ಅ.1ರವರೆಗೆ ಆಯೋಜಿಸಲಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಬಾಗೂರ ಗ್ರಾಮ ರೈತ ಸಂಘ-ರೈತ ಸೇನೆಗೆ ನೂತನ ಪದಾಧಿಕಾರಿಗಳ ನೇಮಕ

ದೇವದುರ್ಗ: ರೈತರ ಹಿತಾಸಕ್ತಿ, ಅಭಿವೃದ್ಧಿ ಹಾಗೂ ಸ್ವಾಭಿಮಾನಿ ರೈತರ ಹಕ್ಕುಗಳ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ಬಾಗೂರ ಗ್ರಾಮ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಿಸಿ: ಡಾ. ಅಂಬಿಕಾ

ಮಾನ್ವಿ: ಪಟ್ಟಣದ ಶ್ರೀ ವೆಂಕಟೇಶ್ವರ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ‘ನಶಾಮುಕ್ತ ಭಾರತ ಅಭಿಯಾನ’ ಅಂಗವಾಗಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ನಿಲೋಗಲ್ ಕ್ರಾಸ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹ

ಹಟ್ಟಿ ಚಿನ್ನದ ಗಣಿ: ಸಮೀಪದ ಗೆಜ್ಜಲಗಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಲೋಗಲ್ ಕ್ರಾಸ್‌ನಲ್ಲಿ ದೀರ್ಘಕಾಲದಿಂದ ಮುಂದುವರಿದಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಹಾಗೂ ಚಿಕ್ಕನಗನೂರಿನ ಕರ ವಸೂಲಿಗಾರರನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಂಘಟನೆ (ಎಐಕೆಎಸ್) ಪದಾಧಿಕಾರಿಗಳು ತಾಲೂಕು…

ಮುಂದೆ ಓದಿ →
ರಾಯಚೂರು ರಾಯಚೂರು

ಪ್ರವಾಸಿ ತಾಣಗಳ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ಡಿಸಿ ಪೂವಿತಾ ಎಸ್.

ರಾಯಚೂರು, ಸೆ.29: ಜಿಲ್ಲೆಯ ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ಮಹತ್ವದ ಪ್ರವಾಸಿ ತಾಣಗಳನ್ನು ಸಂರಕ್ಷಿಸಿ, ಅವುಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಮರುಸ್ಥಾಪನೆಗೆ ಆಗ್ರಹ

ರಾಯಚೂರು, ಸೆ.29: ಕಲಬುರಗಿಯಲ್ಲಿ ತೆರವು ಮಾಡಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಅದೇ ಸ್ಥಳದಲ್ಲಿ ಮರುಸ್ಥಾಪಿಸಲು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕುರುಬ ಸಮಾಜದ ಮುಖಂಡ ಕುರಿ ಅಂಜನಪ್ಪ ಒತ್ತಾಯಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಗ್ರಂಥಪಾಲಕರ ನೇಮಕಕ್ಕೆ ಆಗ್ರಹಿಸಿ ಅ.5ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ

ರಾಯಚೂರು: ಸರ್ಕಾರಿ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಶಾಲೆಗಳು, ಪ್ರೌಢಶಾಲೆಗಳು, ವಸತಿ ಶಾಲೆಗಳು, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಗ್ರಂಥಪಾಲಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ವತಿಯಿಂದ ಅಕ್ಟೋಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಒಂದು…

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಪಬ್ಲಿಕ್ ಶಾಲೆಯಲ್ಲಿ ಭಗತ್ ಸಿಂಗ್ ಜಯಂತಿ ಆಚರಣೆ

ಮಾನ್ವಿ: ನಗರದ ಚೀಕಲಪರ್ವಿ ರಸ್ತೆಯಲ್ಲಿರುವ ಮಾನ್ವಿ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಶಹೀದ ಭಗತ್ ಸಿಂಗ್ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ: ಇಬ್ಬರು ಪಿಡಿಒ ಅಮಾನತು

ರಾಯಚೂರು, ಸೆ.28: ತೆರಿಗೆ ವಸೂಲಾತಿಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದೆ ಕರ್ತವ್ಯ ಲೋಪ ಎಸಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ದೇವದುರ್ಗ ತಾಲೂಕಿನ ಶಾವಂತಗೇರಾ ಹಾಗೂ ಮಾನ್ವಿ ತಾಲೂಕಿನ ಸಾದಾಪುರ ಗ್ರಾಮ ಪಂಚಾಯಿತಿಗಳ ಇಬ್ಬರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಪ್ರಜಾಸೌಧ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ: ಎನ್.ಎಸ್. ಬೋಸರಾಜು

ಮಾನ್ವಿ: ಪಟ್ಟಣದ ರಾಯಚೂರು–ಸಿಂಧನೂರು ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಲೂಕು ಆಡಳಿತ ಭವನ ‘ಪ್ರಜಾಸೌಧ’ ಕಾಮಗಾರಿಯನ್ನು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಪರಿಶೀಲಿಸಿ, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ಮುಂದೆ ಓದಿ →
ಅರಕೇರಾ ರಾಯಚೂರು ಅರಕೇರಾ

ಗಾಣಧಾಳವನ್ನು ಹೋಬಳಿ ಕೇಂದ್ರವನ್ನಾಗಿ ಘೋಷಿಸಿ: ಗ್ರಾಮಸ್ಥರ ಆಗ್ರಹ

ಅರಕೇರಾ, ಸೆ.28: ಗಾಣಧಾಳ ಗ್ರಾಮ ಪಂಚಾಯಿತಿಯನ್ನು ಅರಕೇರಾ ತಾಲ್ಲೂಕಿನಲ್ಲಿಯೇ ಮುಂದುವರಿಸುವುದರ ಜೊತೆಗೆ ಗಾಣಧಾಳ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ಘೋಷಿಸಿ, ನಾಡ ಕಚೇರಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಜಾಲಹಳ್ಳಿಯಲ್ಲಿ ಹತ್ತಿ-ಭತ್ತ ಖರೀದಿ ಕೇಂದ್ರ ಆರಂಭಕ್ಕೆ ರೈತ ಸಂಘ ಆಗ್ರಹ

ದೇವದುರ್ಗ: ತಾಲೂಕಿನ ಜಾಲಹಳ್ಳಿಯಲ್ಲಿ ಸರ್ಕಾರದ ವತಿಯಿಂದ ಹತ್ತಿ ಹಾಗೂ ಭತ್ತ ಖರೀದಿ ಕೇಂದ್ರಗಳನ್ನು ಕೂಡಲೇ ಆರಂಭಿಸಬೇಕು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಹಟ್ಟಿಯಲ್ಲಿ ಹುತಾತ್ಮ ಭಗತ್ ಸಿಂಗ್ ಜಯಂತಿ ಆಚರಣೆ

ಹಟ್ಟಿ ಚಿನ್ನದ ಗಣಿ: ಪಟ್ಟಣದ ದಿ. ಕಾಮ್ರೇಡ್ ಅರವಿಂದ್ ಮಳೆಬನ್ನೂರು ಗ್ರಂಥಾಲಯದಲ್ಲಿ ಮಹಾನ್ ಕ್ರಾಂತಿಕಾರಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಭಗತ್ ಸಿಂಗ್ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಅ. 4ರಂದು ಬರ ಅಧ್ಯಯನಕ್ಕಾಗಿ ಜಿಲ್ಲೆಗೆ ಕೇಂದ್ರ ತಂಡ ಭೇಟಿ ನೀಡುವ ಸಾಧ್ಯತೆ: ಪೂವಿತಾ ಎಸ್.

ರಾಯಚೂರು ಸೆಪ್ಟಂಬರ್ 28 (ಕರ್ನಾಟಕ ವಾರ್ತೆ): ಅಕ್ಟೋಬರ್ ಮೊದಲ ವಾರದಲ್ಲಿ ಬರ ಅಧ್ಯಯನಕ್ಕಾಗಿ ಕೇಂದ್ರ ತಂಡ ರಾಜ್ಯಕ್ಕೆ ಆಗಮಿಸಲಿದ್ದು, ಮೊದಲನೇಯ ಹಂತದಲ್ಲಿ ಬರ ಪೀಡಿತ ಎಂದು ಘೋಷಣೆಯಾದ ರಾಯಚೂರು ಜಿಲ್ಲೆಯ ತಾಲೂಕುಗಳಿಗೆ ಅಕ್ಟೋಬರ್ 4ರಂದು ಭೇಟಿ ನೀಡುವ ಸಾಧ್ಯತೆ ಎಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್.

ಮುಂದೆ ಓದಿ →
ರಾಯಚೂರು ರಾಯಚೂರು

ಸೆ. 30ರಂದು ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

ರಾಯಚೂರು ಸೆಪ್ಟಂಬರ್ 28 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2026-27ನೇ ಸಾಲಿನ ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟಂಬರ್ 30ರಂದು ವಿವಿಧ ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಕ್ರೀಡಾಪಟ್ಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಮೂರು ಓಟಗಳಲ್ಲಿ ಪ್ರಥಮ ಸ್ಥಾನ: ರಾಜ್ಯಮಟ್ಟಕ್ಕೆ ವೆಂಕಟೇಶ್ ಆಯ್ಕೆ

ಹಟ್ಟಿ ಚಿನ್ನದ ಗಣಿ: ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ವೆಂಕಟೇಶ್ ತಂದೆ ಲಿಂಗರಾಜ ಅವರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮೂರು ವೈಯಕ್ತಿಕ ಓಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

‘ಭಾರತ್ ಕೋ ಜಾನೋ’ ರಸಪ್ರಶ್ನೆಯಲ್ಲಿ ಬಸವಶ್ರೀ ಶಾಲೆಗೆ ದ್ವಿತೀಯ ಸ್ಥಾನ

ರಾಯಚೂರು: ಭಾರತ ವಿಕಾಸ ಪರಿಷತ್ತು ರಾಯಚೂರು ಶಾಖೆ ವತಿಯಿಂದ ನಗರದ ಬಿಆರ್‌ಬಿ ಕಾಲೇಜಿನಲ್ಲಿ ಸೆ.27ರಂದು ಆಯೋಜಿಸಿದ್ದ ಜಿಲ್ಲಾ ಮಟ್ಟದ ‘ಭಾರತ್ ಕೋ ಜಾನೋ–2026’ ರಸಪ್ರಶ್ನೆ ಸ್ಪರ್ಧೆಯ ಜೂನಿಯರ್ ವಿಭಾಗದಲ್ಲಿ ಬಸವಶ್ರೀ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

ಮುಂದೆ ಓದಿ →