ಲಿಂಗಸುಗೂರು: ಪಟ್ಟಣದ 17ನೇ ವಾರ್ಡ್‌ನ ಲಕ್ಷ್ಮೀನಗರದಲ್ಲಿರುವ ಬನ್ನಿ ಮಹಾಂಕಾಳಿ ಹಾಗೂ ಗಣೇಶ ದೇವಸ್ಥಾನದಲ್ಲಿ ನವರಾತ್ರೋತ್ಸವ ಮತ್ತು ವಿಜಯದಶಮಿ ಹಬ್ಬದ ಅಂಗವಾಗಿ ಅ.11ರಿಂದ 19ರವರೆಗೆ ಒಂಬತ್ತು ದಿನಗಳ ಕಾಲ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ದೇವದುರ್ಗ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಅರ್ಹ ಮತದಾರರು ಮತದಾನದ ಹಕ್ಕು ಕಳೆದುಕೊಳ್ಳುವ ಆತಂಕವಿದೆ ಎಂದು ಆರೋಪಿಸಿ, ಅದನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ಮತ್ತು…
ಹಟ್ಟಿ: ಹಟ್ಟಿ ಚಿನ್ನದ ಗಣಿ ಕಂಪನಿಯ ಗಣಿ ಗುತ್ತಿಗೆ ಪ್ರದೇಶದಲ್ಲಿದ್ದರೂ ಭೂಸ್ವಾಧೀನವಾಗದೆ ಉಳಿದಿರುವ ರೈತರ ಪಟ್ಟಾ ಜಮೀನುಗಳ ಸಮಸ್ಯೆ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಡೈಮಂಡ್ ಡ್ರಿಲಿಂಗ್ ಕಾರ್ಯವನ್ನು ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ ವೀಕ್ಷಿಸಿದರು.
ಹಟ್ಟಿ ಚಿನ್ನದ ಗಣಿ: ಸಮೀಪದ ಗುರುಗುಂಟಾ ಹೋಬಳಿಯ ಕೆಬಿ ಸೆಕ್ಷನ್ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ನೇತೃತ್ವದಲ್ಲಿ ರೈತರು ರಾತ್ರಿ ಸಮಯದಲ್ಲಿ ದೊಡ್ಡಿಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿ ಸುಮಾರು ನಾಲ್ಕು ಗಂಟೆಗಳ ಕಾಲ ಧರಣಿ ನಡೆಸಿದರು.
ಮಾನ್ವಿ: ತಾಲೂಕಿನ ಹಿಂಗಾರು ಹಂಗಾಮಿನಲ್ಲಿ ಸರ್ಕಾರದ ಖರೀದಿ ಕೇಂದ್ರಗಳ ಮೂಲಕ ಜೋಳ ಮಾರಾಟ ಮಾಡಿರುವ ರೈತರಿಗೆ ಬಾಕಿ ಉಳಿದಿರುವ ₹109 ಕೋಟಿ ಹಣವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಪಾವತಿಸಲಾಗುತ್ತಿದೆ ಎಂದು ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ತಿಳಿಸಿದರು.
ರಾಯಚೂರು, ಅ.9: ಕರ್ನಾಟಕ ಮಾದಿಗ (ಮಾದರ) ಮಹಾಸಭಾದ ರಾಯಚೂರು ನಗರ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಸಭೆಯ ಸರ್ವಾನುಮತದ ನಿರ್ಣಯದ ಮೂಲಕ ಆಯ್ಕೆ ಮಾಡಲಾಗಿದ್ದು, ಕೆ.ಪಿ. ಅನಿಲ್ ಕುಮಾರ್ ಅವರನ್ನು ನಗರ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ರಾಯಚೂರು, ಅ.8: ತಾಯಿ ಮತ್ತು ಮಗುವಿನ ಆರೋಗ್ಯ ರಕ್ಷಣೆಗಾಗಿ ಮಕ್ಕಳ ಜನನದ ನಡುವೆ ಸೂಕ್ತ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಅಗತ್ಯವಾಗಿದ್ದು, ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ ಹೊಸದಾಗಿ ಪರಿಚಯಿಸಲಾಗುತ್ತಿರುವ ಚರ್ಮದಡಿಯ ಗರ್ಭನಿರೋಧಕ ಇಂಪ್ಲಾಂಟ್ ವಿಧಾನವು ಮಹಿಳೆಯರಿಗೆ ಸುರಕ್ಷಿತ ಹಾಗೂ ಪರಿಣಾಮಕಾರಿ ಆಯ್ಕೆಯಾಗಿದೆ ಎಂದು ರಾಜ್ಯ…
ಮೌನದಲ್ಲೇ ಮಹಾ ಯಜ್ಞ ಮಾಡುವ ಸಾಹಿತಿಗಳಲ್ಲಿ ಎಸ್. ವಿ. ಶಾಂತಕುಮಾರ ಸರ್ ಅವರು ಒಬ್ಬರು. ಮಾತು ಕಡಿಮೆ, ಸಾಧನೆ ಹೆಚ್ಚು ಎಂಬ ಮಾತಿಗೆ ಜೀವಂತ ನಿದರ್ಶನ ಅವರು. ಇವರು ಕೇವಲ ಲೇಖಕರಲ್ಲ. ಅವರು ಕಲೆಯ ಸಪ್ತಸ್ವರ.
ರಾಯಚೂರು, ಅ.9: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಪಡಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಬೃಹತ್…
ರಾಯಚೂರು, ಅ.9: ರಾಯಚೂರು ರಿಪೋರ್ಟರ್ಸ್ ಗಿಲ್ಡ್ ತನ್ನ 25 ವರ್ಷಗಳ ಸಾರ್ಥಕ ಪಯಣದ ಬೆಳ್ಳಿ ಮಹೋತ್ಸವವನ್ನು ಕೇವಲ ಸಂಭ್ರಮಾಚರಣೆಗೆ ಸೀಮಿತಗೊಳಿಸದೆ, ಜೀವ ಉಳಿಸುವ ಮಹತ್ವದ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ಸಮಾಜಮುಖಿ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಎ.
ಬೆಂಗಳೂರು, ಅ.9: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಹಾಗೂ ಹೊರನಾಡಿನ ಕನ್ನಡಿಗರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಉದ್ದೇಶದಿಂದ ಹೃದಯವಾಹಿನಿ ಮಂಗಳೂರಿನ ಮಂಜುನಾಥ ಸಾಗರ ಮತ್ತು ತಂಡದ ವತಿಯಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಆಯೋಜಿಸಿದ್ದ ತೃತೀಯ ಅನಿವಾಸಿ ಮತ್ತು ಹೊರನಾಡಿನ…
ರಾಯಚೂರು, ಅ.9: ತಾಲೂಕಿನ ಮಮದಾಪುರ ಗ್ರಾಮದ ಶ್ರೀ ಗಧಾರ ಮಾರಿಕಾಂಬ ದೇವಿ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 21ರವರೆಗೆ 13ನೇ ವರ್ಷದ ಶರನ್ನವರಾತ್ರಿ ದಸರಾ ಮಹೋತ್ಸವವನ್ನು ವಿವಿಧ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಸರವಪ್ಪ ತಿಳಿಸಿದರು.
ಮಾನ್ವಿ: ಸ್ನೇಹಿತರಿಬ್ಬರ ನಡುವೆ ನಡೆದ ಘಟನೆ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಸ್ನೇಹಿತನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ.
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಇಂಡಿಯಾ ಒಕ್ಕೂಟದ ಸಂಸದರು ಗುರುವಾರವೂ ಪ್ರತಿಭಟನೆ ಮುಂದುವರಿಸಿದ್ದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದರು.
ದಸರೆಯ ಮಹತ್ವ: ಭಾರತೀಯ ಹಬ್ಬಗಳು ಪೌರಾಣಿಕ ಹಾಗೂ ಐತಿಹಾಸಿಕ ಹಿನ್ನೆಲೆಯೊಂದಿಗೆ ಮಾನವೀಯ ಮೌಲ್ಯಗಳು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಪ್ರಮುಖ ಮಾಧ್ಯಮಗಳಾಗಿವೆ.
ಮಾನ್ವಿ: ಯುವಜನರಲ್ಲಿ ಪ್ರಜಾಪ್ರಭುತ್ವದ ಮಹತ್ವ, ವಿಧಾನಸಭೆಯ ಕಾರ್ಯವೈಖರಿ ಹಾಗೂ ಸಂಸದೀಯ ಪ್ರಕ್ರಿಯೆಗಳ ಕುರಿತು ಪ್ರಾಯೋಗಿಕ ಅರಿವು ಮೂಡಿಸುವುದೇ ಯುವ ಸಂಸತ್ತು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಉಪತಹಸೀಲ್ದಾರ್ ಅಬ್ದುಲ್ ವಾಹಿದ್ ಹೇಳಿದರು.
ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರ ಇವರ ಸಹಯೋಗದಲ್ಲಿ 2026-27ನೇ ಸಾಲಿನ ಅಂತರ ಮಹಾವಿದ್ಯಾಲಯಗಳ ಟೇಬಲ್ ಟೆನ್ನಿಸ್ ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯದ ತಂಡದ ಆಯ್ಕೆ ಪ್ರಕ್ರಿಯೆ ಅ.8ರಂದು ನಡೆಯಿತು.
ಗಾಣದಾಳ್: ಕುರುಡುತನ ತಡೆಗಟ್ಟಲು ವಿಟಮಿನ್–ಎ ಸಮೃದ್ಧ ಆಹಾರ ಸೇವನೆಗೆ ಆದ್ಯತೆ ನೀಡುವುದರ ಜೊತೆಗೆ ಕಾಲಕಾಲಕ್ಕೆ ನೇತ್ರ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಪಡೆಯಬೇಕು ಎಂದು ಮಟಮಾರಿ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ್ ಕುಮಾರ ಹೇಳಿದರು.
ಜಾಲಹಳ್ಳಿ, ಅ.8: ದೇವದುರ್ಗ ತಾಲೂಕಿನ ಹೊಸೂರು ಸಿದ್ದಾಪುರ ಗ್ರಾಮದಲ್ಲಿ ಎರಡು ದಿನಗಳ ಕಾಲ ನಡೆದ ಶ್ರೀ ಉಟಕನೂರು ತಾತನವರ 31ನೇ ಜಾತ್ರಾ ಮಹೋತ್ಸವ ಹಾಗೂ ಮಹಾದಾಸೋಹ ಭಕ್ತಿಭಾವ ಮತ್ತು ಸಡಗರದಿಂದ ಯಶಸ್ವಿಯಾಗಿ ಸಂಪನ್ನಗೊಂಡಿತು.
ರಾಯಚೂರು ಅ. 08 (ಕರ್ನಾಟಕ ವಾರ್ತೆ): ನಗರದ ವಾಸವಿನಗರ ರಸ್ತೆಯಲ್ಲಿರುವ ಕನ್ನಡ ಸಂಘದ ಕಚೇರಿ ಎದುರುಗಡೆ ನೂತನ 'ಆಧಾರ್ ಸೇವಾ ಕೇಂದ್ರ' (UIAI) ಪ್ರಾರಂಭವಾಗುತ್ತಿದ್ದು, (ಅ. 09, ಶುಕ್ರವಾರ) ಬೆಳಿಗ್ಗೆ 11-00 ಗಂಟೆಗೆ ಚಾಲನೆ ಸಿಗಲಿದೆ.
ಮಾನ್ವಿ: ಬರಗಾಲದಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ಸಮರ್ಪಕ ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ.12ರಂದು ಮಾನ್ವಿ ಪಟ್ಟಣದಲ್ಲಿ ಅಖಿಲ ಭಾರತ ಕಿಸಾನ್ ಸಂಘಟನೆ (ಎಐಕೆಎಸ್) ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಸಂಚಾಲಕ ಬಸಲಿಂಗಪ್ಪ…
ದೇವದುರ್ಗ, ಅ.7: ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣವನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಬೇಕು ಹಾಗೂ ರಾಯಚೂರು–ದೇವದುರ್ಗ–ಜಾಲಹಳ್ಳಿ–ವಿಜಯಪುರ ಮಾರ್ಗದಲ್ಲಿ ನೂತನ ರೈಲು ಸಂಪರ್ಕ ಕಲ್ಪಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ ಅವರಿಗೆ ಮನವಿ ಸಲ್ಲಿಸಲಾಯಿತು.
ದೇವದುರ್ಗ, ಅ.8: ರಾಯಚೂರು ಜಿಲ್ಲೆಯ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್ ಗಲಗ್ ಅವರನ್ನು ದಿಢೀರ್ ವರ್ಗಾವಣೆ ಮಾಡಿರುವ ಕ್ರಮದ ಹಿಂದೆ ರಾಜಕೀಯ ಒತ್ತಡ ಹಾಗೂ ಪ್ರಭಾವಿ ನಾಯಕರ ಹಸ್ತಕ್ಷೇಪವಿರುವ ಅನುಮಾನ ವ್ಯಕ್ತವಾಗುತ್ತಿದೆ.
ದೇವದುರ್ಗ, ಅ.8: ತಾಲೂಕಿನ ಹೂವಿನಡಗಿ ಗ್ರಾಮದ ಸಮೀಪ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯ ಮೇಲ್ಭಾಗದಲ್ಲಿ ತಗ್ಗು-ಗುಂಡಿಗಳು ಉಂಟಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ದುರಸ್ತಿ ಕಾರ್ಯ ಆರಂಭಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಚುನ್ನಪ್ಪ ಪೂಜೇರಿ ಬಣ) ತಾಲೂಕು ಘಟಕದ…