ಲಿಂಗಸುಗೂರು: ಪ್ರಜಾಪತಿ ದಕ್ಷನ ಸಂಹಾರಕ್ಕಾಗಿ ಶಿವನ ಅಂಶದಿಂದ ಅವತರಿಸಿದ ವೀರಭದ್ರೇಶ್ವರನು ಧರ್ಮರಕ್ಷಣೆಯ ಪ್ರತೀಕವಾಗಿದ್ದು, ಅವರ ಧರ್ಮನಿಷ್ಠೆ, ಶಿಸ್ತು ಹಾಗೂ ಸತ್ಕಾರ್ಯಗಳ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ದೇವರಭೂಪುರ ಬೃಹನ್ಮಠದ ಅಮರೇಶ್ವರ ಗುರುಗಜದಂಡ ಶಿವಾಚಾರ್ಯರು ಹೇಳಿದರು.
ರಾಯಚೂರು: ಜಿಲ್ಲೆಯಲ್ಲಿ ತೀವ್ರ ಬರಗಾಲ ಪರಿಸ್ಥಿತಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ಸಮೀಕ್ಷೆಯನ್ನು ಸಮರ್ಪಕವಾಗಿ ದಾಖಲಿಸುವ ಮೂಲಕ ಅರ್ಹ ರೈತರಿಗೆ ಪರಿಹಾರ ದೊರೆಯುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಸೂಚಿಸಿದರು.
ರಾಯಚೂರು: ನಗರದ ಅಲ್ಲಮಪ್ರಭು ಕಾಲೋನಿಯ ಹೊರವಲಯದಲ್ಲಿ ಅಕ್ರಮವಾಗಿ ಒಣ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಾರ್ಕೆಟ್ ಯಾರ್ಡ್ ಠಾಣೆ ಪೊಲೀಸರು ಬಂಧಿಸಿ, ಅವರಿಂದ 1,810 ಗ್ರಾಂ ಒಣ ಗಾಂಜಾ ಜಪ್ತಿ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
ಸಿಂಧನೂರು: ಹಾನಗಲ್ ಕುಮಾರ ಸ್ವಾಮೀಜಿ ಅವರ 159ನೇ ಜಯಂತಿ ಅಂಗವಾಗಿ ಸೆ.23ರಂದು ನಗರದಲ್ಲಿ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಮಾಜಿ ಶಾಸಕ ವೆಂಕಟರಾವ್ ನಾಡಗೌಡ ತಿಳಿಸಿದರು.
ರಾಯಚೂರು: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಪಿಎಫ್‌ಒ ಅಡಿಯಲ್ಲಿ ಕಡ್ಡಾಯ ವ್ಯಾಪ್ತಿಗೆ ಒಳಪಡುವ ವೇತನ ಮಿತಿಯನ್ನು ತಿಂಗಳಿಗೆ 15,000 ರಿಂದ 25,000ಕ್ಕೆ ಹೆಚ್ಚಿಸಲು ಅನುಮೋದನೆ ನೀಡಿದೆ.
ರಾಯಚೂರು: ಕರ್ನಾಟಕ ರಾಜ್ಯದಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರೇತರ ವಸತಿ ನಿಲಯಗಳ ವಸತಿಯುತ ಶಾಲೆ ಅಥವಾ ಕಾಲೇಜುಗಳ ನೋಂದಣಿ ಕುರಿತು ಅರ್ಜಿ ಆಹ್ವಾನಿಸಲಾಗಿದೆ.
ರಾಯಚೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಹಾ ಜಿಲ್ಲಾ ಮಟ್ಟದಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆ-2026ರ ಜಿಲ್ಲಾ ವ್ಯಾಪ್ತಿಯ ಹಿರಿಯ ನಾಗರಿಕರಿಗೆ ಸೆಪ್ಟಂಬರ್ 28ರ ಬೆಳಿಗ್ಗೆ 10.30ಗಂಟೆಗೆ ರಾಯಚೂರು ನಗರದ ಜಿಲ್ಲಾ ಮಹತ್ಮಾಗಾಂಧಿ ಕ್ರೀಡಾಂಗಣದಲ್ಲಿ ಹಿರಿಯ ನಾಗರೀಕರ…
ರಾಯಚೂರು: ಜೆಸ್ಕಾಂ ಇಲಾಖೆಯಿಂದ ರಾಯಚೂರು ಜಿಲ್ಲೆಯಲ್ಲಿ ಆಗಸ್ಟ್-2026ರ ಮಾಹೆಯಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ ಅನಧಿಕೃತ ವಿದ್ಯುತ್ ಬಳಕೆ ಮಾಡುತ್ತಿದಂತಹ 195 ಪ್ರಕರಣಗಳು ಪತ್ತೆ ಹಚ್ಚಿ ಸುಮಾರು 18.95 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದ್ದು, ಅನಧಿಕೃತವಾಗಿ ವಿದ್ಯುತ್ ಬಳಕೆ ಮಾಡುತ್ತಿರುವ ಗ್ರಾಹಕರು…
ರಾಯಚೂರು: ಯುವ ಸಮುದಾಯವನ್ನು ದುರ್ವ್ಯಸನಗಳಿಂದ ದೂರವಿಟ್ಟು ಆರೋಗ್ಯಕರ ಹಾಗೂ ಉತ್ತಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ ಸದಾ ಬದ್ಧವಾಗಿದ್ದು, ನೂರು ವಾರಗಳ ಸಂಕಲ್ಪ ಅಭಿಯಾನದಡಿ ವಿವಿಧ ಜಾಗೃತಿ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲಾಗುವುದು ಎಂದು ಸರಕಾರಿ…
ಮಾನ್ವಿ: ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಗ್ರಾಮಗಳ ಅಗತ್ಯಕ್ಕೆ ಅನುಗುಣವಾಗಿ ಮೂಲಸೌಕರ್ಯಗಳನ್ನು ಕಲ್ಪಿಸಲು ಹೆಚ್ಚಿನ ಅನುದಾನ ಒದಗಿಸಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು.
ಮಾನ್ವಿ: ವಿದ್ಯಾರ್ಥಿಗಳ ಬದುಕನ್ನು ಉತ್ತಮವಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಬೇಕು ಎಂದು ಕಲ್ಮಠ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಶಿಕ್ಷಕ ರಾಜಶೇಖರ್ ಎಚ್.
ಮಾನ್ವಿ: ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮುಂದಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದು, ಜಿಲ್ಲೆಯ ವಿವಿಧ ತಾಲೂಕುಗಳ ಕಸಾಪ ಸದಸ್ಯರು, ಹಿರಿಯ ಸಾಹಿತಿಗಳು ಹಾಗೂ ಕನ್ನಡಪರ ಚಿಂತಕರೊಂದಿಗೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಲೋಹಿಯಾ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಸಾಹಿತ್ಯ ಸಂಘಟಕ…
ರಾಯಚೂರು: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹಿರಿಯ ಅಲೆಮಾರಿ ಮುಖಂಡ ಸಣ್ಣ ಮಾರೇಪ್ಪ ಬುಡ್ಗ ಜಂಗಮ ಅವರನ್ನು ನೇಮಕ ಮಾಡಬೇಕೆಂದು ಕರ್ನಾಟಕ ನೈಜ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಒತ್ತಾಯಿಸಿದೆ.
ದೇವದುರ್ಗ: ಕನ್ನಡ ಚಲನಚಿತ್ರರಂಗದ ಮೇರು ನಟ, ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನವನ್ನು ಪಟ್ಟಣದ ಶಾಂತಿನಗರದ ವಿಷ್ಣುವರ್ಧನ್ ವೃತ್ತದಲ್ಲಿ ವಿಷ್ಣುವರ್ಧನ್ ಅಭಿಮಾನಿಗಳ ಸಂಘ ಹಾಗೂ ಅಭಿಮಾನಿ ಬಳಗದ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.
ಹಣ ಗಳಿಸಿದರೆ ಬುದ್ಧಿವಂತ ಎನ್ನುತ್ತಾರೆ, ಹಣ ಗಳಿಸದಿದ್ದರೆ ಮೂರ್ಖ ಎನ್ನುತ್ತಾರೆ, ಹಣ ಕಳೆದುಕೊಂಡರೆ ದುಂದುಗಾರ ಎನ್ನುತ್ತಾರೆ. ಹೀಗೆ ಮಾನವನ ಮಟ್ಟವನ್ನು ಹಣದಿಂದಲೇ ಅಳೆಯುವ ಕಾಲ ಇದಾಗಿದೆ.
ತುಂಗ ಬಿಂಬ/ರಾಯಚೂರು, ಸೆ.18: ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ಬದುಕನ್ನು ಬಂಗಾರವಾಗಿಸುವುದರ ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ಶಿಲ್ಪಿಗಳಾಗಿದ್ದಾರೆ ಎಂದು ರಾಯಚೂರಿನ ವೀರಶೈವ ಕಾಲೇಜಿನ ಕನ್ನಡ ಉಪನ್ಯಾಸಕ ಹೇಮರೆಡ್ಡಿ ಅಭಿಪ್ರಾಯಪಟ್ಟರು.
ತುಂಗ ಬಿಂಬ/ಮಾನ್ವಿ: ಗಣೇಶೋತ್ಸವವು ಕೇವಲ ಧಾರ್ಮಿಕ ಆಚರಣೆಯಾಗಿರದೆ, ಜನರಲ್ಲಿ ಒಗ್ಗಟ್ಟು ಮೂಡಿಸುವುದರ ಜೊತೆಗೆ ದೇಶದ ಸ್ವಾತಂತ್ರ್ಯ ಹೋರಾಟಕ್ಕೂ ಪ್ರೇರಣೆ ನೀಡಿದ ಐತಿಹಾಸಿಕ ಹಬ್ಬವಾಗಿದೆ ಎಂದು ಹಿರಿಯ ವಕೀಲ ಎ.ಬಿ. ಉಪ್ಪಳಮಠ ಹೇಳಿದರು.