ದೇವದುರ್ಗ, ಸೆ.27: ಪ್ರತಿಯೊಬ್ಬರೂ ಮೊದಲು ಉತ್ತಮ ಮನುಷ್ಯರಾಗಬೇಕು. ಬಳಿಕ ಮಾನವೀಯ ಹಾಗೂ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ಶಾಸಕಿ ಕರೆಮ್ಮ ಜಿ. ನಾಯಕ ಕರೆ ನೀಡಿದರು.
ರಾಯಚೂರು: ಡಿಜಿಟಲ್ ಬ್ಯಾಂಕಿಂಗ್ ಬಳಕೆ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹಾಗೂ ಆನ್‌ಲೈನ್ ವಂಚನೆಗಳ ಬಗ್ಗೆ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಸೆಂಟರ್ ಫಾರ್ ಫೈನಾನ್ಸಿಯಲ್ ಲಿಟ್ರಸಿ ರಾಯಚೂರು ಸಂಚಾಲಕ ಈರೇಶ ಸಲಹೆ ನೀಡಿದರು.
ರಾಯಚೂರು: ತಾಲೂಕಿನ ಕುರುಬದೊಡ್ಡಿ ಗ್ರಾಮದ ರೈತರಿಗೆ ನಿಗದಿತ ಅವಧಿಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಯಾಗದೆ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರೈತರು ವಡವಟಿ ವಿದ್ಯುತ್ ಉಪಕೇಂದ್ರದಲ್ಲಿ ರಾತ್ರಿಯಿಡೀ ಕಾದು ಆಕ್ರೋಶ ವ್ಯಕ್ತಪಡಿಸಿದರು.
ರಾಯಚೂರು: ದೇಶದ ವಿವಿಧ ಪ್ರದೇಶಗಳ ಜನರ ನಡುವೆ ಸಂಪರ್ಕ ಕಲ್ಪಿಸುವ ಭಾಷೆಗಳಲ್ಲಿ ಹಿಂದಿ ಪ್ರಮುಖವಾಗಿದ್ದು, ವಿದ್ಯಾರ್ಥಿಗಳು ಅದರ ಜ್ಞಾನವನ್ನು ವಿಸ್ತರಿಸಿಕೊಳ್ಳುವುದರ ಜೊತೆಗೆ ಪ್ರಾಯೋಗಿಕ ಬಳಕೆಯಲ್ಲಿಯೂ ಪರಿಣತಿ ಸಾಧಿಸಬೇಕು ಎಂದು ಪಿ.ಎಂ. ನವೋದಯ ಶಾಲೆಯ ಹಿಂದಿ ವಿಭಾಗದ ತರಬೇತಿ ಪಡೆದ ಪದವೀಧರ ಶಿಕ್ಷಕ ಕೆ.ಪಿ. ಸಿಂಗ್ ಹೇಳಿದರು.
ರಾಯಚೂರು, ಸೆ.27: ತೇರಾಪಂಥ್ ಯುವಕ ಪರಿಷತ್ ರಾಯಚೂರು ಘಟಕದ ವತಿಯಿಂದ ‘ಮೆಗಾ ಬ್ಲಡ್ ಡೊನೇಷನ್ ಡ್ರೈವ್–2026’ ಅಂಗವಾಗಿ ಭಾನುವಾರ ನಗರದಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ರಾಯಚೂರು, ಸೆ.26: ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಅಂಗವಾಗಿ ಪತ್ರಕರ್ತರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ನಡುವೆ ಆಯೋಜಿಸಲಾದ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾಧಿಕಾರಿ ಎಸ್. ಪೂವಿತಾ ಬ್ಯಾಟ್ ಬೀಸುವ ಮೂಲಕ ಚಾಲನೆ ನೀಡಿದರು.
ಮಂತ್ರಾಲಯ: ಶ್ರೀಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ 14ನೇ ಚಾತುರ್ಮಾಸ್ಯ ದೀಕ್ಷಾ ಸಮಾರೋಪದ ಅಂಗವಾಗಿ ಸೀಮೋಲ್ಲಂಘನ ಕಾರ್ಯಕ್ರಮವು ಭಕ್ತಿಭಾವ, ಸಂಪ್ರದಾಯ ಹಾಗೂ ಧಾರ್ಮಿಕ ವೈಭವದೊಂದಿಗೆ ನೆರವೇರಿತು.
ವಡವಾಟಿ, ಸೆ.26: ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನೆಯನ್ನು ಡಿಜೆ ಅಬ್ಬರವಿಲ್ಲದೆ, ಕೇವಲ ಸಾಂಪ್ರದಾಯಿಕ ಕಲಾವಿದರನ್ನು ಕರೆಸಿ ಅವರ ಕಲಾ ಪ್ರದರ್ಶನದೊಂದಿಗೆ ಭಕ್ತಿಭಾವದಿಂದ ನೆರವೇರಿಸಲಾಯಿತು.
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಸೇರಿದಂತೆ ಇತ್ತೀಚಿನ ಪ್ರಮುಖ ನಿರ್ಧಾರಗಳ ಕುರಿತು ಚುನಾವಣಾ ಆಯೋಗದೊಳಗೆ ಭಿನ್ನಾಭಿಪ್ರಾಯವಿದೆ ಎಂಬ ವರದಿಗಳ ಬೆನ್ನಲ್ಲೇ, ಅಂತಿಮ ನಿರ್ಧಾರಗಳು ಮೂವರು ಚುನಾವಣಾ ಆಯುಕ್ತರ ಸರ್ವಾನುಮತದ ಅನುಮೋದನೆಯೊಂದಿಗೆ…
ಮಾನ್ವಿ: ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ದೇಶಪ್ರೇಮ, ಶಿಸ್ತು ಹಾಗೂ ಸಮಾಜಮುಖಿ ಮನೋಭಾವ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಧ್ವಜ ಚೀಟಿ ಬಿಡುಗಡೆ ಕಾರ್ಯಕ್ರಮವನ್ನು ಮಾನ್ವಿ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.
ದೇವದುರ್ಗ : ಶಿಕ್ಷಣ, ಕ್ರೀಡೆ, ಸ್ಕೌಟ್ಸ್ ಮತ್ತು ಗೈಡ್ಸ್, ಸಾಮಾಜಿಕ ಸೇವೆ ಹಾಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಶ್ರೀ ಬಸವೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ದೇವದುರ್ಗದ ದೈಹಿಕ ಶಿಕ್ಷಣ ಶಿಕ್ಷಕರಾದ ದಾವಲಸಾಬ್ ಬಂಡಿ ಅವರು 2026ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ…
ಕವಿತಾಳ: ಲಿಂಗಸುಗೂರು ತಾಲೂಕಿನ ಚಿಕ್ಕಹಸರೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಜಮೀನು ನೀಡಿದ ರೈತರು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಮಂಗಳವಾರದಿಂದ ಆರಂಭಿಸಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ರಾಯಚೂರು: ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್‌ಎಸ್‌ಎಸ್ ಘಟಕವು ಸ್ವಚ್ಛತಾ ಶ್ರಮದಾನ ಹಮ್ಮಿಕೊಂಡು “ಸ್ವಚ್ಛತೆಯೇ ಸೇವೆ” ಎಂಬ ಸಂದೇಶವನ್ನು ಸಾರಿತು.
ದೇವದುರ್ಗ: ದೇವದುರ್ಗ ತಾಲೂಕು ಮಾದಿಗರ ಮಹಾಸಭಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಅಕ್ಕರಕಿ ಹಾಗೂ ಪ್ರಧಾನ ಕಾರ್ಯದರ್ಶಿ ರಮೇಶ ರಾಮನಾಳ ಅವರನ್ನು ಮಾದಿಗ ನೌಕರರ ಸಂಘದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.
ಮಾನ್ವಿ: ತಾಲೂಕಿನ ಅಡವಿ ಅಮರೇಶ್ವರ ಗ್ರಾಮದ ಶ್ರೀ ಸುವರ್ಣಗಿರಿ ವಿರಕ್ತಮಠದಲ್ಲಿ ಲಿಂ. ಶ್ರೀ ಹಾನಗಲ್ ಕುಮಾರ ಶಿವಯೋಗಿಗಳ 159ನೇ ಜಯಂತಿ ಅಂಗವಾಗಿ ಆಗಮಿಸಿದ ರಥಯಾತ್ರೆಯನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು.
ಲಿಂಗಸುಗೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿದ ದಾಳಿಯನ್ನು ಖಂಡಿಸಿ ಸೆ.28ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ವರ್ಗಗಳ ಒಕ್ಕೂಟದ ಸದಸ್ಯ ಹಾಗೂ…
ರಾಯಚೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಇತ್ತೀಚಿನ ಕಾರ್ಯವೈಖರಿ ಕುರಿತು ಕೇಳಿಬಂದಿರುವ ಆರೋಪಗಳ ಬಗ್ಗೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಕಾಂಗ್ರೆಸ್ ಮುಖಂಡ ರವಿ ಪಾಟೀಲ್ ಆಗ್ರಹಿಸಿದ್ದಾರೆ.
ಮಾನ್ವಿ: ಪಟ್ಟಣದ ಪ್ರವಾಸಿ ಮಂದಿರಕ್ಕೆ ಹೊಂದಿಕೊಂಡಿರುವ ಖಾಲಿ ನಿವೇಶನದಲ್ಲಿ ಸುಸಜ್ಜಿತ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ರಾಯಚೂರು: ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಎಚ್‌ಸಿಎಂಎಸ್‌ಕೆ ಶಿಕ್ಷಣ ಮಹಾವಿದ್ಯಾಲಯ ಹಾಗೂ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ 2026–27ನೇ ಸಾಲಿನ ಪುರುಷ ಮತ್ತು ಮಹಿಳಾ ವಿಶ್ವವಿದ್ಯಾಲಯ ಮಟ್ಟದ ಚೆಸ್ (ಚದುರಂಗ) ತಂಡದ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಜಾಲಹಳ್ಳಿ, ಸೆ.26: ಮುಂಗಾರು ಮಳೆಯ ಕೊರತೆಯಿಂದ ಜಿಲ್ಲೆಯಾದ್ಯಂತ ಬರ ಪರಿಸ್ಥಿತಿ ಉಂಟಾಗಿದ್ದು, ರಾಯಚೂರು ಜಿಲ್ಲೆಯನ್ನು ಭೀಕರ ಬರಗಾಲ ಪ್ರದೇಶವೆಂದು ಘೋಷಿಸಬೇಕು ಹಾಗೂ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ…
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಶಿಕ್ಷಕರ ವ್ಯಕ್ತಿತ್ವ ಹಾಗೂ ನಡವಳಿಕೆಗಳು ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಅಗಾಧ ಪರಿಣಾಮವನ್ನು ಇರುತ್ತವೆ. ಕೆಲವು ಸಲ ಶಿಕ್ಷಕರ ಅತೀವ ವರ್ತನೆ ಮತ್ತು ಭಾಷೆ ವಿದ್ಯಾರ್ಥಿಗಳ ಮನಸ್ಸಿನ ಮೇಲೆ ನಕಾರಾತ್ಮಕ ಪ್ರಭಾವ ಬೀರಬಹುದು
ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶ್ರೀ ಸಿರಿನಾಡು ಮಹಾಸಭಾ, ಬೆಂಗಳೂರು ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಕವಯತ್ರಿ, ಅಂಕಣಗಾರ್ತಿ ಹಾಗೂ ಲೇಖಕಿ ಪುಷ್ಪಲತಾ ಕೆ.ಎಸ್. ಹೆಗಡೆ ಪ್ರಥಮ ಬಹುಮಾನಕ್ಕೆ ಭಾಜನರಾಗಿದ್ದಾರೆ.
ರಾಯಚೂರು: ಕರ್ನಾಟಕ ಸರ್ಕಾರದ ಪದವಿಪೂರ್ವ ಶಿಕ್ಷಣ ಇಲಾಖೆ, ರಾಯಚೂರು ಹಾಗೂ ನಗರದ ಶ್ರೀ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದಿದ್ದು, ತಾರಾನಾಥ…
ಹಟ್ಟಿ ಚಿನ್ನದ ಗಣಿ: ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಪದೇ ಪದೇ ಭರವಸೆ ನೀಡುತ್ತಿರುವ ಸಿಐಟಿಯು ಸಂಘಟನೆ ಅವುಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ವಿಫಲವಾಗಿದ್ದು, ಅದು ‘ಸುಳ್ಳಿನ ಫ್ಯಾಕ್ಟರಿ’ಯಂತಾಗಿದೆ ಎಂದು ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಆರೋಪಿಸಿದರು.