ಮಾನ್ವಿ, ಅ.8: ತಾಲೂಕಿನ ಕಪಗಲ್ ಗ್ರಾಮದಲ್ಲಿ ಧಾರ್ಮಿಕ ಪರಂಪರೆಯ ಪ್ರತೀಕವಾಗಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಶ್ರೀ ಶಾಂಭವಿ ಪುರಾಣ ಪ್ರವಚನ ಕಾರ್ಯಕ್ರಮವು ಈ ಬಾರಿ 127ನೇ ವರ್ಷಕ್ಕೆ ಕಾಲಿಟ್ಟಿದ್ದು, ಅಕ್ಟೋಬರ್ 11ರಿಂದ 19ರವರೆಗೆ ಒಂಬತ್ತು ದಿನಗಳ ಕಾಲ ಭಕ್ತಿಭಾವ ಹಾಗೂ ಸಡಗರದಿಂದ ಜರುಗಲಿದೆ.
ಮಾನ್ವಿ, ಅ.8: ಕಕ್ಷಿದಾರರಿಗೆ ನ್ಯಾಯ ಒದಗಿಸುವ ಜವಾಬ್ದಾರಿಯೊಂದಿಗೆ ನಿರಂತರವಾಗಿ ವೃತ್ತಿಪರ ಚಟುವಟಿಕೆಗಳಲ್ಲಿ ತೊಡಗಿರುವ ವಕೀಲರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು.
ಮಾನ್ವಿ: ತಾಲೂಕಿನ ಕರೇಗುಡ್ಡ ಗ್ರಾಮದ ಶ್ರೀ ಮಹಾಂತೇಶ್ವರ ಮಠದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಅ.11ರಿಂದ ಶ್ರೀದೇವಿ ಪುರಾಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಶ್ರೀ ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಮಾನ್ವಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕುರಿತು ಉಂಟಾಗಿರುವ ಗಂಭೀರ ಅನುಮಾನಗಳು ಮತ್ತು ಆಕ್ಷೇಪಗಳ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹಿಸಿದೆ.
ಮಾನ್ವಿ: ದೇಶದ ವೈವಿಧ್ಯತೆಯನ್ನು ಗೌರವಿಸುವುದರೊಂದಿಗೆ ಏಕತೆ ಮತ್ತು ಸೌಹಾರ್ದದ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸುವುದು ಇಂದಿನ ಅಗತ್ಯವಾಗಿದೆ ಎಂದು ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜೆ.ಎಲ್. ಈರಣ್ಣ ಹೇಳಿದರು.
ಮಾನ್ವಿ: ಮಕ್ಕಳಿಗೆ ಪಠ್ಯ ಶಿಕ್ಷಣದ ಜೊತೆಗೆ ಹಣದ ಮಹತ್ವ, ಉಳಿತಾಯದ ಅಭ್ಯಾಸ, ನಿಯಂತ್ರಿತ ಖರ್ಚು, ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ವಿಮೆಯ ಕುರಿತು ಪ್ರಾಯೋಗಿಕ ಜ್ಞಾನ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಾನ್ವಿ ಪಟ್ಟಣ ಸಹಕಾರಿ ಬ್ಯಾಂಕಿನ ಸಿಇಒ ಹಾಗೂ ಲಯನ್ಸ್ ಕ್ಲಬ್ನ ನಾಗರಾಜ್ ಹೇಳಿದರು.
ಮಾನ್ವಿ: ಬೆಂಗಳೂರಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ಗ್ಲೋಬಲ್ ಆಕ್ಸಿಲರೇಟರ್ ಮಿಷನ್ ಸಮಿಟ್ (ಜಿ.ಎ.ವಿ.ಎಸ್.) ಕುರಿತು ಜಾಗೃತಿ ಮೂಡಿಸುವ ಹಾಗೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಪಟ್ಟಣದಲ್ಲಿ ಸಂಕಲ್ಪ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಯಿತು.
ಮಾನ್ವಿ: ಜೋಳ ಖರೀದಿ ಹಣ ಪಾವತಿ, ಕಾಲುವೆಯ ಕೊನೆಯ ಭಾಗದ ರೈತರಿಗೆ ಸಮರ್ಪಕ ನೀರು, ಬರ ಪರಿಹಾರ, ಕೃಷಿ ಪಂಪ್ಸೆಟ್ಗಳಿಗೆ ನಿರಂತರ ವಿದ್ಯುತ್ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ.7ರಂದು ಬೆಳಿಗ್ಗೆ 10 ಗಂಟೆಯಿಂದ ಪೋತ್ನಾಳ್ ಹೆದ್ದಾರಿ ಬಂದ್ ಮಾಡಿ ರಸ್ತೆ ತಡೆ ಹಾಗೂ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು…
ಮಾನ್ವಿ: ಮಹಿಳೆಯರು ತಮ್ಮ ಕೌಶಲ್ಯ ಮತ್ತು ಸಾಮರ್ಥ್ಯದ ಮೇಲೆ ವಿಶ್ವಾಸವಿಟ್ಟು ಆರ್ಥಿಕವಾಗಿ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು ಎಂದು ಪೋತ್ನಾಳದ ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಸತೀಶ್ ಫೆರ್ನಾಂಡಿಸ್ ಹೇಳಿದರು.
ಮಾನ್ವಿ: ಪಟ್ಟಣದ ಮುಕ್ತಾಗುಚ್ಚ ಬೃಹನ್ಮಠ ಕಲ್ಮಠದ 51ನೇ ವರ್ಷದ ದಸರಾ ಮಹೋತ್ಸವದ ಅಂಗವಾಗಿ ಅ.11ರಿಂದ 23ರವರೆಗೆ ಶ್ರೀಮಠದ ಆವರಣದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಮಾನ್ವಿ: ಪಟ್ಟಣದ ಜನತೆಗೆ ಸಮರ್ಪಕ ಕುಡಿಯುವ ನೀರು ಪೂರೈಸಲು ಅಗತ್ಯ ಅನುದಾನ ಒದಗಿಸಿದ್ದರೂ ಸಮಸ್ಯೆ ಮುಂದುವರಿದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ಮಾನ್ವಿ: ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ವಿದ್ಯುತ್ ಮೋಟಾರ್ ಚಾಲನೆ ಮಾಡಲು ತೆರಳಿದ್ದ ವೇಳೆ ವಿದ್ಯುತ್ ಕಂಬದ ಗೈ ವೈರ್ಗೆ ವಿದ್ಯುತ್ ಪ್ರವಹಿಸಿ ಮೃತಪಟ್ಟ ರೈತನ ಕುಟುಂಬಕ್ಕೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹಾಗೂ ಶಾಸಕ ಹಂಪಯ್ಯ ನಾಯಕ ಭೇಟಿ ನೀಡಿ ಸಾಂತ್ವನ ಹೇಳಿದರು.
ಮಾನ್ವಿ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ ವಿಸ್ತರಣಾ ನಿರ್ದೇಶನಾಲಯವು ಕೃಷಿ ತಂತ್ರಜ್ಞಾನಗಳನ್ನು ರೈತರ ಹೊಲಗಳಿಗೆ ತಲುಪಿಸುವುದರ ಜೊತೆಗೆ, ರೈತರ ಆದಾಯ ಹೆಚ್ಚಿಸಿ ಕೃಷಿಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಹಲವು ವಿನೂತನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ.
ಮಾನ್ವಿ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳೆ ಉಳಿಸಿಕೊಳ್ಳಲು ಸಂಕಷ್ಟ ಎದುರಿಸುತ್ತಿರುವ ರೈತರ ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ನಿರಂತರ ವಿದ್ಯುತ್ ಪೂರೈಸಬೇಕು ಎಂದು ಮಾಜಿ ಶಾಸಕ ಗಂಗಾಧರ ನಾಯಕ ಒತ್ತಾಯಿಸಿದರು. ಅವರು ಮಾನ್ವಿ ಕ್ಷೇತ್ರದ ಮಾಜಿ ಶಾಸಕರಾಗಿರುವುದನ್ನು ಹಿಂದಿನ ವರದಿಗಳೂ ದಾಖಲಿಸಿವೆ.
ಮಾನ್ವಿ: ಪಟ್ಟಣದಲ್ಲಿ ಭಾನುವಾರ ನಡೆಯಲಿರುವ ಗ್ರಾಮಾಡಳಿತ ಅಧಿಕಾರಿಗಳ ನೇಮಕಾತಿ ಪರೀಕ್ಷೆಗೆ ತಾಲೂಕು ಆಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ 1,920 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಮಾನ್ವಿ: ಕರ್ನಾಟಕ ಆರ್ಯವೈಶ್ಯ ಮಹಾಸಭಾ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿರುವ ಜಿ.ಎ.ವಿ.ಎಸ್. ಸಮಾವೇಶದ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಹಾಗೂ ಕಾರ್ಯಕ್ರಮದ ಯಶಸ್ಸಿಗಾಗಿ ಅ.5ರಂದು ಮಾನ್ವಿಯಿಂದ ಪೋತ್ನಾಳ್ವರೆಗೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ನಗರೇಶ್ವರ ಆರ್ಯವೈಶ್ಯ ಸಂಘದ ತಾಲೂಕು ಅಧ್ಯಕ್ಷ ಆರ್.
ಮಾನ್ವಿ: ನಿಯಮಿತ ಯೋಗಾಭ್ಯಾಸ ಹಾಗೂ ಸಾತ್ವಿಕ ಆಹಾರ ಪದ್ಧತಿಯಿಂದ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಯೋಗ ಗುರು ಅನ್ನದಾನಯ್ಯ ಸ್ವಾಮಿ ಹೇಳಿದರು.
ಮಾನ್ವಿ: ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 2026–27ನೇ ಸಾಲಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಾನ್ವಿ ಪಟ್ಟಣದ ಲೋಯೋಲ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ತೋರಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಕರೇಗುಡ್ಡ, ಅ.2: ಶ್ರೀ ಮಹಾಂತೇಶ್ವರ ಸಂಸ್ಥಾನ ಮಠದ ಶ್ರೀ ಆದಿಶಕ್ತಿ ಜಗನ್ಮಾತೆ ಅಂಬಾದೇವಿಯ ಸನ್ನಿಧಿಯಲ್ಲಿ ಅನಂತ ಹುಣ್ಣಿಮೆಯ ನಂತರದ ಶುಕ್ರವಾರದಂದು ಸಂಪ್ರದಾಯಬದ್ಧವಾಗಿ ನಡೆಯುವ ವಿಶೇಷ ನೈವೇದ್ಯ ಸಮರ್ಪಣಾ ಮಹೋತ್ಸವವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸಲಾಯಿತು.
ಮಾನ್ವಿ: ಮಕ್ಕಳ ಭವಿಷ್ಯಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಗಳನ್ನು ವೃದ್ಧಾಪ್ಯದಲ್ಲಿ ಆರೈಕೆ ಮಾಡುವ ಜವಾಬ್ದಾರಿಯಿಂದ ಕೆಲವರು ದೂರ ಸರಿಯುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ.
ಮಾನ್ವಿ: ಮಳೆ ಕೊರತೆಯಿಂದ ಎದುರಾಗಿರುವ ಸಂಕಷ್ಟ ನಿವಾರಣೆಯಾಗಿ ನಾಡಿನಲ್ಲಿ ಉತ್ತಮ ಮಳೆಯಾಗಿ ಬೆಳೆ ಸಮೃದ್ಧಿಯಾಗಲಿ ಎಂಬ ಆಶಯದೊಂದಿಗೆ ಪಟ್ಟಣದಲ್ಲಿ ಸರ್ವಧರ್ಮಗಳ ಧರ್ಮಗುರುಗಳ ನೇತೃತ್ವದಲ್ಲಿ ಸಾಮೂಹಿಕ ವಿಶೇಷ ಪ್ರಾರ್ಥನೆ ನಡೆಯಿತು.
ಮಾನ್ವಿ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಹತ್ತಿಕ್ಕುವ ಉದ್ದೇಶದಿಂದ ಜಾರಿ ನಿರ್ದೇಶನಾಲಯದ (ಇಡಿ) ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಾಯ್ಡು ನಾಯಕ ಆರೋಪಿಸಿದರು.
ಮಾನ್ವಿ: ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಹೋಟೆಲ್ಗಳು ಮತ್ತು ಬೀದಿ ಬದಿ ಆಹಾರ ಮಳಿಗೆಗಳನ್ನು ಪರಿಶೀಲಿಸಿ, ಕಳಪೆ ಗುಣಮಟ್ಟದ ಆಹಾರ ಪೂರೈಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡ ಸೇನೆ ಕರ್ನಾಟಕ ತಾಲೂಕು ಘಟಕದ ವತಿಯಿಂದ ಗ್ರೇಡ್-2 ತಹಶೀಲ್ದಾರ್…
ಮಾನ್ವಿ: ಸಮಾಜ ಸೇವೆಗೆ ವಯಸ್ಸು ಅಡ್ಡಿಯಲ್ಲ ಎಂಬುದನ್ನು ತಮ್ಮ ಕಾರ್ಯಗಳ ಮೂಲಕ ತೋರಿಸುತ್ತಿರುವ ತಾಲೂಕಿನ ಜೀನೂರು ಗ್ರಾಮದ ಯುವ ವಿದ್ಯಾರ್ಥಿನಿ ಭಾಗ್ಯಶ್ರೀ, ಅನಾಥರು, ವೃದ್ಧರು, ದಿವ್ಯಾಂಗರು ಹಾಗೂ ಸಂಕಷ್ಟದಲ್ಲಿರುವ ನಿರ್ಗತಿಕರಿಗೆ ಕೈಲಾದ ನೆರವು ನೀಡುವ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುತ್ತಿದ್ದಾರೆ.