ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ 2026-27ನೇ ಸಾಲಿನ ಅಂತರ ಮಹಾವಿದ್ಯಾಲಯಗಳ ಟೇಬಲ್ ಟೆನಿಸ್, ಕಬಡ್ಡಿ, ವಾಲಿಬಾಲ್ ಹಾಗೂ ಖೋ-ಖೋ ಕ್ರೀಡಾಕೂಟಗಳು ಯಶಸ್ವಿಯಾಗಿ ಜರುಗಿದ್ದು, ವಿಜೇತ ತಂಡಗಳಿಗೆ ಬಹುಮಾನ ವಿತರಿಸುವ ಮೂಲಕ ಕ್ರೀಡಾಕೂಟಕ್ಕೆ ತೆರೆ ಎಳೆಯಲಾಯಿತು.
ನಗರದ ಜಿಲ್ಲಾಧಿಕಾರಿಗಳ ಬಂಗಲೆ ಸಮೀಪದ ಅಸ್ಕಿಹಾಳ ಗೇಟ್ ಹಿರೇಮಠದ ಶ್ರೀ ಅಮರಲಿಂಗೇಶ್ವರ ಮಠದಲ್ಲಿ ಶ್ರೀಮಠದ ಧರ್ಮಾಧಿಕಾರಿ ವೇ.ಮೂ. ಜಿ.ಎಸ್. ಹಿರೇಮಠ ಅವರ ಅಧ್ಯಕ್ಷತೆಯಲ್ಲಿ 42ನೇ ವರ್ಷದ ಶರನ್ನವರಾತ್ರಿ ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಸಪ್ತ ಗ್ರಾಮಗಳ ಅಧಿದೇವತೆಯಾದ ಸುಕ್ಷೇತ್ರ ನಿಲೋಗಲ್ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಮೂರನೇ ವರ್ಷದ ಶ್ರೀದೇವಿ ಮಹಾತ್ಮೆ ಪುರಾಣ ಪ್ರವಚನದ ಮಹಾಮಂಗಳ ಕಾರ್ಯಕ್ರಮ ಅಕ್ಟೋಬರ್ 21ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ.
ಮುಂಬರುವ ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡೆ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವಿಜಯರಾಜೇಶ್ವರಿ ಗೋಪಿಶೆಟ್ಟಿ ಅವರು ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಅವರ ಪರ ಮತಯಾಚನೆ ನಡೆಸಿದರು.
ಕ್ರಾಂತಿಕಾರಿ ಕವಿ ಹಾಗೂ ಗಾನ ಗಾರುಡಿಗ ಆರ್. ಹುಚ್ಚರೆಡ್ಡಿ ಅವರ ಎರಡನೇ ವರ್ಷದ ನುಡಿನಮನ ಕಾರ್ಯಕ್ರಮವನ್ನು ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆ (ಆರ್‌ಸಿಎಫ್) ಜಿಲ್ಲಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ, ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸ್ಟಿಂಗ್ ಆಪರೇಷನ್ ವಿವಾದವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ…
ರಾಯಚೂರು ವಿಮಾನ ನಿಲ್ದಾಣಕ್ಕೆ ಸಾಮ್ರಾಟ್ ಅಶೋಕ ಚಕ್ರವರ್ತಿ ಅವರ ಹೆಸರನ್ನು ನಾಮಕರಣ ಮಾಡಬೇಕು. ಅಲ್ಲದೆ, ವಿಜಯದಶಮಿಯನ್ನು ಬೌದ್ಧ ಧಮ್ಮ ಪ್ರವರ್ತನ ದಿನವನ್ನಾಗಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಆಚರಿಸಬೇಕು ಎಂದು ವಕೀಲ ಎಸ್.
ರಾಯಚೂರು ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಮತ್ತು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರು ಒದಗಿಸುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಜನರ ಹಿತಾಸಕ್ತಿಯನ್ನು ಕಡೆಗಣಿಸುತ್ತಿದ್ದಾರೆ.
ನಗರದ ಆಶಾಪೂರ ರಸ್ತೆಯ ಮಲ್ಲಿಕಾರ್ಜುನ ಬಡಾವಣೆಯ ಶ್ರೀ ಏಳು ಮಕ್ಕಳ ತಾಯಾಂಭಿಕೆ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಏಳನೇ ದಿನದ ಅಂಗವಾಗಿ ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಸಮೀಪದ ಹೊಸೂರು ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ, ಸೇತುವೆ ದುರಸ್ತಿ ಹಾಗೂ ಕುಡಿಯುವ ನೀರು ಸೇರಿದಂತೆ ಸಾರ್ವಜನಿಕರು ಎದುರಿಸುತ್ತಿರುವ ಮೂಲಸೌಕರ್ಯ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ಮಹರ್ಷಿ…
ತಾಲೂಕಿನ ದೇವರಗುಡ್ಡ ಗ್ರಾಮದ ಸುಕ್ಷೇತ್ರ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಹಾಗೂ ಚಿಕ್ಕಮಠದಲ್ಲಿ ವಿಜಯದಶಮಿ ಅಂಗವಾಗಿ ದಸರಾ ಮಹೋತ್ಸವವನ್ನು ಶ್ರೀಮಠದ ಪೀಠಾಧಿಪತಿ ಮಲ್ಲರಾಯ ತಾತನವರ ದಿವ್ಯ ಸಾನ್ನಿಧ್ಯದಲ್ಲಿ ಭಕ್ತಿ, ಶ್ರದ್ಧೆ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ ಆಚರಿಸಲಾಯಿತು.
ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿಯನ್ನು ಹೆಚ್ಚಿಸುವುದರ ಜೊತೆಗೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ಅರ್ಹ ಕೂಲಿಕಾರ್ಮಿಕರಿಗೆ ಉದ್ಯೋಗ ಕಲ್ಪಿಸಿ ಹೆಚ್ಚಿನ ಮಾನವ ದಿನಗಳನ್ನು ಸೃಜಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ…
ಬಡ ಕುಟುಂಬಗಳ ಹಸಿವು ನೀಗಿಸಲು ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿ ಅಕ್ರಮ ಸಾಗಾಟದ ಆರೋಪದಡಿ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 45 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಂಡಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ-ಗ್ರೂಪ್ ನೌಕರರ ಸೇವೆಯನ್ನು ಅಕ್ಟೋಬರ್ 31ರ ನಂತರವೂ ಮುಂದುವರಿಸಬೇಕು ಹಾಗೂ ಯಾವುದೇ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸಬಾರದು ಎಂದು…
ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ಪಟ್ಟಣದ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಬಯ್ಯಾಪುರ ಹಾಗೂ ಪಕ್ಷದ…
ಹಾಸ್ಟೆಲ್‌ಗಳಲ್ಲಿ ಅಡುಗೆ ತಯಾರಿಸುವಾಗ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ವಿದ್ಯಾರ್ಥಿಗಳಿಗೆ ಗುಣಮಟ್ಟದ, ಶುಚಿ ಹಾಗೂ ರುಚಿಯಾದ ಆಹಾರವನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ವಿಶೇಷ ತರಬೇತಿ ಕಾರ್ಯಕ್ರಮವನ್ನು…
ರಾಯಚೂರು ಮಹಾನಗರ ಪಾಲಿಕೆಗೆ ಸಂಬAಧಿಸಿದ ನ್ಯಾಯಾಲಯದ ಪ್ರಕರಣಗಳ ನಿರ್ವಹಣೆಗಾಗಿ ಬೆಂಗಳೂರಿನಲ್ಲಿ ಸ್ವಂತ ಕಚೇರಿ ಹೊಂದಿರುವ ಒಬ್ಬ ಅನುಭವಿ ವಕೀಲರನ್ನು ನೇಮಕ ಮಾಡಿಕೊಳ್ಳುವ ಸಲುವಾಗಿ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಯಚೂರು ಜಿಲ್ಲೆ ವ್ಯಾಪ್ತಿಯಲ್ಲಿ ಪ್ರಸ್ತುತ ಸಾಲಿನಲ್ಲಿ ಹತ್ತಿ ಬೆಂಬಲ ಬೆಲೆಯ ಕಾರ್ಯಕ್ರಮದಡಿ ಖರೀದಿ ಕೇಂದ್ರಗಳು ಮತ್ತು ನೋಂದಣಿ ಪ್ರಕ್ರಿಯೆ ಭಾರತೀಯ ಹತ್ತಿ ನಿಗಮ ವತಿಯಿಂದ ಕನಿಷ್ಠ ಬೆಂಬಲ ಬೆಲೆ (ಎಮ್‌ಎಸ್‌ಪಿ) ಅಡಿಯಲ್ಲಿ ಹತ್ತಿಯನ್ನು ಖರೀದಿಸುವ…
ಜಿಲ್ಲೆಯಲ್ಲಿ ನವೆಂಬರ್ 1ರಂದು ಆಚರಿಸಲ್ಪಡುವ ಕನ್ನಡ ರಾಜ್ಯೋತ್ಸವ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ಟೋಬರ್ 26ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್.