ಹಿರೇಕೊಟ್ನೇಕಲ್, ಸೆ.21: ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟದ ಖೋ-ಖೋ ಪಂದ್ಯದಲ್ಲಿ ಹಿರೇಕೊಟ್ನೇಕಲ್ ಹರಿಜನವಾಡ ಪ್ರಾಥಮಿಕ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.
ಮಾನ್ವಿ: ಪಟ್ಟಣದ ಜುಮ್ಮಲದೊಡ್ಡಿಯ ಹಜರತ್ ಸೈಯದ್ ಷಾ ಮುರ್ತುಜಾ ಖಾದ್ರಿ ಅವರ ಬಡೇಸಾಹೇಬ್ ದರ್ಗಾದ ಉರ್ಸ್-ಎ-ಶರೀಫ್ ಕಾರ್ಯಕ್ರಮವು ಸೆ.24ರಿಂದ 26ರವರೆಗೆ ನಡೆಯಲಿದೆ ಎಂದು ಮುಸ್ಲಿಂ ಧರ್ಮಗುರು ಸೈಯದ್ ಸಜ್ಜದ್ ಹುಸೇನಿ ಮುತ್ವಲ್ಲಿ ಸಾಹೇಬ್ ತಿಳಿಸಿದರು.
ರಾಯಚೂರು, ಸೆ.21: ಯುವಜನರು ಪೌಷ್ಟಿಕ ಆಹಾರ ಸೇವನೆ, ನಿಯಮಿತ ಯೋಗ-ಧ್ಯಾನ ಹಾಗೂ ವೈಯಕ್ತಿಕ ಮತ್ತು ಪರಿಸರ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಸಲಹೆಗಾರ ಬಿ. ರಾಮು ಹೇಳಿದರು.
ರಾಯಚೂರು, ಸೆ.21: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಯಲ್ಲಿ ನಿರಂತರ ಸರ್ವರ್ ಸಮಸ್ಯೆ ಎದುರಾಗುತ್ತಿರುವುದರಿಂದ ಸಾರ್ವಜನಿಕರು ಹಾಗೂ ನ್ಯಾಯಬೆಲೆ ಅಂಗಡಿ ವಿತರಕರು ಸಂಕಷ್ಟ ಅನುಭವಿಸುತ್ತಿದ್ದಾರೆ.
ರಾಯಚೂರು, ಸೆ.21: ದೇವರಾಜು ಅರಸು ವಿಶೇಷ ವರ್ಗ ಯೋಜನೆಯಡಿ ನಿವೇಶನ ಕೋರಿ ಸಲ್ಲಿಸಿರುವ 1,635 ಫಲಾನುಭವಿಗಳ ಅರ್ಜಿಗಳನ್ನು ತಕ್ಷಣ ಪರಿಶೀಲಿಸಿ, ಒಂದು ವಾರದೊಳಗೆ ಜಿಲ್ಲಾಡಳಿತಕ್ಕೆ ರವಾನಿಸಬೇಕು.
ರಾಯಚೂರು, ಸೆ.21: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ, ಕರಡು ಮತದಾರರ ಪಟ್ಟಿಯಲ್ಲಿನ ಬದಲಾವಣೆಗಳು ಹಾಗೂ ಅರ್ಹ ಮತದಾರರ ಹೆಸರು ಕೈಬಿಡುವ ಆತಂಕಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಸೆ.23ರಂದು ಸಂಜೆ 5 ಗಂಟೆಗೆ ನಗರದ ಟಿಪ್ಪು ಸುಲ್ತಾನ್ ಪಾರ್ಕ್‌ನಲ್ಲಿ ನಟ ಪ್ರಕಾಶ್…
ರಾಯಚೂರು, ಸೆ.21: ಗಡಿಭಾಗಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವುದರ ಜೊತೆಗೆ ಕನ್ನಡದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಉತ್ತೇಜನ ನೀಡಲು ಸರ್ಕಾರ ವಿಶೇಷ ಯೋಜನೆಗಳನ್ನು ರೂಪಿಸಬೇಕು ಎಂದು ಕನ್ನಡ ಮಿತ್ರಕೂಟದ ಅಧ್ಯಕ್ಷ ಅಶೋಕ್ ಕುಮಾರ್ ಸಿ.ಕೆ. ಜೈನ್ ಒತ್ತಾಯಿಸಿದರು.
ರಾಯಚೂರು: ಜಿಲ್ಲೆಯಲ್ಲಿ ನಡೆದ ದಲಿತರ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಗಳು ಹಾಗೂ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಭೀಮಾನಂದ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕು, ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಸಿಂಧನೂರು ತಾಲೂಕಿನ ವೀರಾಪಪುರ ಗ್ರಾಮದ ಭೂ ಒಡೆತನ ಯೋಜನೆಯ ಫಲಾನುಭವಿಗಳ ಹೆಸರಿಗೆ…
ರಾಯಚೂರು: ನಗರದ ಪ್ರಜಾಪಿತಾ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಾಜಯೋಗಿನಿ ಬಿ.ಕೆ. ಸ್ಮೀತಾ ಅಕ್ಕ ಹಾಗೂ ಕಾರ್ಯದರ್ಶಿ ಬಿ.ಕೆ. ಶಾರದಾ ಅಕ್ಕ ಅವರ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರಿಗೆ ಗೌರವ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ರಾಯಚೂರು, ಸೆ.20: ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೆ. ಶಾಂತಪ್ಪ ಅವರು ಭಾನುವಾರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಧಿಕಾರ ಸ್ವೀಕರಿಸಿ ಕಾರ್ಯಾರಂಭ ಮಾಡಿದರು. ಇತ್ತೀಚೆಗೆ ಪ್ರಕಟವಾದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಗೆ ಕೆ. ಶಾಂತಪ್ಪ ಅವರನ್ನು ನೇಮಕ ಮಾಡಲಾಗಿತ್ತು.
ಸಿರವಾರ: ಚಿಕ್ಕ ಹಾಗೂ ಮಧ್ಯಮ ವ್ಯಾಪಾರಸ್ಥರಿಗೆ ಕಳೆದ 19 ವರ್ಷಗಳಿಂದ ಸಾಲ ಸೌಲಭ್ಯ ಒದಗಿಸುತ್ತಿರುವ ಸಿರವಾರ ಪತ್ತಿನ ಸಹಕಾರ ಸಂಘ ನಿಯಮಿತವು ಪ್ರಸಕ್ತ ಸಾಲಿನಲ್ಲಿ ₹64,92,719 ನಿವ್ವಳ ಲಾಭ ಗಳಿಸಿದ್ದು, ಷೇರುದಾರರಿಗೆ ಶೇ.19ರಷ್ಟು ಲಾಭಾಂಶ ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಶಿವಾನಂದ ಚುಕ್ಕಿ ಹೇಳಿದರು.
ರಾಯಚೂರು: ಮುಂಬರುವ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕರ್ಕಶ ಧ್ವನಿಯ ಡಿಜೆ ಹಾಗೂ ನಿಯಮ ಮೀರಿ ಧ್ವನಿವರ್ಧಕಗಳನ್ನು ಬಳಸಿದರೆ ಸಂಬಂಧಿಸಿದ ಡಿಜೆ ವಾಹನಗಳನ್ನು ನಿರ್ದಾಕ್ಷಿಣ್ಯವಾಗಿ ಸೀಜ್ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಖಡಕ್ ಎಚ್ಚರಿಕೆ ನೀಡಿದರು.
ರಾಯಚೂರು: ನಗರದ ಕನ್ನಡ ಭವನದಲ್ಲಿ ಭಾನುವಾರ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಕ್ಟೋಬರ್ 24 ಮತ್ತು 25ರಂದು ನಡೆಯಲಿರುವ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಿಲ್ಲೆಯ ಹಿರಿಯ ಸಾಹಿತಿ ರಾಮಣ್ಣ ಹವಳೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ರಾಯಚೂರು: ನಗರದ ಕನ್ನಡ ಭವನದಲ್ಲಿ ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊಪ್ಪಳ ಜಿಲ್ಲೆಯ ಕಾರಟಗಿ ಮೂಲದ ಕಾದಂಬರಿಕಾರ್ತಿ ಜಿ.ಎಂ. ರಾಜೇಶ್ವರಿ ಅವರಿಗೆ 2026-27ನೇ ಸಾಲಿನ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ರಾಯಚೂರು: ನಗರದ ಮಹಾಲಕ್ಷ್ಮಿ ಲೇಔಟ್ ಬಡಾವಣೆಯಲ್ಲಿ ಎಂ.ಎಲ್.ಎನ್. ಯೂತ್ ಅಸೋಸಿಯೇಷನ್ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ಏಳನೇ ದಿನದ ವಿಸರ್ಜನೆ ಅಂಗವಾಗಿ ಮುತ್ತೈದೆ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಸಡಗರ-ಸಂಭ್ರಮದಿಂದ ಹಮ್ಮಿಕೊಳ್ಳಲಾಯಿತು.
ಮಾನ್ವಿ: ಪಟ್ಟಣದ ಫ್ರೆಂಡ್ಸ್ ಫಂಕ್ಷನ್ ಹಾಲ್‌ನಲ್ಲಿ ನಡೆದ ಲಕ್ಷ್ಮೀ ಪತ್ತಿನ ಸೌಹಾರ್ದ ಸಹಕಾರಿ ಸಂಘದ 16ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಕರ್ನಾಟಕ ರಾಜ್ಯ ಕುರುಬರ ಸಂಘದ ರಾಜ್ಯಾಧ್ಯಕ್ಷ ಹಾಗೂ ಸಹಕಾರಿಯ ಅಧ್ಯಕ್ಷ ಎಂ. ಈರಣ್ಣ ಉದ್ಘಾಟಿಸಿದರು.
ಮಾನ್ವಿ: ತಾಲೂಕಿನ ಹಿರೇಕೋಟ್ನೆಕಲ್ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಶಂಕುಸ್ಥಾಪನೆ ನೆರವೇರಿಸಿ ಚಾಲನೆ ನೀಡಿದರು.
ರಾಯಚೂರು: ನಗರದ ಐದನೇ ದಿನದ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ ಇಬ್ಬರು ಬಾಲಕರ ಮನೆಗಳಿಗೆ ಭಾನುವಾರ ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.