ಆರೋಗ್ಯಕರ ದೇಹದಲ್ಲಿ ಆರೋಗ್ಯಕರ ಮನಸ್ಸು ಕ್ರೀಡೆ ಎನ್ನುವುದು ಕೇವಲ ಗೆಲುವು ಮತ್ತು ಸೋಲಿನ ವಿಚಾರವಲ್ಲ ಕ್ರೀಡೆ ನಮ್ಮ ದೈಹಿಕ ಆರೋಗ್ಯ, ಮಾನಸಿಕ ಸದೃಢತೆ, ಶಿಸ್ತು ಸಮಯಪಾಲನೆ, ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಅತ್ಯುತ್ತಮ ಸಾದನವಾಗಿದೆ…
ವಿದ್ಯಾರ್ಥಿಗಳಲ್ಲಿ ಸಮಾಜಸೇವೆಯ ಮನೋಭಾವ, ಶಿಸ್ತು, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಪ್ರಮುಖ ಪಾತ್ರ ವಹಿಸುತ್ತಿದ್ದು, ಯುವಜನರು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ…
ವಾಜಪೇಯಿ ನಗರ ನಿವೇಶನ ಯೋಜನೆಯಡಿ ನಿವೇಶನ ರಹಿತರಿಗೆ ಮಂಜೂರಾಗಿರುವ ಸರ್ವೆ ನಂ. 581ರ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿರುವ ಶೆಡ್ಗಳನ್ನು ತೆರವುಗೊಳಿಸಿ, ನಿವೇಶನ ಅಭಿವೃದ್ಧಿ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸಬೇಕು ಎಂದು ಜನಾರ್ಧನ ಹಳ್ಳಿಬೆಂಚಿ ಆಗ್ರಹಿಸಿದರು.
ರಾಯಚೂರು, ಅ.12: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಹಾಗೂ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದ ಕಾರ್ಯಕರ್ತರು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದ ಬಳಿ ಜೈಲ್ ಭರೋ ಚಳವಳಿ ನಡೆಸಿದರು.
ರಾಯಚೂರು, ಅ.12: ಶರನ್ನವರಾತ್ರಿ ಉತ್ಸವದ ಅಂಗವಾಗಿ ನಗರದ ಆರ್ಯವೈಶ್ಯ ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ಭಾನುವಾರ ಶ್ರೀದೇವಿ ಭೂದೇವಿ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿಯ ಸೂರ್ಯವಾಹನ ಉತ್ಸವವು ಭಜನೆ, ಕೋಲಾಟ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು.
ರಾಯಚೂರು, ಅ.12: ರಾಜ್ಯದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ನಡೆಸುವ ಮೊದಲು ಹಿಂದುಳಿದ ವರ್ಗಗಳ ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದ 1995ರ ಸರ್ಕಾರದ ಅಧಿಸೂಚನೆಯನ್ನು ಪರಿಷ್ಕರಿಸಬೇಕು.
ರಾಯಚೂರು: ಪತಂಜಲಿ ಯೋಗಪೀಠ ಹರಿದ್ವಾರದ ನಿರ್ದೇಶನದಂತೆ ರಾಯಚೂರು ಜಿಲ್ಲಾ ಪತಂಜಲಿ ಯೋಗ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪದಗ್ರಹಣ ಸಮಾರಂಭವು ನಗರದ ಎಲ್.ವಿ.ಡಿ. ಪದವಿ ಮಹಾವಿದ್ಯಾಲಯದ ಆವರಣದಲ್ಲಿ ನಡೆಯಿತು.
ರಾಯಚೂರು: ನಗರದ ವೀರಶೈವ ಗೌಳಿ ಸಮಾಜದ ವತಿಯಿಂದ ಕಳೆದ 44 ವರ್ಷಗಳಿಂದ ನಿರಂತರವಾಗಿ ಆಚರಿಸಿಕೊಂಡು ಬರುತ್ತಿರುವ ಮಾತಾ ಶ್ರೀ ಅಂಬಾಭವಾನಿ ದೇವಿಯ ನವರಾತ್ರಿ ಮಹೋತ್ಸವಕ್ಕೆ ಭಾನುವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಚಾಲನೆ ನೀಡಲಾಯಿತು.
ರಾಯಚೂರು: ನಗರದ ಬೇರೂನ್ ಕಿಲ್ಲೆಯಲ್ಲಿರುವ ಶ್ರೀ ಮಲ್ಲಿನಾಥ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಕೃಷ್ಣಾ ನದಿಯ ಪವಿತ್ರ ಜಲವನ್ನು ಬೆಳ್ಳಿ ಕುಂಭದಲ್ಲಿ ಹೊತ್ತು ತರುವ ಧಾರ್ಮಿಕ ಮೆರವಣಿಗೆ ದೇವಸ್ಥಾನದ ಅರ್ಚಕ ಸಂಗಮೇಶ ಪೂಜಾರ ಅವರ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಿತು.
ರಾಯಚೂರು, ಅ.11: ಮುಂಬರುವ ವಿವಿಧ ಚುನಾವಣೆಗಳ ಹಿನ್ನೆಲೆಯಲ್ಲಿ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಏಜೆಂಟರ (ಬಿಎಲ್ಎ) ಸಭೆಯನ್ನು ಭಾನುವಾರ ಶಾಸಕ ಬಸನಗೌಡ ದದ್ದಲ್ ನೇತೃತ್ವದಲ್ಲಿ ನಡೆಸಲಾಯಿತು.
ರಾಯಚೂರು: ಲೋಕೋಪಯೋಗಿ ಇಲಾಖೆಯ ರಾಯಚೂರು ವಿಭಾಗದ ಕಾರ್ಯಪಾಲಕ ಅಭಿಯಂತರ ವೆಂಕಟೇಶ್ ಗಲಗ ಅವರನ್ನು ಆಡಳಿತಾತ್ಮಕ ಕಾರಣದ ನೆಪದಲ್ಲಿ ಅನಗತ್ಯವಾಗಿ ವರ್ಗಾವಣೆ ಮಾಡಲಾಗಿದ್ದು, ಸರ್ಕಾರ ಕೂಡಲೇ ವರ್ಗಾವಣೆ ಆದೇಶವನ್ನು ಹಿಂಪಡೆದು ಅವರನ್ನು ಪ್ರಸ್ತುತ ಹುದ್ದೆಯಲ್ಲಿಯೇ ಮುಂದುವರಿಸಬೇಕು.
ರಾಯಚೂರು: ನಗರದ ಹೃದಯ ಭಾಗದಲ್ಲಿರುವ ಬೃಹಸ್ಪತಿವಾರಪೇಟೆಯ ಶ್ರೀ ವೀರಭದ್ರೇಶ್ವರ ಸಹಿತ ಭದ್ರಕಾಳಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳಿಗೆ ಭಕ್ತಿಭಾವದಿಂದ ಚಾಲನೆ ನೀಡಲಾಯಿತು.
ರಾಯಚೂರು, ಅ.10: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಹಾಗೂ ನವದೆಹಲಿಯಲ್ಲಿ ಶನಿವಾರ ನಡೆದ ಪ್ರತಿಭಟನೆ ವೇಳೆ ಬಂಧಿಸಲಾದ ಹೋರಾಟಗಾರರನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ಆಗ್ರಹಿಸಿ ಎಡ ಪ್ರಜಾಸತ್ತಾತ್ಮಕ ಪಕ್ಷಗಳು ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ…
ರಾಯಚೂರು, ಅ.9: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ಅಂತರ ಮಹಾವಿದ್ಯಾಲಯಗಳ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಇಳಕಲ್ನ ಶ್ರೀ ವಿಜಯ ಮಹಾಂತೇಶ ಕಲಾ ಮತ್ತು ವಾಣಿಜ್ಯ ಮಹಿಳಾ…
ರಾಯಚೂರು: ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಸಂಘಟನಾ ಕಾರ್ಯದರ್ಶಿ ಹುದ್ದೆಗೆ ವೆಂಕಟೇಶ ಅರೋಲಿಕರ್ ಅವರನ್ನು ನೇಮಕ ಮಾಡಲಾಗಿದ್ದು, ಪಕ್ಷದ ಮುಖಂಡರ ಸಮ್ಮುಖದಲ್ಲಿ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು.
ರಾಯಚೂರು, ಅ.10: ನಗರದ ನವೋದಯ ಶಿಕ್ಷಣ ಸಂಸ್ಥೆಯ ನವೋದಯ ಎಫ್ಎಂ 88.4 ಕೇಂದ್ರದ ವತಿಯಿಂದ ಸಾಮಾನ್ಯ ಶಸ್ತ್ರಚಿಕಿತ್ಸೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಅಕ್ಟೋಬರ್ 11ರಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ರಾಯಚೂರು, ಅ.10: ನಗರದ ಸರಾಫ್ ಮರ್ಚೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಸ್ವರ್ಣ ಮಹಲ್ನಲ್ಲಿ ಶ್ರೀಮಾತಾ ತಾಯಮ್ಮ ದೇವಿಯ ಶರನ್ನವರಾತ್ರಿ ಹಾಗೂ ದಸರಾ ಮಹೋತ್ಸವವನ್ನು ಅಕ್ಟೋಬರ್ 11ರಿಂದ 21ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ಆಚರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಗದ್ವಾಲ ನರಸಣ್ಣ ಹಾಗೂ…
ರಾಯಚೂರು: ಸಾರ್ವಜನಿಕರ ಕುಡಿಯುವ ನೀರಿನ ಅಗತ್ಯತೆ ಪೂರೈಸುವುದರ ಜೊತೆಗೆ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಗಾಣೇಕಲ್ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ತಿಳಿಸಿದರು.
ರಾಯಚೂರು, ಅ.10: ಮಸ್ಕಿಯಲ್ಲಿ ಅಕ್ಟೋಬರ್ 6ರಂದು ಆಯೋಜಿಸಲಾಗಿದ್ದ 14 ವರ್ಷದೊಳಗಿನವರ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ರಾಮತ್ನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸುವ ಮೂಲಕ ವಿಭಾಗ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ರಾಯಚೂರು, ಅ.10: ನಗರದ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಕಚೇರಿಯ ಮೇಲ್ಭಾಗದಲ್ಲಿರುವ ಹುಣಸೆ ಮರಕ್ಕೆ ವಾಮಾಚಾರ ನಡೆಸಿರುವ ಶಂಕೆ ಮೂಡಿಸುವ ರೀತಿಯಲ್ಲಿ ಗೊಂಬೆಯೊಂದನ್ನು ಕಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಕಚೇರಿ ಸಿಬ್ಬಂದಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.