ತುಂಗ ಬಿಂಬ/ರಾಯಚೂರು, ಸೆ.18: ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ಬದುಕನ್ನು ಬಂಗಾರವಾಗಿಸುವುದರ ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ಶಿಲ್ಪಿಗಳಾಗಿದ್ದಾರೆ ಎಂದು ರಾಯಚೂರಿನ ವೀರಶೈವ ಕಾಲೇಜಿನ ಕನ್ನಡ ಉಪನ್ಯಾಸಕ ಹೇಮರೆಡ್ಡಿ ಅಭಿಪ್ರಾಯಪಟ್ಟರು.
ತುಂಗ ಬಿಂಬ/ಮಾನ್ವಿ: ಗಣೇಶೋತ್ಸವವು ಕೇವಲ ಧಾರ್ಮಿಕ ಆಚರಣೆಯಾಗಿರದೆ, ಜನರಲ್ಲಿ ಒಗ್ಗಟ್ಟು ಮೂಡಿಸುವುದರ ಜೊತೆಗೆ ದೇಶದ ಸ್ವಾತಂತ್ರ್ಯ ಹೋರಾಟಕ್ಕೂ ಪ್ರೇರಣೆ ನೀಡಿದ ಐತಿಹಾಸಿಕ ಹಬ್ಬವಾಗಿದೆ ಎಂದು ಹಿರಿಯ ವಕೀಲ ಎ.ಬಿ. ಉಪ್ಪಳಮಠ ಹೇಳಿದರು.
ತುಂಗ ಬಿಂಬ/ರಾಯಚೂರು: ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಪೇದೆ ವಿಜಯಕುಮಾರ ತಂದೆ ಬಾಲನಗೌಡ ಹೊಸಮನಿ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ, ವಂಚನೆ ಹಾಗೂ ನಂಬಿಕೆ ದ್ರೋಹಕ್ಕೆ ಸಂಬಂಧಿಸಿದ ಹಲವು ಆರೋಪಗಳು ಕೇಳಿಬಂದಿದ್ದು, ಇವುಗಳ ಕುರಿತು ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ನಡೆಸಿ…
ತುಂಗ ಬಿಂಬ/ರಾಯಚೂರು: ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ ಅವರು ಮಲದಕಲ್ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲು ಆಗಮಿಸಿದ್ದ ವೇಳೆ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.
ತುಂಗಾ ಬಿಂಬ/ರಾಯಚೂರು: ಪ್ರಸಕ್ತ ಮುಂಗಾರು ಹಂಗಾಮಿನ ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಯಚೂರು ಜಿಲ್ಲೆಯ ಮಾನ್ವಿ, ಸಿಂಧನೂರು ಹಾಗೂ ಸಿರವಾರ ತಾಲೂಕುಗಳನ್ನು ‘ತೀವ್ರ ಬರಪೀಡಿತ’ ಪ್ರದೇಶಗಳೆಂದು ಘೋಷಿಸಿದೆ.
ತುಂಗಾ ಬಿಂಬ/ರಾಯಚೂರು: ಡಾ. ನರಸಿಂಹಲು ನಂದಿನಿ ಸ್ಮಾರಕ ಶಿಕ್ಷಣ ಸಂಸ್ಥೆಯಿಂದ ಸಂಚಾಲಿತ ನಂದಿನಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಶಿಕ್ಷಣ ಮಹಾವಿದ್ಯಾಲಯಗಳ ಸಹಯೋಗದಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವವನ್ನು ನಂದಿನಿ ಶಿಕ್ಷಣ ಮಹಾವಿದ್ಯಾಲಯದ ಮೈದಾನದಲ್ಲಿ ಆಚರಿಸಲಾಯಿತು.
ದೇವದುರ್ಗ: ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ರಾಯಚೂರು, ಸೆ.17: ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹17 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ರಾಯಚೂರು, ಸೆ.17: ಲಿಂಗಸುಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹1.05 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ತುಂಗಾ ಬಿಂಬ/ರಾಯಚೂರು: ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಮ್ಮ ಭೂಮಿ-ನಮ್ಮ ನೀರು-ನಮ್ಮ ಶಕ್ತಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಅವರು ನಗದು ಬಹುಮಾನದ ಜೊತೆಗೆ…
ತುಂಗಾ ಬಿಂಬ/ರಾಯಚೂರು: ವಿಶ್ವಕರ್ಮರ ಆದರ್ಶವನ್ನು ಅಳವಡಿಸಿಕೊಂಡು, ಮಾನವೀಯ ಮೌಲ್ಯಗಳೊಂದಿಗೆ ಬದುಕಿದರೆ ಮಾತ್ರ ಜಯಂತಿಗಳ ಆಚರಣೆಗೆ ಅರ್ಥ ಬರುತ್ತದೆ ಎಂದು ಉಪನ್ಯಾಸಕರಾದ ಡಾ. ವಿಶ್ವನಾಥ ಎಸ್.
ತುಂಗಾ ಬಿಂಬ/ರಾಯಚೂರು: ರಾಯಚೂರು ಮಹಾನಗರ ಪಾಲಿಕೆಯ ಹಳೆ ಕಟ್ಟಡದಲ್ಲಿ ಪಾಲಿಕೆ ದಾಖಲೆ ಡಿಜಿಟಲೀಕರಣ ಕೊಠಡಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಅವರು ಸೆಪ್ಟಂಬರ್ 17ರ ಗುರುವಾರ ದಂದು ಚಾಲನೆ ನೀಡಿದರು.
ತುಂಗಾ ಬಿಂಬ/ರಾಯಚೂರು: ತ್ಯಾಗ, ಬಲಿದಾನ ಹಾಗೂ ದೀರ್ಘ ಹೋರಾಟದ ಫಲವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ದೊರೆತಿದ್ದು, ಈ ಭಾಗದ ಇತಿಹಾಸವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ತುಂಗಾ ಬಿಂಬ/ರಾಯಚೂರು: ಜನರ ಸಂಕಷ್ಟ, ಸಮಸ್ಯೆಗಳು ಮತ್ತು ಆಶೋತ್ತರಗಳನ್ನು ಪ್ರಾಮಾಣಿಕವಾಗಿ ಪ್ರತಿಬಿಂಬಿಸಿ, ಅವುಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಸಮಾಜಮುಖಿ ಪತ್ರಿಕೋದ್ಯಮ ನಡೆಸಬೇಕು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ತುಂಗಾ ಬಿಂಬ/ರಾಯಚೂರು: ಜಿಲ್ಲೆಯ ರೈತರಿಂದ ಜೋಳ ಖರೀದಿಸಿದ ಮೊತ್ತದಲ್ಲಿ ಈಗಾಗಲೇ ಸುಮಾರು ₹350 ಕೋಟಿ ಪಾವತಿಸಲಾಗಿದ್ದು, ಮೇ 31ರಿಂದ ಖರೀದಿಸಿರುವ ಜೋಳಕ್ಕೆ ಸಂಬಂಧಿಸಿದಂತೆ ಇನ್ನೂ ₹109 ಕೋಟಿ ರೈತರಿಗೆ ನೀಡಬೇಕಾಗಿದೆ.
ತುಂಗಾ ಬಿಂಬ/ರಾಯಚೂರು: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ರಾಯಚೂರು ಮಹಾನಗರ ಪಾಲಿಕೆ ವತಿಯಿಂದ ವಲಯ-1 ಮತ್ತು ವಲಯ-2 ಕಚೇರಿಗಳಲ್ಲಿ ಧ್ವಜಾರೋಹಣ, ಪುಷ್ಪ ನಮನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ತುಂಗಾ ಬಿಂಬ/ಜಾಲಹಳ್ಳಿ: ಸಮೀಪದ ಹೊಸೂರು ಸಿದ್ದಾಪೂರ ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ಕಲ್ಯಾಣ ಕರ್ನಾಟಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಂಗಮ್ಮ ಕಡೆಮನಿ ಅವರು ಧ್ವಜಾರೋಹಣ ನೆರವೇರಿಸಿದರು.
ತುಂಗಾ ಬಿಂಬ/ಸಿಂಧನೂರು: ತಾಲೂಕಿನ ತುರುವಿಹಾಳ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ತುಂಗಾ ಬಿಂಬ/ದೇವದುರ್ಗ, ಸೆ.17: ತಾಲೂಕಿನ ಚಿಕ್ಕಹೊನ್ನಕುಣಿಯಲ್ಲಿರುವ ಕೆಬಿಜೆಎನ್ಎಲ್ ವಿಭಾಗ ಸಂಖ್ಯೆ–6 ಹಾಗೂ ಎರಡು ಉಪವಿಭಾಗಗಳ ಕಚೇರಿಗಳನ್ನು ಬೇರೆಡೆಗೆ ಸ್ಥಳಾಂತರಿಸಬಾರದು ಎಂದು ಒತ್ತಾಯಿಸಿ ಸೆ.28ರಂದು ಚಿಕ್ಕಹೊನ್ನಕುಣಿಯಲ್ಲಿ ಬೃಹತ್ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಶಾಸಕಿ ಕರೆಮ್ಮ ಜಿ.