ಪವಿತ್ರ ಶ್ರೀಕ್ಷೇತ್ರ ಅಯೋಧ್ಯೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ನಿರ್ಮಾಣಕ್ಕಾಗಿ ಎರಡು ಸ್ಥಳಗಳಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಸೋಮವಾರ ಭೂಮಿಪೂಜೆ ನೆರವೇರಿಸಿದರು.
ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ಸತ್ಯ, ಧರ್ಮ, ನೀತಿ, ತ್ಯಾಗ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹಾನ್ ಋಷಿಯಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಚನ್ನಬಸಮ್ಮ ಎಂ.
ದಾಸಸಾಹಿತ್ಯವು ಕನ್ನಡ ನಾಡಿನ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅಮೂಲ್ಯ ಸಂಪತ್ತಾಗಿದ್ದು, ಭಕ್ತಿಯ ಸೌರಭದೊಂದಿಗೆ ಜ್ಞಾನದ ಬೆಳಕನ್ನು ಪಸರಿಸುವ ಮಹತ್ವದ ಸಾಹಿತ್ಯವಾಗಿದೆ ಎಂದು ಶ್ರೀ ತಬಲಾ ವಿದ್ಯಾಲಯದ ಸಂಗೀತ ಶಿಕ್ಷಕ ಶ್ರೀಪಾದರಾವ್ ಕುಲಕರ್ಣಿ ಲಕ್ಕಮದಿನ್ನಿ ಹೇಳಿದರು.
ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯ ಇಲಾಖೆಯ ಸೇವೆ ಮತ್ತು ಸೌಲಭ್ಯಗಳನ್ನು ಸಾರ್ವಜನಿಕರಿಗೆ ನಿಸ್ವಾರ್ಥ ಮನೋಭಾವದಿಂದ ಒದಗಿಸುವ ಮೂಲಕ ವಾಲ್ಮೀಕಿ ಜಯಂತಿಯನ್ನು ಸಾರ್ಥಕಗೊಳಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.
ಮಹರ್ಷಿ ವಾಲ್ಮೀಕಿ ಅವರ ಜೀವನವು ವ್ಯಕ್ತಿತ್ವ ಪರಿವರ್ತನೆಗೆ ಅತ್ಯುತ್ತಮ ಉದಾಹರಣೆಯಾಗಿದ್ದು, ಅವರು ರಾಮಾಯಣ ಮಹಾಕಾವ್ಯದ ಮೂಲಕ ಸಾರಿದ ಸತ್ಯ, ಧರ್ಮ, ತ್ಯಾಗ, ನಿಸ್ವಾರ್ಥ ಸೇವೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಂದಿನಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.
ರೈತರು, ಕೃಷಿ ಕಾರ್ಮಿಕರು ಹಾಗೂ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್ 28ರಂದು ರಾಯಚೂರು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಿವಸೇನಾ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ರಾಜಾಚಂದ್ರ ರಾಮನಗೌಡ ತಿಳಿಸಿದರು.
ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಬಾದರ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯುವ ಮುಖಂಡ ಅರುಣಕುಮಾರ ನಾಯಕ ಯಾಪಲಪರ್ವಿ ಅವರಿಗೆ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಜಿ.
ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಜನವರಿ 30ರವರೆಗೆ ಕಾಲುವೆಗಳಲ್ಲಿ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಲಿಂಗಸುಗೂರು ತಾಲೂಕು ಘಟಕದ ವತಿಯಿಂದ ಅಕ್ಟೋಬರ್ 27ರಂದು ನಾರಾಯಣಪುರದ ಮುಖ್ಯ ಎಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹಲವು ಆರೋಗ್ಯ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಬಡವರು ಹಾಗೂ ಸಾಮಾನ್ಯ ಜನರಿಗೆ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳು ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎನ್.ಎಸ್.
ಮಕ್ಕಳ ಮನಸ್ಸನ್ನು ಪ್ರೀತಿ, ವಿಶ್ವಾಸದಿಂದ ಗೆದ್ದು ಅವರ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಅಂಗನವಾಡಿ ಕಾರ್ಯಕರ್ತೆಯರು ನಿಜವಾದ ಶಿಲ್ಪಿಗಳು ಎಂದು ನಾಗಡದಿನ್ನಿ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕ ರವಿ ಜಾಪಾಂಡೆ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ ಹಾಗೂ ವಾಲ್ಮೀಕಿ ನಾಯಕ ಸಮಾಜದ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 26ರಂದು ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಮಾಜದ ಮುಖಂಡ ಗಿರಿಯಪ್ಪ ನಾಯಕ ತಿಳಿಸಿದರು.
ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಜಾರಿಗೊಳಿಸಿರುವ ಒಳಮೀಸಲಾತಿ ಮಾದರಿಯಲ್ಲಿಯೇ ಗ್ರಾಮ ಪಂಚಾಯಿತಿ ಸೇರಿದಂತೆ ಪಂಚಾಯತ್ ರಾಜ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಯ ವಿವಿಧ ಸಮುದಾಯಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಪರವಾಗಿ ವಕೀಲ ಎಸ್.
ಮಹಿಳೆಯರು ತಮ್ಮ ಹಕ್ಕುಗಳು ಹಾಗೂ ಕಾನೂನು ಸೌಲಭ್ಯಗಳ ಬಗ್ಗೆ ಅರಿವು ಹೊಂದುವ ಮೂಲಕ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲರಾಗಬೇಕು ಎಂದು ನ್ಯಾಯಾಧೀಶೆ ಹುಂಡಿ ಮಂಜುಳಾ ಶಿವಪ್ಪ ಹೇಳಿದರು.
ನಗರದಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಅಕ್ರಮ ಮಾರಾಟ ಹೆಚ್ಚುತ್ತಿರುವ ಆರೋಪಗಳಿದ್ದು, ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಸಾರ್ವಜನಿಕರು ನೆಮ್ಮದಿಯಿಂದ ಜೀವನ ನಡೆಸುವುದು ಹೇಗೆ ಎಂದು ಪ್ರಶ್ನಿಸಿರುವ ಬಿಜೆಪಿ ಮುಖಂಡರು, ಕಾನೂನು ಸುವ್ಯವಸ್ಥೆ ಬಲಪಡಿಸಿ ನಾಗರಿಕರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾ ಪೊಲೀಸ್…
ಪಟ್ಟಣದ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಮೈದಾನದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಆಯೋಜಿಸಿರುವ ಎಚ್‌ಪಿಎಲ್ (ಹೊರಟ್ಟಿ ಪ್ರೀಮಿಯರ್ ಲೀಗ್) ಕ್ರಿಕೆಟ್ ಪಂದ್ಯಾವಳಿಗೆ ಅಡ್ಡಿಪಡಿಸದೆ, ಕ್ರೀಡಾಕೂಟ ಮುಂದುವರಿಸಲು ಅವಕಾಶ ಕಲ್ಪಿಸಬೇಕೆಂದು ಸ್ಥಳೀಯ ಯುವಕರು ಹಾಗೂ ಕ್ರೀಡಾಪಟುಗಳು ಒತ್ತಾಯಿಸಿದ್ದಾರೆ.
ನಗರದ ಎಲ್‌ಬಿಎಸ್ ಬಡಾವಣೆಯ ಕ್ರೌನ್ ಬೇಕರಿ ಸಮೀಪ ಶನಿವಾರ ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಾಪಾರಿ ನರಸಿಂಹ ಅವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಿಲಕ್ ಸಿಂಗ್‌ನನ್ನು ಪೊಲೀಸರು ಮಧ್ಯರಾತ್ರಿ ಬಂಧಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ‘ಸಂಘಟನ್ ಸೃಜನ್ ಅಭಿಯಾನ–2’ರ ಅಂಗವಾಗಿ ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 14 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು.