ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 99,660 ಇಂದಿನ ಓದುಗರು: 292 🟢 ಈಗ ಆನ್‌ಲೈನ್: 11
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1019 ಸುದ್ದಿಗಳಲ್ಲಿ 376–400 ಸುದ್ದಿಗಳು

ದೇವದುರ್ಗ ರಾಯಚೂರು ದೇವದುರ್ಗ

ಗಾಣದಾಳ–ಸೋಮನಮರಡಿ ಗ್ರಾಮಗಳನ್ನು ದೇವದುರ್ಗ ತಾಲೂಕಿಗೆ ಸೇರ್ಪಡೆಗೊಳಿಸಲು ಆಗ್ರಹಿಸಿ ಅ.12ರಂದು ಪ್ರತಿಭಟನೆ

ಜಾಲಹಳ್ಳಿ, ಅ.11: ಗಾಣದಾಳ ಹಾಗೂ ಸೋಮನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳನ್ನು ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಿ, ಜಾಲಹಳ್ಳಿ ಹೋಬಳಿಯಲ್ಲಿಯೇ ಮುಂದುವರಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್ 12ರಂದು ಜಾಲಹಳ್ಳಿ ನಾಡಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಕಟ್ಟಡಕ್ಕೆ ಕಿಡಿಗೇಡಿಗಳಿಂದ ಹಾನಿ

ಲಿಂಗಸುಗೂರು: ಪಟ್ಟಣದ ಪುರಸಭೆ ವ್ಯಾಪ್ತಿಯ ಕರಡಕಲ್ ಹೊರವಲಯದಲ್ಲಿ ಸುಮಾರು ₹30 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡಕ್ಕೆ ಸೂಕ್ತ ಭದ್ರತೆ ಇಲ್ಲದ ಕಾರಣ ಕಿಡಿಗೇಡಿಗಳು ನುಗ್ಗಿ ಹಾನಿಗೊಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಜಾಲಹಳ್ಳಿಯಲ್ಲಿ ಅಂಬೇಡ್ಕರ್ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ಜಾಲಹಳ್ಳಿ: ಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾವಳಿಗೆ ಭಾನುವಾರ ಗಣ್ಯರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು. ಯುವಕರಲ್ಲಿ ಕ್ರೀಡಾಸಕ್ತಿ ಬೆಳೆಸುವ ಹಾಗೂ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಬಸವರಾಜ ಪಡಕೋಟೆ ಜನ್ಮದಿನಾಚರಣೆ: ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ

ಲಿಂಗಸುಗೂರು: ನಮ್ಮ ಕರ್ನಾಟಕ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಸವರಾಜ ಪಡಕೋಟೆ ಅವರ 57ನೇ ಜನ್ಮದಿನದ ಅಂಗವಾಗಿ ಸಂಘಟನೆಯ ಲಿಂಗಸುಗೂರು ತಾಲೂಕು ಘಟಕದ ಪದಾಧಿಕಾರಿಗಳು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು ಹಾಗೂ ಹಣ್ಣು ವಿತರಿಸುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ನರಸಪ್ಪ ಯಕ್ಲಾಸಪೂರ ನೇಮಕ

ರಾಯಚೂರು: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ನರಸಪ್ಪ ಯಕ್ಲಾಸಪೂರ ಅವರನ್ನು ನೇಮಕ ಮಾಡಲಾಗಿದೆ.

ಮುಂದೆ ಓದಿ →
ಕೊಪ್ಪಳ ಕೊಪ್ಪಳ

ಹಿಂಗಾರು ಬಿತ್ತನೆಗೆ ಬೀಜ, ಗೊಬ್ಬರ ಕೊರತೆ: ಎರಡು ದಿನಗಳಲ್ಲಿ ಪೂರೈಸಲು ಅಂದಪ್ಪ ಕೋಳೂರು ಆಗ್ರಹ

ಕೊಪ್ಪಳ: ಜಿಲ್ಲೆಯಲ್ಲಿ ಅಲ್ಪ ಪ್ರಮಾಣದ ಹಸ್ತ ಮಳೆಯಾಗಿದ್ದು, ಭೂಮಿಯಲ್ಲಿ ತೇವಾಂಶದ ಕೊರತೆಯಿದ್ದರೂ ರೈತರು ಹಿಂಗಾರು ಬಿತ್ತನೆಗೆ ಮುಂದಾಗಿದ್ದಾರೆ. ಆದರೆ ಸ್ಥಳೀಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಲಭ್ಯವಿಲ್ಲದ ಕಾರಣ ರೈತರು ತೊಂದರೆ ಅನುಭವಿಸುತ್ತಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಮತದಾನದ ಹಕ್ಕು ರಕ್ಷಣೆಗೆ ಆಗ್ರಹಿಸಿ ಮಾನ್ವಿಯಲ್ಲಿ ಮೇಣದಬತ್ತಿ ಬೆಳಗಿಸಿ ಪ್ರತಿಭಟನೆ

ಮಾನ್ವಿ: ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆ ಮತ್ತು ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ಕಾಪಾಡುವಂತೆ ಆಗ್ರಹಿಸಿ ಪಟ್ಟಣದ ಡಾ. ಬಿ.ಆರ್.

ಮುಂದೆ ಓದಿ →
ರಾಯಚೂರು ರಾಯಚೂರು

ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಎಲ್‌ಎ ಸದಸ್ಯರ ಸಭೆ: ಪಕ್ಷ ಸಂಘಟನೆಗೆ ಶಾಸಕ ಬಸನಗೌಡ ದದ್ದಲ್ ಕರೆ

ರಾಯಚೂರು, ಅ.11: ಮುಂಬರುವ ವಿವಿಧ ಚುನಾವಣೆಗಳ ಹಿನ್ನೆಲೆಯಲ್ಲಿ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಏಜೆಂಟರ (ಬಿಎಲ್‌ಎ) ಸಭೆಯನ್ನು ಭಾನುವಾರ ಶಾಸಕ ಬಸನಗೌಡ ದದ್ದಲ್ ನೇತೃತ್ವದಲ್ಲಿ ನಡೆಸಲಾಯಿತು.

ಮುಂದೆ ಓದಿ →
ಮಂತ್ರಾಲಯ ಮಂತ್ರಾಲಯ

ಮಂತ್ರಾಲಯದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ: ಸುಬುಧೇಂದ್ರ ತೀರ್ಥರಿಂದ ಘಟಸ್ಥಾಪನೆ

ಮಂತ್ರಾಲಯ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಭಾನುವಾರ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಘಟಸ್ಥಾಪನೆ ನೆರವೇರಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಮೀನುಗಾರರ ಸಹಕಾರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ: ಯಲ್ಲಪ್ಪ ಚಿಮ್ಮಲಗಿ ಅಧ್ಯಕ್ಷ

ಲಿಂಗಸುಗೂರು: ತಾಲೂಕು ಮೀನುಗಾರರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಯಲ್ಲಪ್ಪ ಚಿಮ್ಮಲಗಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ ಇಂಡಿ ಅವರು ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ಮುಖಂಡರು ಇಬ್ಬರಿಗೂ ಸನ್ಮಾನಿಸಿ ಶುಭ ಹಾರೈಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಮೈಸೂರು ದಸರಾ ಉದ್ಘಾಟನೆಗೆ ದೇವದುರ್ಗದ ಅಜೇಂದ್ರ ಮಹಾಸ್ವಾಮಿಗಳಿಗೆ ಆಹ್ವಾನ

ದೇವದುರ್ಗ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ–2026ರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ದೇವದುರ್ಗದ ಶ್ರೀಮದ್ ಆನೇಗುಂದಿ ಮೂಲ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಅಜೇಂದ್ರ ಮಹಾಸ್ವಾಮಿಗಳಿಗೆ ಗೌರವಪೂರ್ವಕ ಆಹ್ವಾನ ನೀಡಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ವೆಂಕಟೇಶ್ ಗಲಗ ವರ್ಗಾವಣೆ ಹಿಂಪಡೆಯದಿದ್ದರೆ ಜಿಲ್ಲೆ ಬಂದ್: ಶಿವಗಣಿ ನಾಯಕ ಜಿಂಕಲ್

ರಾಯಚೂರು: ಲೋಕೋಪಯೋಗಿ ಇಲಾಖೆಯ ರಾಯಚೂರು ವಿಭಾಗದ ಕಾರ್ಯಪಾಲಕ ಅಭಿಯಂತರ ವೆಂಕಟೇಶ್ ಗಲಗ ಅವರನ್ನು ಆಡಳಿತಾತ್ಮಕ ಕಾರಣದ ನೆಪದಲ್ಲಿ ಅನಗತ್ಯವಾಗಿ ವರ್ಗಾವಣೆ ಮಾಡಲಾಗಿದ್ದು, ಸರ್ಕಾರ ಕೂಡಲೇ ವರ್ಗಾವಣೆ ಆದೇಶವನ್ನು ಹಿಂಪಡೆದು ಅವರನ್ನು ಪ್ರಸ್ತುತ ಹುದ್ದೆಯಲ್ಲಿಯೇ ಮುಂದುವರಿಸಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಶರನ್ನವರಾತ್ರಿ ಅಂಗವಾಗಿ ಬೃಹಸ್ಪತಿವಾರಪೇಟೆಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಾಯಚೂರು: ನಗರದ ಹೃದಯ ಭಾಗದಲ್ಲಿರುವ ಬೃಹಸ್ಪತಿವಾರಪೇಟೆಯ ಶ್ರೀ ವೀರಭದ್ರೇಶ್ವರ ಸಹಿತ ಭದ್ರಕಾಳಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳಿಗೆ ಭಕ್ತಿಭಾವದಿಂದ ಚಾಲನೆ ನೀಡಲಾಯಿತು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ತ್ರಿಂಬಕೇಶ್ವರ ದೇವಸ್ಥಾನದ ಜಾಗದಲ್ಲಿ ಹಕ್ಕುಪತ್ರ ವಿತರಣೆ: ಗ್ರಾಮಸ್ಥರ ಆಕ್ರೋಶ

ಕವಿತಾಳ: ಪಟ್ಟಣದ ತ್ರಿಂಬಕೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಮೀಸಲಿಟ್ಟಿರುವ ಗ್ರಾಮಠಾಣಾ ಜಾಗದಲ್ಲಿ ಆಕ್ಷೇಪಣೆಗಳ ನಡುವೆಯೂ 40ಕ್ಕೂ ಹೆಚ್ಚು ಮಂದಿಗೆ ಹಕ್ಕುಪತ್ರ ವಿತರಿಸಲಾಗಿದೆ ಎಂದು ಆರೋಪಿಸಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಮುಂದೆ ಓದಿ →
ಲೇಖನ ಲೇಖನ

ನವರಾತ್ರಿ ಮತ್ತು ವಿಜಯದಶಮಿ: ಕರ್ನಾಟಕದ ದಸರಾ ಸಂಸ್ಕೃತಿಯ ವೈಭವ

ಶಕ್ತಿ ಆರಾಧನೆಯಿಂದ ಸಾಂಸ್ಕೃತಿಕ ಸಂಭ್ರಮದವರೆಗೆ – ನಾಡಿನ ಪರಂಪರೆ, ಭಕ್ತಿ, ಕಲೆ ಮತ್ತು ವಿಜಯದ ಸಂಕೇತವಾದ ದಸರಾ ಮುನ್ನುಡಿ ಭಾರತದ ಹಬ್ಬಗಳ ಸಂಸ್ಕೃತಿಯಲ್ಲಿ ನವರಾತ್ರಿ ಮತ್ತು ವಿಜಯದಶಮಿ ವಿಶೇಷ ಸ್ಥಾನವನ್ನು ಹೊಂದಿವೆ.

ಮುಂದೆ ಓದಿ →
ರಾಯಚೂರು ರಾಯಚೂರು

ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ರಾಯಚೂರಿನಲ್ಲಿ ಪಂಜಿನ ಮೆರವಣಿಗೆ

ರಾಯಚೂರು, ಅ.10: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಹಾಗೂ ನವದೆಹಲಿಯಲ್ಲಿ ಶನಿವಾರ ನಡೆದ ಪ್ರತಿಭಟನೆ ವೇಳೆ ಬಂಧಿಸಲಾದ ಹೋರಾಟಗಾರರನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ಆಗ್ರಹಿಸಿ ಎಡ ಪ್ರಜಾಸತ್ತಾತ್ಮಕ ಪಕ್ಷಗಳು ಮತ್ತು ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಮತದಾನದ ಹಕ್ಕು ರಕ್ಷಣೆಗೆ ಆಗ್ರಹಿಸಿ ಜಾಲಹಳ್ಳಿಯಲ್ಲಿ ಡಿವೈಎಫ್‌ಐ–ಎಸ್‌ಎಫ್‌ಐ ಪಂಜಿನ ಮೆರವಣಿಗೆ

ಜಾಲಹಳ್ಳಿ, ಅ.10: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಕಾನೂನು ಕ್ರಮ ಜರುಗಿಸಬೇಕು ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ಮತ್ತು…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಬಡತನದ ನಡುವೆಯೂ ಸಾಧನೆ ಮಾಡಿದ ಚನ್ನಬಸವ: ರಾಜ್ಯಮಟ್ಟದ ಓಟದಲ್ಲಿ ದ್ವಿತೀಯ ಸ್ಥಾನ, ರಾಷ್ಟ್ರಮಟ್ಟಕ್ಕೆ ಆಯ್ಕೆ

ಅರಕೇರಾ: ಮಳೆ ಬಂದರೆ ಮನೆಯೊಳಗೆ ನೀರು ನುಗ್ಗುವ ಪರಿಸ್ಥಿತಿ, ದಿನವಿಡೀ ದುಡಿದರೂ ಕುಟುಂಬ ನಿರ್ವಹಣೆಗೆ ಸಾಲದ ಕೂಲಿ ಹಣ, ಓದಲು ಬೇಕಾದ ಬಟ್ಟೆ ಮತ್ತು ಶೂ ಖರೀದಿಸಲೂ ಪರದಾಟ. ಇಂತಹ ಕಡುಬಡತನದ ನಡುವೆ ಬೆಳೆದ ಯುವಕನೊಬ್ಬ ಇಂದು ರಾಜ್ಯಮಟ್ಟದ ಓಟದ ಸ್ಪರ್ಧೆಯಲ್ಲಿ ಸಾಧನೆ ಮಾಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಅಂತರ ಮಹಾವಿದ್ಯಾಲಯ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಇಳಕಲ್ ಮಹಿಳಾ ಕಾಲೇಜಿಗೆ ಪ್ರಥಮ ಸ್ಥಾನ

ರಾಯಚೂರು, ಅ.9: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ಅಂತರ ಮಹಾವಿದ್ಯಾಲಯಗಳ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಇಳಕಲ್‌ನ ಶ್ರೀ ವಿಜಯ ಮಹಾಂತೇಶ ಕಲಾ ಮತ್ತು ವಾಣಿಜ್ಯ ಮಹಿಳಾ…

ಮುಂದೆ ಓದಿ →
ರಾಯಚೂರು ರಾಯಚೂರು

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಸಂಘಟನಾ ಕಾರ್ಯದರ್ಶಿಯಾಗಿ ವೆಂಕಟೇಶ ಅರೋಲಿಕರ್ ನೇಮಕ

ರಾಯಚೂರು: ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಸಂಘಟನಾ ಕಾರ್ಯದರ್ಶಿ ಹುದ್ದೆಗೆ ವೆಂಕಟೇಶ ಅರೋಲಿಕರ್ ಅವರನ್ನು ನೇಮಕ ಮಾಡಲಾಗಿದ್ದು, ಪಕ್ಷದ ಮುಖಂಡರ ಸಮ್ಮುಖದಲ್ಲಿ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಲಿಂಗಸುಗೂರು ಕ್ಷೇತ್ರದ 6 ಜಿ.ಪಂ., 22 ತಾ.ಪಂ. ಕ್ಷೇತ್ರಗಳ ಕರಡು ಮೀಸಲಾತಿ ಪಟ್ಟಿ ಪ್ರಕಟ

ಲಿಂಗಸುಗೂರು: ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 6 ಜಿಲ್ಲಾ ಪಂಚಾಯಿತಿ ಹಾಗೂ 22 ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಸಂಬಂಧಿಸಿದ ಕರಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿವಿಧ ವರ್ಗಗಳಿಗೆ ಕ್ಷೇತ್ರವಾರು ಮೀಸಲಾತಿ ನಿಗದಿಪಡಿಸಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ರೈತನ ಮೇಲೆ ಅರಣ್ಯಾಧಿಕಾರಿಗಳಿಂದ ಹಲ್ಲೆ ಆರೋಪ: ಕಾನೂನು ಕ್ರಮಕ್ಕೆ ಆಗ್ರಹ

ಲಿಂಗಸುಗೂರು: ಮಸ್ಕಿ ತಾಲೂಕಿನ ಯರದೊಡ್ಡಿ ಗ್ರಾಮದ ರೈತನ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರೈತ ಸಂಘ ಹಾಗೂ ಸಿಪಿಐ (ಎಂಎಲ್) ರೆಡ್ ಸ್ಟಾರ್ ತಾಲೂಕು ಸಮಿತಿ ವತಿಯಿಂದ ಸಹಾಯಕ ಆಯುಕ್ತರಿಗೆ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ರೈತರ ಹಿತ ಕಾಪಾಡಿ ರಾಷ್ಟ್ರೀಯ ಹೆದ್ದಾರಿ 748ಎ ಕಾಮಗಾರಿ ಪೂರ್ಣಗೊಳಿಸಿ: ಅಮರೇಗೌಡ ಪಾಟೀಲ್ ಬಯ್ಯಾಪುರ

ಲಿಂಗಸುಗೂರು: ಭಾರತಮಾಲಾ ಯೋಜನೆಯಡಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ 748ಎ ಕಾಮಗಾರಿಯಿಂದ ರೈತರಿಗೆ ತೊಂದರೆಯಾಗದಂತೆ ವೈಜ್ಞಾನಿಕ ಸರ್ವಿಸ್ ರಸ್ತೆ, ಅಂಡರ್‌ಪಾಸ್, ಬೈಪಾಸ್ ಹಾಗೂ ಅಗತ್ಯ ಸೇತುವೆಗಳನ್ನು ನಿರ್ಮಿಸಬೇಕು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಅಮರೇಗೌಡ ಪಾಟೀಲ್ ಬಯ್ಯಾಪುರ ಒತ್ತಾಯಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಅಂಬೇಡ್ಕರ್ ಅವರ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಿಂತನೆಗಳ ಕುರಿತು ಅಧ್ಯಯನ ಶಿಬಿರ

ಮಾನ್ವಿ: ತಾಲೂಕಿನ ಪೋತ್ನಾಳ ಪಟ್ಟಣದ ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ಆವರಣದಲ್ಲಿ ಬಹುಜನ ಸಂಘರ್ಷ ಸಮಿತಿ ಕರ್ನಾಟಕ ಹಾಗೂ ಜನತಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಬಲ್ಲಟಗಿ ಇವರ ಸಹಯೋಗದಲ್ಲಿ ಡಾ. ಬಿ.ಆರ್.

ಮುಂದೆ ಓದಿ →
ರಾಯಚೂರು ರಾಯಚೂರು

ಸಾಮಾನ್ಯ ಶಸ್ತ್ರಚಿಕಿತ್ಸೆ ಕುರಿತು ಅ.11ರಂದು ನವೋದಯ ಎಫ್‌ಎಂನಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ

ರಾಯಚೂರು, ಅ.10: ನಗರದ ನವೋದಯ ಶಿಕ್ಷಣ ಸಂಸ್ಥೆಯ ನವೋದಯ ಎಫ್‌ಎಂ 88.4 ಕೇಂದ್ರದ ವತಿಯಿಂದ ಸಾಮಾನ್ಯ ಶಸ್ತ್ರಚಿಕಿತ್ಸೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಅಕ್ಟೋಬರ್ 11ರಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮುಂದೆ ಓದಿ →