ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 97,254 ಇಂದಿನ ಓದುಗರು: 2,268 🟢 ಈಗ ಆನ್‌ಲೈನ್: 25
LATEST NEWS

ಮಾನ್ವಿ

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು › ಮಾನ್ವಿ
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 125 ಸುದ್ದಿಗಳಲ್ಲಿ 1–25 ಸುದ್ದಿಗಳು

ಮಾನ್ವಿ ರಾಯಚೂರು ಮಾನ್ವಿ

ಬಾಪೂರು ನರಸಿಂಹ ಶ್ರೇಷ್ಠಿ ಹತ್ಯೆ ಖಂಡಿಸಿ ಆರ್ಯ ವೈಶ್ಯ ಸಮಾಜದಿಂದ ಶ್ರದ್ಧಾಂಜಲಿ

ರಾಯಚೂರು ನಗರದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಆರ್ಯ ವೈಶ್ಯ ಸಮುದಾಯದ ಸಣ್ಣ ವ್ಯಾಪಾರಿ ಬಾಪೂರು ನರಸಿಂಹ ಶ್ರೇಷ್ಠಿ ಅವರ ಸಾವಿಗೆ ಸಂತಾಪ ಸೂಚಿಸಿ, ಶ್ರೀ ನಗರೇಶ್ವರ ಆರ್ಯ ವೈಶ್ಯ ಸಂಘದ ವತಿಯಿಂದ ಪಟ್ಟಣದ ಬಸವ ವೃತ್ತದಲ್ಲಿ ಮೇಣದಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವು: ಮಾನ್ವಿಯಲ್ಲಿ ಜೆಡಿಎಸ್ ಕಾರ್ಯಕರ್ತರ ವಿಜಯೋತ್ಸವ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಬಸವ ವೃತ್ತದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ನಂದಿಹಾಳ್ ಹಳ್ಳಕ್ಕೆ ನೀರು ಹರಿಸಲು ಕ್ರಮ ಕೈಗೊಳ್ಳುವ ಭರವಸೆ: ಎನ್.ಎಸ್. ಬೋಸರಾಜು

ತಾಲೂಕಿನ ನಂದಿಹಾಳ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರಗಾಲದ ಪರಿಣಾಮ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಜನರು ಹಾಗೂ ಜಾನುವಾರುಗಳಿಗೆ ನೀರಿನ ಸೌಲಭ್ಯ ಕಲ್ಪಿಸಲು ಗೋಲದಿನ್ನಿ ಎಸ್ಕೇಪ್ ಮೂಲಕ ನಂದಿಹಾಳ್ ಹಳ್ಳಕ್ಕೆ ತಕ್ಷಣ ನೀರು ಹರಿಸಬೇಕೆಂದು ಗ್ರಾಮಸ್ಥರು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಜಾನೇಕಲ್ ಶಾಲೆಗೆ ಎರಡು ಎಕರೆ ಭೂಮಿ ಮಂಜೂರು ಮಾಡಲು ಎನ್.ಎಸ್. ಬೋಸರಾಜು ಸೂಚನೆ

ತಾಲೂಕಿನ ಜಾನೇಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಅಗತ್ಯ ಸ್ಥಳಾವಕಾಶ ಕಲ್ಪಿಸುವುದರ ಜೊತೆಗೆ ಗ್ರಾಮದಲ್ಲಿನ ವಸತಿರಹಿತ ಕುಟುಂಬಗಳಿಗೆ ನಿವೇಶನಗಳನ್ನು ಮಂಜೂರು ಮಾಡಬೇಕೆಂದು ಗ್ರಾಮಸ್ಥರು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

11,513 ವೃದ್ಧಾಪ್ಯ ವೇತನ ಫಲಾನುಭವಿಗಳ ಪರಿಶೀಲನೆ ಪೂರ್ಣ: ತಹಶೀಲ್ದಾರ್ ಭೀಮರಾಯ ರಾಮಸಮುದ್ರ

ಆದಾಯ ಮಿತಿಗೆ ಸಂಬಂಧಿಸಿದ ಕಾರಣಗಳಿಂದ ಕಳೆದ ನಾಲ್ಕು ತಿಂಗಳಿಂದ ಸ್ಥಗಿತಗೊಂಡಿರುವ ವೃದ್ಧಾಪ್ಯ ವೇತನವನ್ನು ಅರ್ಹ ಫಲಾನುಭವಿಗಳಿಗೆ ಪುನರಾರಂಭಿಸುವ ನಿಟ್ಟಿನಲ್ಲಿ ಪರಿಶೀಲನಾ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಮಾನ್ವಿ ತಾಲೂಕಿನಲ್ಲಿ ಇದುವರೆಗೆ 11,513 ಫಲಾನುಭವಿಗಳ ದಾಖಲೆಗಳ ಪರಿಶೀಲನೆ ಪೂರ್ಣಗೊಂಡಿದೆ ಎಂದು ತಹಶೀಲ್ದಾರ್ ಭೀಮರಾಯ ರಾಮಸಮುದ್ರ…

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಬೇಸಿಗೆಯವರೆಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಎನ್.ಎಸ್. ಬೋಸರಾಜು

ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆಯವರೆಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಶಶೀಲ್ ಜಿ. ನಮೋಶಿ ಗೆಲುವು: ಮಾನ್ವಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಶಶೀಲ್ ಜಿ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಪೆಟ್ರೋಲ್ ಬಂಕ್‌ನಲ್ಲಿ ಅಗ್ನಿ ಅವಘಡ: ಬೆಂಕಿಗೆ ಆಹುತಿಯಾದ ಪಲ್ಸರ್ ಬೈಕ್

ಪಟ್ಟಣದ ರಾಯಚೂರು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಒಂದರಲ್ಲಿ ಮಂಗಳವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಪಲ್ಸರ್ 220 ಬೈಕ್ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಶ್ರೀ ಜೈ ಸಂತೋಷಿ ಮಾತಾ ದೇವಸ್ಥಾನದ 27ನೇ ವಾರ್ಷಿಕೋತ್ಸವ, ಸಂಭ್ರಮದ ರಥೋತ್ಸವ

ಪಟ್ಟಣದ ಶ್ರೀ ಜೈ ಸಂತೋಷಿ ಮಾತಾ ದೇವಸ್ಥಾನದ 27ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ರಥೋತ್ಸವವು ಭಕ್ತಿಭಾವ ಹಾಗೂ ಸಂಭ್ರಮದಿಂದ ಜರುಗಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಕುಡಿಯುವ ನೀರಿಗಾಗಿ ನಂದಿಹಾಳ ಹಳ್ಳಕ್ಕೆ ನೀರು ಹರಿಸಲು ಆಗ್ರಹ: ರೈತರಿಂದ ತಹಸೀಲ್ದಾರ್‌ಗೆ ಮನವಿ

ತಾಲೂಕಿನ ನಂದಿಹಾಳ ಹಳ್ಳದ ವ್ಯಾಪ್ತಿಯ ಗ್ರಾಮಗಳಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದ್ದು, ಗೋಲದಿನ್ನಿ ಎಸ್ಕೇಪ್ ಕಾಲುವೆ ಮೂಲಕ ಹಳ್ಳಕ್ಕೆ ಕೂಡಲೇ ನೀರು ಹರಿಸುವಂತೆ ಒತ್ತಾಯಿಸಿ ಗೋಲದಿನ್ನಿ ಎಸ್ಕೇಪ್ ರೈತ ಹೋರಾಟ ಸಮಿತಿಯ ಪದಾಧಿಕಾರಿಗಳು ತಹಸೀಲ್ದಾರ್ ಭೀಮರಾಯ ರಾಮಸಮುದ್ರ ಅವರಿಗೆ ಮನವಿ ಸಲ್ಲಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

10 ತಿಂಗಳ ವೇತನ ಬಾಕಿ: ನೀರಾವರಿ ಇಲಾಖೆ ವಿರುದ್ಧ ಕಾರ್ಮಿಕರ ಪ್ರತಿಭಟನೆ

ಕಳೆದ 10 ತಿಂಗಳಿಂದ ಬಾಕಿ ಉಳಿದಿರುವ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಪಟ್ಟಣದ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಮಕ್ಕಳಲ್ಲಿ ನಾಯಕತ್ವ ಹಾಗೂ ಪ್ರಜಾಪ್ರಭುತ್ವದ ಅರಿವು ಮೂಡಿಸಲು ಕಾರ್ಯಾಗಾರ: ಫಾ. ಶಾಂತರಾಜ್

ಪಟ್ಟಣದ ಲೊಯೋಲಾ ಸಮಾಜ ಸೇವಾ ಕೇಂದ್ರದ ವತಿಯಿಂದ ಗ್ರಾಮೀಣ ಕಲಿಕಾ ಕೇಂದ್ರಗಳ ಮಕ್ಕಳಿಗೆ ಮಕ್ಕಳ ಸಂಸತ್ ರಚನೆ ಕುರಿತು ಕಾರ್ಯಾಗಾರ ಹಾಗೂ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಆದಿಕವಿಯ ಆದರ್ಶಗಳು ಸಮಾಜಕ್ಕೆ ದಾರಿದೀಪ ಎಂದ ಶಾಸಕ ಹಂಪಯ್ಯ ನಾಯಕ

ಪಟ್ಟಣದ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ವಾಲ್ಮೀಕಿ ಯುವಕರ ಸಂಘದ ನಾಮಫಲಕ ಉದ್ಘಾಟನೆ: ಮಹರ್ಷಿಗಳ ಆದರ್ಶ ಪಾಲನೆಗೆ ರಾಜಾ ವೆಂಕಟಪ್ಪ ನಾಯಕ ಕರೆ

ಪಟ್ಟಣದ ಯಂಕಪ್ಪ ತಾತನ ಮಠದ ನಮಾಜಗೇರಿಗುಡ್ಡದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ದೊರೆ ಅವರು ಮಹರ್ಷಿ ವಾಲ್ಮೀಕಿ ಯುವಕರ ಸಂಘದ ನಾಮಫಲಕವನ್ನು ಉದ್ಘಾಟಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ರಾಮಾಯಣದ ಮೂಲಕ ಆದರ್ಶ ಬದುಕಿನ ಸಂದೇಶ ಸಾರಿದ ಮಹರ್ಷಿ ವಾಲ್ಮೀಕಿ: ಭೀಮರಾಯ ರಾಮಸಮುದ್ರ

ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ಮಾನವ ಸಮಾಜಕ್ಕೆ ಸತ್ಯ, ಧರ್ಮ, ನ್ಯಾಯ ಹಾಗೂ ಆದರ್ಶ ಜೀವನದ ಮೌಲ್ಯಗಳನ್ನು ಪರಿಚಯಿಸಿದ್ದು, ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಕವಾಗಿವೆ ಎಂದು ತಹಶೀಲ್ದಾರ್ ಭೀಮರಾಯ ಬಿ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಪೋತ್ನಾಳ್ ಬಳಿ ರಸ್ತೆ ಅಪಘಾತಕ್ಕೆ ಕೃಷ್ಣಮೃಗ ಬಲಿ

ತಾಲೂಕಿನ ಪೋತ್ನಾಳ್ ಗ್ರಾಮದ ಸಮೀಪದ ಹೆದ್ದಾರಿಯಲ್ಲಿ ವಾಹನ ಅಪಘಾತಕ್ಕೆ ಸಿಲುಕಿ ಕೃಷ್ಣಮೃಗವೊಂದು ಮೃತಪಟ್ಟಿದ್ದು, ವನ್ಯಜೀವಿಗಳ ಸಂಚಾರ ಹೆಚ್ಚಿರುವ ರಸ್ತೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪರಿಸರ ಪ್ರೇಮಿಗಳು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಗ್ರಾಮೀಣ ಜನರ ಆರೋಗ್ಯ ರಕ್ಷಣೆಗೆ ಸರ್ಕಾರದಿಂದ ಹಲವು ಯೋಜನೆಗಳ ಅನುಷ್ಠಾನ: ಎನ್.ಎಸ್. ಬೋಸರಾಜು

ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹಲವು ಆರೋಗ್ಯ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಬಡವರು ಹಾಗೂ ಸಾಮಾನ್ಯ ಜನರಿಗೆ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳು ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಮಾನ್ವಿಯಲ್ಲಿ ಸಂವಿಧಾನ ನಡಿಗೆ ಜಾಗೃತಿ ಜಾಥಾ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗೆ ಆಗ್ರಹಿಸಿ ತಾಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದಲ್ಲಿ ಸಂವಿಧಾನ ನಡಿಗೆ ಜಾಗೃತಿ ಜಾಥಾ ನಡೆಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ರಾಜ್ಯಮಟ್ಟದ ಕಬ್ ಬುಲ್‌ಬುಲ್ ಉತ್ಸವದಲ್ಲಿ ಕಾಕತೀಯ ಶಾಲೆಯ ಮಕ್ಕಳ ಉತ್ತಮ ಪ್ರದರ್ಶನ

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ಹಾಸನ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಶ್ರವಣಬೆಳಗೊಳದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕಬ್ ಬುಲ್‌ಬುಲ್ ಉತ್ಸವದಲ್ಲಿ ಮಾನ್ವಿ ಪಟ್ಟಣದ ಕಾಕತೀಯ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳು ಹಾಗೂ ದೈಹಿಕ ಕಸರತ್ತುಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಶಾಲೆ ಮತ್ತು…

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಹರನಹಳ್ಳಿಯಲ್ಲಿ ಶ್ರೀದೇವಿ ಪುರಾಣ ಮಹಾಮಂಗಲೋತ್ಸವ: ಕಳಸ ಕುಂಭಗಳೊಂದಿಗೆ ಭವ್ಯ ಮೆರವಣಿಗೆ

ತಾಲೂಕಿನ ಹರನಹಳ್ಳಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಶ್ರೀದೇವಿ ಪುರಾಣ ಮಹಾಮಂಗಲೋತ್ಸವವು ಧಾರ್ಮಿಕ ಕಾರ್ಯಕ್ರಮಗಳು, ದೇವಿಯ ಭಾವಚಿತ್ರ ಮೆರವಣಿಗೆ ಹಾಗೂ ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ಸಂಭ್ರಮದಿಂದ ನೆರವೇರಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಕಲ್ಮಠದಲ್ಲಿ ವಿಜಯದಶಮಿ ಸಂಭ್ರಮ: ವಿರೂಪಾಕ್ಷ ಪಂಡಿತಾರಾಧ್ಯ ಶ್ರೀಗಳಿಗೆ ಭಕ್ತರಿಂದ ಬನ್ನಿ ಸಮರ್ಪಣೆ

ಪಟ್ಟಣದ ಪ್ರಸಿದ್ಧ ಶ್ರೀ ಕಲ್ಮಠದಲ್ಲಿ ಬುಧವಾರ ವಿಜಯದಶಮಿ ಹಬ್ಬವನ್ನು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಕುರ್ಡಿ ಗ್ರಾಮದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಭಾವಚಿತ್ರದ ವೈಭವದ ಮೆರವಣಿಗೆ

ತಾಲೂಕಿನ ಕುರ್ಡಿ ಗ್ರಾಮದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಶ್ರೀ ದ್ಯಾವಮವ್ವ ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಮಹನೀಯರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವುದು ಜಯಂತಿಗಳ ಉದ್ದೇಶ: ತಹಶೀಲ್ದಾರ್ ಭೀಮರಾಯ

ಮಾನ್ವಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶ್ರೀಜಗದ್ಗುರು ಮಧ್ವಾಚಾರ್ಯರ ಜಯಂತಿ ಆಚರಿಸಲಾಯಿತು. ಮಹನೀಯರ ಜೀವನ ಚರಿತ್ರೆ, ತತ್ವಾದರ್ಶಗಳು ಹಾಗೂ ಸಂದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸುವುದೇ ಜಯಂತಿಗಳ ಆಚರಣೆಯ ಉದ್ದೇಶವಾಗಿದೆ ಎಂದು ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಹಿರೇಕೋಟ್ನೇಕಲ್‌ನಲ್ಲಿ ಶ್ರೀದೇವಿ ಪುರಾಣ ಮಂಟಪ ನಿರ್ಮಿಸಿದ ದಾನಿಗಳಿಗೆ ಸನ್ಮಾನ

ತಾಲೂಕಿನ ಹಿರೇಕೋಟ್ನೇಕಲ್ ಗ್ರಾಮದ ಶ್ರೀ ತಾಯಮ್ಮ ದೇವಿ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಶ್ರೀದೇವಿ ಪುರಾಣ ಕಾರ್ಯಕ್ರಮದಲ್ಲಿ ನೂತನ ಪುರಾಣ ಮಂಟಪ ನಿರ್ಮಾಣಕ್ಕೆ ಕೊಡುಗೆ ನೀಡಿದ ಹಿರಿಯ ವಕೀಲ ಸಿದ್ದಲಿಂಗಪ್ಪ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಅ.24 ಮತ್ತು 25ರಂದು ಚಾಮರಾಜನಗರದಲ್ಲಿ ಅಂತರರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನ: ತಿಪ್ಪಣ್ಣ ಬಾಗಲವಾಡ

ಚಾಮರಾಜನಗರದಲ್ಲಿ ಅಕ್ಟೋಬರ್ 24 ಮತ್ತು 25ರಂದು ಅಂತರರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನ ನಡೆಯಲಿದೆ. ಮಾನ್ವಿ ತಾಲೂಕಿನ ಬೌದ್ಧ ಧರ್ಮದ ಅನುಯಾಯಿಗಳು, ಅಂಬೇಡ್ಕರ್ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಕೀಲ ತಿಪ್ಪಣ್ಣ ಬಾಗಲವಾಡ ಮನವಿ ಮಾಡಿದ್ದಾರೆ.

ಮುಂದೆ ಓದಿ →