ಪಟ್ಟಣದಲ್ಲಿ ಕಳೆದ ಹತ್ತು ದಿನಗಳಿಂದ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ನಡೆಯುತ್ತಿದ್ದ ನವರಾತ್ರಿ ಮತ್ತು ನಾಡದಸರಾ ಮಹೋತ್ಸವವು ಬುಧವಾರ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳು, ಪಲ್ಲಕ್ಕಿ ಮೆರವಣಿಗೆ ಹಾಗೂ ಬನ್ನಿ ಪೂಜೆಯೊಂದಿಗೆ ಅದ್ಧೂರಿಯಾಗಿ ಸಂಪನ್ನಗೊಂಡಿತು.
ನಾಡಹಬ್ಬ ದಸರಾ ಪ್ರಯುಕ್ತ ತಾಲೂಕಿನ ಸಿದ್ರಾಂಪೂರು ಗ್ರಾಮದಲ್ಲಿ ಸನ್ನಿ ಮಹಾರಾಜ್ ಯೂಥ್ ಫೋರ್ಸ್ ವತಿಯಿಂದ ಆಯೋಜಿಸಿದ್ದ ಮೂರನೇ ವರ್ಷದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಬೆಂಗಳೂರಿನ ಕೇಶವ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.
ತಾಲೂಕಿನ ಮಾಡಗಿರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಹೊಸೂರು ಗ್ರಾಮದ ಶ್ರೀ ಘನಗುರು ಬೀರಲಿಂಗೇಶ್ವರ ದೇವಸ್ಥಾನದಲ್ಲಿ ದಸರಾ ಹಬ್ಬದ ಅಂಗವಾಗಿ ಸಾಂಪ್ರದಾಯಿಕ ಕಾರಣಿಕೆ (ಹೇಳಿಕೆ) ಕಾರ್ಯಕ್ರಮ ಜರುಗಿತು.
ತಾಲೂಕಿನ ಯರಮರಸ್‌ನ ನಳಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಎಡ್ ದ್ವಿತೀಯ ಸೆಮಿಸ್ಟರ್ ಪ್ರಶಿಕ್ಷಣಾರ್ಥಿಗಳಿಗೆ ಆಯೋಜಿಸಿರುವ ಮೂರು ದಿನಗಳ ಯೋಗ ತರಬೇತಿ ಶಿಬಿರಕ್ಕೆ ಇತ್ತೀಚೆಗೆ ಚಾಲನೆ ನೀಡಲಾಯಿತು.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಮಹೀಂದ್ರಾ ಥಾರ್ ಹಾಗೂ ಎಕ್ಸ್‌ಯುವಿ ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರ ಗೆಲುವು ನಿಶ್ಚಿತವಾಗಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿಗೆ ಸೋಲು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರು, ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಎ.
ಅರಕೇರಾ ತಾಲೂಕಿನ ಮದರಕಲ್ ಗ್ರಾಮದ ಶ್ರೀ ಅವಧೂತ ರಾಜಯೋಗಿ ಸಂತ ನಾಮದೇವಗೌಡ ಶರಣರ ಅಂಬಾ ಮಠದ ವಿರುದ್ಧ ಕೆಲವರು ರಾಜಕೀಯ ದುರುದ್ದೇಶದಿಂದ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮಠದ ಮಹಿಳಾ ಭಕ್ತರು ಆರೋಪಿಸಿದರು.
ರಾಯಚೂರಿನ ಪೇಟೆ ಹಿರೇಮಠ ಹಾಗೂ ಕಿಲ್ಲೆ ಶ್ರೀ ಬೃಹನ್ಮಠಕ್ಕೆ ಭೇಟಿ ನೀಡಿದ ಮಾಜಿ ಸಚಿವ ಎನ್.ಎಸ್. ಬೋಸರಾಜು ಅವರು ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದ ಪಡೆದರು. ಮಠ-ಮಾನ್ಯಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಹೇಳಿದರು.
ರಾಯಚೂರಿನ ಆರ್ಯವೈಶ್ಯ ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ವಿಜಯದಶಮಿ ಅಂಗವಾಗಿ ವಿಶೇಷ ಪೂಜೆ, ಶ್ರೀನಿವಾಸ ಕಲ್ಯಾಣೋತ್ಸವ, ಪಲ್ಲಕ್ಕಿ ಮೆರವಣಿಗೆ ಹಾಗೂ ಶ್ರೀ ವೆಂಕಟೇಶ್ವರ ಸ್ವಾಮಿಯ ಸ್ವರ್ಣರಥೋತ್ಸವವು ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಜರುಗಿತು.
ಬೆಂಗಳೂರಿನ ಮುದ್ದಿನಪಾಳ್ಯದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಡಾ. ವಿ. ನಾಗೇಂದ್ರ ಪ್ರಸಾದ್ ನಿರ್ದೇಶನದ ‘ಶುಭಲಾಭ’ ಕನ್ನಡ ಚಿತ್ರದ ಮುಹೂರ್ತ ನೆರವೇರಿತು. ಈ ಚಿತ್ರದ ಮೂಲಕ ಅವರ ಪುತ್ರ ಉತ್ಸವ್ ಪ್ರಸಾದ್ ನಾಯಕ ನಟನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿಚ್ಚಾಲಿ ಗ್ರಾಮದಲ್ಲಿ ಆರಾಧ್ಯ ದೈವ ಶ್ರೀ ಶ್ರೀ ಶ್ರೀ ವೀರತಪಸ್ವಿ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಆದಿಶಕ್ತಿ ದೇವಿಯ ಮೆರವಣಿಗೆ ಕಾರ್ಯಕ್ರಮವು ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಜರುಗಿತು.
ಮಾನ್ವಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶ್ರೀಜಗದ್ಗುರು ಮಧ್ವಾಚಾರ್ಯರ ಜಯಂತಿ ಆಚರಿಸಲಾಯಿತು. ಮಹನೀಯರ ಜೀವನ ಚರಿತ್ರೆ, ತತ್ವಾದರ್ಶಗಳು ಹಾಗೂ ಸಂದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸುವುದೇ ಜಯಂತಿಗಳ ಆಚರಣೆಯ ಉದ್ದೇಶವಾಗಿದೆ ಎಂದು ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಹೇಳಿದರು.
ತಾಲೂಕಿನ ಹಿರೇಕೋಟ್ನೇಕಲ್ ಗ್ರಾಮದ ಶ್ರೀ ತಾಯಮ್ಮ ದೇವಿ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಶ್ರೀದೇವಿ ಪುರಾಣ ಕಾರ್ಯಕ್ರಮದಲ್ಲಿ ನೂತನ ಪುರಾಣ ಮಂಟಪ ನಿರ್ಮಾಣಕ್ಕೆ ಕೊಡುಗೆ ನೀಡಿದ ಹಿರಿಯ ವಕೀಲ ಸಿದ್ದಲಿಂಗಪ್ಪ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ಚಾಮರಾಜನಗರದಲ್ಲಿ ಅಕ್ಟೋಬರ್ 24 ಮತ್ತು 25ರಂದು ಅಂತರರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನ ನಡೆಯಲಿದೆ. ಮಾನ್ವಿ ತಾಲೂಕಿನ ಬೌದ್ಧ ಧರ್ಮದ ಅನುಯಾಯಿಗಳು, ಅಂಬೇಡ್ಕರ್ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಕೀಲ ತಿಪ್ಪಣ್ಣ ಬಾಗಲವಾಡ ಮನವಿ ಮಾಡಿದ್ದಾರೆ.
ನಗರದ ಕಿಲ್ಲೇ ಬೃಹನ್ಮಠದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಕಳೆದ ಒಂಬತ್ತು ದಿನಗಳಿಂದ ನಡೆಯುತ್ತಿದ್ದ 88ನೇ ವರ್ಷದ ಶ್ರೀದೇವಿ ಮಹಾಪುರಾಣ ಪ್ರವಚನವು ಆಯುಧ ಪೂಜೆಯ ದಿನದಂದು ಶ್ರದ್ಧಾಭಕ್ತಿಯಿಂದ ಮಹಾಮಂಗಳಗೊಂಡಿತು.
2026-27ನೇ ಸಾಲಿನ ಕಲಬುರಗಿ ವಿಭಾಗಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಪಟ್ಟಣದ ಪಿಎಂಶ್ರೀ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ, ಮೂರು ತಂಡಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.