ಲಿಂಗಸುಗೂರು: ಪಟ್ಟಣದ 17ನೇ ವಾರ್ಡ್‌ನಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ನವರಾತ್ರೋತ್ಸವ ಹಾಗೂ ವಿಜಯದಶಮಿ ಹಬ್ಬದ ಅಂಗವಾಗಿ ಅ.11ರಿಂದ 19ರವರೆಗೆ ಭಗವತಿ ಭದ್ರಕಾಳಿಗೆ ಒಂಬತ್ತು ದಿನಗಳ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ನವದೆಹಲಿ, ಅ.7: ರಾಯಚೂರು–ಬೆಳಗಾವಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಕರ್ನಾಟಕದ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕಾಮಗಾರಿಗಳಿಗೆ ವೇಗ ನೀಡಬೇಕು ಹಾಗೂ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿಯಾಗಬಾರದು ಎಂದು ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ. ಕುಮಾರ ನಾಯಕ ಒತ್ತಾಯಿಸಿದರು.
ರಾಯಚೂರು, ಅ.7: ಭಾರತೀಯ ಜನತಾ ಪಕ್ಷದ ರಾಯಚೂರು ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಸಿದ್ದು ಹೂಗಾರ್ ಅವರನ್ನು ನೇಮಕ ಮಾಡಲಾಗಿದ್ದು, ಅವರ ನೂತನ ಜವಾಬ್ದಾರಿಗೆ ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.
ಪುಸ್ತಕದ ಮುಖಪುಟವೇ ಒಂದು ಕಾವ್ಯ. ಸಾಗರದ ನಡುವೆ ತೆರೆದ ಚಿಪ್ಪಿನಲ್ಲಿ ಬೆಳಗುವ ಒಂಟಿ ಮುತ್ತು, ಹನಿಯೊಂದು ಸಾಗರಕ್ಕೆ ಬೀಳುವಾಗ ಮೂಡುವ ತರಂಗ. ಇದು ಕೇವಲ ಚಿತ್ರವಲ್ಲ, ಕೃತಿಯ ತಾತ್ವಿಕ ನೆಲೆಗಟ್ಟು.
ಹಟ್ಟಿ ಚಿನ್ನದ ಗಣಿ: ಹಟ್ಟಿ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಕೊರತೆ ಮತ್ತು ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಬರದ ಆತಂಕ ಗಂಭೀರವಾಗಿದ್ದು, ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ರಾಯಚೂರು, ಅ.7: ಗುಜರಾತ್ ಮುಖ್ಯಮಂತ್ರಿ ಹಾಗೂ ದೇಶದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಆಡಳಿತದ ಜವಾಬ್ದಾರಿ ಹೊತ್ತು 25 ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಘಟಕ ಬುಧವಾರ ನಗರದಲ್ಲಿ ಆಯೋಜಿಸಿದ್ದ ‘ಸೇವಾ ಜ್ಯೋತಿ’ ಕಾರ್ಯಕ್ರಮವು ಪಕ್ಷದ ಕಾರ್ಯಕರ್ತರ ಬೃಹತ್ ಸಮಾಗಮಕ್ಕೆ ಸಾಕ್ಷಿಯಾಯಿತು.
ಮಂತ್ರಾಲಯ: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಧೀನದಲ್ಲಿರುವ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ (NCSK) ಸದಸ್ಯ ಹಾಗೂ ಉಪಾಧ್ಯಕ್ಷ ಹರದೀಪ್ ಸಿಂಗ್ ಗಿಲ್ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಆಶೀರ್ವಾದ ಪಡೆದರು.
ರಾಯಚೂರು, ಅ.7: ಭಾರತೀಯ ಪರಂಪರೆಯ ಆಯುರ್ವೇದ ಚಿಕಿತ್ಸಾ ಪದ್ಧತಿ ಆರೋಗ್ಯ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಜನರಿಗೆ ಗುಣಮಟ್ಟದ ಚಿಕಿತ್ಸೆ ಮತ್ತು ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಪೂರ್ಣಿಮಾ ಆಯುರ್ವೇದಿಕ್ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ…
ರಾಯಚೂರು: ಹೆಗ್ಗಸನಹಳ್ಳಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಐಜಿ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ ಕೈಗಾರಿಕಾ ಚಟುವಟಿಕೆಗಳಿಗೆ ಸಂಬಂಧಿಸಿದ ಪರವಾನಿಗೆ, ಜಮೀನು ಬಳಕೆ, ಪರಿಸರ ಹಾಗೂ ಕಾರ್ಮಿಕರ ಬಾಕಿ ಸೌಲಭ್ಯಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಅ.16ರಂದು ಕಂಪನಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ರಸ್ತೆ ತಡೆ…
ರಾಯಚೂರು: ತಾಲೂಕಿನ ಪ್ರಮುಖ ಹೋಬಳಿ ಕೇಂದ್ರವಾದ ಗಿಲ್ಲೆಸೂಗೂರು ಬಸ್ ನಿಲ್ದಾಣದಲ್ಲಿರುವ ಶೌಚಾಲಯ ಮೂಲಸೌಕರ್ಯಗಳ ಕೊರತೆಯಿಂದ ಬಳಕೆಗೆ ಬಾರದ ಸ್ಥಿತಿಯಲ್ಲಿದ್ದು, ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ರಾಯಚೂರು: ಭಾರತ ಸರ್ಕಾರದ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಹರದೀಪ್ ಸಿಂಗ್ ಗಿಲ್ ಅವರು ರಾಯಚೂರು ನಗರಕ್ಕೆ ಭೇಟಿ ನೀಡಿ, ಸಫಾಯಿ ಕರ್ಮಚಾರಿಗಳು ಹಾಗೂ ಪೌರಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ನೇರವಾಗಿ ಮಾಹಿತಿ ಪಡೆದುಕೊಂಡರು.
ಗಂಗಾವತಿ, ಅ.6: ವಿಲ್ ಮೂಲಕ ಬಂದ ಜಮೀನಿನ ಉತಾರವನ್ನು ಅರ್ಜಿದಾರರ ಹೆಸರಿಗೆ ಮಾಡಿಕೊಡಲು ₹40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಸಂಗಾಪುರದ ಗ್ರಾಮ ಆಡಳಿತಾಧಿಕಾರಿ ಹಾಗೂ ಗ್ರಾಮ ಸಹಾಯಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ರಾಯಚೂರು: ಬಾಲ್ಯದಲ್ಲಿ ಕಾಣಿಸಿಕೊಳ್ಳುವ 12 ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸಲು ಹುಟ್ಟಿನಿಂದ ಒಂದು ವರ್ಷದೊಳಗೆ ವಯಸ್ಸಿಗೆ ಅನುಗುಣವಾಗಿ ಎಲ್ಲ ಲಸಿಕೆಗಳನ್ನು ತಪ್ಪದೆ ಹಾಕಿಸಬೇಕು ಎಂದು ಸಿಯಾತಲಾಬ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗುಂಡಮ್ಮ ಪಾಲಕರಿಗೆ ಮನವಿ ಮಾಡಿದರು.
ಕಲ್ಲೂರು, ಅ.6: ಸೊಳ್ಳೆಗಳ ಮೂಲಕ ಹರಡುವ ಆನೆಕಾಲು ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ನಿಯಂತ್ರಿಸಲು ಆರೋಗ್ಯ ಇಲಾಖೆ ನಡೆಸುತ್ತಿರುವ ರಾತ್ರಿವೇಳೆಯ ರಕ್ತಲೇಪನ ಪರೀಕ್ಷೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸಂಗಮೇಶ್ ಮನವಿ ಮಾಡಿದರು.
ನವದೆಹಲಿ: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣ ರದ್ದುಪಡಿಸಬೇಕು ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿ INDIA ಒಕ್ಕೂಟದ ಸಂಸದರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು.
ಮಾನ್ವಿ: ತಾಲೂಕಿನ ಕರೇಗುಡ್ಡ ಗ್ರಾಮದ ಶ್ರೀ ಮಹಾಂತೇಶ್ವರ ಮಠದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಅ.11ರಿಂದ ಶ್ರೀದೇವಿ ಪುರಾಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಶ್ರೀ ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಮಾನ್ವಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಉಂಟಾಗಿರುವ ಗಂಭೀರ ಅನುಮಾನಗಳು ಮತ್ತು ಆಕ್ಷೇಪಗಳ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹಿಸಿದೆ.
ರಾಯಚೂರು: ಕರ್ನಾಟಕ ಮಡಿವಾಳ ಸಂಘದ ರಾಯಚೂರು ಜಿಲ್ಲಾಧ್ಯಕ್ಷರಾಗಿ ಯು. ಆಂಜನೇಯ ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ ಎಂದು ಮಡಿವಾಳ ಮಾಚಿದೇವ ನಿಗಮದ ಅಧ್ಯಕ್ಷ ಹಾಗೂ ಕರ್ನಾಟಕ ಮಡಿವಾಳ ಸಂಘದ ರಾಜ್ಯಾಧ್ಯಕ್ಷ ನಂಜಪ್ಪ ತಿಳಿಸಿದರು.
ದೇವದುರ್ಗ, ಅ.6: ಧಮ್ಮ, ಸಮಾನತೆ ಹಾಗೂ ಸಾಮಾಜಿಕ ಜಾಗೃತಿಯ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ‘ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ–2026’ಕ್ಕೆ ದೇವದುರ್ಗದಲ್ಲಿ ಚಾಲನೆ ನೀಡಲಾಯಿತು.
ಮಾನ್ವಿ: ದೇಶದ ವೈವಿಧ್ಯತೆಯನ್ನು ಗೌರವಿಸುವುದರೊಂದಿಗೆ ಏಕತೆ ಮತ್ತು ಸೌಹಾರ್ದದ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸುವುದು ಇಂದಿನ ಅಗತ್ಯವಾಗಿದೆ ಎಂದು ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜೆ.ಎಲ್. ಈರಣ್ಣ ಹೇಳಿದರು.