ಸಿಂಧನೂರು: 2026-27ನೇ ಸಾಲಿನ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ತಾಲೂಕಿನ ಗೋನವಾರ ಗ್ರಾಮದ ಶ್ರೀ ತಿರುಮಲರಾವ್ ಸರ್ಕಾರಿ ಪ್ರೌಢಶಾಲೆಯ ಬಾಲಕರ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಕರೇಗುಡ್ಡ, ಅ.2: ಶ್ರೀ ಮಹಾಂತೇಶ್ವರ ಸಂಸ್ಥಾನ ಮಠದ ಶ್ರೀ ಆದಿಶಕ್ತಿ ಜಗನ್ಮಾತೆ ಅಂಬಾದೇವಿಯ ಸನ್ನಿಧಿಯಲ್ಲಿ ಅನಂತ ಹುಣ್ಣಿಮೆಯ ನಂತರದ ಶುಕ್ರವಾರದಂದು ಸಂಪ್ರದಾಯಬದ್ಧವಾಗಿ ನಡೆಯುವ ವಿಶೇಷ ನೈವೇದ್ಯ ಸಮರ್ಪಣಾ ಮಹೋತ್ಸವವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸಲಾಯಿತು.
ಮಟಮಾರಿ: ವಿದ್ಯಾರ್ಥಿಗಳು ಕೇವಲ ಉತ್ತಮ ಅಂಕ ಗಳಿಸುವುದಕ್ಕೆ ಸೀಮಿತರಾಗದೆ, ಉತ್ತಮ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರಂತೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಜ್ಞಾನ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಸಾಬಣ್ಣ ಗಟ್ಟುಬಿಚ್ಚಾಲಿ ಹೇಳಿದರು.
ಕಲ್ಮಲಾ: ಇಲ್ಲಿನ ಜನತಾ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.
ದೇವದುರ್ಗ: ಪಟ್ಟಣದ ಪುರಸಭೆ ಕಾರ್ಯಾಲಯದ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.
ರಾಯಚೂರು, ಅ.2: ಮಹಾತ್ಮ ಗಾಂಧೀಜಿಯವರ ಜಯಂತಿಯನ್ನು ಕೇವಲ ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ, ಅವರು ಪ್ರತಿಪಾದಿಸಿದ ಸತ್ಯ, ಅಹಿಂಸೆ, ಸೇವೆ ಹಾಗೂ ಸರಳತೆಯ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಆರ್ಯ ವೈಶ್ಯ ಸ್ಟೇಷನ್ ಏರಿಯಾ ಸಂಘದ ಅಧ್ಯಕ್ಷ ಪಾಗುಂಟ ಬಿ. ರಾಮಯ್ಯ ಹೇಳಿದರು.
ದೇವದುರ್ಗ, ಅ.2: ನಗರದ ಶಾಸಕರ ಕಾರ್ಯಾಲಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಶುಕ್ರವಾರ ಗೌರವಪೂರ್ವಕವಾಗಿ ಆಚರಿಸಲಾಯಿತು.
ಜಾಲಹಳ್ಳಿ, ಅ.2: ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ ಸತ್ಯ, ಅಹಿಂಸೆ, ಶಾಂತಿ ಮತ್ತು ಸಹಬಾಳ್ವೆಯ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಕೋಮುವಾದದ ವಿರುದ್ಧ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಪತ್ರಕರ್ತ ಗಿರಿಯಪ್ಪ ಪೂಜಾರಿ ಹೇಳಿದರು.
ಸಿಂಧನೂರು: ಮೆದುಳು ಜ್ವರದಂತಹ ಮಾರಕ ಕಾಯಿಲೆಯಿಂದ ಮಕ್ಕಳನ್ನು ರಕ್ಷಿಸಲು ಎರಡು ವರ್ಷದೊಳಗಿನ ಮಕ್ಕಳಿಗೆ ಸರ್ಕಾರದಿಂದ ಉಚಿತವಾಗಿ ನೀಡಲಾಗುವ ಜೆ.ಇ. ಲಸಿಕೆಯನ್ನು ತಪ್ಪದೇ ಹಾಕಿಸಬೇಕು ಎಂದು ಸಾಲಗುಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಯುಷ್ ವೈದ್ಯಾಧಿಕಾರಿ ಡಾ. ಲಕ್ಷ್ಮಿ ಕನಕಿ ತಿಳಿಸಿದರು.
ಸಿಂಧನೂರು, ಅ.2: ಸತ್ಯ ಮತ್ತು ಅಹಿಂಸೆಯನ್ನು ಬದುಕಿನ ಮೂಲಮಂತ್ರವನ್ನಾಗಿಸಿಕೊಂಡು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧೀಜಿಯವರ ಜೀವನ, ಚಿಂತನೆ ಮತ್ತು ಹೋರಾಟ ಪ್ರತಿಯೊಬ್ಬರಿಗೂ ಆದರ್ಶವಾಗಿದೆ ಎಂದು ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಬಸವರಾಜ ಬಾದರ್ಲಿ ಹೇಳಿದರು.
ರಾಯಚೂರು: ನಗರದ ಶಿಯಾ ತಲಾಬ್ ವ್ಯಾಪ್ತಿಯ ವಾರ್ಡ್ ನಂ.30 ಹಾಗೂ 31ಕ್ಕೆ ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಭೇಟಿ ನೀಡಿ, ಅಲ್ಲಿನ ನಿವಾಸಿಗಳು ಎದುರಿಸುತ್ತಿರುವ ವಸತಿ, ರಸ್ತೆ, ಚರಂಡಿ ಹಾಗೂ ಬೀದಿ ದೀಪ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳನ್ನು ಪರಿಶೀಲಿಸಿದರು.
ರಾಯಚೂರು, ಅ.2: ಆರೋಗ್ಯಕರ ಜೀವನಕ್ಕೆ ಸ್ವಚ್ಛ ಪರಿಸರ ಅತ್ಯಗತ್ಯವಾಗಿದ್ದು, ಸ್ವಚ್ಛತೆಯನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಬದುಕಿನ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ. ಮಲ್ಲಿಕಾರ್ಜುನ್ ಹೇಳಿದರು.
ರಾಯಚೂರು, ಅ.2: ಸ್ವಾತಂತ್ರ್ಯ ಚಳವಳಿಯಲ್ಲಿ ಮಹತ್ವದ ಪಾತ್ರ ವಹಿಸಿದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬದುಕು, ತತ್ವ ಮತ್ತು ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ರೇಖಾ ಪಾಟೀಲ ಹೇಳಿದರು.
ರಾಯಚೂರು: ಮಹಾತ್ಮ ಗಾಂಧೀಜಿಯವರ 157ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ನಗರದ ನಿಜಲಿಂಗಪ್ಪ ನಗರದ ಸಾರ್ವಜನಿಕ ಸ್ಥಳಗಳು ಮತ್ತು ಉದ್ಯಾನವನಗಳಲ್ಲಿ ಸ್ವಚ್ಛತಾ ಶ್ರಮದಾನ ನಡೆಸಲಾಯಿತು.
ರಾಯಚೂರು, ಅ.2: ಶಿಕ್ಷಣವು ಕೇವಲ ಉದ್ಯೋಗ ಪಡೆಯುವ ಸಾಧನವಾಗಿ ಉಳಿಯದೆ, ವಿದ್ಯಾರ್ಥಿಗಳಲ್ಲಿ ನೀತಿ, ನೈತಿಕತೆ, ವೈಚಾರಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ಸಮಾಜಮುಖಿ ಹೊಸ ಪೀಳಿಗೆಯನ್ನು ರೂಪಿಸುವಂತಿರಬೇಕು ಎಂದು ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಹೇಳಿದರು.
ರಾಯಚೂರು: ರಸ್ತೆ ಅಪಘಾತಗಳ ತಡೆ ಹಾಗೂ ಸುರಕ್ಷಿತ ವಾಹನ ಚಾಲನೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ನವೋದಯ ಎಫ್‌ಎಂ 88.4 ವತಿಯಿಂದ ಅ.3ರಂದು ವಿಶೇಷ ಮಾಹಿತಿ ಕಾರ್ಯಕ್ರಮ ಪ್ರಸಾರವಾಗಲಿದೆ.
ರಾಯಚೂರು: ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತ್ಯಾಗ, ಬಲಿದಾನ ಮಾಡಿದ್ದು, ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ ಶಾಂತಿ ಮತ್ತು ಅಹಿಂಸೆಯ ಹೋರಾಟವೂ ಸ್ವಾತಂತ್ರ್ಯ ಚಳವಳಿಯಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎನ್. ಶಂಕ್ರಪ್ಪ ಹೇಳಿದರು. ಎನ್.
ರಾಯಚೂರು, ಅ.2: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ, ರಾಯಚೂರು ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಹೇರೂರು ಚಂದ್ರಾಯಗೌಡ ಮಲ್ಹಾರ ಸಿದ್ದಪ್ಪಗೌಡ ಕರೆಡ್ಡಿ ಶಿಕ್ಷಣ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಗುರುವಾರ ನಡೆಯಿತು.
ರಾಯಚೂರು, ಅ.10: ಅನಪೇಕ್ಷಿತ ಗರ್ಭಧಾರಣೆಯ ಸಂದರ್ಭದಲ್ಲಿ ಮಹಿಳೆಯರಿಗೆ ಕಾನೂನುಬದ್ಧ, ಸುರಕ್ಷಿತ ಹಾಗೂ ಗುಣಮಟ್ಟದ ಗರ್ಭಪಾತ ಸೇವೆಗಳು ದೊರೆಯುವುದು ಅತ್ಯಂತ ಅಗತ್ಯವಾಗಿದ್ದು, ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಅರ್ಹ ವೈದ್ಯರ ಮೇಲ್ವಿಚಾರಣೆಯಲ್ಲಿಯೇ ಗರ್ಭಪಾತ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಪುಂಡಲಿಕ…
ಮಾನ್ವಿ: ಮಕ್ಕಳ ಭವಿಷ್ಯಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಗಳನ್ನು ವೃದ್ಧಾಪ್ಯದಲ್ಲಿ ಆರೈಕೆ ಮಾಡುವ ಜವಾಬ್ದಾರಿಯಿಂದ ಕೆಲವರು ದೂರ ಸರಿಯುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ.
ಮಾನ್ವಿ: ಮಳೆ ಕೊರತೆಯಿಂದ ಎದುರಾಗಿರುವ ಸಂಕಷ್ಟ ನಿವಾರಣೆಯಾಗಿ ನಾಡಿನಲ್ಲಿ ಉತ್ತಮ ಮಳೆಯಾಗಿ ಬೆಳೆ ಸಮೃದ್ಧಿಯಾಗಲಿ ಎಂಬ ಆಶಯದೊಂದಿಗೆ ಪಟ್ಟಣದಲ್ಲಿ ಸರ್ವಧರ್ಮಗಳ ಧರ್ಮಗುರುಗಳ ನೇತೃತ್ವದಲ್ಲಿ ಸಾಮೂಹಿಕ ವಿಶೇಷ ಪ್ರಾರ್ಥನೆ ನಡೆಯಿತು.
ರಾಯಚೂರು, ಅ.1: ನಗರದಲ್ಲಿ ಅನುಮತಿ ಇಲ್ಲದೆ ಹೋಟೆಲ್, ಡಾಬಾ, ಕ್ಯಾಂಟೀನ್, ಮೊಬೈಲ್ ಶಾಪ್ ಸೇರಿದಂತೆ ವಿವಿಧೆಡೆ ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಹಾಗೂ ಅಕ್ರಮವಾಗಿ ಮಾರಾಟ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಿ, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಮ್ಮ…
ಮಂತ್ರಾಲಯ, ಅ.1: ಪ್ರಸಿದ್ಧ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಸೆಪ್ಟೆಂಬರ್ ತಿಂಗಳ ಹುಂಡಿ ಕಾಣಿಕೆ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, 22 ದಿನಗಳ ಅವಧಿಯಲ್ಲಿ ಒಟ್ಟು ₹3,04,37,906 ಕಾಣಿಕೆ ಸಂಗ್ರಹವಾಗಿದೆ.