ಮಾನ್ವಿ: ಪಟ್ಟಣದ ಶ್ರೀ ವೆಂಕಟೇಶ್ವರ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ‘ನಶಾಮುಕ್ತ ಭಾರತ ಅಭಿಯಾನ’ ಅಂಗವಾಗಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಹಟ್ಟಿ ಚಿನ್ನದ ಗಣಿ: ಸಮೀಪದ ಗೆಜ್ಜಲಗಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಲೋಗಲ್ ಕ್ರಾಸ್‌ನಲ್ಲಿ ದೀರ್ಘಕಾಲದಿಂದ ಮುಂದುವರಿದಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಹಾಗೂ ಚಿಕ್ಕನಗನೂರಿನ ಕರ ವಸೂಲಿಗಾರರನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಂಘಟನೆ (ಎಐಕೆಎಸ್) ಪದಾಧಿಕಾರಿಗಳು ತಾಲೂಕು…
ರಾಯಚೂರು, ಸೆ.29: ಜಿಲ್ಲೆಯ ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ಮಹತ್ವದ ಪ್ರವಾಸಿ ತಾಣಗಳನ್ನು ಸಂರಕ್ಷಿಸಿ, ಅವುಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.
ರಾಯಚೂರು, ಸೆ.29: ಕಲಬುರಗಿಯಲ್ಲಿ ತೆರವು ಮಾಡಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಅದೇ ಸ್ಥಳದಲ್ಲಿ ಮರುಸ್ಥಾಪಿಸಲು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕುರುಬ ಸಮಾಜದ ಮುಖಂಡ ಕುರಿ ಅಂಜನಪ್ಪ ಒತ್ತಾಯಿಸಿದರು.
ರಾಯಚೂರು: ಸರ್ಕಾರಿ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಶಾಲೆಗಳು, ಪ್ರೌಢಶಾಲೆಗಳು, ವಸತಿ ಶಾಲೆಗಳು, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಗ್ರಂಥಪಾಲಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ವತಿಯಿಂದ ಅಕ್ಟೋಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಒಂದು…
ರಾಯಚೂರು, ಸೆ.28: ತೆರಿಗೆ ವಸೂಲಾತಿಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದೆ ಕರ್ತವ್ಯ ಲೋಪ ಎಸಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ದೇವದುರ್ಗ ತಾಲೂಕಿನ ಶಾವಂತಗೇರಾ ಹಾಗೂ ಮಾನ್ವಿ ತಾಲೂಕಿನ ಸಾದಾಪುರ ಗ್ರಾಮ ಪಂಚಾಯಿತಿಗಳ ಇಬ್ಬರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಮಾನ್ವಿ: ಪಟ್ಟಣದ ರಾಯಚೂರು–ಸಿಂಧನೂರು ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಲೂಕು ಆಡಳಿತ ಭವನ ‘ಪ್ರಜಾಸೌಧ’ ಕಾಮಗಾರಿಯನ್ನು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಪರಿಶೀಲಿಸಿ, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಅರಕೇರಾ, ಸೆ.28: ಗಾಣಧಾಳ ಗ್ರಾಮ ಪಂಚಾಯಿತಿಯನ್ನು ಅರಕೇರಾ ತಾಲ್ಲೂಕಿನಲ್ಲಿಯೇ ಮುಂದುವರಿಸುವುದರ ಜೊತೆಗೆ ಗಾಣಧಾಳ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ಘೋಷಿಸಿ, ನಾಡ ಕಚೇರಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಹಟ್ಟಿ ಚಿನ್ನದ ಗಣಿ: ಪಟ್ಟಣದ ದಿ. ಕಾಮ್ರೇಡ್ ಅರವಿಂದ್ ಮಳೆಬನ್ನೂರು ಗ್ರಂಥಾಲಯದಲ್ಲಿ ಮಹಾನ್ ಕ್ರಾಂತಿಕಾರಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಭಗತ್ ಸಿಂಗ್ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.
ರಾಯಚೂರು ಸೆಪ್ಟಂಬರ್ 28 (ಕರ್ನಾಟಕ ವಾರ್ತೆ): ಅಕ್ಟೋಬರ್ ಮೊದಲ ವಾರದಲ್ಲಿ ಬರ ಅಧ್ಯಯನಕ್ಕಾಗಿ ಕೇಂದ್ರ ತಂಡ ರಾಜ್ಯಕ್ಕೆ ಆಗಮಿಸಲಿದ್ದು, ಮೊದಲನೇಯ ಹಂತದಲ್ಲಿ ಬರ ಪೀಡಿತ ಎಂದು ಘೋಷಣೆಯಾದ ರಾಯಚೂರು ಜಿಲ್ಲೆಯ ತಾಲೂಕುಗಳಿಗೆ ಅಕ್ಟೋಬರ್ 4ರಂದು ಭೇಟಿ ನೀಡುವ ಸಾಧ್ಯತೆ ಎಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್.
ರಾಯಚೂರು ಸೆಪ್ಟಂಬರ್ 28 (ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2026-27ನೇ ಸಾಲಿನ ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟಂಬರ್ 30ರಂದು ವಿವಿಧ ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಕ್ರೀಡಾಪಟ್ಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ಹಟ್ಟಿ ಚಿನ್ನದ ಗಣಿ: ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ವೆಂಕಟೇಶ್ ತಂದೆ ಲಿಂಗರಾಜ ಅವರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮೂರು ವೈಯಕ್ತಿಕ ಓಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ರಾಯಚೂರು: ಭಾರತ ವಿಕಾಸ ಪರಿಷತ್ತು ರಾಯಚೂರು ಶಾಖೆ ವತಿಯಿಂದ ನಗರದ ಬಿಆರ್‌ಬಿ ಕಾಲೇಜಿನಲ್ಲಿ ಸೆ.27ರಂದು ಆಯೋಜಿಸಿದ್ದ ಜಿಲ್ಲಾ ಮಟ್ಟದ ‘ಭಾರತ್ ಕೋ ಜಾನೋ–2026’ ರಸಪ್ರಶ್ನೆ ಸ್ಪರ್ಧೆಯ ಜೂನಿಯರ್ ವಿಭಾಗದಲ್ಲಿ ಬಸವಶ್ರೀ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಮಾನ್ವಿ: ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಶ್ರೀ ಜಗಜ್ಯೋತಿ ಬಸವೇಶ್ವರ ವೃತ್ತದ ಸ್ಥಳವನ್ನು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಪರಿಶೀಲಿಸಿದರು.
ಮಾನ್ವಿ: ಬರಗಾಲದ ಹಿನ್ನೆಲೆಯಲ್ಲಿ ಬೆಳೆಗಳನ್ನು ಉಳಿಸಿಕೊಳ್ಳಲು ಪರದಾಡುತ್ತಿರುವ ತಾಲೂಕಿನ ನೀರಮಾನ್ವಿ ಗ್ರಾಮದ ರೈತರ ಪಂಪ್‌ಸೆಟ್‌ಗಳಿಗೆ ಪ್ರತಿದಿನ ನಿರಂತರವಾಗಿ 10 ತಾಸು ವಿದ್ಯುತ್ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರೈತರು ತಹಶೀಲ್ದಾರ್ ಕಚೇರಿಯಲ್ಲಿ ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಸಲ್ಲಿಸಿದರು.
ರಾಯಚೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಹಾಗೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂಧಿಸಬೇಕು ಎಂದು ಆಗ್ರಹಿಸಿ ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು.
ರಾಯಚೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ತಡೆ ನೀಡಬೇಕು ಹಾಗೂ ಮತದಾರರ ಪಟ್ಟಿಯಿಂದ ತಪ್ಪಾಗಿ ಕೈಬಿಡಲಾದ ಅರ್ಹರ ಹೆಸರುಗಳನ್ನು ಮರುಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿ ಎಡಪಕ್ಷಗಳ ನೇತೃತ್ವದಲ್ಲಿ ಸೋಮವಾರ…
ರಾಯಚೂರು, ಸೆ.28: ಕರ್ನಾಟಕ ರಾಜ್ಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)-2026ಕ್ಕೆ ಸಜ್ಜಾಗುತ್ತಿರುವ ಅಭ್ಯರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಅಶ್ವಮೇಧ ಫೌಂಡೇಶನ್ ವತಿಯಿಂದ ಅ.4ರಂದು ಕೆ-ಸೆಟ್ ಪತ್ರಿಕೆ-1ರ ಸಾಮಾನ್ಯ ಅಧ್ಯಯನ ಕುರಿತು ಒಂದು ದಿನದ ವಿಶೇಷ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಶನ್ ಅಧ್ಯಕ್ಷ ರಮೇಶ್…
ರಾಯಚೂರು, ಸೆ.28: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆ, ತಾತ್ಕಾಲಿಕ ಸಿಬ್ಬಂದಿ ನೇಮಕ, ಹೆಚ್ಚುವರಿ ಹುದ್ದೆಗಳ ಜವಾಬ್ದಾರಿ ಹಂಚಿಕೆ ಹಾಗೂ ಹಣಕಾಸು ನಿರ್ವಹಣೆಯಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪಗಳಿಗೆ ಸಂಬಂಧಿಸಿ ಆ.7ರಂದು ಸಲ್ಲಿಸಿದ ಮನವಿಗೆ ಇದುವರೆಗೂ ಯಾವುದೇ ಉತ್ತರ…
ರಾಯಚೂರು: ಬರ ಪರಿಸ್ಥಿತಿಯಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಬೆಳೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ.30ರಂದು ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಯಚೂರು ಗ್ರಾಮೀಣ ಜೆಡಿಎಸ್ ಮುಖಂಡ ಸಣ್ಣ ನರಸಿಂಹ…
ರಾಯಚೂರು, ಸೆ.28: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಅವರ 119ನೇ ಜನ್ಮದಿನವನ್ನು ನಗರದ ಸ್ಟೇಷನ್ ರಸ್ತೆಯ ಸಾರ್ವಜನಿಕ ಉದ್ಯಾನವನದಲ್ಲಿ ರಾಯಚೂರು ವಾಕಿಂಗ್ ಕ್ಲಬ್ ಹಾಗೂ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ವತಿಯಿಂದ ಆಚರಿಸಲಾಯಿತು.
ರಾಯಚೂರು, ಸೆ.27: ತೆಲಂಗಾಣದ ಮಕ್ತಲ್‌ನ ರಾಯಲ್ ಪ್ಯಾಲೇಸ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಡು ಮತ್ತು ಕುಂಗ್ ಫು ಚಾಂಪಿಯನ್‌ಶಿಪ್–2026ರಲ್ಲಿ ರಾಯಚೂರಿನ ಶ್ರೀ ಸೂಗುರೇಶ್ವರ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.