ದೇವದುರ್ಗ: ರಂಗಭೂಮಿ ನಾಡಿನ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಪ್ರಮುಖ ಮಾಧ್ಯಮವಾಗಿದ್ದು, ಸಮಾಜದ ಸಮಸ್ಯೆಗಳು ಹಾಗೂ ಮಾನವೀಯ ಮೌಲ್ಯಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಶಕ್ತಿ ಹೊಂದಿದೆ ಎಂದು ಗಬ್ಬೂರಿನ ನಿವೃತ್ತ ಶಿಕ್ಷಕ ಪ್ರಕಾಶ್ ಗದ್ದೆ ಹೇಳಿದರು.
ರಾಯಚೂರು, ಅ.6: ವೈದ್ಯಕೀಯ ಮೇಲ್ವಿಚಾರಣಾಧಿಕಾರಿಗಳು (HIO) ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ (PHCO) ಹುದ್ದೆಗಳನ್ನು ರದ್ದುಪಡಿಸಬೇಕು ಹಾಗೂ ಖಾಯಂ ನೌಕರರು ಕೆಲಸ ಮಾಡುತ್ತಿಲ್ಲ ಎಂಬ ರೀತಿಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳು (CHO) ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ನೀಡಿರುವುದಕ್ಕೆ ಕರ್ನಾಟಕ ರಾಜ್ಯ ಆರೋಗ್ಯ…
ರಾಯಚೂರು, ಅ.6: ನ್ಯಾಯಾಲಯದ ಕಲಾಪಗಳು ಹಾಗೂ ಕಕ್ಷಿದಾರರ ಪ್ರಕರಣಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ವಕೀಲರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ವೈಯಕ್ತಿಕ ಹಾಗೂ ಕುಟುಂಬದ ಹಿತದೃಷ್ಟಿಯಿಂದ ನಿಯಮಿತ ಆರೋಗ್ಯ ತಪಾಸಣೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ಬಿ.ಬಿ. ಜಕಾತಿ ಹೇಳಿದರು.
ರಾಯಚೂರು, ಅ.6: ಅಂಗನವಾಡಿ ನೌಕರರ ದೀರ್ಘಕಾಲದ ಬೇಡಿಕೆಗಳಿಗೆ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಐಸಿಡಿಎಸ್ ಯೋಜನೆಗೆ ಮೀಸಲಿಡುವ ಅನುದಾನವನ್ನು ಕಡಿತಗೊಳಿಸುವ ಮೂಲಕ ಯೋಜನೆಯ ಸ್ವರೂಪವನ್ನೇ ದುರ್ಬಲಗೊಳಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯಾಧ್ಯಕ್ಷೆ ಕಾಂ. ಶಾಂತ ಘಂಟಿ ಆರೋಪಿಸಿದರು.
ರಾಯಚೂರು: ಗ್ರಾಮೀಣ ಪ್ರದೇಶದ ಜನರಿಗೆ ಸಮಯೋಚಿತ, ಗುಣಮಟ್ಟದ ಹಾಗೂ ಮಾನವೀಯ ಆರೋಗ್ಯ ಸೇವೆ ದೊರೆಯಬೇಕು ಎಂಬುದು ಸರ್ಕಾರ ಮತ್ತು ಜನಪ್ರತಿನಿಧಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.
ಲಿಂಗಸುಗೂರು: ಪಟ್ಟಣದ 5ನೇ ವಾರ್ಡ್ನ ಸಂತೆ ಬಜಾರ್ ಪ್ರದೇಶದಲ್ಲಿರುವ ಮಹಿಳಾ ಶೌಚಾಲಯದ ಸುತ್ತಮುತ್ತ ಸ್ವಚ್ಛತಾ ಕಾರ್ಯ ಆರಂಭಿಸಿರುವುದು ಸ್ವಾಗತಾರ್ಹವಾಗಿದ್ದರೂ, ಶೌಚಾಲಯವನ್ನು ಮಹಿಳೆಯರು ಮುಕ್ತವಾಗಿ ಬಳಸಲು ಅಗತ್ಯವಾದ ಮೂಲಸೌಕರ್ಯಗಳನ್ನು ತಕ್ಷಣ ಕಲ್ಪಿಸಬೇಕು ಎಂದು ಕರ್ನಾಟಕ ಜನಪರ ಹೋರಾಟ ಲಿಂಗಸುಗೂರು ಸಮಿತಿ ಒತ್ತಾಯಿಸಿದೆ.
ರಾಯಚೂರು: ಅಕ್ಟೋಬರ್ 23ರಂದು ನಡೆಯಲಿರುವ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಶಶೀಲ್ ನಮೋಶಿ ಅವರನ್ನು ಬೆಂಬಲಿಸುವಂತೆ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹಾಗೂ ರಾಯಚೂರು ನಗರ ಶಾಸಕ ಡಾ. ಎಸ್.
ರಾಯಚೂರು, ಅ.6: ಉದ್ಯೋಗಕ್ಕಾಗಿ ಹುಟ್ಟೂರು ತೊರೆದು ಬೆಂಗಳೂರಿನಲ್ಲಿ ನೆಲೆಸಿದ್ದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಕುಟುಂಬವೊಂದು ಸಿಲಿಂಡರ್ ಸ್ಫೋಟದಿಂದ ಭೀಕರ ದುರಂತಕ್ಕೊಳಗಾಗಿದ್ದು, ಪತಿ-ಪತ್ನಿ ಹಾಗೂ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಯಚೂರು ಅ. 06 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆವಹಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.
ರಾಯಚೂರು ಅ. 06 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಅಕ್ಟೋಬರ್ 08 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1 ಗಂಟೆವರೆಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಕೋರಲಾಗಿದೆ.
ರಾಯಚೂರು ಅ. 06 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರೇತರ ವಸತಿ ನಿಲಯಗಳ ವಸತಿಯುತ ಶಾಲೆ/ಕಾಲೇಜುಗಳ ನೋಂದಣಿ ಕುರಿತು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇಂದಿನ ದಿನಗಳಲ್ಲಿ ಪಾಲಕರು ತಮ್ಮ ಮಕ್ಕಳನ್ನು ವೈದ್ಯರು ಅಥವಾ ಇಂಜಿನಿಯರ್ಗಳಾಗಿ ರೂಪಿಸಬೇಕು ಎಂಬ ಆಸೆಯಿಂದ ಬಾಲ್ಯದಲ್ಲಿಯೇ ಜೆಇಇ, ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಮನ ಹರಿಸುತ್ತಿದ್ದಾರೆ.
ರಾಯಚೂರು: ದೇವರಾಜು ಅರಸು ವಿಶೇಷ ವರ್ಗ ಯೋಜನೆಯಡಿ ನಿವೇಶನ ಕೋರಿ ಸಲ್ಲಿಸಿರುವ ಅರ್ಜಿಗಳ ಪರಿಶೀಲನೆ ನಡೆದು ಸುಮಾರು ಎರಡು ವರ್ಷ ಕಳೆದರೂ ಫಲಾನುಭವಿಗಳ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಕಳುಹಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಅರ್ಹರಿಗೆ ಶೀಘ್ರ ನಿವೇಶನ ಮಂಜೂರು ಮಾಡಬೇಕು…
ರಾಯಚೂರು: ಬರಗಾಲದ ಸಂಕಷ್ಟದ ನಡುವೆಯೇ ಎನ್ಆರ್ಬಿಸಿ ಕಾಲುವೆಯಲ್ಲಿ ಜಾರಿಯಲ್ಲಿರುವ ವಾರಬಂದಿ ಪದ್ಧತಿ ರೈತರಿಗೆ ಮತ್ತೊಂದು ಸಮಸ್ಯೆಯಾಗಿ ಪರಿಣಮಿಸಿದ್ದು, ಬೆಳೆಗಳಿಗೆ ಸಮಯಕ್ಕೆ ಸರಿಯಾಗಿ ನೀರು ಸಿಗದೆ ಮೆಣಸಿನಕಾಯಿ ಬೆಳೆ ಒಣಗುವ ಆತಂಕ ಎದುರಾಗಿದೆ.
ರಾಯಚೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಹಿಂಪಡೆಯಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂಬ ಬೇಡಿಕೆ ಮುಂದಿಟ್ಟುಕೊಂಡು ಇಂಡಿಯಾ ಮೈತ್ರಿಕೂಟದ ನೇತೃತ್ವದ ಮತ ಕಾವಲು ಸಮಿತಿಯು ಅ.9ರಂದು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿದೆ…
ರಾಯಚೂರು: ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಪಿಂಜಾರ್-ನದಾಫ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಕೂಡಲೇ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಅಖಿಲ ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಹಕ್ಕುಗಳ ಸಂಘದ ರಾಜ್ಯಾಧ್ಯಕ್ಷ ಇಮ್ರಾನ್ ಬಡೇಸಾಬ್ ಒತ್ತಾಯಿಸಿದರು.
ಮಾನ್ವಿ: ಮಕ್ಕಳಿಗೆ ಪಠ್ಯ ಶಿಕ್ಷಣದ ಜೊತೆಗೆ ಹಣದ ಮಹತ್ವ, ಉಳಿತಾಯದ ಅಭ್ಯಾಸ, ನಿಯಂತ್ರಿತ ಖರ್ಚು, ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ವಿಮೆಯ ಕುರಿತು ಪ್ರಾಯೋಗಿಕ ಜ್ಞಾನ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಾನ್ವಿ ಪಟ್ಟಣ ಸಹಕಾರಿ ಬ್ಯಾಂಕಿನ ಸಿಇಒ ಹಾಗೂ ಲಯನ್ಸ್ ಕ್ಲಬ್ನ ನಾಗರಾಜ್ ಹೇಳಿದರು.
ರಾಯಚೂರು: ಹಿಂದುಳಿದ ವರ್ಗಗಳಲ್ಲಿರುವ ಸಣ್ಣ ಹಾಗೂ ಅತಿ ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಮತ್ತು ಸಮರ್ಪಕ ಪ್ರಾತಿನಿಧ್ಯ ಕಲ್ಪಿಸಲು ಓಬಿಸಿ ವರ್ಗದೊಳಗೆ ಒಳ ಮೀಸಲಾತಿ ಜಾರಿಗೊಳಿಸುವ ನಿಟ್ಟಿನಲ್ಲಿ ಸಮಗ್ರ ಹಾಗೂ ವೈಜ್ಞಾನಿಕ ಅಧ್ಯಯನ ನಡೆಸಬೇಕು ಎಂದು ಬಿಜೆಪಿ ಓಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ರಘು…
ಲಿಂಗಸುಗೂರು: ಆರೋಗ್ಯ ಇಲಾಖೆ ಸಾರ್ವಜನಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆಯೇ ಪ್ರತಿಯೊಬ್ಬರೂ ತಮ್ಮ ಹಾಗೂ ತಮ್ಮ ಪ್ರೀತಿಪಾತ್ರರ ಹೃದಯದ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಎಆರ್ಟಿ ವಿಭಾಗದ ವೈದ್ಯಾಧಿಕಾರಿ ಡಾ. ರುದ್ರಮುನಿ ಹೇಳಿದರು.
ರಾಯಚೂರು: ಎಚ್ಐವಿ–ಏಡ್ಸ್ ಕುರಿತು ಸಾರ್ವಜನಿಕರಲ್ಲಿ, ವಿಶೇಷವಾಗಿ ಯುವ ಸಮುದಾಯದಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಹಾಗೂ ರೆಡ್ ರಿಬ್ಬನ್ ಕ್ಲಬ್ (ಆರ್ಆರ್ಸಿ) ಘಟಕಗಳ ವತಿಯಿಂದ ನಗರದ ವಿವಿಧೆಡೆ ಫ್ಲ್ಯಾಶ್ ಮಾಬ್ ಮತ್ತು ಬೀದಿ ನಾಟಕ…
ಹಟ್ಟಿ ಚಿನ್ನದ ಗಣಿ: ಗುರುಗುಂಟಾ ವ್ಯಾಪ್ತಿಯ ತೋಟದೊಡ್ಡಿಗಳಲ್ಲಿರುವ ಮನೆಗಳಿಗೆ ಸಿಂಗಲ್ ಫೇಸ್ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.