ಲಿಂಗಸುಗೂರು: ಮಾನ್ಯ ಮುಖ್ಯಮಂತ್ರಿಗಳ ಸೂಚನೆಯಂತೆ ಜನರ ಮನೆ 'ಬಾಗಿಲಿಗೆ ಆಡಳಿತ' ತಲುಪಿಸುವ ನಿಟ್ಟಿನಲ್ಲಿ ಪ್ರತಿಯೊಂದು ಸಾರ್ವಜನಿಕರ ಮನವಿಯನ್ನು ಕೂಲಂಕುಷವಾಗಿ ಪರಿಶೀಲಿಸಿ, ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ತ್ವರಿತವಾಗಿ ಅರ್ಜಿಗಳ ವಿಲೇವಾರಿ ಮಾಡಲಾಗುವುದು ಮತ್ತು ಪರಿಹಾರದ ಮಾಹಿತಿಯನ್ನು ಅರ್ಜಿದಾರರಿಗೆ ನೀಡಲಾಗುವುದು ಎಂದು…
ಹಟ್ಟಿ ಚಿನ್ನದ ಗಣಿ: ಸಮೀಪದ ಹಿರೇನಗನೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ಮಾಧ್ಯಮದ ಒಂದನೇ ತರಗತಿಗೆ ಹೊಸದಾಗಿ ದಾಖಲಾದ 22 ಮಕ್ಕಳಿಗೆ ಉಚಿತವಾಗಿ ಬ್ಯಾಗ್, ನೋಟ್‌ಬುಕ್ ಹಾಗೂ ಪೆನ್ಸಿಲ್ ಒಳಗೊಂಡ ಕಲಿಕಾ ಕಿಟ್‌ಗಳನ್ನು ಶಿಕ್ಷಣ ಪ್ರೇಮಿ ಹಾಗೂ ಸಮಾಜ ಸೇವಕ ಮೌನುದ್ದೀನ್ ಬೂದಿನಾಳ…
ಹಟ್ಟಿ ಚಿನ್ನದ ಗಣಿ: ನೈಸ್ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ, ರೈತ ಹಾಗೂ ಕಾರ್ಮಿಕ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಶನಿವಾರ ಹಟ್ಟಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಾಲಹಳ್ಳಿ: ದೇವದುರ್ಗ ತಾಲೂಕಿನ ಬಸವ ಪ್ರೌಢಶಾಲೆಯಲ್ಲಿ ವಿಜ್ಞಾನ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ದೇವರಾಜ ಭೈರಪ್ಪ ಅವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಭೂಮಾನಂದ ಅವರ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು ಎಂದು ರಾಯಚೂರು ದಲಿತಪರ ಸಂಘಟನೆಗಳ ಒಕ್ಕೂಟದ ಹಿರಿಯ ಮುಖಂಡ ರವೀಂದ್ರನಾಥ್ ಪಟ್ಟಿ ಆಗ್ರಹಿಸಿದರು.
ರಾಯಚೂರು, ಸೆ.18: ಕಳೆದ ನಾಲ್ಕು ವರ್ಷ ಎಂಟು ತಿಂಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸದೆ, ಅಧಿಕಾರಾವಧಿ ಮುಗಿಯುವ ಹಂತದಲ್ಲಿ ಸಮ್ಮೇಳನ ಆಯೋಜಿಸಲು ಮುಂದಾಗಿರುವುದರ ಉದ್ದೇಶವೇನು ಎಂದು ಅಣ್ಣಪ್ಪ ಮೇಟಿಗೌಡ ಪ್ರಶ್ನಿಸಿದರು.
ರಾಯಚೂರು: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ವಿದ್ಯುತ್ ಪೂರೈಕೆಯೂ ಸಮರ್ಪಕವಾಗಿಲ್ಲ. ರಾಯಚೂರು ಗ್ರಾಮೀಣ ಕ್ಷೇತ್ರಕ್ಕೆ ನಿರಂತರ 12 ಗಂಟೆ ಹಾಗೂ ಜಿಲ್ಲೆಯ ಇತರ ತಾಲೂಕುಗಳಿಗೆ ಕನಿಷ್ಠ 8 ಗಂಟೆ ವಿದ್ಯುತ್ ಪೂರೈಸಬೇಕು ಎಂದು ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ಆಗ್ರಹಿಸಿದರು.
ರಾಯಚೂರು: ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಪದೇಪದೇ ಅಲೆದಾಡುವ ಪರಿಸ್ಥಿತಿಯನ್ನು ತಪ್ಪಿಸಿ, ವಿವಿಧ ಇಲಾಖೆಗಳ ಸೇವೆ ಹಾಗೂ ಸಮಸ್ಯೆಗಳಿಗೆ ಒಂದೇ ವೇದಿಕೆಯಲ್ಲಿ ಪರಿಹಾರ ಒದಗಿಸುವ ಉದ್ದೇಶದಿಂದ ಗಿಲ್ಲೆಸುಗೂರು ಗ್ರಾಮದಲ್ಲಿ ತಾಲ್ಲೂಕು ಮಟ್ಟದ ಪ್ರಜಾ ಸೇವೆ ಕಾರ್ಯಕ್ರಮ ಆಯೋಜಿಸಲಾಯಿತು.
ಮಾನ್ವಿ: ಜೋಳ ಖರೀದಿ ಕೇಂದ್ರಗಳ ಮೂಲಕ ಮಾರಾಟ ಮಾಡಿದ ಬೆಳೆ ಹಣವನ್ನು ಪಾವತಿಸುವಂತೆ ಒತ್ತಾಯಿಸಿ ಹೋರಾಟ ನಡೆಸಿದ ರೈತರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನ್ ಪಾಷಾ ದಿದ್ದಿಗಿ ಆರೋಪಿಸಿದರು.
ಬೆಂಗಳೂರು: ಬೆಂಗಳೂರಿನ ಸರ್ .ಎಂ. ವಿಶ್ವೇಶ್ವರಯ್ಯ ಬಡಾವಣೆ, ಒಂದನೇ ಬ್ಲಾಕ್ ನಲ್ಲಿರುವ ಪ್ರೊಫೆಸರ್ ನಾರಾಯಣಘಟ್ಟ ರವರ ಕವಿತೆ ಸ್ವಗೃಹದಲ್ಲಿ ಡಾ. ಎಚ್. ತುಕಾರಾಂ ಅವರು ಬರೆದಿರುವ ಕಥಾಸಂಕಲನ "ಆ ಮಂಜು ಮೋಡಗಳ ನಡುವೆ" ಪುಸ್ತಕ ಬಿಡುಗಡೆ ಮಾಡಲಾಯಿತು.
ರಾಯಚೂರು: ನೈಸ್ ಯೋಜನೆಗೆ ಸಂಬಂಧಿಸಿದ ಭೂಮಿಯನ್ನು ರೈತರಿಗೆ ವಾಪಸ್ ನೀಡಬೇಕು, ಟೋಲ್ ಸಂಗ್ರಹವನ್ನು ನಿಲ್ಲಿಸಬೇಕು ಹಾಗೂ ಹೋರಾಟಗಾರರ ಬಂಧನವನ್ನು ಖಂಡಿಸಿ ಸಿಪಿಐಎಂ ರಾಯಚೂರು ತಾಲೂಕು ಸಮಿತಿ ವತಿಯಿಂದ ಸೆ.18ರಂದು ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಯಚೂರು: ತಾಲೂಕಿನ ಬಾಯಿದೊಡ್ಡಿ ಗ್ರಾಮದಲ್ಲಿ ಬಿಜೆಪಿಯ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ. ಬಾಯಿದೊಡ್ಡಿ ಗ್ರಾಮವು ರಾಯಚೂರು ತಾಲೂಕಿನ ವ್ಯಾಪ್ತಿಗೆ ಸೇರಿದೆ.
ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಂತರ್ ಮಹಾವಿದ್ಯಾಲಯ ಬ್ಯಾಡ್ಮಿಂಟನ್ ಪಂದ್ಯಾವಳಿಯು ಸೆ.16ರಂದು ರಾಯಚೂರಿನ ಸೇಂಟ್ ಥಾಮಸ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಡೆಯಿತು.
ರಾಯಚೂರು: ಸಮಾಜದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಸೇವೆಗೆ ಸರಿಸಾಟಿಯಾದ ಮತ್ತೊಂದು ಸೇವೆ ಇಲ್ಲ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು.
ರಾಯಚೂರು: ನಗರದ ಎಲ್‌ಬಿಎಸ್ ನಗರದಲ್ಲಿರುವ ಶ್ರೀ ವೀರ ಹನುಮಾನ್ ದೇವಸ್ಥಾನ, ಚಂದ್ರಬಂಡಾ ರಸ್ತೆಯಲ್ಲಿ ಶ್ರೀ ಗೌರಿ ಗಣೇಶ ಹಬ್ಬದ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಓಂ ಗ್ರೂಪ್ ಅಸೋಸಿಯೇಷನ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಮಾನ್ವಿ: ಸಾರ್ವಜನಿಕರಿಗೆ ಸರ್ಕಾರದ ವಿವಿಧ ಆಡಳಿತಾತ್ಮಕ ಸೇವೆಗಳನ್ನು ಮನೆ ಬಾಗಿಲಿನಲ್ಲೇ ತಲುಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಜಾಸೇವೆ ಅಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಹೇಳಿದರು.
ಮಾನ್ವಿ: ಪಟ್ಟಣದ ಶ್ರೀ ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಶ್ರೀ ಜಗನ್ನಾಥದಾಸರ ಸನ್ನಿಧಾನದಲ್ಲಿ ಶ್ರೀ ಜಗನ್ನಾಥದಾಸರ 217ನೇ ಆರಾಧನಾ ಮಹೋತ್ಸವದ ಅಂಗವಾಗಿ ಪೂರ್ವಾರಾಧನೆ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು.
ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ 41ನೇ ಪತ್ರಕರ್ತರ ಸಮ್ಮೇಳನದ ಪೂರ್ವಸಿದ್ಧತೆಗಳ ಕುರಿತು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜ್ ಅವರೊಂದಿಗೆ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ಪತ್ರಕರ್ತರು ಚರ್ಚೆ ನಡೆಸಿದರು.
ಬೆಂಗಳೂರು: ಫ್ಯಾನ್ ಇಂಡಿಯಾ ಕ್ರಿಯೇಷನ್ಸ್ ವಿಜಯಪುರ ನಿರ್ಮಾಣದ, ವಿಜಯರಾಘವೇಂದ್ರ ಅಭಿನಯದ ‘ರುದ್ರಾಭಿಷೇಕಂ’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಜಿಟಿ ಮಾಲ್‌ನಲ್ಲಿ ನೆರವೇರಿತು. ಚಿತ್ರವು ಸೆ.25ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ.