ನಗರದ 16ನೇ ವಾರ್ಡ್‌ನಲ್ಲಿ ಶ್ರೀ ಮಾತಾ ಬಾಲಮಾರಮ್ಮ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ರಾಯಚೂರು ನಗರ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ದೇವಿ ಆರಾಧನೆ ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ಸಮಾಜದಲ್ಲಿ ಸತ್ಯ, ಧರ್ಮ, ಶಾಂತಿ, ಸಹಬಾಳ್ವೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮಹತ್ವದ ಪರಂಪರೆಯಾಗಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.
ಮಳೆ ಕೊರತೆಯಿಂದ ಕೃಷಿಯಲ್ಲಿ ನಿರೀಕ್ಷಿತ ಬೆಳೆ ಬಾರದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಯುವ ರೈತರೊಬ್ಬರು ಸಾಲದ ಹೊರೆಯಿಂದ ಮನನೊಂದು ವಿಷ ಸೇವಿಸಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ನಕ್ಕುಂದಿ ಗ್ರಾಮದಲ್ಲಿ ನಡೆದಿದೆ.
ದೇಶದ ಆಂತರಿಕ ಭದ್ರತೆ, ಸಾರ್ವಜನಿಕರ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ತ್ಯಾಗ, ಬಲಿದಾನವನ್ನು ಸ್ಮರಿಸುವ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಬುಧವಾರ ನಗರದ ಜಿಲ್ಲಾ ಪೊಲೀಸ್ ಆವರಣದಲ್ಲಿರುವ ಹುತಾತ್ಮರ ಸ್ಮಾರಕದ ಬಳಿ ಶ್ರದ್ಧಾ ಗೌರವಗಳೊಂದಿಗೆ…
ರಾಯಚೂರು ನಗರದ ಸಿದ್ರಾಂಪುರ ಗ್ರಾಮದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಸನ್ನಿ ಮಹಾರಾಜ್ ಯೂತ್ ಪೋರ್ಸ್ ವತಿಯಿಂದ ಆಯೋಜಿಸಿದ್ದ ಮೂರನೇ ವರ್ಷದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ನಗರ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಚಾಲನೆ ನೀಡಿದರು. ವಿವಿಧ ಭಾಗಗಳ ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದರು.
ಲಿಂಗಸುಗೂರು: ನಾರಾಯಣಪುರ ಬಲದಂಡೆ ಹಾಗೂ ರಾಂಪುರ ಏತ ನೀರಾವರಿ ಕಾಲುವೆಗಳ ಅಚ್ಚುಕಟ್ಟು ಪ್ರದೇಶದ ಬೆಳೆಗಳನ್ನು ಉಳಿಸಲು ಜನವರಿ 15ರವರೆಗೆ ನೀರು ಹರಿಸುವಂತೆ ರೈತರು ಒತ್ತಾಯಿಸಿದ್ದಾರೆ. ಈ ಕುರಿತು ದುರ್ಗಾಪ್ರಸಾದ ರೆಡ್ಡಿ ನೇತೃತ್ವದಲ್ಲಿ ಸಹಾಯಕ ಆಯುಕ್ತ ನಾಗೇಂದ್ರ ಬಾಬು ಅವರಿಗೆ ಮನವಿ ಸಲ್ಲಿಸಲಾಗಿದೆ.
ನಗರದ ಎನ್‌ಜಿಒ ಕಾಲೋನಿಯ ಶ್ರೀ ಜಮಲಮ್ಮ ದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ದೇವಸ್ಥಾನದ ಸೇವಾ ಸಮಿತಿ ವತಿಯಿಂದ ಜಾತ್ರಾ ಮಹೋತ್ಸವ ಹಾಗೂ ನೂತನ ರಥೋತ್ಸವವನ್ನು ಭಕ್ತಿ, ಶ್ರದ್ಧೆಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು.
ವಿಜಯದಶಮಿ ಹಬ್ಬದ ಅಂಗವಾಗಿ ಮಂತ್ರಾಲಯದ ಶ್ರೀಮಠದ ಆವರಣದಲ್ಲಿರುವ ಶಮೀ ವೃಕ್ಷಕ್ಕೆ ಶ್ರೀಮಠದ ಶ್ರೀಗಳು ವಿಶೇಷ ಪೂಜೆ ಸಲ್ಲಿಸಿದರು. ದಸರಾ ಮಹೋತ್ಸವದ ಪ್ರಮುಖ ಧಾರ್ಮಿಕ ಆಚರಣೆಗಳಲ್ಲಿ ಒಂದಾದ ಶಮೀ ಪೂಜೆಯನ್ನು ಶ್ರೀಗಳು ಸಂಪ್ರದಾಯಬದ್ಧವಾಗಿ ನೆರವೇರಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಮಕ್ಕಳ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ದಸರಾ ಕವಿಗೋಷ್ಠಿ–2026ರಲ್ಲಿ ಯುವ ಕವಯತ್ರಿ ಕುಮಾರಿ ಜ್ಯೋತಿ ಆನಂದ ಚಂದುಕರ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.
ರಾಯಚೂರು ನಗರದ ಶ್ರೀ ಸಿದ್ದರಾಮೇಶ್ವರ ಮಂಟಪದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಭೋವಿ ಸಮಾಜದ ವತಿಯಿಂದ ಆಯುಧ ಪೂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ರಾಯಚೂರು ನಗರ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಭಾಗವಹಿಸಿ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರೊಂದಿಗೆ ಹಬ್ಬದ ಸಂಭ್ರಮ ಹಂಚಿಕೊಂಡರು.
ನವರಾತ್ರಿ ಮಹೋತ್ಸವದ ಅಂಗವಾಗಿ ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ ರಾಯಚೂರು ನಗರ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಅವರು ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದರು.
ನವರಾತ್ರಿ ಮಹೋತ್ಸವದ ಅಂಗವಾಗಿ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸುಲ್ತಾನಪುರ, ಆಸ್ಕಿಹಾಳ ಹಾಗೂ ಮಾರೆಮ್ಮ ಕ್ಯಾಂಪ್‌ಗಳಿಗೆ ಭೇಟಿ ನೀಡಿದ ಶಾಸಕ ಬಸನಗೌಡ ದದ್ದಲ್ ಅವರು, ಜಗನ್ಮಾತೆ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ದುಡಿಮೆಯನ್ನೇ ಬದುಕಿನ ಆಧಾರವಾಗಿಸಿಕೊಂಡಿರುವ ಬೋವಿ ಸಮಾಜವು ತನ್ನ ಸಾಂಪ್ರದಾಯಿಕ ವೃತ್ತಿಗೆ ಬಳಸುವ ಉಪಕರಣಗಳನ್ನು ಪೂಜಿಸುವ ಮೂಲಕ ಶ್ರಮ ಸಂಸ್ಕೃತಿಯನ್ನು ಉಳಿಸಿಕೊಂಡು ಬರುತ್ತಿದೆ ಎಂದು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹೇಳಿದರು.
ಜಿಲ್ಲೆಯ ದೇವದುರ್ಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಅಕ್ರಮ ಫಿಲ್ಟರ್ ಮರಳು ತಯಾರಿಕೆ ಹಾಗೂ ಸಾಗಾಟ ನಿರಂತರವಾಗಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಕಾರ್ಯವೈಖರಿ ವಿರುದ್ಧ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಪದವೀಧರ ಶಿಕ್ಷಣ ಇಲಾಖೆಯ ಪದ್ಮಾ ಸಜ್ಜನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸರಸ್ವತಿ ಬಾಯಪ್ಪ ಕಡ್ಡೋಣಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಜಯಶ್ರೀ ತಿಳಿಸಿದ್ದಾರೆ.
ಸಂಗೀತವು ಮನುಷ್ಯನ ಮನಸ್ಸಿಗೆ ಸಂತೋಷ ಮತ್ತು ನೆಮ್ಮದಿ ನೀಡುವುದರೊಂದಿಗೆ ದಿನನಿತ್ಯದ ಬದುಕಿನ ಒತ್ತಡಗಳನ್ನು ದೂರ ಮಾಡುವ ಅದ್ಭುತ ಶಕ್ತಿಯನ್ನು ಹೊಂದಿದೆ ಎಂದು ಸಾಹಿತಿ ತಾಯಪ್ಪ ಮರ್ಚಟಹಾಳ ಅಭಿಪ್ರಾಯಪಟ್ಟರು.
ಸಾಹಿತ್ಯವು ಸಮಾಜದ ಪರಿವರ್ತನೆಗೆ ಪ್ರಬಲ ಮಾಧ್ಯಮವಾಗಿದ್ದು, ಕವಿಗಳು ತಮ್ಮ ಕಾವ್ಯ ರಚನೆಗಳ ಮೂಲಕ ಜನರಲ್ಲಿ ಪ್ರಕೃತಿ ಪ್ರೇಮ, ಪರಿಸರ ಕಾಳಜಿ ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಜುಬೀನ್ ಮೊಹಾಪಾತ್ರ ಅಭಿಪ್ರಾಯಪಟ್ಟರು.
ಮಾನ್ವಿಯಲ್ಲಿ ತಾಲೂಕು ಆಡಳಿತದ ವತಿಯಿಂದ ಅಕ್ಟೋಬರ್ 26ರಂದು ಶ್ರೀ ವಾಲ್ಮೀಕಿ ಮಹರ್ಷಿಗಳ ಜಯಂತಿಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಹಸೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಅಧಿಕೃತ ವೈದ್ಯಕೀಯ ವಿದ್ಯಾರ್ಹತೆ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ನಿರಂತರ ದಾಳಿ ನಡೆಸಿ ಎಫ್‌ಐಆರ್ ದಾಖಲಿಸುತ್ತಿದೆ.
ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರವರ್ಗ–2ಬಿ (ಮುಸ್ಲಿಂ) ಸಮುದಾಯಕ್ಕೆ ಸೂಕ್ತ ಮೀಸಲಾತಿ ಕಲ್ಪಿಸುವಂತೆ ಸಲ್ಲಿಸಲಾಗಿದ್ದ ಮರುಪರಿಶೀಲನಾ ಮನವಿಗೆ ಜಿಲ್ಲಾಡಳಿತ ಹಿಂಬರಹ ನೀಡಿದ್ದು, ಪ್ರಸ್ತುತ ಮೀಸಲಾತಿ ಬದಲಾವಣೆಗೆ ಅವಕಾಶವಿಲ್ಲ ಎಂದು ತಿಳಿಸಿದೆ.
ಭಿಕ್ಷಾಟನೆಯಲ್ಲಿ ತೊಡಗಿರುವ ನಿರ್ಗತಿಕರನ್ನು ಸಮಾಜದ ಮುಖ್ಯವಾಹಿನಿಗೆ ಕರೆತಂದು ಸ್ವಾವಲಂಬಿ ಜೀವನ ನಡೆಸಲು ಅವಕಾಶ ಕಲ್ಪಿಸುವುದು ಸರ್ಕಾರದ ಜತೆಗೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಓಂ ಸಾಯಿ ಧ್ಯಾನ ಮಂದಿರದ ಸಂಸ್ಥಾಪಕ ಧರ್ಮಾಧಿಕಾರಿ ಸಾಯಿ ಕಿರಣ್ ಆದೋನಿ ಹೇಳಿದರು.