ಮಂತ್ರಾಲಯ, ಸೆ.27: ಉತ್ತರಾಧಿ ಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು ರಸ್ತೆ ಅಪಘಾತಕ್ಕೀಡಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ ಎಂದು ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.
ಮಾನ್ವಿ, ಸೆ.27: ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ರೈತರು ಹಾಗೂ ಗ್ರಾಮೀಣ ಜನರಿಗೆ ತಕ್ಷಣದ ನೆರವು ಒದಗಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ಮಾನ್ವಿ: ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ವತಿಯಿಂದ ಜಿಲ್ಲೆಯ ವಿವಿಧ ತಾಲೂಕು ಸಮಿತಿಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಮಾನ್ವಿ: ಲಿಂ. ಶ್ರೀ ಹಾನಗಲ್ ಕುಮಾರ ಶಿವಯೋಗಿಗಳ 159ನೇ ಜಯಂತಿ ಅಂಗವಾಗಿ ಮಾನ್ವಿ ನಗರಕ್ಕೆ ಆಗಮಿಸಿದ ಜ್ಯೋತಿ ರಥಯಾತ್ರೆ ಹಾಗೂ ಪಾದಯಾತ್ರೆಯನ್ನು ಪಟ್ಟಣದಲ್ಲಿ ಭಕ್ತಿಭಾವದಿಂದ ಬರಮಾಡಿಕೊಳ್ಳಲಾಯಿತು.
ರಾಯಚೂರು: ನಗರದ ವಿವಿಧ ಗಣೇಶ ಮೂರ್ತಿಗಳನ್ನು ಸಾಮಾನ್ಯವಾಗಿ ಖಾಸಭಾವಿಯಲ್ಲಿ ನೀರು ತುಂಬಿಸಿ ವಿಸರ್ಜಿಸಲಾಗುತ್ತದೆ. ಆದರೆ ಪಟೇಲ್ ರಸ್ತೆಯ ಬಾಲರಾಮ ಶಾಲೆಯ ಶುದ್ಧ ಮಣ್ಣಿನ ಗಣೇಶ ಮೂರ್ತಿಯನ್ನು ಸಂಪ್ರದಾಯದಂತೆ ಬಸನಭಾವಿ ವೃತ್ತದಲ್ಲಿರುವ ಶ್ರೀ ಮಾರುತಿ ದೇವಸ್ಥಾನದ ಹಿಂಭಾಗದ ಪುರಾತನ ಬಾವಿಯಲ್ಲಿ ವಿಸರ್ಜಿಸಲಾಯಿತು.
ರಾಯಚೂರು: ನಗರದ ಸರದಾರ ವಲ್ಲಭಭಾಯಿ ಪಟೇಲ್ ರಸ್ತೆಯಲ್ಲಿರುವ ಬಾಲರಾಮ ಶಾಲೆಯಲ್ಲಿ ಕಳೆದ 175 ವರ್ಷಗಳಿಂದ ಶುದ್ಧ ಮಣ್ಣಿನಿಂದ ಒಂದೇ ಮಾದರಿಯಲ್ಲಿ ಗಣೇಶ ಮೂರ್ತಿಯನ್ನು ತಯಾರಿಸಿ ಪ್ರತಿಷ್ಠಾಪಿಸುವ ಸಂಪ್ರದಾಯ ಈ ವರ್ಷವೂ ಭಕ್ತಿಭಾವದಿಂದ ಮುಂದುವರಿಯಿತು.
ಅರಕೇರಾ, ಸೆ.27: ಸತ್ಸಂಗ ಎಂದರೆ ಕೇವಲ ಎಲ್ಲರೂ ಒಂದೆಡೆ ಸೇರಿ ಕುಳಿತುಕೊಳ್ಳುವುದಲ್ಲ, ಸತ್ಯದ ಸಂಗ ಮಾಡುವುದು. ಸತ್ಯದ ಅರಿವು ಮೂಡಿದಾಗ ಮಾತ್ರ ಜೀವನದ ಅನುಭವಕ್ಕೆ ಪರಮಾರ್ಥದ ಅರ್ಥ ಸಿಗುತ್ತದೆ ಎಂದು ಪಂಜಾಬ್ ರಾಜ್ಯದ ಜಲಂಧರ ವಾಲ್ಮೀಕಿ ಆಶ್ರಮದ ಪೀಠಾಧಿಪತಿ ರಾಜಯೋಗಿ ಶಿವನಾಥ ಮಹಾರಾಜರು ಹೇಳಿದರು.
ಲಿಂಗಸುಗೂರು: ಪಟ್ಟಣದ ವಿಜಯ ಮಹಾಂತೇಶ್ವರ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಟ್ಟಿ ಚಿನ್ನದ ಗಣಿ ವಿನಾಯಕ ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಅಶೋಕ್ ವಿ. ಕರಡಕಲ್ ಅವರಿಗೆ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕುಷ್ಟಗಿ: ಇನ್ನರ್ ವ್ಹೀಲ್ ಕ್ಲಬ್ ಆಫ್ ಕುಷ್ಟಗಿ ಅಧ್ಯಕ್ಷೆ ಗೌರಮ್ಮ ಕುಡತನಿ ಅವರ ನೇತೃತ್ವದಲ್ಲಿ ಇಳಕಲ್‌ನ ಸುರಕ್ಷಾ ಸೇವಾ ಸಂಸ್ಥೆಯ ಅನಾಥಾಶ್ರಮ ಹಾಗೂ ವೃದ್ಧಾಶ್ರಮದಲ್ಲಿ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಲಿಂಗಸೂಗೂರು: ಬಂಜಾರ (ಲಂಬಾಣಿ) ಭಾಷೆಯನ್ನು ಭಾರತದ ಸಂವಿಧಾನದ ಎಂಟನೇ ಅನುಸೂಚಿಗೆ ಸೇರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ತಾಲೂಕು ಅಧ್ಯಕ್ಷ ಹನುಮಂತ ರಾಠೋಡ ಆಗ್ರಹಿಸಿದರು.
ಲಿಂಗಸುಗೂರು: ಹೂಗಾರ ಸಮಾಜವು ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ಸಮುದಾಯವಾಗಿದ್ದು, ಹೂ ವ್ಯಾಪಾರ, ಪೂಜಾರಿಕೆ ಸೇರಿದಂತೆ ಸಾಂಪ್ರದಾಯಿಕ ಕಾಯಕಗಳನ್ನು ಅವಲಂಬಿಸಿರುವ ಅನೇಕ ಕುಟುಂಬಗಳು ಇಂದಿಗೂ ಆರ್ಥಿಕ ಸಂಕಷ್ಟ ಎದುರಿಸುತ್ತಿವೆ.
ಲಿಂಗಸುಗೂರು: ಪಟ್ಟಣದ ಎಸ್.ಬಿ.ಎಚ್. ಕಾಲೋನಿಯಲ್ಲಿರುವ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನ ಪ್ರತಿಷ್ಠಾಪನೆಯಾಗಿ 25 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ರಜತ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ದೇವಸ್ಥಾನ ಸಮಿತಿ ನಿರ್ಧರಿಸಿದೆ.
ರಾಯಚೂರು, ಸೆ.27: ಕನ್ನಡ ಭಾಷೆಯ ಮೇಲಿನ ಅಚಲ ಪ್ರೇಮ ಹಾಗೂ ಕನ್ನಡ ಸಾಹಿತ್ಯದ ಪ್ರಸಾರ-ಪ್ರಚಾರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ರಾಯಚೂರಿನ ಹಿರಿಯ ಲೇಖಕ ಬಶೀರ್ ಅಹ್ಮದ್ ಹೊಸಮನಿ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ…
ರಾಯಚೂರು, ಸೆ.27: ನಗರದ ರಾಯಲ್ ಕಾಟನ್ ಇಂಡಸ್ಟ್ರೀಸ್ ಸಂಸ್ಥಾಪಕ-ಮಾಲೀಕ ಸಯೀದುದ್ದೀನ್ ಅಹ್ಮದ್ ಅವರ ಪುತ್ರಿ ಡಾ. ಶಿರೀನ್ ಫಾತಿಮಾ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ (ವಿಟಿಯು) ಪಿಎಚ್‌ಡಿ ಪದವಿ ಪಡೆದು ರಾಯಚೂರಿಗೆ ಕೀರ್ತಿ ತಂದಿದ್ದಾರೆ.
ಮಾನ್ವಿ: ಯುಪಿಎಸ್‌ಸಿ, ಕೆಪಿಎಸ್‌ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಬೇಕಾದರೆ ವಿದ್ಯಾರ್ಥಿ ದೆಸೆಯಿಂದಲೇ ಓದಿನೊಂದಿಗೆ ಪ್ರಚಲಿತ ವಿದ್ಯಮಾನಗಳ ಅರಿವು ಬೆಳೆಸಿಕೊಳ್ಳಬೇಕು. ಅದಕ್ಕಾಗಿ ಪ್ರತಿನಿತ್ಯ ದಿನಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಬೆಂಗಳೂರಿನ ಸಂಪನ್ಮೂಲ ವ್ಯಕ್ತಿ ಕುಸುಮ ಸಲಹೆ ನೀಡಿದರು.
ಸಿರವಾರ: ನಾರಾಯಣಪುರ ಬಲದಂಡೆ ಕಾಲುವೆ (ಎನ್‌ಆರ್‌ಬಿಸಿ) ವಡವಾಟಿ 9ಎ ವಿಭಾಗದ ಕಲಂಗೇರಾ, ಪಾತಾಪುರ, ಹಣಗಿ, ಹುಸೇನಪುರ ಹಾಗೂ ಕವಿತಾಳ ಸೀಮಾಂತರ ಪ್ರದೇಶಗಳಲ್ಲಿ ಬಾಕಿ ಉಳಿದಿರುವ ಉಪಕಾಲುವೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಕಾಲುವೆಯ ಕೊನೆಯ ಭಾಗದವರೆಗೂ ನೀರು ತಲುಪಿಸುವಂತೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ…
ಬೆಂಗಳೂರು: ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ಆಕಾಂಕ್ಷಿ ಜಿಲ್ಲೆಗಳ ಕಾರ್ಯಕ್ರಮದ (Aspirational Districts Programme–ADP) ಪ್ರಗತಿ ಪರಿಶೀಲನಾ ಸಭೆ ಬೆಂಗಳೂರಿನ ಕುಮಾರ ಕೃಪಾ ಅತಿಥಿ ಗೃಹದಲ್ಲಿ ನಡೆಯಿತು.
ರಾಯಚೂರು, ಸೆ.27: ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ತಾಯಿ ಮತ್ತು ಮಕ್ಕಳ ಆರೋಗ್ಯದ ಮೇಲೆ ನಿರಂತರ ನಿಗಾವಹಿಸಿ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕಿ ಡಾ. ರಜನಿ ಎಂ. ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸೂಚಿಸಿದರು.
ಮಾನ್ವಿ: ಪಟ್ಟಣದ ಒಳಬಳ್ಳಾರಿ ಶ್ರೀ ಸುವರ್ಣಗಿರಿ ವಿರಕ್ತಮಠದ ಶ್ರೀ ಚನ್ನಬಸವ ಶಿವಯೋಗಿಗಳ ಪ್ರಸಾದ ನಿಲಯದ ಆವರಣದಲ್ಲಿ ನೂತನ ಶ್ರೀ ವೀರಶೈವ ಲಿಂಗಾಯತ ಸಮುದಾಯ ಭವನ ಹಾಗೂ ಶ್ರೀ ಚನ್ನಬಸವೇಶ್ವರ ಕಲ್ಯಾಣ ಮಂಟಪ ನಿರ್ಮಾಣ ಕಾಮಗಾರಿಗೆ ಒಳಬಳ್ಳಾರಿ ಶ್ರೀ ಸುವರ್ಣಗಿರಿ ವಿರಕ್ತಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು…
ರಾಯಚೂರು: ರೋಟರಿ ಕ್ಲಬ್ ರಾಯಚೂರು ಈಸ್ಟ್ ವತಿಯಿಂದ ನೀಡಲಾಗುವ ಜಿಲ್ಲಾ ಮಟ್ಟದ ಪ್ರತಿಷ್ಠಿತ ‘ನೇಷನ್ ಬಿಲ್ಡರ್ ಅವಾರ್ಡ್’ಗೆ ಮಾನ್ವಿ ತಾಲೂಕಿನ ಮುಷ್ಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಝರೀನಾ ಭಾಜನರಾಗಿದ್ದಾರೆ.
ಮಾನ್ವಿ: ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ರೈತರು, ಜಾನುವಾರುಗಳು ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಲಾಗಿದೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು.
ದೇವದುರ್ಗ: ತಹಶೀಲ್ದಾರ್ ಕಚೇರಿಯಲ್ಲಿ ಗಣೇಶ ಚತುರ್ಥಿ ಅಂಗವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಧ್ವನಿವರ್ಧಕ ಬಳಸಿ ಸಿಬ್ಬಂದಿ ಸಂಭ್ರಮಾಚರಣೆ ನಡೆಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ದೇವದುರ್ಗ ತಾಲೂಕು ಘಟಕ, ಈ ಕುರಿತು ಸಮಗ್ರ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ…
ದೇವದುರ್ಗ, ಸೆ.27: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ಶೋಧ ಕಾರ್ಯಾಚರಣೆಯನ್ನು ಖಂಡಿಸಿ ಸೆ.29ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿ ಮುಖಂಡರಾದ ರಂಗಪ್ಪ ಗೋಸಲ್ ಹಾಗೂ ವಿಶ್ವನಾಥ ಬಲ್ಲಿದವ್…